ಶೀರ್ಷಿಕೆ : ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಸಹಾಯಧನದೊಂದಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ
ಲಿಂಕ್ : ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಸಹಾಯಧನದೊಂದಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ
ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಸಹಾಯಧನದೊಂದಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ
ಕೊಪ್ಪಳ ಜೂ. 26 (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆಯ ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಪ್ರವಾಸಿ ಟ್ಯಾಕ್ಸಿ ಖರೀದಿಗೆ ಸಹಾಯಧನದೊಂದಿಗೆ ಸಾಲ ಸೌಲಭ್ಯ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವಾಸಿ ಟ್ಯಾಕ್ಸಿ ಯೋಜನೆಯಲ್ಲಿ ಅರ್ಹ ನಿರುದ್ಯೋಗಿ ಫಲಾನುಭವಿಗೆ 3 ಲಕ್ಷ ರೂ. ಗಳ ಸಹಾಯಧನದೊಂದಿಗೆ ಸಾಲ ಸೌಲಭ್ಯ ನೀಡಿ, ಪ್ರವಾಸಿ ಟ್ಯಾಕ್ಸಿ ಒದಗಿಸಸುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ-10, ಪರಿಶಿಷ್ಟ ಪಂಗಡ-05, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗ – 07 ಅಭ್ಯರ್ಥಿಗಳಿಗೆ ಯೋಜನೆ ಸೌಲಭ್ಯ ಒದಗಿಸುವ ಗುರಿ ನಿಗದಿಪಡಿಸಲಾಗಿದೆ. ಅರ್ಜಿಯನ್ನು ಜುಲೈ. 02 ರಿಂದ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, 2ನೇ ಮಹಡಿ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಂದ ಕಛೇರಿ ಸಮಯದಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಆಗಸ್ಟ್. 02 ರ ಒಳಗಾಗಿ ಸಲ್ಲಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಂ. ಕನಗವಲ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಸಹಾಯಧನದೊಂದಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಸಹಾಯಧನದೊಂದಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಸಹಾಯಧನದೊಂದಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_1.html
0 Response to "ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಸಹಾಯಧನದೊಂದಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ