ನಿಗದಿತ ಅವಧಿಯೊಳಗೆ ಬೆಳೆ ಕಟಾವು ಪ್ರಯೋಗ ಕೈಗೊಳ್ಳಬೇಕು- ಎಂ. ಕನಗವಲ್ಲಿ

ನಿಗದಿತ ಅವಧಿಯೊಳಗೆ ಬೆಳೆ ಕಟಾವು ಪ್ರಯೋಗ ಕೈಗೊಳ್ಳಬೇಕು- ಎಂ. ಕನಗವಲ್ಲಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ನಿಗದಿತ ಅವಧಿಯೊಳಗೆ ಬೆಳೆ ಕಟಾವು ಪ್ರಯೋಗ ಕೈಗೊಳ್ಳಬೇಕು- ಎಂ. ಕನಗವಲ್ಲಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ನಿಗದಿತ ಅವಧಿಯೊಳಗೆ ಬೆಳೆ ಕಟಾವು ಪ್ರಯೋಗ ಕೈಗೊಳ್ಳಬೇಕು- ಎಂ. ಕನಗವಲ್ಲಿ
ಲಿಂಕ್ : ನಿಗದಿತ ಅವಧಿಯೊಳಗೆ ಬೆಳೆ ಕಟಾವು ಪ್ರಯೋಗ ಕೈಗೊಳ್ಳಬೇಕು- ಎಂ. ಕನಗವಲ್ಲಿ

ಓದಿ


ನಿಗದಿತ ಅವಧಿಯೊಳಗೆ ಬೆಳೆ ಕಟಾವು ಪ್ರಯೋಗ ಕೈಗೊಳ್ಳಬೇಕು- ಎಂ. ಕನಗವಲ್ಲಿ

ಕೊಪ್ಪಳ, ಜೂ. 26 (ಕರ್ನಾಟಕ ವಾರ್ತೆ): ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆ ಕಟಾವು ಪ್ರಯೋಗವನ್ನು ಮೊಬೈಲ್ ತಂತ್ರಾಂಶದಲ್ಲಿ ನಿಗದಿತ ಅವಧಿಯೊಳಗೆ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿ, ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

     ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2018-19 ನೇ ಸಾಲಿನ ಮುಂಗಾರು ಹಂಗಾಮು ಬೆಳೆ ಸಮೀಕ್ಷೆಯ ಮೂಲ ಕಾರ್ಯಕರ್ತರಿಗೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ  ಮಂಗಳವಾರದಂದು ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

     ಬೆಳೆ ಕಟಾವು ಸಮೀಕ್ಷಾ ಕಾರ್ಯವು ಈ ಮೊದಲು ಮ್ಯಾನುವಲ್ ಮೂಲಕ ಮಾಡಲಾಗುತ್ತಿತ್ತು.  ಆದರೆ 2016-17 ರಲ್ಲಿ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಮೂಲಕ ಬೆಳೆ ಕಟಾವು ಸಮೀಕ್ಷೆ ಕೈಗೊಳ್ಳುವ ವ್ಯವಸ್ಥೆಯನ್ನು ಜಾರಿಗೊಳಿಸಲಾಯಿತು. ಸರ್ಕಾರ ಬೆಳೆ ಕಟಾವು ಸಮೀಕ್ಷಾ ವರದಿಯು ನಿಖರವಾಗಿರಬೇಕು ಹಾಗೂ ದೋಷ ರಹಿತವಾಗಿರಬೇಕು ಎನ್ನುವ ಉದ್ದೇಶದಿಂದ ಮೊಬೈಲ್ ಆ್ಯಪ್ ತಂತ್ರಾಂಶವನ್ನು ಸಿದ್ಧಪಡಿಸಿ, ಈ ತಂತ್ರಾಂಶದಲ್ಲಿಯೇ ಸಮೀಕ್ಷಾ ಕಾರ್ಯ ಆಗಬೇಕು ಎನ್ನುವುದನ್ನು ಕಡ್ಡಾಯಗೊಳಿಸಿದೆ.  ಈ ತಂತ್ರಾಂಶದಲ್ಲಿ ಸಿಬ್ಬಂದಿಗಳು ಯಾವುದೇ ಕಾರಣಕ್ಕೂ ತಪ್ಪು ಮಾಹಿತಿ ಅಳವಡಿಕೆಗೆ ಅವಕಾಶವಿಲ್ಲ.  ಯಾವುದೇ ಅಧಿಕಾರಿ, ಸಿಬ್ಬಂದಿ ತಪ್ಪೆಸಗಿದರೂ, ತಂತ್ರಾಂಶದಲ್ಲಿ ತಿಳಿಯುವುದರಿಂದ, ನಿರ್ಲಕ್ಷ್ಯ ಅಥವಾ ವಿಳಂಬ ಮಾಡಿದಲ್ಲಿ, ಸಂಬಂಧಿಸಿದವರು ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ.  ಮೊಬೈಲ್ ತಂತ್ರಾಂಶದಲ್ಲಿ ಬೆಳೆ ಕಟಾವು ಪ್ರಯೋಗ ಹಾಗೂ ಮಾಹಿತಿ ಸಲ್ಲಿಕೆ ಕುರಿತು ಯಾವುದೇ ಗೊಂದಲಗಳಿದ್ದರೂ, ಜಿಲ್ಲಾ ಅಥವಾ ತಾಲೂಕು ಮಟ್ಟದಲ್ಲಿನ ನೋಡಲ್ ಅಧಿಕಾರಿಗಳು ಪರಿಹರಿಸಿಕೊಡುತ್ತಾರೆ.  ಬೆಳೆ ಕಟಾವು ಪ್ರಯೋಗದ ಸಮೀಕ್ಷಾ ಕಾರ್ಯವು ಕೇವಲ ಬೆಳೆ ವಿಮಾ ಉದ್ದೇಶಕ್ಕೆ ಮಾತ್ರ ಸೀಮಿತವಲ್ಲ.  ಈ ಕಾರ್ಯವು ಜಿಲ್ಲೆಯಲ್ಲಿ ಬೆಳೆಯಲಾದ ವಿವಿಧ ಬೆಳೆಗಳ ಪ್ರಮಾಣ, ಕೃಷಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆಯಲು ಸಹಕಾರಿಯಾಗಲಿದೆ.  ಹೀಗಾಗಿ ಅಧಿಕಾರಿ, ಸಿಬ್ಬಂದಿಗಳು ಬೆಳೆ ಕಟಾವು ಪ್ರಯೋಗದ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು.  ಬೆಳೆ ಇದ್ದರೂ ಪ್ರಯೋಗವನ್ನು ನಷ್ಟಗೊಳಿಸಬಾರದು.  ನಿಖರವಾದ ಇಳುವರಿಯನ್ನು ದಾಖಲಿಸಬೇಕು.  ಕಟಾವು ಪ್ರಯೋಗ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಗೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
     ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಮಾತನಾಡಿ, ಮುಂಗಾರು ಹಂಗಾಮಿಗೆ ಹೋಬಳಿ ಮಟ್ಟದಲ್ಲಿ ಸಮೀಕ್ಷೆಗಾಗಿ 3708 ಪ್ರಯೋಗಗಳನ್ನು ಆಯ್ಕೆ ಮಾಡಲಾಗಿದೆ.  ಜಿಲ್ಲೆಯಲ್ಲಿ ಕೃಷಿ, ಪಂಚಾಯತಿ ರಾಜ್, ತೋಟಗಾರಿಕೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಒಟ್ಟು 304 ಮೂಲ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರೆಲ್ಲರೂ ಸಮೀಕ್ಷೆಯಲ್ಲಿ ಭಾಗಿಯಾಗಬೇಕಾಗುತ್ತದೆ ಎಂದರು.
     ಬೆಳೆ ಕಟಾವು ಪ್ರಯೋಗ ಕುರಿತು ತರಬೇತಿ ನೀಡಿದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಗಂಗಾಧರ ದಿವಟರ್ ಅವರು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಮುಖ ಆಹಾರ ಮತ್ತು ಆಹಾರೇತರ ಬೆಳೆಗಳ ಪ್ರತಿ ಹೆಕ್ಟೇರ್‍ನ ಸರಾಸರಿ ಇಳುವರಿಯನ್ನು ಹಾಗೂ ಉತ್ಪಾದನೆ ಅಂದಾಜಿಸುವುದು ಬೆಳೆ ಕಟಾವು ಸಮೀಕ್ಷೆಯ ಉದ್ದೇಶವಾಗಿದೆ. ಬೆಳೆ ವಿಮೆ ಯೋಜನೆಗಳು ಜಾರಿಗೆ ಬಂದ ನಂತರ ಬೆಳೆ ಕಟಾವು ಪ್ರಯೋಗ ಸಮೀಕ್ಷೆ ಹೆಚ್ಚಿನ ಮಹತ್ವ ಪಡೆದುಕೊಂಡಿವೆ.  ಅಧಿಸೂಚಿತ ಬೆಳೆಗಳಿಗೆ ಮಾತ್ರ ಬೆಳೆ ಕಟಾವು ಪ್ರಯೋಗ ಕೈಗೊಳ್ಳಲಾಗುತ್ತದೆ.  ಪ್ರತಿ ಹೋಬಳಿಯಲ್ಲಿ ಗರಿಷ್ಟ 10 ಪ್ರಯೋಗಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ತಿಳಿಸಿದ ಅವರು, ಬೆಳೆ ಕಟಾವು ಪ್ರಯೋಗ ಕೈಗೊಳ್ಳುವುದಕ್ಕೆ ಸಂಬಂಧಿಸಿದ ಸಮಗ್ರ ವಿವರವನ್ನು ಅಧಿಕಾರಿ, ಸಿಬ್ಬಂದಿಗಳಿಗೆ ನೀಡಿದರು.
      ಜಂಟಿಕೃಷಿ ನಿರ್ದೇಶಕ ಹೊನ್ನಪ್ಪಗೌಡ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.  ಕೃಷಿ, ಪಂಚಾಯತಿ ರಾಜ್, ತೋಟಗಾರಿಕೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.


ಹೀಗಾಗಿ ಲೇಖನಗಳು ನಿಗದಿತ ಅವಧಿಯೊಳಗೆ ಬೆಳೆ ಕಟಾವು ಪ್ರಯೋಗ ಕೈಗೊಳ್ಳಬೇಕು- ಎಂ. ಕನಗವಲ್ಲಿ

ಎಲ್ಲಾ ಲೇಖನಗಳು ಆಗಿದೆ ನಿಗದಿತ ಅವಧಿಯೊಳಗೆ ಬೆಳೆ ಕಟಾವು ಪ್ರಯೋಗ ಕೈಗೊಳ್ಳಬೇಕು- ಎಂ. ಕನಗವಲ್ಲಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ನಿಗದಿತ ಅವಧಿಯೊಳಗೆ ಬೆಳೆ ಕಟಾವು ಪ್ರಯೋಗ ಕೈಗೊಳ್ಳಬೇಕು- ಎಂ. ಕನಗವಲ್ಲಿ ಲಿಂಕ್ ವಿಳಾಸ https://dekalungi.blogspot.com/2018/06/blog-post_71.html

Subscribe to receive free email updates:

0 Response to "ನಿಗದಿತ ಅವಧಿಯೊಳಗೆ ಬೆಳೆ ಕಟಾವು ಪ್ರಯೋಗ ಕೈಗೊಳ್ಳಬೇಕು- ಎಂ. ಕನಗವಲ್ಲಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ