ಮಳೆಗಾಲ ಸಮರ್ಪಕ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ- ಉಮಾ ಮಹದೇವನ್

ಮಳೆಗಾಲ ಸಮರ್ಪಕ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ- ಉಮಾ ಮಹದೇವನ್ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮಳೆಗಾಲ ಸಮರ್ಪಕ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ- ಉಮಾ ಮಹದೇವನ್, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮಳೆಗಾಲ ಸಮರ್ಪಕ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ- ಉಮಾ ಮಹದೇವನ್
ಲಿಂಕ್ : ಮಳೆಗಾಲ ಸಮರ್ಪಕ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ- ಉಮಾ ಮಹದೇವನ್

ಓದಿ


ಮಳೆಗಾಲ ಸಮರ್ಪಕ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ- ಉಮಾ ಮಹದೇವನ್



ಕೊಪ್ಪಳ ಜೂ. 07 (ಕರ್ನಾಟಕ ವಾರ್ತೆ):  ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಈ ಸಂದರ್ಭದಲ್ಲಿ  ಕೃಷಿ, ತೋಟಗಾರಿಕೆ ಇಲಾಖೆ, ನಗರ, ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಹಾಗೂ ಆರೋಗ್ಯ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
 
     ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 
       ಕೊಪ್ಪಳ ಜಿಲ್ಲೆ ಈ ಹಿಂದೆ ಹಲವು ವರ್ಷಗಳ ಕಾಲ ಬರ ಪರಿಸ್ಥಿತಿಯನ್ನು ಅನುಭವಿಸಿದೆ.  ಸದ್ಯ ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ಮತ್ತು ಜೂನ್ ಮೊದಲ ವಾರದಲ್ಲಿ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಆಶಾಭಾವನೆಯನ್ನು ಮೂಡಿಸಿದೆ.  ರೈತರ ಅನುಕೂಲಕ್ಕಾಗಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಹೆಚ್ಚು ದಕ್ಷತೆಯಿಂದ ಸೇವೆ ನೀಡಬೇಕಿದೆ.  ರೈತರಿಗೆ ಬಿತ್ತನೆ ಬೀಜ ಅಥವಾ ರಸಗೊಬ್ಬರದ ಯಾವುದೇ ಕೊರತೆ ಉಂಟಾಗಬಾರದು.  ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಉಮಾ ಮಹದೇವನ್ ಅವರು ಹೇಳಿದರು.  ಇದಕ್ಕೆ ಪ್ರತಿಕ್ರಿಯಿಸಿದ ಉಪಕೃಷಿ ನಿರ್ದೇಶಕರು ಈ ವರ್ಷ ಜಿಲ್ಲೆಯ ಕೊಪ್ಪಳ ಮತ್ತು ಯಲಬುರ್ಗಾ ತಾಲೂಕುಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ.  ಗಂಗಾವತಿ ಮತ್ತು ಕುಷ್ಟಗಿ ತಾಲೂಕಿನಲ್ಲಿ ಸಾಮಾನ್ಯ ಮಳೆಯಾಗಿದೆ.  ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 2. 52 ಲಕ್ಷ ಹೆ. ಬಿತ್ತನೆ ಗುರಿ ಹೊಂದಲಾಗಿದ್ದು, ಸದ್ಯ  30680 ಹೆಕ್ಟರ್ (12.15%) ಬಿತ್ತನೆಯಾಗಿದೆ.   ಪ್ರಸಕ್ತ ಸಾಲಿನ ಪೂರ್ವ ಮುಂಗಾರಿನಲ್ಲಿ ಅಧಿಕ ಮಳೆ ಆಗಿರುವುದರಿಂದ ಭೂಮಿ ಸಿದ್ದತೆ ಹಾಗೂ ಬಿತ್ತನೆ ಕಾರ್ಯ ಚುರುಕುಗೊಂಡಿದೆ.  19931 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ.  ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ.  ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದಡಿ ಸಾಮಾನ್ಯ ರೈತರಿಗೆ 10870 ಕ್ವಿಂಟಲ್, ಪರಿಶಿಷ್ಟ ಜಾತಿಗೆ 3320 ಹಾಗೂ ಪರಿಶಿಷ್ಟ ಪಂಗಡಕ್ಕೆ 2660 ಗುರಿ ನಿಗದಿಪಡಿಸಿದ್ದು, ಜಿಲ್ಲೆಯಲ್ಲಿ ಇಲಾಖೆಯ ವತಿಯಿಂದ ಜೋಳ, ಸಜ್ಜೆ, ಮುಸುಕಿನಜೋಳ, ಭತ್ತ, ನವಣೆ, ತೊಗರಿ, ಹೆಸರು ಹಾಗೂ ಸೂರ್ಯಕಾಂತಿ ಬಿತ್ತನೆ ಬೀಜಗಳನ್ನು ಸಹಾಯಧನದಲ್ಲಿ ಪೂರೈಸಲಾಗುತ್ತಿದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜಕ್ಕೂ ಯಾವುದೇ ಕೊರತೆ ಇಲ್ಲ ಎಂದರು.  ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಉಮಾ ಮಹದೇವನ್ ಅವರು ಸೂಚನೆ ನೀಡಿದರು.
ಬೆಳೆ ಹಾಗೂ ಮನೆ ಹಾನಿ ಸಮೀಕ್ಷೆಗೆ ಕ್ರಮ ವಹಿಸಿ : ಈ ವರ್ಷ ಮುಂಗಾರು ಪೂರ್ವ ಮಳೆ ಸಂದರ್ಭದಲ್ಲಿ ಉಂಟಾದ ಬೆಳೆ ಹಾನಿ ಹಾಗೂ ಮನೆಗಳ ಹಾನಿ ಕುರಿತು ವರದಿ ಪಡೆದ ಕಾರ್ಯದರ್ಶಿಗಳು ಮೇ ತಿಂಗಳಲ್ಲಿ ಸುರಿದ ಮಳೆಗೆ 288. 32 ಹೆ. ತೋಟಗಾರಿಕೆ ಬೆಳೆ ಹಾನಿಯಾಗಿದೆ.  ಕಂದಾಯ ಮತ್ತು ತೋಟಗಾರಿಕೆ ಇಲಾಖೆಯವರು ಕೂಡಲೆ ಜಂಟಿ ಸಮೀಕ್ಷೆ ಮಾಡಿ ನಾಲ್ಕು ದಿನಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.  ಸಿಡಿಲು ಬಡಿದು ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಪರಿಹಾರ ನೀಡಿಕೆ ಕಾರ್ಯ ತ್ವರಿತವಾಗಿ ಪೂರ್ಣಗೊಳ್ಳಬೇಕು.  40 ಜಾನುವಾರುಗಳು ಮೃತಪಟ್ಟಿದ್ದು, 10 ಜಾನುವಾರುಗಳಿಗೆ ಸಂಬಂಧಿಸಿದಂತೆ ಪರಿಹಾರ ನೀಡಲಾಗಿದ್ದು, ಉಳಿದ ಜಾನುವಾರುಗಳಿಗೆ ಸಂಬಂಧಿಸಿದಂತೆ ಮರಣೋತ್ತರ ವರದಿ ಪಡೆದು ಶೀಘ್ರ ಪರಿಹಾರ ವಿತರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚನೆ ನೀಡಿದರು.
     ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಮೇ ತಿಂಗಳಿನಲ್ಲಿ ಸುರಿದ ಮಳೆಗೆ ಸುಮಾರು 1123 ಮನೆಗಳು ಹಾನಿಗೊಳಗಾಗಿವೆ.  ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಲಾಗುತ್ತಿದ್ದು, ಉಳಿದಂತೆ ಸಮೀಕ್ಷಾ ಕಾರ್ಯವೂ ಪ್ರಗತಿಯಲ್ಲಿದೆ.  ಸಮೀಕ್ಷಾ ವರದಿಯನ್ನು ಆಯಾ ತಹಸಿಲ್ದಾರರುಗಳಿಂದ ಪಡೆದು ಜೂನ್ 15 ರ ಒಳಗಾಗಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸ್ಥಳೀಯ ಸಂಸ್ಥೆಗಳಿಗೆ ಸೂಚನೆ : ಜಿಲ್ಲೆಯಲ್ಲಿ ಈ ವರ್ಷ ಮಳೆಗಾಲವನ್ನು ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ನಿರ್ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲೆಯ ಎಲ್ಲ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.  ಅಲ್ಲದೆ ಕೆಲವು ನಿರ್ದೇಶನಗಳನ್ನು ನೀಡಿದರು.  ಅದರನ್ವಯ  ಮಳೆ ನೀರು ನಿಲ್ಲದಂತೆ ನಗರ ಪ್ರದೇಶದ ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು.  ರಸ್ತೆ ಹಾಗೂ ಚರಂಡಿ ಪಕ್ಕದಲ್ಲಿರುವ ಗಿಡಗಂಟಿಗಳನ್ನು ತೆರವುಗೊಳಿಸಲು ಸೂಚಿಸಿದರು.  ನೀರು ಸರಾಗವಾಗಿ ಹರಿಯುವಂತೆ ಕಚ್ಚಾ ಚರಂಡಿಗಳನ್ನು ನಿರ್ಮಾಣ ಮಾಡಬೇಕು.  ನಗರದ ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸುವದು ಒಂದು ವೇಳೆ ನೀರು ನಿಂತರೆ ಕೀಟನಾಶಕ ಮತ್ತು ಫಾಗಿಂಗ್ ಮಾಡಲು ತಿಳಿಸಿದರು.  ನಿಂತ ನೀರು ಅಥವಾ ಹೆಚ್ಚುವರಿ ನೀರನ್ನು ಹೊರ ಹಾಕಲು ಆಯಿಲ್ ಇಂಜಿನ್ ಗಳನ್ನು ಕಾಯ್ದಿರಿಸಬೇಕು ಹಾಗೂ ಸಕ್ಕಿಂಗ್ ಮಷೀನ್ ಗಳನ್ನು ಸುಸ್ಥಿತಿಯಲ್ಲಿ ಇಡಬೇಕು.  ಡಬ್ಲು.ಟಿ.ಪಿ (ಪೀಲ್ಟರ್ ಬೆಡ್) ಸ್ವಚ್ಛಗೊಳಿಸಬೇಕು ಹಾಗೂ ಪ್ರಮಾಣಕ್ಕೆ ತಕ್ಕಂತೆ ಕ್ಲೋರಿನೇಷನ್ ಮಾಡಬೇಕು ಅಲ್ಲದೆ ಆಲಂ ಮತ್ತು ಬ್ಲಿಚಿಂಗ್‍ನ್ನು ಬಳಸಲು ಕ್ರಮ ಕೈಗೊಳ್ಳಬೇಕು.  ಸಂಗ್ರಹಣಾ ಟ್ಯಾಂಕಗಳನ್ನು ಸ್ವಚ್ಛಗೊಳಿಸಬೇಕು.  ನಾಗರಿಕರಿಗೆ ಆರೋಗ್ಯ ಕುರಿತು ಮಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಅವರು ಸೂಚನೆ ನೀಡಿದರು.
     ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ್ ಮೆಕ್ಕಳಕಿ ಸೇರಿದಂತೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆಹಾರ ಇಲಾಖೆ, ಆರೋಗ್ಯ ಇಲಾಖೆ ಹಾಗೂ ವಿವಿಧ ನಗರಸಭೆ, ಪುರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.



ಹೀಗಾಗಿ ಲೇಖನಗಳು ಮಳೆಗಾಲ ಸಮರ್ಪಕ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ- ಉಮಾ ಮಹದೇವನ್

ಎಲ್ಲಾ ಲೇಖನಗಳು ಆಗಿದೆ ಮಳೆಗಾಲ ಸಮರ್ಪಕ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ- ಉಮಾ ಮಹದೇವನ್ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಳೆಗಾಲ ಸಮರ್ಪಕ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ- ಉಮಾ ಮಹದೇವನ್ ಲಿಂಕ್ ವಿಳಾಸ https://dekalungi.blogspot.com/2018/06/blog-post_7.html

Subscribe to receive free email updates:

0 Response to "ಮಳೆಗಾಲ ಸಮರ್ಪಕ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ- ಉಮಾ ಮಹದೇವನ್"

ಕಾಮೆಂಟ್‌‌ ಪೋಸ್ಟ್‌ ಮಾಡಿ