ಶೀರ್ಷಿಕೆ : ಜೂ. 19 ರಂದು ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಉದ್ಘಾಟನೆ ಸಮಾರಂಭ
ಲಿಂಕ್ : ಜೂ. 19 ರಂದು ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಉದ್ಘಾಟನೆ ಸಮಾರಂಭ
ಜೂ. 19 ರಂದು ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಉದ್ಘಾಟನೆ ಸಮಾರಂಭ
ಕೊಪ್ಪಳ ಜೂ. 15 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ "ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಕಾರ್ಯಕ್ರಮ" ಜೂ. 19 ರಿಂದ 28 ರವರೆಗೆ ತೋಟಗಾರಿಕೆ ಕಛೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದು, ಉದ್ಘಾಟನಾ ಸಮಾರಂಭವು ಜೂ. 19 ರಂದು ಬೆಳಿಗ್ಗೆ 11-30 ಗಂಟೆಗೆ ಜರುಗಲಿದೆ.
ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಸಂಸದ ಕರಡಿ ಸಂಗಣ್ಣ "ತೋಟಗಾರಿಕೆ ಬೆಳೆಗಳ ತಾಂತ್ರಿಕ ಕೈಪಿಟಿ" ಬಿಡುಗಡೆಗೊಳಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಅಮರೇಗೌಡ ಬಯ್ಯಾಪುರ, ಹಾಲಪ್ಪ ಬಸಪ್ಪ ಆಚಾರ್, ಪರಣ್ಣ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್, ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮಣ್ಣ ಅಗಸಿಮುಂದಿನ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಣ್ಣ ಮೂಲಿಮನಿ, ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಯಂಕಣ್ಣ ಯರಾಶಿ, ಕೊಪ್ಪಳ ತಾಲೂಕಿನ ಅಭಿನವಶ್ರೀ ತೋಟಗಾರಿಕೆ ಬೆಳೆಗಾರರ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಶಿವರಾಮಪ್ಪ ಕುರಿ, ಕುಷ್ಟಗಿ ತಾಲೂಕಿನ ಕಪಿಲತೀರ್ಥ ತೋಟಗಾರಿಕೆ ಬೆಳೆಗಾರರ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಸಿದ್ದನಗೌಡ ಹೆಚ್. ಪೋಲೀಸ್ ಪಾಟೀಲ್ ಹಾಗೂ ಯಲಬುರ್ಗಾ ತಾಲೂಕಿನ ತೋಟಗಾರಿಕ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಮಲ್ಲಪ್ಪ ಸಿದ್ದಪ್ಪ ಕೋನನಗೌಡ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಎಮ್. ಮಹೇಶ್ವರ್‍ರಾವ್, ಲಾಲ್‍ಬಾಗ್ ಬೆಂಗಳೂರಿನ ತೋಟಗಾರಿಕೆ ಆಯುಕ್ತರಾದ ವೈ.ಎಸ್. ಪಾಟೀಲ್, ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಲಾಲ್‍ಬಾಗ್ ಬೆಂಗಳೂರಿನ (ಕ್ಷೇತ್ರ ಮತ್ತು ನರ್ಸರಿ) ತೋಟಗಾರಿಕೆ ಅಪರ ನಿರ್ದೇಶಕರು ಡಾ. ಪಿ.ಎಮ್. ಸೊಬರದ, ಲಾಲ್‍ಬಾಗ್ ಬೆಂಗಳೂರಿನ ತೋಟಗಾರಿಕೆ ಜಂಟಿ ನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಲಕ್ಷ್ಮೀ ಡಿ.ರಾಜು, ಕಲಬುರಗಿ ವಿಭಾಗೀಯ ತೋಟಗಾರಿಕೆ ಜಂಟಿ ನಿರ್ದೇಶಕರಾದ ಎಸ್.ಬಿ ದಿಡ್ಡಿಮನಿ, ಮುನಿರಾಬಾದ್‍ನ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಪಿ.ಎಮ್ ಗಂಗಾಧರಪ್ಪ, ಕೊಪ್ಪಳ ಕೃಷಿ ವಿಸ್ತರಣೆ ಮತ್ತು ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ. ಎಮ್.ಬಿ ಪಾಟೀಲ್ ಹಾಗೂ ಜಿಲ್ಲಾ ವಾರ್ತಾಧಿಕಾರಿ ಬಿ.ವಿ ತುಕಾರಾಮ್‍ರಾವ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಜೂ. 19 ರಂದು ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಉದ್ಘಾಟನೆ ಸಮಾರಂಭ
ಎಲ್ಲಾ ಲೇಖನಗಳು ಆಗಿದೆ ಜೂ. 19 ರಂದು ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಉದ್ಘಾಟನೆ ಸಮಾರಂಭ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 19 ರಂದು ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಉದ್ಘಾಟನೆ ಸಮಾರಂಭ ಲಿಂಕ್ ವಿಳಾಸ https://dekalungi.blogspot.com/2018/06/19_15.html
0 Response to "ಜೂ. 19 ರಂದು ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಉದ್ಘಾಟನೆ ಸಮಾರಂಭ"
ಕಾಮೆಂಟ್ ಪೋಸ್ಟ್ ಮಾಡಿ