ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಂದು ಕಾನೂನು ಅರಿವು-ನೆರವು

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಂದು ಕಾನೂನು ಅರಿವು-ನೆರವು - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಂದು ಕಾನೂನು ಅರಿವು-ನೆರವು, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಂದು ಕಾನೂನು ಅರಿವು-ನೆರವು
ಲಿಂಕ್ : ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಂದು ಕಾನೂನು ಅರಿವು-ನೆರವು

ಓದಿ


ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಂದು ಕಾನೂನು ಅರಿವು-ನೆರವು


ಕೊಪ್ಪಳ ಜೂ. 08 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಶಿಕ್ಷಣ ಇಲಾಖೆ, ಯುನೆಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಮತ್ತು ಮಕ್ಕಳ ಸಹಾಯವಾಣಿ ಇವರ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ "ಕಾನೂನು ಅರಿವು-ನೆರವು ಹಾಗೂ ಜಾಥಾ ಕಾರ್ಯಕ್ರಮವನ್ನು ಜೂ. 12 ರಂದು ಕೊಪ್ಪಳದಲ್ಲಿ ಆಯೋಜಿಸಲಾಗಿದೆ.
    ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮವು ಜೂ. 12 ರಂದು ಬೆಳಿಗ್ಗೆ 8 ಗಂಟೆಗೆ ಕೊಪ್ಪಳ ತಹಶೀಲ್ದಾರ ಕಛೇರಿಯಿಂದ ಪ್ರಾರಂಭಗೊಂಡು, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ.  ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ "ಕಾನೂನು ಅರಿವು-ನೆರವು" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 
    ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕರ್ಣಿ ಅವರು ಕಾರ್ಯಕ್ರಮ ಉದ್ಘಾಟಿಸುವರು.  ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಕುಮಾರ ಎಸ್., ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಮನು ಶರ್ಮಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಕಂಪ್ಲಿ, ಜಿಲ್ಲಾ ಸರಕಾರಿ ವಕೀಲ ಆಸೀಫ್ ಅಲಿ, ವಕೀಲರ ಸಂಘದ ಕಾರ್ಯದರ್ಶಿ ಕೊಟ್ರೇಶ ಪೋಚಗುಂಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ. ಹನುಮಂತಪ್ಪ, ಕಾರ್ಮಿಕ ಅಧಿಕಾರಿ ಶ್ಯಾಮರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸಿ.ಡಿ. ಗೀತಾ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ನಿಲೋಫರ್ ರಾಂಪುರಿ ಪಾಲ್ಗೊಳ್ಳುವರು.
    ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಯುನಿಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ತರಬೇತಿ ಸಂಯೋಜಕರಾದ ಹರೀಶ್ ಜೋಗಿ ಅವರು "ಮಕ್ಕಳ ಹಕ್ಕು ಮತ್ತು ರಕ್ಷಣೆ" ಕುರಿತು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಅವರು "ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ-2016" ಕುರಿತು ವಿಶೇಷ ಉಪನ್ಯಾಸ ನೀಡುವರು.  ಅಲ್ಲದೇ ಕಲಾ ತಂಡದಿಂದ ಜಾಗೃತಿ ಗೀತೆಗಳ ಕಾರ್ಯಕ್ರಮ ಹಾಗೂ ವಿವಿಧ ಇಲಾಖೆಗಳ ಯೋಜನೆಗಳ ಪರಿಚಯ ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಂದು ಕಾನೂನು ಅರಿವು-ನೆರವು

ಎಲ್ಲಾ ಲೇಖನಗಳು ಆಗಿದೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಂದು ಕಾನೂನು ಅರಿವು-ನೆರವು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಂದು ಕಾನೂನು ಅರಿವು-ನೆರವು ಲಿಂಕ್ ವಿಳಾಸ https://dekalungi.blogspot.com/2018/06/12_97.html

Subscribe to receive free email updates:

0 Response to "ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜೂ. 12 ರಂದು ಕಾನೂನು ಅರಿವು-ನೆರವು"

ಕಾಮೆಂಟ್‌‌ ಪೋಸ್ಟ್‌ ಮಾಡಿ