ಶೀರ್ಷಿಕೆ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಯುವಕನ ವಿರುದ್ಧ ಕಾನೂನು ರೀತ್ಯಾ ಕ್ರಮ
ಲಿಂಕ್ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಯುವಕನ ವಿರುದ್ಧ ಕಾನೂನು ರೀತ್ಯಾ ಕ್ರಮ
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಯುವಕನ ವಿರುದ್ಧ ಕಾನೂನು ರೀತ್ಯಾ ಕ್ರಮ
ಕೊಪ್ಪಳ ಜೂ. 04 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಹಿಟ್ನಾಳ್‍ನಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಯುವಕನ ವಿರುದ್ಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿತನ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಿದೆ.
ಕಳೆದ ಮೇ. 27 ರಂದು ಮಕ್ಕಳ ಸಹಾಯವಾಣಿ ಸಂಖ್ಯೆ-1098 ಕ್ಕೆ ಕರೆ ಬಂದ ಮಾಹಿತಿ ಅನ್ವಯ, ಕೊಪ್ಪಳ ತಾಲೂಕಿನ ಹಿಟ್ನಾಳನಲ್ಲಿ ಸುಮಾರು 14 ವರ್ಷದ ಬಾಲಕಿಯೊಬ್ಬಳ ಮೇಲೆ ಅದೇ ಗ್ರಾಮದ 23 ವರ್ಷದ ಯುವಕನೂಬ್ಬ ಕಳೆದ 6-7 ತಿಂಗಳಿನಿಂದ ಲೈಂಗಿಕ ದೌರ್ಜನ್ಯವೆಸಗಿ, ಅಪ್ರಾಪ್ತ ಬಾಲಕಿಯ ಗರ್ಭಕ್ಕೆ ಕಾರಣನಾಗಿದ್ದಾನೆ ಎಂಬ ಮಾಹಿತಿಯ ಆಧಾರದ ಮೇಲೆ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ, ಬಾಲಕಿಯನ್ನು ಆಪ್ತ ಸಮಾಲೋಚಿಸಲಾಗಿ, ಈ ಮಾಹಿತಿಯು ನಿಜವಾಗಿದ್ದರ ಹಿನ್ನಲೆಯಲ್ಲಿ, ಬಾಲಕಿಯ ಮೇಲೆ ದೌರ್ಜನ್ಯವೆಸಗಿದ ಯುವಕನ ವಿರುದ್ಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಮೇ. 30 ರಂದು ಪ್ರಕರಣ ದಾಖಲಿಸಿ ಆರೋಪಿತನ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಿದೆ.
ಭಾರತ ಸರ್ಕಾರವು ಮಕ್ಕಳ ಮತ್ತು ಮಹಿಳೆಯರ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟಲು 2018ರ ಏಪ್ರಿಲ್‍ನಲ್ಲಿ ಭಾರತೀಯ ದಂಡ ಸಂಹಿತೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ಕ್ಕೆ ತಿದ್ದುಪಡಿಯನ್ನು ಮಾಡಿದ್ದು, ಅದರನ್ವಯ. 12 ವರ್ಷದೂಳಗಿನ ವಯೋಮಾನದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ/ ಹಲ್ಲೆಗೆ ಕನಿಷ್ಠ 20 ವರ್ಷ ಅಥವಾ ಜೀವಾವಧಿ ಜೈಲು ಶಿಕ್ಷೆ ಮತ್ತು ದಂಡ ಅಥವಾ ಮರಣ ದಂಡನೆ ಶಿಕ್ಷೆಯನ್ನು ವಿಧಿಸಬಹುದಾಗಿದೆ. 16 ವರ್ಷದೊಳಗಿನ ವಯೋಮಾನದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ/ ಹಲ್ಲೆಗಳಿಗೆ ಕನಿಷ್ಠ 20 ವರ್ಷದಿಂದ, ಜೀವಾವಧಿ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ. ಮಹಿಳೆ ಮೇಲಿನ ಅತ್ಯಾಚಾರಕ್ಕೆ ಕನಿಷ್ಠ 10 ವರ್ಷ ಅಥವಾ ಜೀವಾವಧಿ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿದೆ. ಈ ಎಲ್ಲಾ ಪ್ರಕರಣಗಳು ವಿಚಾರಣಾ ಅರ್ಹ ಮತ್ತು ಶಿಕ್ಷಾರ್ಹವಾಗಿದ್ದು, ಜಾಮೀನು ರಹಿತವಾಗಿರುತ್ತವೆ. ಪ್ರಕರಣಗಳನ್ನು ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವದು ಮತ್ತು ಪ್ರಕರಣ ದಾಖಲಾದ 6 ತಿಂಗಳೂಳಗಾಗಿ ಪ್ರಕರಣದ ಸಂಪೂರ್ಣ ವಿಚಾರಣೆಯಾಗುತ್ತದೆ. ಈ ಕಾಯ್ದೆಗಳಿಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣಗಳು ಜಿಲ್ಲೆಯಲ್ಲಿ ಜರುಗಿದಲ್ಲಿ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಯುವಕನ ವಿರುದ್ಧ ಕಾನೂನು ರೀತ್ಯಾ ಕ್ರಮ
ಎಲ್ಲಾ ಲೇಖನಗಳು ಆಗಿದೆ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಯುವಕನ ವಿರುದ್ಧ ಕಾನೂನು ರೀತ್ಯಾ ಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಯುವಕನ ವಿರುದ್ಧ ಕಾನೂನು ರೀತ್ಯಾ ಕ್ರಮ ಲಿಂಕ್ ವಿಳಾಸ https://dekalungi.blogspot.com/2018/06/blog-post_4.html
0 Response to "ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಯುವಕನ ವಿರುದ್ಧ ಕಾನೂನು ರೀತ್ಯಾ ಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ