ಶೀರ್ಷಿಕೆ : ಜೂನ್ ಮಾಹೆ ಪಡಿತರ ಆಹಾರ ಧಾನ್ಯಗಳ ವಿತರಣೆ
ಲಿಂಕ್ : ಜೂನ್ ಮಾಹೆ ಪಡಿತರ ಆಹಾರ ಧಾನ್ಯಗಳ ವಿತರಣೆ
ಜೂನ್ ಮಾಹೆ ಪಡಿತರ ಆಹಾರ ಧಾನ್ಯಗಳ ವಿತರಣೆ
ಕೊಪ್ಪಳ ಜೂ. 05 (ಕರ್ನಾಟಕ ವಾರ್ತೆ): ಕೊಪ್ಪಳ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಬಿಪಿಎಲ್ ಪಟಿತರ ಚೀಟಿಯ ಪ್ರತಿ ಸದಸ್ಯರಿಗೆ 7 ಕೆಜಿ ಅಕ್ಕಿ, ಅಂತ್ಯೋದಯ ಕಾರ್ಡುದಾರರಿಗೆ 35 ಕೆಜಿ ಅಕ್ಕಿ ಹಾಗೂ 1 ಕೆ.ಜಿ ತೊಗರಿಬೇಳೆ ವಿತರಿಸಲಾಗುವುದು ಎಂದು ಇಲಾಖೆ ತಿಳಿಸಿದೆ.
ಸರ್ಕಾರದಿಂದ ಪಡಿತರ ಆಹಾರ ಧಾನ್ಯಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ವಿತರಣೆ ಸಲುವಾಗಿ ಜೂನ್ ಮಾಹೆಯಲ್ಲಿ ಗೋಧಿಯನ್ನು ಹೊರತುಪಡಿಸಿ ಬಿಪಿಎಲ್ ಕಾರ್ಡಿನ ಕುಟುಂಬದ ಪ್ರತಿ ಸದಸ್ಯರಿಗೆ 7 ಕೆಜಿ ಅಕ್ಕಿ, ಪ್ರತಿ ಅಂತ್ಯೋದಯ ಕಾರ್ಡುದಾರರಿಗೆ 35 ಕೆಜಿ ಅಕ್ಕಿ ಉಚಿತವಾಗಿ ಹಾಗೂ ರೂ. 38 ರಂತೆ 1 ಕೆ.ಜಿ ತೊಗರಿಬೆಳೆಯನ್ನು ಪ್ರತಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ವಿತರಿಸಲಾಗುವುದು. ಗ್ರಾಮೀಣ ಪ್ರದೇಶದ ಪ್ರತಿ ಬಿಪಿಎಲ್ ಅಂತ್ಯೋದಯ ಕಾರ್ಡುದಾರರಿಗೆ ಪ್ರತಿ ಲೀಟರ್‍ಗೆ ರೂ. 30 ರಂತೆ 3 ಲೀಟರ್ ಸೀಮೆ ಎಣ್ಣೆಯನ್ನು ಹಾಗೂ ಗ್ರಾಮೀಣ ಪ್ರದೇಶದ ಎಪಿಎಲ್ ಕಾರ್ಡುದಾರರು ಗ್ರಾಮ ಪಂಚಾಯಿತಿಯ ಲಾಗಿನಲ್ಲಿ ತಮ್ಮ ಸ್ವ-ಇಚ್ಚೆಯಿಂದ ಬಯೋಮೆಟ್ರಿಕ್ ನೀಡಿದಲ್ಲಿ ರೂ. 30 ರಂತೆ ಒಂದು ಲೀಟರ್ ಸೀಮೆ ಎಣ್ಣೆ ವಿತರಿಸಲಾಗುವುದು. ಜಿಲ್ಲೆಯ ಪಡಿತರ ಚೀಟಿದಾರರು ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಸಿ.ಡಿ. ಗೀತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಜೂನ್ ಮಾಹೆ ಪಡಿತರ ಆಹಾರ ಧಾನ್ಯಗಳ ವಿತರಣೆ
ಎಲ್ಲಾ ಲೇಖನಗಳು ಆಗಿದೆ ಜೂನ್ ಮಾಹೆ ಪಡಿತರ ಆಹಾರ ಧಾನ್ಯಗಳ ವಿತರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂನ್ ಮಾಹೆ ಪಡಿತರ ಆಹಾರ ಧಾನ್ಯಗಳ ವಿತರಣೆ ಲಿಂಕ್ ವಿಳಾಸ https://dekalungi.blogspot.com/2018/06/blog-post_5.html
0 Response to "ಜೂನ್ ಮಾಹೆ ಪಡಿತರ ಆಹಾರ ಧಾನ್ಯಗಳ ವಿತರಣೆ"
ಕಾಮೆಂಟ್ ಪೋಸ್ಟ್ ಮಾಡಿ