ಶೀರ್ಷಿಕೆ : ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ : ಅರ್ಜಿ ಆಹ್ವಾನ
ಲಿಂಕ್ : ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ : ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ : ಅರ್ಜಿ ಆಹ್ವಾನ
ಕೊಪ್ಪಳ ಜೂ. 22 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನವನ್ನು ಮಂಜೂರಿಸಲು ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಸರಳೀಕರಣಗೊಳಿಸಿ ಶಿಷ್ಯವೇತನ ತ್ವರಿತ ಮಂಜೂರಾತಿ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ತಂತ್ರಾಂಶವನ್ನು ಸಿದ್ದಪಡಿಸಲಾಗಿದೆ. ಅರ್ಹ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿದಾರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸುವ ವಿಧಾನ ಇಂತಿದೆ. ಅರ್ಜಿದಾರರು ಇಲಾಖೆಯ ವೆಬ್‍ಸೈಟ್ www.sw.kar.nic.in ಕ್ಕೆ ಭೇಟಿ ನೀಡಿ, ಅರ್ಜಿಗಳು/ ಅಪ್ಲಿಕೇಶನ್ಸ್ ಲಿಂಕ್ ಕ್ಲಿಕ್ ಮಾಡಿ, ಸೋೀಷಿಯಲ್ ಎಂಪವರ್‍ಮೆಂಟ್ ಸ್ಕೀಮ್ಸ್ ಲಿಂಕ್, ಪರಿಶಿಷ್ಟ ಜಾತಿ ಕಾನೂನು ಪದವೀಧರರ ಶಿಷ್ಯ ವೇತನಕ್ಕೆ ಅರ್ಜಿ ನೊಂದಣಿ (ಸ್ಟೈಫಂಡ್ ಟು ಲಾ ಗ್ರಾಜುವೇಟ್ಸ್) ಲಿಂಕ್ ಕ್ಲಿಕ್ ಮಾಡಿ, ನೋಂದಣಿ ಪ್ರಕ್ರಿಯೆ/ ರಿಜಿಸ್ಟ್ರೇಷನ್ ಪ್ರೋಸೆಸ್ ಪುಟ ತೆರೆದುಕೊಳ್ಳುತ್ತದೆ. ಅರ್ಜಿ ಸಲ್ಲಿಸಲು ರಿಜಿಸ್ಟ್ರೇಷನ್ ಬಟನ್ ಕ್ಲಿಕ್ ಮಾಡಿ, ಅರ್ಜಿದಾರರು ಆಧಾರ್ ಸಂಖ್ಯೆ ಹಾಗೂ ಆಧಾರ್ ಕಾರ್ಡ್‍ನಲ್ಲಿರುವಂತೆ ಹೆಸರು ನಮೂದಿಸಬೇಕು. ವೈಯಕ್ತಿಕ ಮಾಹಿತಿ, ಮೊಬೈಲ್ ಸಂಖ್ಯೆ, ಜಾತಿ, ಉಪಜಾತಿ ಮತ್ತು ಖಾಯಂ ವಿಳಾಸವನ್ನು ಹಾಗೂ ಪದವಿ ಪಡೆದ ವಿಶ್ವವಿದ್ಯಾನಿಲಯದ ಹೆಸರು ಮತ್ತು ವಿಳಾಸವನ್ನು ತುಂಬಬೇಕು. ಜಾತಿ ಮತ್ತು ಆದಾಯಕ್ಕೆ ಸಂಬಂಧಿಸಿದಂತೆ ಪ್ರಮಾಣ ಪತ್ರಗಳ ಆರ್‍ಡಿ ಸಂಖ್ಯೆಯನ್ನು ನಮೂದಿಸಿದಾಗ ಪೂರ್ಣ ಮಾಹಿತಿಯು ಜನರೇಟ್ ಆಗುತ್ತದೆ. ಅಗತ್ಯವಿರುವ ದಾಖಲೆಗಳಾದ ಫೋಟೊ, ಪದವಿ ಪ್ರಮಾಣ ಪತ್ರ, ವಯಸ್ಸಿನ ಬಗ್ಗೆ ದಾಖಲೆಯ ಸ್ಟೇಟ್ ಬಾರ್ ಕೌನ್ಸಿಲ್ ಫಾರಂ ಅಪ್‍ಲೋಡ್ ಮಾಡಬೇಕು. ಮತ್ತು ಬ್ಯಾಂಕ್ ಜಂಟಿ ಖಾತೆಯ ಸಂಖ್ಯೆ ಹಾಗೂ ವಿಳಾಸವನ್ನು ನಮೂದಿಸಬೇಕು. ಸಬ್‍ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ, ಪ್ರಿಂಟ್ ಅಕ್‍ನಾಲೆಜಮೆಂಟ್ ಕ್ಲಿಕ್ ಮಾಡಿದಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ ಸ್ವೀಕೃತಿಯನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಅಥವಾ ಆಯಾ ತಾಲೂಕು ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಇವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_50.html
0 Response to "ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ