ಶೀರ್ಷಿಕೆ : news and photo Date; 9-5-2018
ಲಿಂಕ್ : news and photo Date; 9-5-2018
news and photo Date; 9-5-2018
ಹೋಮಗಾರ್ಡ್ ಮತ್ತು ಸಿ.ಆರ್.ಪಿ.ಎಫ್. ಯೋಧರಿಂದ ಆಕರ್ಷಕ ಪಥಸಂಚಲನ
*****************************************************************
ಕಲಬುರಗಿ,ಮೇ.09.(ಕ.ವಾ.)-ಕಲಬುರಗಿ ಜಿಲ್ಲೆಯಾದ್ಯಂತ ಚುನಾವಣೆಗೆ ನೇಮಿಸಲಾಗಿರುವ ಕಲಬುರಗಿ ಜಿಲ್ಲಾ ಹೋಮಗಾರ್ಡ್, ಸಿ.ಆರ್.ಪಿ.ಎಫ್. ತುಕಡಿಗಳು, ಆಂಧ್ರಪ್ರದೇಶದ ಹೋಮಗಾರ್ಡ ಅವರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪಥಸಂಚಲನದ ಮೂಲಕ ಸಾರ್ವಜನಿಕರಲ್ಲಿ ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸುವಂತೆ ಸಂದೇಶ ನೀಡಲಾಯಿತು.
ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿ, ಪೊಲೀಸ್ ಇಲಾಖೆ ಹಾಗೂ ಕಲಬುರಗಿ ಹೋಮಗಾರ್ಡ ವತಿಯಿಂದ ಬುಧವಾರ ಆಯೋಜಿಸಲಾದ ಪಥಸಂಚಲನವು ನಗರದ ಸುಪರ ಮಾರ್ಕೆಟ್‍ನಿಂದ ಪ್ರಾರಂಭವಾಗಿ, ಬಾಂಡೆ ಬಜಾರ ಮಾರ್ಗವಾಗಿ ಹುಮನಾಬಾದ ಬೇಸ್, ಮುಸ್ಲಿಂ ಚೌಕ್, ನ್ಯಾಷನಲ್ ಕಾಲೇಜು, ಸರಾಫ ಬಜಾರದಿಂದ ಮರಳಿ ಸುಪರ ಮಾರ್ಕೆಟ್, ಜಗತ್ತ ಸರ್ಕಲ್‍ನಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಕೊನೆಗೊಂಡಿತು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಅವರು ಪಥಸಂಚಲನದ ನೇತೃತ್ವ ವಹಿಸಿದ್ದರು. ಈ ಪಥಸಂಚಲನದಲ್ಲಿ ಹೋಮಗಾರ್ಡ, ಸಿಆರ್‍ಪಿಸಿ ಯೋಧರು ಸೇರಿದಂತೆ ಒಟ್ಟು ಸುಮಾರು 1500ಕ್ಕೂ ಹೆಚ್ಚು ಸಮವಸ್ತ್ರ ಧಾರಿಗಳಿಂದ ಪಾಲ್ಗೊಂಡಿದ್ದರು. ಪಥ ಸಂಚಲನ ಮಾರ್ಗದುದ್ದಕ್ಕೂ ಮೇ 12ರಂದು ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಲಾಯಿತು. ಇದೇ ಸಂದರ್ಭದಲ್ಲಿ ಸ್ವೀಪ್ ಸಮಿತಿಯಿಂದ ಹೊರ ತಂದಿರುವ ಕರಪತ್ರಗಳನ್ನು ಸಹ ವಿತರಿಸಲಾಯಿತು. ಈ ಸಂದರ್ಭದಲ್ಲಿ ಹೊಮಗಾರ್ಡ ಕಮಾಂಡಂಟ್ ಸಂತೋಷ ಪಾಟೀಲ, ಸ್ವೀಪ ನೋಡಲ್ ಅಧಿಕಾರಿ ಮೈಸೂರ ಗಿರೀಶ, ಐಪಿಎಸ್ ಪ್ರೊಬೇಷನರಿ ಅಧಿಕಾರಿ ಮಿಥುನ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿಗಳಿಂದ ಮತ ಎಣಿಕೆ ಕೇಂದ್ರ ಸಿದ್ಧತೆ ಪರಿಶೀಲನೆ
******************************************************
ಕಲಬುರಗಿ,ಮೇ.09.(ಕ.ವಾ)-ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ವಿಧಾನಸಭಾ ಚುನಾವಣೆಯ ಮತ ಎಣಿಕೆಗಾಗಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸಿದ್ಧಪಡಿಸುತ್ತಿರುವ ಮತ ಎಣಿಕೆ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿ ಅಗತ್ಯ ಮಾರ್ಪಾಡುಗಳನ್ನು ಸೂಚಿಸಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದಲ್ಲಿ ಅಫಜಲಪುರ, ಸಸ್ಯಶಾಸ್ತ್ರ ವಿಭಾಗದಲ್ಲಿ ಚಿಂಚೋಳಿ, ಒಳಾಂಗಣ ಕ್ರೀಡಾಂಗಣದಲ್ಲಿ ಚಿತ್ತಾಪುರ ಮತ್ತು ಸೇಡಂ, ಕನ್ನಡ ವಿಭಾಗದಲ್ಲಿ ಗುಲಬರ್ಗಾ ಉತ್ತರ ಮತ್ತು ದಕ್ಷಿಣ, ಪರೀಕ್ಷಾಂಗ ವಿಭಾಗದಲ್ಲಿ ಗುಲಬರ್ಗಾ ಗ್ರಾಮೀಣ ಮತ್ತು ಜೇವರ್ಗಿ ಹಾಗೂ ಪರೀಕ್ಷಾ ಭವನದಲ್ಲಿ ಆಳಂದ ಮತಕ್ಷೇತ್ರದ ಮತ ಎಣಿಕೆ ಮಾಡಲು ಮತ ಎಣಿಕಾ ಕೇಂದ್ರಗಳನ್ನು ಸಿದ್ಧಪಡಿಸಲಾಗುತ್ತಿದೆ. ಪ್ರತಿ ಎಣಿಕೆ ಕೇಂದ್ರದಲ್ಲಿ 14 ಟೇಬಲ್‍ಗಳನ್ನು ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಪ್ರಾಣಿಶಾಸ್ತ್ರ ವಿಭಾಗದಲ್ಲಿ ಮಾಧ್ಯಮ ಕೇಂದ್ರವನ್ನು ಸ್ಥಾಪಿಸಿ ಮಾಧ್ಯಮದವರಿಗೆ ಮತ ಎಣಿಕೆಯ ಪ್ರತಿ ಸುತ್ತಿನ ಫಲಿತಾಂಶ ಹಾಗೂ ರಾಜ್ಯದ ಫಲಿತಾಂಶ ಲಭ್ಯವಾಗುವಂತೆ ವ್ಯವಸ್ಥೆ ಮಾಡಲು ತಿಳಿಸಿದರು. ಮಾಧ್ಯಮ ಕೇಂದ್ರದಲ್ಲಿ ಗಣಕಯಂತ್ರಗಳನ್ನು, ಇಂಟರ್‍ನೆಟ್ ಸೌಲಭ್ಯ ಹಾಗೂ ವೈ.ಫೈ. ಸೌಲಭ್ಯ ಕಲ್ಪಿಸಲು ತಿಳಿಸಿದರು.
ಮತ ಎಣಿಕಾ ಕೇಂದ್ರದಲ್ಲಿ ಸ್ಥಾಪಿಸಿರುವ ಬ್ಯಾರಿಕೇಡಿಂಗ್, ಕೌಂಟಿಂಗ್ ಏಜೆಂಟ್‍ರಿಗೆ ಸ್ಥಳ ಪರಿಶೀಲಿಸಿದರು. ಮತದಾನದ ನಂತರ ಎಲೆಕ್ಟ್ರಾನಿಕ್ ಮತಯಂತ್ರ ಹಾಗೂ ವಿ.ವಿ. ಪ್ಯಾಟ್ ಯಂತ್ರ ಸಂಗ್ರಹಿಸಲು ಪ್ರತಿ ಮತಕ್ಷೇತ್ರಗಳಿಗೆ ತಲಾ ಮೂರು ಭದ್ರ ಕೋಣೆಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಪ್ರತಿಯೊಂದು ಮತ ಎಣಿಕೆ ಕೇಂದ್ರಗಳ ಹತ್ತಿರ ಅಗ್ನಿ ಶಾಮಕ ದಳ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲು ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕಲಬುರಗಿ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ದಯಾನಂದ ಅಗಸರ್, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಜೀಜುದ್ದೀನ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಭುತ್ವ ಸದೃಢಗೊಳಿಸಲು ಕಡ್ಡಾಯವಾಗಿ ಮತಚಲಾಯಿಸಿ
*********************************************************
ಕಲಬುರಗಿ,ಮೇ.09.(ಕ.ವಾ)-ಪ್ರಜ್ಞಾವಂತ ಮತದಾರರು ಪ್ರಜಾಪ್ರಭುತ್ವ ಸದೃಢಗೊಳಿಸಲು ಎಲ್ಲರೂ ಕೈಜೋಡಿಸಬೇಕು. ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಬೇಕು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕಾನಂದ ತಿಳಿಸಿದರು.
ಅವರು ಬುಧವಾರ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಹಾಸ್ಯಸಂಜೆ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ನೂರಾರು ವರ್ಷಗಳ ಕಾಲ ಬೇರೆಯವರ ದಾಸ್ಯದಲ್ಲಿದ್ದ ನಮ್ಮ ದೇಶವು ಸ್ವಾತಂತ್ರ್ಯ ಹೊಂದಿ ಪ್ರಜಾಪ್ರಭುತ್ವ ದೇಶವಾಗಿದೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಎಂಬುವುದು ಇನ್ನೂ ಹಸುಗುಸಾಗಿದೆ. ಇದನ್ನು ಎಲ್ಲ ಪ್ರಜ್ಞಾವಂತ ನಾಗರಿಕರು ಕೈಹಿಡಿದು ಬೆಳೆಸಿದಲ್ಲಿ ಮುಂದಿನ ದಿನಗಳಲ್ಲಿ ಎಲ್ಲರೂ ಸ್ವತಂತ್ರವಾಗಿ ಬದುಕಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ವಿದ್ಯಾವಂತರೇ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವುದಿಲ್ಲ. ಗ್ರಾಮೀಣ ಪ್ರದೇಶಕ್ಕಿಂತ ವಿದ್ಯಾವಂತರು ಹೆಚ್ಚಿಗೆಯಿರುವ ನಗರ ಪ್ರದೇಶದಲ್ಲಿಯೇ ಮತದಾನದ ಪ್ರಮಾಣ ಕಡಿಮೆಯಾಗುತ್ತದೆ. ವಿದ್ಯಾವಂತರು ಮತದಾನದ ದಿನದಂದು ರಜೆ ಇದ್ದ ಪ್ರಯುಕ್ತ ಯಾವುದೇ ಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದೇ ಕಡ್ಡಾಯವಾಗಿ ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕು. ಮತ ಚಲಾಯಿಸುವುದನ್ನು ಸಹ ಸಂಭ್ರಮಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿ, ಸೈಕಲ್ ರ್ಯಾಲಿ, ವಾಕಥಾನ್, ಫ್ಯಾಶನ್ ಶೋ, ಕ್ಯಾಂಡಲ್ ಲೈಟ್ ಮಾರ್ಚ, ವಿವಿಧ ಸ್ಪರ್ಧೆಗಳು ಹಾಗೂ ಇನ್ನಿತರ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಹಾಸ್ಯಗಾರ್ತಿ ಇಂಧುಮತಿ ಸಾಲಿಮಠ ಅವರಿಂದ ಹಾಸ್ಯಸಂಜೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ, ಹೋಮಗಾರ್ಡ ಕಮಾಂಡಂಟ್ ಸಂತೋಷ ಪಾಟೀಲ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಹ್ಮದ್ ಯೂಸುಫ್, ಐಪಿಎಸ್ ಪ್ರೊಬೇಷನರಿ ಅಧಿಕಾರಿ ಮಿಥುನ್, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಮೈಸೂರು ಗಿರೀಶ, ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

12 ದಾಖಲಾತಿಗಳಲ್ಲಿ ಒಂದು ತೋರಿಸಿ ಮತ ಚಲಾಯಿಸಿ
*************************************************
ಕಲಬುರಗಿ,ಮೇ.09.(ಕ.ವಾ.)-ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ ಮೇ 12ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿಯನ್ನು ಹೊಂದಿಲ್ಲದಿದ್ದರೂ ಮತದಾರರು ಚುನಾವಣಾ ಆಯೋಗ ತಿಳಿಸಿದ 12 ಪರ್ಯಾಯ ದಾಖಲಾತಿಗಳಲ್ಲಿ ಒಂದು ದಾಖಲಾತಿಯನ್ನು ತೋರಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆಗೆ ಮೇ 12ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಧಿಯನ್ನು ನಿಗದಿಪಡಿಸಿದೆ. ಮತದಾರರ ಪಟ್ಟಿಯಲ್ಲಿ ಹೆಸರಿರುವ ಮತದಾರರು (ಎಪಿಕ್) ಮತದಾರರ ಗುರುತಿನ ಚೀಟಿ ಬದಲಾಗಿ ತಮ್ಮ ಭಾವಚಿತ್ರವಿರುವ ಕೆಳಕಂಡ 12 ದಾಖಲೆಗಳಲ್ಲಿ ಯಾವುದಾದರೊಂದು ದಾಖಲೆ ಒದಗಿಸಿ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಲಿಸಿದೆ. ಈ ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.
1) ಪಾಸ್‍ಪೋರ್ಟ್
2) ಚಾಲನಾ ಪರವಾನಿಗೆ
3) ಕೇಂದ್ರ/ ರಾಜ್ಯ ಸರ್ಕಾರದ ಹಾಗೂ ಅರೆ ಸರ್ಕಾರಿ ಮತ್ತು ಸಾರ್ವಜನಿಕ
ಸ್ವಾಮ್ಯದ ಪಿಎಸ್‍ಯು/ ಪಬ್ಲಿಕ್ ಲಿಮಿಟೆಡ್ ಕಂಪನಿಗಳು ತಮ್ಮ ಸಿಬ್ಬಂದಿಗೆ
ನೀಡಿರುವ ಫೋಟೋ ಗುರುತಿನ ಚೀಟಿಗಳು.
4) ಬ್ಯಾಂಕ್/ ಅಂಚೆ ಕಚೇರಿಯಿಂದ ಭಾವಚಿತ್ರದೊಂದಿಗೆ ನೀಡಲಾಗಿರುವ
ಪಾಸ್‍ಬುಕ್.
5) ಪ್ಯಾನ್ ಕಾರ್ಡ್
6) ಎನ್‍ಪಿಆರ್ ಅಡಿ ಆರ್‍ಜಿಐ ನೀಡಿರುವ ಸ್ಮಾರ್ಟ್ ಕಾರ್ಡ್.
7) ಎಂನರೇಗಾ ಬಾಜ್ ಕಾರ್ಡ್.
8) ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ
ಸ್ಮಾರ್ಟ್ ಕಾರ್ಡ್,
9) ಫೋಟೋವುಳ್ಳ ಪಿಂಚಣಿ ದಾಖಲೆ.
10) ಚುನಾವಣಾ ಆಯೋಗದ ವತಿಯಿಂದ ನೀಡುವ ದೃಢೀಕೃತ ಫೋಟೋ ವೋಟರ್
ಸ್ಲಿಪ್ಸ್.
11) ಸಂಸದರು, ವಿಧಾನಸಭಾ, ವಿಧಾನ ಪರಿಷತ್ತಿನ ಸದಸ್ಯರಿಗೆ ನೀಡಿರುವ ಅಧಿಕೃತ
ಗುರುತಿನ ಚೀಟಿ
12) ಆಧಾರ ಕಾರ್ಡ್.

ಮೇ 10ರಂದು ಮೂರನೇ ಹಂತದ ಖರ್ಚು-ವೆಚ್ಚದ ಪರಿಶೀಲನೆ
*****************************************************
ಕಲಬುರಗಿ,ಮೇ.09.(ಕ.ವಾ.)-ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 35-ಜೇವರ್ಗಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ವೆಚ್ಚ ವೀಕ್ಷಕ ಸಾಗರ ಶ್ರೀವಾತ್ಸವ ಅವರು ಜೇವರ್ಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ ಎಲ್ಲ ಅಭ್ಯರ್ಥಿಗಳ ಮೂರನೇ ಹಂತದ ವೆಚ್ಚದ ಪರಿಶೀಲನೆ (ಭಾಗ-ಎ,ಬಿ.ಸಿ.) ಯನ್ನು ಮೇ 10ರಂದು ಜೇವರ್ಗಿ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಮಾಡುವರು.
ಎಲ್ಲ ಅಭ್ಯರ್ಥಿಗಳು ಮೇ 9ರವರೆಗಿನ ಖರ್ಚು ವೆಚ್ಚದ ವಿವರಗಳು, ಬಿಲ್ಲುಗಳು/ ಓಚರಗಳು ಹಾಗೂ ಬ್ಯಾಂಕ್ ಸ್ಟೇಟ್‍ಮೆಂಟ್‍ಗಳೊಂದಿಗೆ ಪರಿಶೀಲನೆಗೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜೇವರ್ಗಿ ಮತಕ್ಷೇತ್ರದ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತಕ್ಷೇತ್ರಗಳಿಗೆ ತೆರಳಲು ವಾಹನ ವ್ಯವಸ್ಥೆ
*************************************
ಕಲಬುರಗಿ,ಮೇ.09.(ಕ.ವಾ.)-ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪಿ.ಆರ್.ಓ., ಎ.ಪಿ.ಆರ್.ಓ. ಪೋಲಿಂಗ್ ಆಫೀಸರ್‍ಗಳು ಆಯಾ ಮತಕ್ಷೇತ್ರಗಳಿಗೆ ತೆರಳಲು ಜೇವರ್ಗಿ ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ಮೇ 11 ರಂದು ವಾಹನ ವ್ಯವಸ್ಥೆ ಮಾಡಲಾಗಿದೆ.
ಸದರಿ ಅಧಿಕಾರಿ/ ಸಿಬ್ಬಂದಿಗಳು ಮೇ 11 ರಂದು ಮುಂಜಾನೆ 6 ಗಂಟೆಗೆ ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಜರಿದ್ದು, ಆಯಾ ಮತಕ್ಷೇತ್ರಕ್ಕೆ ನಿಗದಿಪಡಿಸಿದ ವಾಹನದಲ್ಲಿ ತೆರಳಲು ಸೂಚಿಸಲಾಗಿದೆ. ನೇಮಕಗೊಂಡ ಸಿಬ್ಬಂದಿಗಳು ತಡವಾಗಿ ಆಗಮಿಸಿದ್ದಲ್ಲಿ ನಿಯುಕ್ತಿಗೊಳಿಸಿದ ಮತಕ್ಷೇತ್ರಗಳಿಗೆ ಆಯಾ ಅಧಿಕಾರಿ/ಸಿಬ್ಬಂದಿಗಳೇ ಮುಂದಿನ ವ್ಯವಸ್ಥೆ ಮಾಡಿಕೊಳ್ಳಬೇಕಾಗುತ್ತದೆ ಎಂದು 35-ಜೇವರ್ಗಿ ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಮತದಾನ ಜಾಗೃತಿಗಾಗಿ ಆಳಂದ
*****************************
ನಾಕಾ-ಶ್ರೀನಿವಾಸ ಸರಡಗಿಯಲ್ಲಿ ಜಾಥಾ ಕಾರ್ಯಕ್ರಮ
***********************************************
ಕಲಬುರಗಿ,ಮೇ.09.(ಕ.ವಾ.)-ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೋಮವಾರ ರಾಜ್ಯ ಮಹಿಳಾ ನಿಲಯದಿಂದ ಆಳಂದ ನಾಕಾವರೆಗೆ ಸ್ವೀಪ್ ಜಾಗೃತಿ ಕಾರ್ಯಕ್ರಮ ಅಂಗವಾಗಿ ಮತದಾನ ಜಾಗೃತಿಗಾಗಿ ಜಾಥಾ ಏರ್ಪಡಿಸಲಾಗಿತ್ತು.
ಈ ಜಾಥಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ರಾಜ್ಯ ಮಹಿಳಾ ನಿಲಯದ ಅಧೀಕ್ಷಕಿ ವಿಜಯಲಕ್ಷ್ಮೀ ಬಿ., ಸುಧಾರಣಾ ಸಂಸ್ಥೆಯ ಅಧೀಕ್ಷಕರು, ನಿಲಯದ ಮಕ್ಕಳು, ಸಿಬ್ಬಂದಿಗಳು ಪಾಲ್ಗೊಂಡು ಜನರಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು.
ಶ್ರೀನಿವಾಸ ಸರಡಗಿಯಲ್ಲಿ ಜಾಥಾ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಝನಾಧಿಕಾರಿಗಳ ಕಚೇರಿಯಿಂದ ರವಿವಾರದಂದು ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಮತದಾನ ಜಾಗೃತಿಗಾಗಿ ಸ್ವೀಪ್ ಜಾಗೃತಿ ಕಾರ್ಯಕ್ರಮ ಅಂಗವಾಗಿ ಜಾಥಾ ಏರ್ಪಡಿಸಲಾಗಿತ್ತು. ಈ ಜಾಥಾದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಹಾಗೂ ಮೇಲ್ವಿಚಾರಕಿಯರು ಪಾಲ್ಗೊಂಡು ಜನರಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು.

ಪ್ರಥಮ ಪಿಯುಸಿ ವಿಜ್ಞಾನ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
********************************************************
ಕಲಬುರಗಿ,ಮೇ.09.(ಕ.ವಾ.)-ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ 2018-19ನೇ ಸಾಲಿಗೆ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜು, ಅಫಜಲಪುರ ತಾಲೂಕಿನ ಅರ್ಜುಣಗಿ ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜು ಹಾಗೂ ಚಿತ್ತಾಪುರ ತಾಲೂಕಿನ ಕೊಂಚೂರು ಏಕಲವ್ಯ ಮಾದರಿ ಪದವಿಪೂರ್ವ ಕಾಲೇಜುಗಳಲ್ಲಿ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ನಿಗದಿತ ಅರ್ಜಿ ನಮೂನೆಗಳನ್ನು ಆಯಾ ವಸತಿ ಶಾಲೆಗಳಲ್ಲಿ ಅಥವಾ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ ಮೇ 19ರೊಳಗಾಗಿ ಆಯಾ ವಸತಿ ಶಾಲೆಗಳಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಲಬುರಗಿ, ಜಿಲ್ಲಾ ಸಮನ್ವಯಾಧಿಕಾರಿಗಳು ಹಾಗೂ ಪ್ರಾಂಶುಪಾಲರನ್ನು ಮೊಬೈಲ್ ಸಂಖ್ಯೆ 9741182727, 9663762201, 9620528262, 9880848047, 9945997714, 9901358968 ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸಿಗಾಗಿ ಅರ್ಜಿ ಆಹ್ವಾನ
*****************************************************
ಕಲಬುರಗಿ,ಮೇ.09.(ಕ.ವಾ.)-2018-19 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷದ ಅವಧಿಯ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಪ್ಲೋಮಾ ಪ್ರವೇಶಕ್ಕಾಗಿ 42 ಪುರುಷ/ಮಹಿಳಾ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕದ ಗದಗ-ಬೆಟಗೇರಿಯಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಆಂಧ್ರಪ್ರದೇಶದ ನಲ್ಲೂರಿನ ವೆಂಕಟಗಿರಿಯಲ್ಲಿರುವ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಹಾಗೂ ಕೇರಳದ ಕಣ್ಣೂರಿನಲ್ಲಿರುವ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ತರಬೇತಿ ನೀಡಲಾಗುವುದು. ವ್ಯಾಸಂಗ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ಮಾಹೆ 1000 ರೂ. ರಿಂದ 1200ರೂ. ಗಳ ಶಿಷ್ಯವೇತನ ನೀಡಲಾಗುವುದು.
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಡಿ.ಐ.ಸಿ. ಕಟ್ಟಡ, ಜೇವರ್ಗಿ ಕ್ರಾಸ್, ಕಲಬುರಗಿ-585101 ದೂರವಾಣಿ ಸಂಖ್ಯೆ: 08472-278629 ಇವರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ನೇರವಾಗಿ ದಿನಾಂಕ: 08-06-2018.ರೊಳಗಾಗಿ ಪ್ರಾಂಶುಪಾಲರು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ-ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*******************************************
ಕಲಬುರಗಿ,ಮೇ.09.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-1ರ ಉಪ ವಿತರಣಾ ಕೇಂದ್ರದಿಂದ 33/11 ಕೆ.ವಿ. ಹಡಗಿಲ್ ಹಾರೂತಿ ಕೇಂದ್ರದಲ್ಲಿ 12 ಮೀಟರ್ ಐಬಿಎಮ್ ಕಂಬಗಳನ್ನು ಎತ್ತಲು ಹೈಕೋರ್ಟ್ 33/11 ಕೆ.ವಿ. ಜಿಆಯ್ ಸಬ್ ಸ್ಟೇಶನ್ ಲೈನ್‍ನಲ್ಲಿ ಕಾರ್ಯಕೈಗೊಂಡಿರುವ ಪ್ರಯುಕ್ತ ಮೇ 10ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸದರಿ ಉಪ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಫೀಡರ್ ವ್ಯಾಪ್ತಿಯ ಗ್ರಾಮ ಹಾಗೂ ಇತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
33/11ಕೆ.ವಿ. ಹಡಗಿಲ್ ಹಾರೂತಿ ವಿತರಣಾ ಕೇಂದ್ರ: ಎಫ್-5 ಶರಣ ಶಿರಸಗಿ ಎನ್‍ಜೆವಾಯ್ ಹಾಗೂ ಎಫ್-6 ಬಬಲಾದ ಐಪಿ.

ಹೀಗಾಗಿ ಲೇಖನಗಳು news and photo Date; 9-5-2018
ಎಲ್ಲಾ ಲೇಖನಗಳು ಆಗಿದೆ news and photo Date; 9-5-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo Date; 9-5-2018 ಲಿಂಕ್ ವಿಳಾಸ https://dekalungi.blogspot.com/2018/05/news-and-photo-date-9-5-2018.html

0 Response to "news and photo Date; 9-5-2018"
ಕಾಮೆಂಟ್ ಪೋಸ್ಟ್ ಮಾಡಿ