ಶೀರ್ಷಿಕೆ : ಮೌಲಾನಾ ಆಜಾದ್ ಮಾದರಿಯ ವಸತಿ ರಹಿತ ಶಾಲೆ : 6ನೇ ತರಗತಿಗೆ ನೇರ ಪ್ರವೇಶ
ಲಿಂಕ್ : ಮೌಲಾನಾ ಆಜಾದ್ ಮಾದರಿಯ ವಸತಿ ರಹಿತ ಶಾಲೆ : 6ನೇ ತರಗತಿಗೆ ನೇರ ಪ್ರವೇಶ
ಮೌಲಾನಾ ಆಜಾದ್ ಮಾದರಿಯ ವಸತಿ ರಹಿತ ಶಾಲೆ : 6ನೇ ತರಗತಿಗೆ ನೇರ ಪ್ರವೇಶ
ಕೊಪ್ಪಳ ಜೂ. 13 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಹೊಸದಾಗಿ ಪ್ರಾರಂಭವಾಗುತ್ತಿರುವ ವಸತಿ ರಹಿತ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿಗೆ ಅರ್ಹ ವಿದ್ಯಾರ್ಥಿಗಳು ನೇರವಾಗಿ ಪ್ರವೇಶ ಪಡೆಯಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹೊಸದಾಗಿ ಪ್ರಾರಂಭವಾಗುತ್ತಿರುವ ವಸತಿ ರಹಿತ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ (ಆಂಗ್ಲ ಮಾಧ್ಯಮ) ಶಾಲೆಗಳನ್ನು ಕೊಪ್ಪಳ ಜಿಲ್ಲೆಯ ಕುಕನೂರು, ಮುನಿರಾಬಾದ್, ಕಾರಟಗಿ, ಕನಕಗಿರಿ, ತಾವರಗೇರಾ ಈ ಸ್ಥಳಗಳಲ್ಲಿ ಪ್ರಾರಂಭಿಸಲಾಗಿದ್ದು, 6ನೇ ತರಗತಿಗೆ ನೇರವಾಗಿ ಪ್ರವೇಶ ಪಡೆಯಲು 5ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಂಬಂಧಿಸಿದ ಶಾಲೆಗಳಿಗೆ ಭೇಟಿ ನೀಡಿ ಪ್ರವೇಶವನ್ನು ಪಡೆಯಬಹುದು.
ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪ್ರತಿ ಶಾಲೆಯಲ್ಲಿ 60 ಸ್ಥಾನಗಳನ್ನು ನಿಗದಿಪಡಿಸಲಾಗಿದೆ. ಇದರಲ್ಲಿ 75% ಸೀಟುಗಳನ್ನು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು 25% ಸೀಟುಗಳನ್ನು ಇತರೆ ವರ್ಗದವರಿಗೆ ನೀಡಲಾಗುವುದು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 1 ಲಕ್ಷ ರೂ. ಮೀರಿರಬಾರದು. ಅಂಗವಿಕಲ ವಿದ್ಯಾರ್ಥಿಗಳು, ವಿಶೇಷ ಗುಂಪಿಗೆ ಸೇರಿದ ಅಂದರೆ, ಅನಾಥ ಮಕ್ಕಳು, ವಿಧವೆಯರ ಮಕ್ಕಳು, ಪೌರ ಕಾರ್ಮಿಕರ ಮಕ್ಕಳು ಇತ್ಯಾದಿಗಳಿಗೆ ಶೇ. 03 % ಸೀಟು ಕಾಯ್ದಿರಿಸಲಾಗಿದೆ. ಪ್ರವೇಶ ಪಡೆಯುವ ವಿದ್ಯಾರ್ಥಿಗಳು, ಜಾತಿ ಮತ್ತು ಆದಾಯದ ದೃಢೀಕರಿಸಿದ ಪ್ರಮಾಣ ಪತ್ರ, ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಅಂಕಪಟ್ಟಿಯ ದೃಢೀಕೃತ ಪ್ರತಿ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ ಹಾಗೂ ವಿದ್ಯಾರ್ಥಿಯ ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರಗಳೊಂದಿಗೆ ಜೂ. 25 ರೊಳಗಾಗಿ ನೇರವಾಗಿ ಶಾಲೆಗೆ ಬೇಟಿ ನೀಡಿ ಪ್ರವೇಶ ಪಡೆಯಬಹುದು.
ಶಾಲೆಗಳ ವಿವರ :
*********** ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಹೊಸದಾಗಿ ಪ್ರಾರಂಭವಾಗುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳ ವಿವರ ಇಂತಿದೆ. ಮೌಲಾನಾ ಆಜಾದ್ ಮಾದರಿ ಶಾಲೆಯು ಜಿಲ್ಲೆಯ ಮುನಿರಾಬಾದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಕಾರಟಗಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಕನಕಗಿರಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ, ಕುಕನೂರಿನ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ತಾವರಗೇರಾದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪ್ರಾರಂಭಗೊಳ್ಳುತ್ತಿವೆ.
6ನೇ ತರಗತಿಗೆ ನೇರವಾಗಿ ಪ್ರವೇಶ ಪಡೆಯಲಿಚ್ಛಿಸುವ ಅರ್ಹ ವಿದ್ಯಾರ್ಥಿಗಳು ಜೂ. 25 ರೊಳಗಾಗಿ ಆಯಾ ಶಾಲೆಗಳಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತ ಭವನ ಕೊಪ್ಪಳ, ದೂರವಾಣಿ ಸಂಖ್ಯೆ 08539-225070 ಅಥವಾ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಯಲಬುರ್ಗಾ, ಕೊಪ್ಪಳ, ಕುಷ್ಟಗಿ, ಗಂಗಾವತಿ ಇವರಲ್ಲಿ ಹಾಗೂ ವೆಬ್‍ಸೈಟ್ https://ift.tt/2GZYJnc ನಲ್ಲಿ ಸಹ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಮೌಲಾನಾ ಆಜಾದ್ ಮಾದರಿಯ ವಸತಿ ರಹಿತ ಶಾಲೆ : 6ನೇ ತರಗತಿಗೆ ನೇರ ಪ್ರವೇಶ
ಎಲ್ಲಾ ಲೇಖನಗಳು ಆಗಿದೆ ಮೌಲಾನಾ ಆಜಾದ್ ಮಾದರಿಯ ವಸತಿ ರಹಿತ ಶಾಲೆ : 6ನೇ ತರಗತಿಗೆ ನೇರ ಪ್ರವೇಶ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೌಲಾನಾ ಆಜಾದ್ ಮಾದರಿಯ ವಸತಿ ರಹಿತ ಶಾಲೆ : 6ನೇ ತರಗತಿಗೆ ನೇರ ಪ್ರವೇಶ ಲಿಂಕ್ ವಿಳಾಸ https://dekalungi.blogspot.com/2018/06/6.html
0 Response to "ಮೌಲಾನಾ ಆಜಾದ್ ಮಾದರಿಯ ವಸತಿ ರಹಿತ ಶಾಲೆ : 6ನೇ ತರಗತಿಗೆ ನೇರ ಪ್ರವೇಶ"
ಕಾಮೆಂಟ್ ಪೋಸ್ಟ್ ಮಾಡಿ