ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಕೊಳ್ಳುವಂತೆ ಸೂಚನೆ

ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಕೊಳ್ಳುವಂತೆ ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಕೊಳ್ಳುವಂತೆ ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಕೊಳ್ಳುವಂತೆ ಸೂಚನೆ
ಲಿಂಕ್ : ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಕೊಳ್ಳುವಂತೆ ಸೂಚನೆ

ಓದಿ


ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಕೊಳ್ಳುವಂತೆ ಸೂಚನೆ


ಕೊಪ್ಪಳ ಜೂ. 23 (ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ತೋಟಗಾರಿಕೆ ಬೆಳಗಳ ವಿಮೆ ಮಾಡಿಕೊಳ್ಳುವಂತೆ ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ರೈತರಿಗೆ ಮನವಿ ಮಾಡಿಕೊಂಡಿದ್ದಾರೆ.
    ಸರ್ಕಾರದ ಅಧಿಸೂಚನೆ ಅನ್ವಯ ಕರ್ನಾಟಕ ಸರ್ಕಾರವು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಪ್ರಕಾರ ಹವಾಮಾನಾ ಆಧಾರಿತ ಬೆಳೆ ವಿಮಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಿದೆ.  ಇದಕ್ಕಾಗಿ ಎಸ್.ಬಿ.ಐ ಜನರಲ್ ಇನ್ಸುರೆನ್ಸ್ ಕಂಪನಿ ರವರನ್ನು ಆಯ್ಕೆಮಾಡಲಾಗಿದೆ.
ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯ (ಡಬ್ಲ್ಯೂ.ಬಿ.ಸಿ.ಐ.ಎಸ್) ಮತ್ತು ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ (ಪಿ.ಎಂ.ಎಫ್.ಬಿ.ವೈ) ಅಧಿಸೂಚಿತ ಹೋಬಳಿ ಮತ್ತು ಬೆಳೆಗಳ ವಿವರ ಇಂತಿದೆ.  ಕೊಪ್ಪಳ ತಾಲೂಕಿನ ಅಳವಂಡಿ, ಹಿಟ್ನಾಳ, ಇರಕಲ್ಲಗಡ ಮತ್ತು ಕೊಪ್ಪಳ ಹೋಬಳಿಗಳಿಗೆ ದ್ರಾಕ್ಷಿ, ದಾಳಿಂಬೆ, ಮಾವು, ಹಸಿ ಮೇಣಸಿನಕಾಯಿ (ನೀರಾವರಿ), ಈರುಳ್ಳಿ (ನೀರಾವರಿ), ಟೊಮ್ಯಾಟೊ (ಅನಿರ್ದಿಷ್ಟ) ಬೆಳೆಗಳು.  ಗಂಗಾವತಿ ತಾಲೂಕಿನ ಹುಲಿಹೈದರ್, ಕನಕಗಿರಿ, ನವಲಿ, ವೆಂಕಟಗಿರಿ, ಸಂಗಾಪೂರ, ಮರಳಿ, ಕಾರಟಗಿ ಮತ್ತು ಸಿದ್ದಾಪುರ ಹೋಬಳಿಗಳಿಗೆ ದ್ರಾಕ್ಷಿ, ದಾಳಿಂಬೆ, ಮಾವು, ಹಸಿ ಮೇಣಸಿನಕಾಯಿ (ನೀರಾವರಿ), ಈರುಳ್ಳಿ (ನೀರಾವರಿ), ಟೊಮ್ಯಾಟೊ (ಅನಿರ್ದಿಷ್ಟ) ಹಾಗೂ ಈರುಳ್ಳಿ (ಮಳೆ ಆಶ್ರಿತ) ಬೆಳೆಗಳು.  ಕುಷ್ಟಗಿ ತಾಲೂಕಿನ ಹನುಮನಾಳ, ಹನುಮಸಾಗರ, ಕುಸ್ಟಗಿ ಮತ್ತು ತಾವರಗೇರಿ ಹೋಬಳಿಗಳಿಗೆ ದ್ರಾಕ್ಷಿ, ದಾಳಿಂಬೆ, ಮಾವು, ಹಸಿ ಮೇಣಸಿನಕಾಯಿ (ನೀರಾವರಿ), ಈರುಳ್ಳಿ (ನೀರಾವರಿ) ಹಾಗೂ ಟೊಮ್ಯಾಟೊ (ಅನಿರ್ದಿಷ್ಟ) ಬೆಳೆಗಳು.  ಯಲಬುರ್ಗಾ ತಾಲೂಕಿನ ಕುಕನೂರು, ಮಂಗಳೂರು, ಯಲಬುರ್ಗಾ ಮತ್ತು ಹಿರೇವಂಕಲಕುಂಟಾ ಹೋಬಳಿಗಳಿಗೆ ದ್ರಾಕ್ಷಿ, ದಾಳಿಂಬೆ, ಮಾವು, ಹಸಿ ಮೇಣಸಿನಕಾಯಿ (ನೀರಾವರಿ) ಹಾಗೂ ಈರುಳ್ಳಿ (ಮಳೆ ಆಶ್ರಿತ) ಬೆಳೆಗಳನ್ನು ಅಧಿಸೂಚಿಸಲಾಗಿದೆ.
ವಿಮಾ ಮೊತ್ತ ಮತ್ತು ಕಂತು :
************ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಮತ್ತು ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಡಿ ಬೆಳೆವಾರು ವಿಮಾ ಮೊತ್ತ ಮತ್ತು ವಿಮಾ ಕಂತುಗಳ ವಿವರ ಇಂತಿದೆ.  ಹಸಿಮೆಣಸಿನಕಾಯಿ (ನೀರಾವರಿ) ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ. 71000/-, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ ರೂ. 3550/-, ದಾಳಿಂಬೆ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ. 127000/-, ವಿಮಾ ಕಂತಿನ ಮೊತ್ತ ರೂ. 6350/-, ಮಾವು ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ. 80000/-, ವಿಮಾ ಕಂತಿನ ಮೊತ್ತ ರೂ. 4000/-, ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ. 280000/-, ವಿಮಾ ಕಂತಿನ ಮೊತ್ತ ರೂ. 14000/-, ಈ ಬೆಳೆಗಳ ವಿಮಾ ಕಂತಿನ ಮೊತ್ತವನ್ನು ಪಾವತಿಸಲು ರೈತರಿಗೆ ಅರ್ಜಿ ಸಲ್ಲಿಸಲು ಜೂನ್. 30 ಕೊನೆಯ ದಿನವಾಗಿದೆ. 
     ಈರುಳ್ಳಿ (ಮಳೆ ಆಶ್ರಿತ) ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ. 75000/-, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ ರೂ. 3750/-, ಟೊಮ್ಯಾಟೊ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ. 118000/-, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ ರೂ. 5900/-, ಈರುಳ್ಳಿ (ನೀರಾವರಿ) ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ. 75000/-, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ ರೂ. 3750/, ಈ ಬೆಳೆಗಳ ವಿಮಾ ಕಂತಿನ ಮೊತ್ತವನ್ನು ಪಾವತಿಸಲು ರೈತರಿಗೆ ಅರ್ಜಿ ಸಲ್ಲಿಸಲು ಜುಲೈ. 31 ಕೊನೆಯ ದಿನವಾಗಿದ್ದು, ವಿಮಾ ಮೊತ್ತವು ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ಒಂದೇ ಆಗಿರುತ್ತದೆ.  ಬೆಳೆ ಸಾಲ ಪಡೆಯದ ರೈತರು ವಿಮಾ ಕಟ್ಟಲು ಹತ್ತಿರದ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ನಿಗದಿತ ಅರ್ಜಿಯೊಂದಿಗೆ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ ಕಾರ್ಡ್ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಸಂಪರ್ಕಿಸಬೇಕು. 
ಹೆಚ್ಚಿನ ಮಾಹಿತಿಗಾಗಿ ಸಮೀಪದ ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳು ಹಾಗೂ ಕೃಷಿ ಅಧಿಕಾರಿಗಳು, ಅಥವಾ ಸಮೀಪದ ಯಾವುದೇ ಬ್ಯಾಂಕ್‍ಗಳಿಗೆ ಭೇಟಿ ನೀಡಿ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮ ಪಂಚಾಯತಿ ಮತ್ತು ಬೆಳೆಗಳ ಬಗ್ಗೆ ರೈತರು ಮಾಹಿತಿ ಪಡೆದುಕೊಳ್ಳುಬಹುದಾಗಿದೆ ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಕೊಳ್ಳುವಂತೆ ಸೂಚನೆ

ಎಲ್ಲಾ ಲೇಖನಗಳು ಆಗಿದೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಕೊಳ್ಳುವಂತೆ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಕೊಳ್ಳುವಂತೆ ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/06/blog-post_65.html

Subscribe to receive free email updates:

0 Response to "ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಕೊಳ್ಳುವಂತೆ ಸೂಚನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ