ಶೀರ್ಷಿಕೆ : ಅಚ್ಚು ಮೆಚ್ಚಿನ ಪುಸ್ತಕ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ : ಅರ್ಜಿ ಆಹ್ವಾನ
ಲಿಂಕ್ : ಅಚ್ಚು ಮೆಚ್ಚಿನ ಪುಸ್ತಕ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ : ಅರ್ಜಿ ಆಹ್ವಾನ
ಅಚ್ಚು ಮೆಚ್ಚಿನ ಪುಸ್ತಕ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ : ಅರ್ಜಿ ಆಹ್ವಾನ
ಕೊಪ್ಪಳ ಜೂ. 13 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರೌಢಶಾಲೆಗಳಲ್ಲಿ "ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ" ಹಮ್ಮಿಕೊಳ್ಳಲು ಅರ್ಹ ಶಾಲಾ ಮುಖ್ಯೋಪಾಧ್ಯಾಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ "ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ" ಏರ್ಪಡಿಸುವ ಕುರಿತು ಯೋಜನೆಯನ್ನು ಹಮ್ಮಿಕೊಂಡಿದೆ. ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢ ಶಾಲೆಗಳು ತಮ್ಮ-ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ. ಈ ಕಾರ್ಯಕ್ರಮವನ್ನು ನಡೆಸುವ ಸಲುವಾಗಿ ಪ್ರಾಧಿಕಾರವು ರೂ. 5000/-ಗಳ ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಿದೆ.
ಅರ್ಜಿ ಸಲ್ಲಿಸಲಿಚ್ಛಿಸುವ ಆಸಕ್ತರು ತಮ್ಮ ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು ಇತ್ಯಾದಿ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಸ್ವಯಂ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮದ ಮುನ್ನ ಪ್ರಾಧಿಕಾರದಿಂದ ಪೂರ್ವಾನುಮೋದನೆ ಪಡೆಯುವುದು ಕಡ್ಡಾಯ. ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002, ಇವರಿಗೆ ಜೂ. 30 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 080-22484516/ 22017704 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಅಚ್ಚು ಮೆಚ್ಚಿನ ಪುಸ್ತಕ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಚ್ಚು ಮೆಚ್ಚಿನ ಪುಸ್ತಕ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_13.html
0 Response to "ಅಚ್ಚು ಮೆಚ್ಚಿನ ಪುಸ್ತಕ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ