ವಿಶ್ವ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಿಂದ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಡಿ.ಸಿ. ಸೂಚನೆ

ವಿಶ್ವ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಿಂದ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಡಿ.ಸಿ. ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಿಶ್ವ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಿಂದ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಡಿ.ಸಿ. ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಿಶ್ವ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಿಂದ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಡಿ.ಸಿ. ಸೂಚನೆ
ಲಿಂಕ್ : ವಿಶ್ವ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಿಂದ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಡಿ.ಸಿ. ಸೂಚನೆ

ಓದಿ


ವಿಶ್ವ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಿಂದ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಡಿ.ಸಿ. ಸೂಚನೆ


ಕೊಪ್ಪಳ ಜೂ. 07 (ಕರ್ನಾಟಕ ವಾರ್ತೆ): ವಿಶ್ವ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜೂ. 12 ರಿಂದ ಕೊಪ್ಪಳ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರಾದ ಎಂ. ಕನಗವಲ್ಲಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.   
ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಅನ್ವಯ 14 ವರ್ಷದ ಒಳಗಿನ ಮಕ್ಕಳನ್ನು ಬಾಲಕಾರ್ಮಿಕರಾಗಿ ದುಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.  15 ರಿಂದ 18 ವರ್ಷದ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.  ಶಿಕ್ಷೆಯ ಪ್ರಮಾಣ ಒಂದು ವರ್ಷದಿಂದ ಮೂರು ವರ್ಷ ಹಾಗೂ ದಂಡದ ಪ್ರಮಾಣವನ್ನು ಐವತ್ತು ಸಾವಿರದವರೆಗೆ ವಿಸ್ತರಿಸಲಾಗಿದೆ.  2016 ರ ನಂತರದ ನಿಯಮಗಳನ್ವಯ ಮಕ್ಕಳನ್ನು ದುಡಿಸಿಕೊಂಡ ಮಾಲೀಕರು ತಕ್ಷಣ ಬಂದನಕ್ಕೆ ಒಳಗಾಗುತ್ತಾರೆ.  ಎಲ್ಲಾ ಪ್ರಕರಣಗಳಲ್ಲೂ ಪೊಲೀಸ್ ಠಾಣೆಯಲ್ಲಿ ಪ್ರಥಮ ವರ್ತಮಾನ ವರದಿಯನ್ನು ದಾಖಲಿಸಲು ಅವಕಾಶ ಕಲ್ಪಿಸಿದೆ.  ಇದಕ್ಕೆ ಪೂರಕವೆಂಬಂತೆ ನಿಯಮಾವಳಿ ಮತ್ತು ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ ಪದ್ದತಿಯನ್ನು ಪರಿಣಾಮಕಾರಿಯಾಗಿ ನಿರ್ಮೂಲನೆ ಮಾಡಲು ಕಾರ್ಯಸೂಚಿಯನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಬಿಡುಗಡೆ ಮಾಡಿದೆ.  ರಾಜ್ಯ ಕಾರ್ಮಿಕ ಇಲಾಖೆಯು ಬಾಲ ಮತ್ತು ಕಿಶೋರಾವಸ್ಥೆ ಕಾರ್ಮಿಕ ಮುಕ್ತ ವಲಯಗಳನ್ನಾಗಿಸುವ ಕಾರ್ಯಸೂಚಿಯನ್ನು ಹೊರತಂದಿದೆ. ಇವುಗಳ ಪರಿಣಾಮಕಾರಿ ಅನುಷ್ಠಾನ ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಶ್ರಮಿಸುತ್ತಿರುವ ಎಲ್ಲಾ ಇಲಾಖೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಜವಾಬ್ದಾರಿ ಮಹತ್ವದ್ದಾಗಿದೆ. ಎಲ್ಲರೂ ಒಗ್ಗೂಡಿ ಸಹಭಾಗಿತ್ವದಿಂದ ವಿವಿಧ ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸಿದಾಗ ಮಾತ್ರ ಮಕ್ಕಳು ಬಾಲಕಾರ್ಮಿಕ ಪದ್ಧತಿಯತ್ತ ಹೊಗುವುದನ್ನು ತಡೆದು ಬಾಲಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆ ಸಾಧ್ಯ.
     ಈ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ಸಂಘಟನೆ, ವಿಶ್ವಸಂಸ್ಥೆ, ಕರ್ನಾಟಕ ಸರ್ಕಾರವು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕುವುದರೊಂದಿಗೆ 2025ರ ಹೊತ್ತಿಗೆ ಕರ್ನಾಟಕವನ್ನು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಪದ್ಧತಿ ಮುಕ್ತ ರಾಜ್ಯವನ್ನಾಗಿಸಲು ಶ್ರಮಿಸುತ್ತಿದೆ. ಹೀಗಾಗಿ ಈ ವರ್ಷ “ಸುರಕ್ಷಿತ ಮತ್ತು ಆರೋಗ್ಯಕರ ಸಮಾಜಕ್ಕಾಗಿ ಬಾಲಕಾರ್ಮಿಕ ಪದ್ದತಿ ಅಳಿಸಿ” ಎಂಬ ಧ್ಯೇಯ ವಾಕ್ಯದೊಂದಿಗೆ ಹಾಗೂ ವಿಶ್ವಸಂಸ್ಥೆಯ ಮಾರ್ಗಸೂಚಿಯಂತೆ ಈ ಪದ್ಧತಿಯನ್ನು ಕೊನೆಗಾಣಿಸಲು ಸಮಾರೋಪಾದಿಯಲ್ಲಿ ಕ್ರಮ ಜರುಗಿಸುವುದು ಅಗತ್ಯವಾಗಿದ್ದು, ಕೊಪ್ಪಳ ಜಿಲ್ಲೆಯೆಲ್ಲಿ ಜೂ. 12 ರಿಂದ ವಿಶ್ವ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಜಿಲ್ಲಾ ಮಟ್ಟದಿಂದ ಪ್ರತಿಯೊಂದು ಗ್ರಾಮ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾಗಿದೆ. 
ವಿಶ್ವ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಬೇಕಾದ ವಿವಿಧ ಕಾರ್ಯಕ್ರಮಗಳ ವಿವರ ಇಂತಿದೆ. 
ಜಿಲ್ಲಾ ಮಟ್ಟದ ಕಾರ್ಯಕ್ರಮ :
********* ಜಿಲ್ಲಾಡಳಿತ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಜಾಗೃತಿ ಜಾಥಾ ಕಾನೂನು ಅರಿವು ಕಾರ್ಯಕ್ರಮಗಳು ಆಯೋಜಿಸಲಾಗುವುದು.   
ತಾಲ್ಲೂಕು ಮಟ್ಟದ ಕಾರ್ಯಕ್ರಮ :
********* ತಾಲೂಕು ಕೇಂದ್ರಗಳಲ್ಲಿ ತಾಲೂಕು ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ತಹಶೀಲ್ದಾರ, ತಾಲೂಕು ಪಂಚಾಯತ್, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ, ಶಿಕ್ಷಣ, ಯುನಿಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಡಿ.ಸಿ.ಪಿ.ಯು, ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ತಾಲ್ಲೂಕು ಮಟ್ಟದಲ್ಲಿ ಜಾಗೃತಿ ಜಾಥಾ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. 
ನಗರ ಸಭೆ/ಪುರಸಭೆ/ ಪಟ್ಟಣ ಪಂಚಾಯತ ಕಾರ್ಯಕ್ರಮ :
************* ಜೂ. 12 ರಂದು ಜಿಲ್ಲೆಯ ಎಲ್ಲಾ ನಗರ ಸಭೆ/ಪುರಸಭೆ/ ಪಟ್ಟಣ ಪಂಚಾಯತಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪೌರ ಕಾರ್ಮಿಕರಿಗೆ ಬಾಲಕಾರ್ಮಿಕ ಪದ್ದತಿಯ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿ, ಪ್ರತಿಜ್ಞಾ ವಿಧಿಯನ್ನು ಭೋಧಿಸಬೇಕು.  ನಗರ ವ್ಯಾಪ್ತಿಯಲ್ಲಿ ಬರುವ ಕೊಳಗೇರಿಗಳನ್ನು ಬಾಲಕಾರ್ಮಿಕ ಮುಕ್ತ ಪ್ರದೇಶಗಳನ್ನಾಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. 
ಪಂಚಾಯತ್ / ವಾರ್ಡ್ ಮಟ್ಟದ ಕಾರ್ಯಕ್ರಮ :
***********ಜೂ. 12 ರಿಂದ 18 ರವರೆಗೆ ಕೊಪ್ಪಳ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.  ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರುಗಳು ಜೂ. 12 ರಂದು ಬೆಳಿಗ್ಗೆ 9-30 ಕ್ಕೆ ಎಲ್ಲಾ ಮಕ್ಕಳಿಗೂ ಮತ್ತು ಅವರ ಪೋಷಕರಿಗೆ ಶಾಲೆಯಲ್ಲಿ ಸಮಾವೇಶ ಸೇರಿಸಿ ಪ್ರತಿಜ್ಞಾ ವಿಧಿ ಭೋದಿಸಬೇಕು.  ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದಾಗುವ ದುಷ್ಪರಿಣಾಮದ ಬಗ್ಗೆ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸುವ ನಿಟ್ಟಿನಿಂದ ಮಕ್ಕಳಿಂದಲೇ ಕಿರುನಾಟಕ, ಜಾಗೃತಿ ಗೀತೆಗಳನ್ನು, ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು.  ಪ್ರತಿ ಪಂಚಾಯತ್ ಮತ್ತು ವಾರ್ಡ್‍ಗಳಲ್ಲಿ ‘ಮಕ್ಕಳ ರಕ್ಷಣಾ ಸಮಿತಿ’ ಸಭೆಯನ್ನು ಆಯೋಜಿಸಿ, ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ಮುಂದಿಟ್ಟಂತಹ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಿ.  ಎಲ್ಲಾ ಶಾಲೆಗಳಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಭೆಯನ್ನು ಆಯೋಜಿಸಿ ಕಳೆದ ಸಾಲಿನಲ್ಲಿ ನಡೆದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯಲ್ಲಿ ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳನ್ನು ಮರಳಿ ಶಾಲೆಗೆ ತರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ, ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. 
ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಬಾಲ ವಿಕಾಸ ಸಮಿತಿ ಸಭೆಯನ್ನು ಆಯೋಜಿಸುವುದು ಮತ್ತು ಬಾಲಿಕಾ ಸಂಘದ ಸಭೆಯನ್ನು ಆಯೋಜಿಸಿ ಬಾಲ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿಯ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿ ಬಾಲಿಕೆಯರ ಹಾಗೂ ಗರ್ಭಿಣಿ ತಾಯಂದಿರು ಮತ್ತು ಬಾಣಂತಿಯರ ಮನೆಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸ್ವತಃ ಶಾಲೆಗೆ ದಾಖಲಾತಿ ಮಾಡಿಸುವಂತೆ ಸಭೆಗಳಲ್ಲಿ ಸೂಚನೆ ನೀಡಬೇಕು.  ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯನ್ನು ಆಯೋಜಿಸಿ ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ಚರ್ಚಿಸಬೇಕು.  ಪಂಚಾಯತ್ ಅಭಿವದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎನ್.ಆರ್.ಇ.ಜಿ ಕುಟುಂಬ ಮತ್ತು ಸ್ವ- ಸಹಾಯ ಸಂಘಗಳನ್ನು ಬಾಲ ಕಾರ್ಮಿಕ ಮುಕ್ತ ಕುಟುಂಬಗಳಾಗಿ ಘೋಷಿಸಲು ಕ್ರಮ ಕೈಗೊಳ್ಳಬೇಕು.  ಪ್ರತೀ ಪೊಲೀಸ್ ಠಾಣೆಯಲ್ಲಿ ಜೂ. 12. ರಂದು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ನಾಗರಿಕ ಸಂಸ್ಥೆಗಳು, ರೈತರು, ಜನಪ್ರತಿನಿಧಿಗಳು, ಯುವಕ ಸಂಘ, ಮಹಿಳಾ ಸಂಘ, ವಿವಿಧ ಕಾರ್ಮಿಕ ಸಂಘಟನೆಗಳು, ಮಾಲೀಕರುಗಳನ್ನು ಕರೆಸಿ ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಬೇಕು.  
ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ‘ತೆರೆದ ಮನೆ’ ಕಾರ್ಯಕ್ರಮವನ್ನು ಆಯೋಜಿಸಿ ಬಾಲ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಮಕ್ಕಳಿಗೆ ಮಾಹಿತಿ ನೀಡಬೇಕು.  ಎಲ್ಲಾ ಕಾರ್ಮಿಕ ಸಂಘಟನೆಗಳು ಮತ್ತು ಮಾಲೀಕರ ಸಂಘಟನೆಗಳು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದಂದು ವಿವಿಧ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು.  ಎಲ್ಲಾ ಸರಕಾರಿ ಕಛೇರಿಗಳಲ್ಲಿ ಕಾರ್ಯಕ್ರಮ ದಿನದಂದು ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿ "ನಾನು ಆತ್ಮ ಸಾಕ್ಷಿಯಾಗಿ ಪ್ರಮಾಣ ಮಾಡುವುದೇನೆಂದರೆ, ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಹಾಗೂ ನಿರ್ಮೂಲನೆಗೊಳಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ, ಹದಿನೆಂಟು ವರ್ಷದೊಳಗಿನ ಶಾಲೆಯಿಂದ ಹೊರಗಡೆ ಇರುವ ಯಾವುದೇ ಮಗು ಕಂಡುಬಂದರೆ ಅವರ ಪೋಷಕರಿಗೆ ತಿಳುವಳಿಕೆ ಹೇಳಿ ಆ ಮಗುವನ್ನು ಶಾಲೆಗೆ ಸೇರಿಸಲು ಹಾಗೂ ಕರ್ನಾಟಕವನ್ನು ಬಾಲಕಾರ್ಮಿಕ ಮುಕ್ತ ರಾಜ್ಯವನ್ನಾಗಿಸಲು ಪ್ರಯತ್ನಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ" ಎಂಬ ಪ್ರತಿಜ್ಞಾ ವಿಧಿಯನ್ನು ಕಡ್ಡಾಯವಾಗಿ ಬೋಧಿಸಬೇಕು.  ಕಾರ್ಯಕ್ರಮಗಳನ್ನು ಆಯಾ ಇಲಾಖಾವಾರು ಆಯೋಜಿಸಿ ವರದಿಯನ್ನು ಜೂ. 25 ರೊಳಗಾಗಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರಾದ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.  


ಹೀಗಾಗಿ ಲೇಖನಗಳು ವಿಶ್ವ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಿಂದ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಡಿ.ಸಿ. ಸೂಚನೆ

ಎಲ್ಲಾ ಲೇಖನಗಳು ಆಗಿದೆ ವಿಶ್ವ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಿಂದ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಡಿ.ಸಿ. ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಶ್ವ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಿಂದ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಡಿ.ಸಿ. ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/06/12.html

Subscribe to receive free email updates:

0 Response to "ವಿಶ್ವ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಿಂದ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಡಿ.ಸಿ. ಸೂಚನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ