ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿ ಪದ್ಧತಿ ನಿರ್ಮೂಲನೆ ಅಗತ್ಯ : ಎಸ್.ವಿ ಕುಲಕರ್ಣಿ

ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿ ಪದ್ಧತಿ ನಿರ್ಮೂಲನೆ ಅಗತ್ಯ : ಎಸ್.ವಿ ಕುಲಕರ್ಣಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿ ಪದ್ಧತಿ ನಿರ್ಮೂಲನೆ ಅಗತ್ಯ : ಎಸ್.ವಿ ಕುಲಕರ್ಣಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿ ಪದ್ಧತಿ ನಿರ್ಮೂಲನೆ ಅಗತ್ಯ : ಎಸ್.ವಿ ಕುಲಕರ್ಣಿ
ಲಿಂಕ್ : ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿ ಪದ್ಧತಿ ನಿರ್ಮೂಲನೆ ಅಗತ್ಯ : ಎಸ್.ವಿ ಕುಲಕರ್ಣಿ

ಓದಿ


ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿ ಪದ್ಧತಿ ನಿರ್ಮೂಲನೆ ಅಗತ್ಯ : ಎಸ್.ವಿ ಕುಲಕರ್ಣಿ


ಕೊಪ್ಪಳ ಜೂ. 12 (ಕರ್ನಾಟಕ ವಾರ್ತೆ): ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಅತ್ಯವಶ್ಯಕವಾಗಿದೆ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕರ್ಣಿ ಅವರು ಹೇಳಿದರು.  

    ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಶಿಕ್ಷಣ ಇಲಾಖೆ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಮತ್ತು ಮಕ್ಕಳ ಸಹಾಯವಾಣಿ ಇವರ ವತಿಯಿಂದ ಮಂಗಳವಾರದಂದು ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ "ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಪ್ರತಿ ವರ್ಷ ಜೂನ್. 12 ರಂದು ಆಚರಿಸಲಾಗುತ್ತಿದ್ದು, ಮಕ್ಕಳು ಬಾಲಕಾರ್ಮಿಕತೆಗೆ ಒಳಪಡದಂತೆ ಹಾಗೂ ಅವರನ್ನು ಶಿಕ್ಷಣದತ್ತ ಕೊಂಡೊಯ್ಯುವುದು ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡುವುದೇ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.  ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗಾಗಿ 1986 ರಲ್ಲಿಯೇ ಕಾಯ್ದೆ ಜಾರಿಗೆ ಬಂದಿದ್ದರೂ ಸಹ ಹೋಟೆಲ್ ಇತ್ಯಾದಿ ಕ್ಷೇತ್ರಗಳಲ್ಲಿ ಸಾಮಾನ್ಯವಾಗಿ ಇಂದಿಗೂ ಮಕ್ಕಳು ಕೆಲಸ ಮಾಡುತ್ತಿರುವುದು ಕಂಡುಬರುತ್ತದೆ.  ಅಂದರೆ ಕಾಯ್ದೆಯು ಸಂಪೂರ್ಣ ಬಳಕೆಯಾಗುತ್ತಿಲ್ಲ ಎಂದರ್ಥ.  ಇದ್ದಕ್ಕೆ ಕಾರಣ ಕಾನೂನು ಅರಿವು ಹಾಗೂ ಶಿಕ್ಷಣದ ಕೊರತೆ.  ದೇಶದ ಅಭಿವೃದ್ಧಿಗಾಗಿ ಶಿಕ್ಷಣ ಬಹು ಮುಖ್ಯವಾಗಿದ್ದು, ಮಕ್ಕಳು ಒಳ್ಳೆಯ ಶಿಕ್ಷಣವನ್ನು ಕಲಿತು ಉತ್ತಮ ನಾಗರಿಕರಾಗಬೇಕು ಅಂದಾಗ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ.  ಯಾವುದೇ ಕ್ಷೇತ್ರಗಳಲ್ಲಿ ಕೆಲಸಕ್ಕಾಗಿ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳಿಗೆ ಕೆಲಸಕ್ಕೆ ಇಟ್ಟುಕೊಂಡ ಪ್ರಕರಣಗಳು ಹಾಗೂ ಯಾವುದೆ ರೀತಿಯ ದೌರ್ಜನ್ಯ ಕಂಡುಬಂದಲ್ಲಿ ಕೂಡಲೇ ಮಕ್ಕಳ ಸಹಾಯವಾಣಿ 1098, ಕಂದಾಯ ಇಲಾಖೆಯ ತಹಶೀಲ್ ಕಾರ್ಯಾಲಯ, ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು.  ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿಕ ಪದ್ಧತಿಯು ಮಾರಕವಾಗಿದ್ದು, ಈ ಅನಿಷ್ಠ ಪದ್ಧತಿಯನ್ನು ಬೇರಿನಿಂದ ಕಿತ್ತೋಗೆಯಬೇಕು.  ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಪ್ರತಿಯೊಬ್ಬ ಭಾರತೀಯ ನಾಗರೀಕರ ಆಧ್ಯ ಕರ್ತವ್ಯವಾಗಿದ್ದು, ಸಾರ್ವಜನಿಕರೆಲ್ಲರೂ ಸಹಕರಿಸಿ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕರ್ಣಿ ಅವರು ಕರೆ ನೀಡಿದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಕಂಪ್ಲಿ ಅವರು ಮಾತನಾಡಿ, ಬಾಲಕಾರ್ಮಿಕ ಪದ್ಧತಿಯು ಒಂದು ಸಾಮಾಜಿಕ ಪೀಡುಗಾಗಿದ್ದು, ಇದು ಒಂದು ಪಾಪದ ಕೆಲಸ ಹಾಗೂ ದೇಶಕ್ಕೆ ಶಾಪವಾಗಿದೆ.  ಇದರ ನಿರ್ಮೂಲನೆಗಾಗಿ ಸರ್ಕಾರವು ಕಾಯ್ದೆಗಳನ್ನು ಜಾರಿಗೊಳಿಸಿದ್ದು, ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆಯ ನಿಷೇಧ ಮತ್ತು ನಿಯಂತ್ರಣ ಕಾಯ್ದೆ-2016 ಜಾರಿಯಲ್ಲಿದೆ.  14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಂಡಲ್ಲಿ 2 ವರ್ಷ ಜೈಲು ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗುವುದು.  ಬಾಲಕಾರ್ಮಿಕ ವ್ಯವಸ್ಥೆಗೆ ಒಳಪಟ್ಟ ಮಕ್ಕಳು, ಮಾನಸಿಕ ಹಾಗೂ ದೈಹಿಕವಾಗಿ ಸದೃಡವಾಗಿರುವುದಿಲ್ಲ.  ಈ ಪದ್ಧತಿಗೆ ಅನೇಕ ಸಮಸ್ಯೆಗಳಿದ್ದು, ಮುಖ್ಯವಾಗಿ ಶಿಕ್ಷಣದ ಕೊರತೆ.  ಕಡ್ಡಾಯ ಶಿಕ್ಷಣ ಪ್ರತಿಯೊಬ್ಬ ಮಕ್ಕಳ ಮೊದಲ ಹಕ್ಕು.  ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪಾಲಕರ ಕರ್ತವ್ಯವಾಗಿದೆ.  ಈ ನಿಟ್ಟಿನಲ್ಲಿ ಕಾನೂನು ಅರಿವು ಅತ್ಯವಶ್ಯಕವಾಗಿದ್ದು, ಮಕ್ಕಳ ಹಕ್ಕುಗಳ ಬಗ್ಗೆ ಮಕ್ಕಳಲ್ಲಿ ಹಾಗೂ ಅವರ ಪಾಲಕರಿಗೆ ಅರಿವು ಮೂಡಿಸಿ, ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರಲು ಎಲ್ಲರೂ ಸಹಕರಿಸಬೇಕು ಎಂದರು.   
    ಕಾರ್ಯಕ್ರಮದ ಅಂಗವಾಗಿ ಸಿವಿಲ್ ನ್ಯಾಯಾಧೀಶರಾದ ಗಾಯಿತ್ರಿ ಕಠಾರೆ ಅವರು ಪ್ರತಿಜ್ಞಾವಿಧಿ ಬೋಧಿಸಿದರು.  ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಕುಮಾರ ಎಸ್., ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಹರೀಶ್ ಪಾಟೀಲ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮನು ಶರ್ಮಾ, ಜಿಲ್ಲಾ ಸರಕಾರಿ ವಕೀಲ ಆಸೀಫ್ ಅಲಿ, ವಕೀಲರ ಸಂಘದ ಉಪಾಧ್ಯಕ್ಷ ಎಸ್.ಹೆಚ್. ಇಂಗಳದಾಳ, ಕಾರ್ಯದರ್ಶಿ ಕೊಟ್ರೇಶ ಪೋಚಗುಂಡಿ, ಕಾರ್ಮಿಕ ಅಧಿಕಾರಿ ಶ್ಯಾಮರಾವ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಸರೋಜಾ ಬಾಕ್ಳೆ ಸೇರಿದಂತೆ ಸಿವಿಲ್ ನ್ಯಾಯಾಧೀಶರು, ಮಕ್ಕಳ ಸಹಾಯವಾಣಿಯ ಅಧಿಕಾರಿಗಳು ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ-ಯುನಿಸೆಫ್ ತರಬೇತಿ ಸಂಯೋಜಕರಾದ ಹರೀಶ ಜೋಗಿ ಅವರು "ಮಕ್ಕಳ ಹಕ್ಕು ಮತ್ತು ರಕ್ಷಣೆ" ಕುರಿತು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ  ಅವರು "ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇದ ಮತ್ತು ನಿಯಂತ್ರಣ ಕಾಯ್ದೆ-2016" ಕುರಿತು ವಿಶೇಷ ಉಪನ್ಯಾಸ ನೀಡಿದರು.  ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥ ನಗರದಲ್ಲಿ ಯಶಸ್ವಿಯಾಗಿ ಜರುಗಿತು.


ಹೀಗಾಗಿ ಲೇಖನಗಳು ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿ ಪದ್ಧತಿ ನಿರ್ಮೂಲನೆ ಅಗತ್ಯ : ಎಸ್.ವಿ ಕುಲಕರ್ಣಿ

ಎಲ್ಲಾ ಲೇಖನಗಳು ಆಗಿದೆ ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿ ಪದ್ಧತಿ ನಿರ್ಮೂಲನೆ ಅಗತ್ಯ : ಎಸ್.ವಿ ಕುಲಕರ್ಣಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿ ಪದ್ಧತಿ ನಿರ್ಮೂಲನೆ ಅಗತ್ಯ : ಎಸ್.ವಿ ಕುಲಕರ್ಣಿ ಲಿಂಕ್ ವಿಳಾಸ https://dekalungi.blogspot.com/2018/06/blog-post_30.html

Subscribe to receive free email updates:

0 Response to "ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿ ಪದ್ಧತಿ ನಿರ್ಮೂಲನೆ ಅಗತ್ಯ : ಎಸ್.ವಿ ಕುಲಕರ್ಣಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ