ಹುಲಿಗಿಯ ಬಹುಗ್ರಾಮ ಘನತ್ಯಾಜ್ಯ ಕಸ ವಿಲೇವಾರಿ ಘಟಕ ರಾಜ್ಯಕ್ಕೆ ಮಾದರಿಯಾಗಿದೆ- ಡಾ. ಜಿ. ಪರಮೇಶ್ವರ

ಹುಲಿಗಿಯ ಬಹುಗ್ರಾಮ ಘನತ್ಯಾಜ್ಯ ಕಸ ವಿಲೇವಾರಿ ಘಟಕ ರಾಜ್ಯಕ್ಕೆ ಮಾದರಿಯಾಗಿದೆ- ಡಾ. ಜಿ. ಪರಮೇಶ್ವರ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಹುಲಿಗಿಯ ಬಹುಗ್ರಾಮ ಘನತ್ಯಾಜ್ಯ ಕಸ ವಿಲೇವಾರಿ ಘಟಕ ರಾಜ್ಯಕ್ಕೆ ಮಾದರಿಯಾಗಿದೆ- ಡಾ. ಜಿ. ಪರಮೇಶ್ವರ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಹುಲಿಗಿಯ ಬಹುಗ್ರಾಮ ಘನತ್ಯಾಜ್ಯ ಕಸ ವಿಲೇವಾರಿ ಘಟಕ ರಾಜ್ಯಕ್ಕೆ ಮಾದರಿಯಾಗಿದೆ- ಡಾ. ಜಿ. ಪರಮೇಶ್ವರ
ಲಿಂಕ್ : ಹುಲಿಗಿಯ ಬಹುಗ್ರಾಮ ಘನತ್ಯಾಜ್ಯ ಕಸ ವಿಲೇವಾರಿ ಘಟಕ ರಾಜ್ಯಕ್ಕೆ ಮಾದರಿಯಾಗಿದೆ- ಡಾ. ಜಿ. ಪರಮೇಶ್ವರ

ಓದಿ


ಹುಲಿಗಿಯ ಬಹುಗ್ರಾಮ ಘನತ್ಯಾಜ್ಯ ಕಸ ವಿಲೇವಾರಿ ಘಟಕ ರಾಜ್ಯಕ್ಕೆ ಮಾದರಿಯಾಗಿದೆ- ಡಾ. ಜಿ. ಪರಮೇಶ್ವರ

ಕೊಪ್ಪಳ ಜೂ. 27 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕು ಹುಲಿಗಿ-ಹೊಸಳ್ಳಿ ಯಲ್ಲಿ ಸ್ಥಾಪಿಸಲಾಗಿರುವ ಬಹುಗ್ರಾಮ ಘನತ್ಯಾಜ್ಯ ಕಸ ವಿಲೇವಾರಿ ಘಟಕವು ಅತ್ಯುತ್ತಮ ಘಟಕವಾಗಿದ್ದು, ಇಡೀ ರಾಜ್ಯಕ್ಕೆ ಮಾದರಿಯಾಗುವ ಎಲ್ಲ ಅರ್ಹತೆಯನ್ನು ಹೊಂದಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರು ಪ್ರಶಂಸೆ ವ್ಯಕ್ತಪಡಿಸಿದರು.

     ಹುಲಿಗಿ-ಹೊಸಳ್ಳಿಯಲ್ಲಿ ಸ್ಥಾಪಿಸಲಾಗಿರುವ ಘನತ್ಯಾಜ್ಯ ಕಸ ವಿಲೇವಾರಿ ಘಟಕಕ್ಕೆ ಬುಧವಾರದಂದು ಭೇಟಿ ನೀಡಿದ ಬಳಿಕ ಅವರು ಈ ಕುರಿತು ಮಾತನಾಡಿದರು.

     ಹಲವು ಗ್ರಾಮ ಪಂಚಾಯತಿಗಳ ಸಹಭಾಗಿತ್ವದಲ್ಲಿ ನಿರ್ಮಿಸಲಾಗಿರುವ ಈ ಘನತ್ಯಾಜ್ಯ ಕಸ ವಿಲೇವಾರಿ ಘಟಕ ಅತ್ಯುತ್ತಮವಾಗಿದೆ.  ರಾಜ್ಯದ ಬಹುತೇಕ ಜಿಲ್ಲಾ ಪಂಚಾಯತಿ, ತಾ.ಪಂ. ಹಾಗೂ ಗ್ರಾಮ ಪಂಚಾಯತಿಯ ಜನಪ್ರತಿನಿಧಿಗಳು ಈ ಘಟಕಕ್ಕೆ ಭೇಟಿ ನೀಡಿ ಇಲ್ಲಿನ ಅತ್ಯುತ್ತಮ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ,  ಎಂಬುದಾಗಿ ನಾನು  ಹಲವರಿಂದ ಕೇಳಿ ತಿಳಿದುಕೊಂಡಿದ್ದೆ.  ಹೀಗಾಗಿ ಈ ಘಟಕಕ್ಕೆ ಭೇಟಿ ನೀಡಿ ನೋಡಲೇಬೇಕು ಎನ್ನುವ ಕುತೂಹಲ ಇತ್ತು.  ಇಂದು ಈ ಘಟಕಕ್ಕೆ ಖುದ್ದು ಭೇಟಿ ನೀಡಿ ಕಂಡುಕೊಂಡಿದ್ದೇನೆ.  ಇಲ್ಲಿ ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯವನ್ನು ಪ್ರತ್ಯೇಕಿಸುವ ವ್ಯವಸ್ಥೆ, ಎರೆಹುಳು ಗೊಬ್ಬರ ತಯಾರಿಕೆ ಘಟಕ, ಪ್ಲಾಸ್ಟಿಕ್ ತ್ಯಾಜ್ಯದಿಂದ ಫ್ಲೋರ್ ಬ್ರಿಕ್ಸ್ ತಯಾರಿಕೆ, ತರಬೇತಿ ಕೇಂದ್ರ ವ್ಯವಸ್ಥೆ ಇಲ್ಲಿದೆ.  ರಾಜ್ಯಕ್ಕೇ ಮಾದರಿಯಾಗಿರುವ ಇಂತಹ ಅತ್ಯುತ್ತಮ ಘಟಕ ಸ್ಥಾಪಿಸಲು ಶ್ರಮಿಸಿದ ಎಲ್ಲ ಅಧಿಕಾರಿ ಮತ್ತು ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.  ಬೆಂಗಳೂರು ನಗರದಲ್ಲಿಯೂ ಕಸ ವಿಲೇವಾರಿಯದ್ದೇ ಪ್ರಮುಖ ಸಮಸ್ಯೆಯಾಗಿದೆ.  ಬೆಂಗಳೂರು ನಗರ ಪ್ರದೇಶ ವ್ಯಾಪ್ತಿಗೆ ಸುಮಾರು 110 ಗ್ರಾಮಗಳ ಸೇರ್ಪಡೆಯಾಗುತ್ತಿದ್ದು, ಇಲ್ಲಿನ ಮಾದರಿಯಲ್ಲಿಯೇ ಹಲವು ಗ್ರಾಮಗಳ ಜೊತೆಗೂಡಿ,  08 ರಿಂದ 10 ಗ್ರಾಮಗಳಿಗೊಂದರಂತೆ, ಇದೇ ಮಾದರಿಯ ಘನತ್ಯಾಜ್ಯ ಕಸ ವಿಲೇವಾರಿ ಘಟಕವನ್ನು ಸ್ಥಾಪಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರು ಶ್ಲಾಘಿಸಿದರು.

     ಕೊಪ್ಪಳ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಟಿ. ಜನಾರ್ಧನ ಹುಲಿಗಿ ಅವರು ಘನತ್ಯಾಜ್ಯ ವಿಲೇವಾರಿ ಘಟಕದ ಎಲ್ಲ ವಿಭಾಗಗಳ ಕುರಿತು ಗೃಹ ಮಂತ್ರಿಗಳಿಗೆ ಪರಿಚಯಿಸಿ, ಇಲ್ಲಿನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ತಾ.ಪಂ. ಕಾರ್ಯನಿರ್ವಾಹಕ ಅದಿಕಾರಿ ಕೃಷ್ಣಮೂರ್ತಿ ಸೇರಿದಂತೆ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.


ಹೀಗಾಗಿ ಲೇಖನಗಳು ಹುಲಿಗಿಯ ಬಹುಗ್ರಾಮ ಘನತ್ಯಾಜ್ಯ ಕಸ ವಿಲೇವಾರಿ ಘಟಕ ರಾಜ್ಯಕ್ಕೆ ಮಾದರಿಯಾಗಿದೆ- ಡಾ. ಜಿ. ಪರಮೇಶ್ವರ

ಎಲ್ಲಾ ಲೇಖನಗಳು ಆಗಿದೆ ಹುಲಿಗಿಯ ಬಹುಗ್ರಾಮ ಘನತ್ಯಾಜ್ಯ ಕಸ ವಿಲೇವಾರಿ ಘಟಕ ರಾಜ್ಯಕ್ಕೆ ಮಾದರಿಯಾಗಿದೆ- ಡಾ. ಜಿ. ಪರಮೇಶ್ವರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಹುಲಿಗಿಯ ಬಹುಗ್ರಾಮ ಘನತ್ಯಾಜ್ಯ ಕಸ ವಿಲೇವಾರಿ ಘಟಕ ರಾಜ್ಯಕ್ಕೆ ಮಾದರಿಯಾಗಿದೆ- ಡಾ. ಜಿ. ಪರಮೇಶ್ವರ ಲಿಂಕ್ ವಿಳಾಸ https://dekalungi.blogspot.com/2018/06/blog-post_39.html

Subscribe to receive free email updates:

0 Response to "ಹುಲಿಗಿಯ ಬಹುಗ್ರಾಮ ಘನತ್ಯಾಜ್ಯ ಕಸ ವಿಲೇವಾರಿ ಘಟಕ ರಾಜ್ಯಕ್ಕೆ ಮಾದರಿಯಾಗಿದೆ- ಡಾ. ಜಿ. ಪರಮೇಶ್ವರ"

ಕಾಮೆಂಟ್‌‌ ಪೋಸ್ಟ್‌ ಮಾಡಿ