ಶೀರ್ಷಿಕೆ : ಜೂ. 29 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ
ಲಿಂಕ್ : ಜೂ. 29 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ
ಜೂ. 29 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ
ಕೊಪ್ಪಳ ಜೂ. 27 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಜೂ. 29 ರಿಂದ ಜುಲೈ. 10 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಕೊಪ್ಪಳದ ಗವಿಸಿದ್ದೇಶ್ವರ ಪದವಿ ಪೂರ್ವ ಕಾಲೇಜು, ಯಲಬುರ್ಗಾದ ಸರಕಾರಿ ಪದವಿ ಪೂರ್ವ ಕಾಲೇಜು, ಕುಷ್ಟಗಿಯ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮತ್ತು ಗಂಗಾವತಿಯ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಎಸ್.ಎಂ.ಎನ್.ಎಂ. ಬಾಲಕಿಯರ ಪದವಿ ಪೂರ್ವ ಕಾಲೇಜು ಸೇರಿ ಜಿಲ್ಲೆಯ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಬೆಳಿಗ್ಗೆ 10-15 ರಿಂದ ಸಂಜೆ 06 ಗಂಟೆಯವರೆಗೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ಎಸ್‍ಟಿಡಿ, ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು, ನಿಯೋಜಿತ ಶಿಕ್ಷಕರು, ಜಾಗೃತ ದಳದವರನ್ನು ಹೊರತುಪಡಿಸಿ, ಉಳಿದವರ ಪ್ರವೇಶ ನಿಷೇಧಿಸಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರ ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳಿಗೆ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಜೂ. 29 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ
ಎಲ್ಲಾ ಲೇಖನಗಳು ಆಗಿದೆ ಜೂ. 29 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 29 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ ಲಿಂಕ್ ವಿಳಾಸ https://dekalungi.blogspot.com/2018/06/29_28.html
0 Response to "ಜೂ. 29 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ"
ಕಾಮೆಂಟ್ ಪೋಸ್ಟ್ ಮಾಡಿ