ಶೀರ್ಷಿಕೆ : ಲಘು ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಲಘು ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ
ಲಘು ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಜೂ. 12 (ಕರ್ನಾಟಕ ವಾರ್ತೆ): ಉತ್ತರಕನ್ನಡ ಜಿಲ್ಲೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯು ಟಾಟಾ ಮೋಟರ್ಸ್ ಸಹಯೋಗದೊಂದಿಗೆ ಲಘು ವಾಹನ ಚಾಲನಾ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಸಿಲಾಗಿದೆ.
ತರಬೇತಿಯು 30 ದಿನಗಳ ಅವಧಿಯದಾಗಿದ್ದು, ಪ್ರಾಯೋಗಿಕ ಕೌಶಲ್ಯಗಳ ಜೊತೆಗೆ ವ್ಯವಹಾರಿಕ ತಂತ್ರಗಳ ಬಗ್ಗೆಯೂ ಸಹ ನುರಿತ ತರಬೇತುದಾರರಿಂದ ತರಬೇತಿ ನೀಡಲಾಗುವುದು. ಲಘು ವಾಹನ ಚಾಲನಾ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, 20 ರಿಂದ 45 ವರ್ಷ ವಯೋಮಿತಿಯಲ್ಲಿರುವ ಅರ್ಹ ನಿರುದ್ಯೋಗಿ ಯುವಜನತೆ ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ತರಬೇತಿ ಪಡೆಯಲಿಚ್ಚಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಉದ್ಯೋಗ ವಿದ್ಯಾ ನಗರ, ದಾಂಡೇಲಿ ರಸ್ತೆ, ಹಳಿಯಾಳ (ಉತ್ತರ ಕರ್ನಾಟಕ ಜಿಲ್ಲೆ), ಈ ವಿಳಾಸಕ್ಕೆ ಕೂಡಲೇ ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆ ದೂರವಾಣಿ ಸಂಖ್ಯೆ 9483485489, 9482188780 ಕ್ಕೆ ಕಛೇರಿ ವೇಳೆ (ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆವರೆಗೆ) ಯಲ್ಲಿ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಲಘು ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಲಘು ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಲಘು ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_60.html
0 Response to "ಲಘು ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ