ಶೀರ್ಷಿಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾನ
ಲಿಂಕ್ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾನ
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ ಜೂ. 14 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ತಾಲೂಕುಗಳ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರಸಕ್ತ ಸಾಲಿಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಣೆಯಾಗುತ್ತಿರುವ ಜಿಲ್ಲೆಯ ವಿವಿಧ ವಿದ್ಯಾರ್ಥಿ ನಿಲಯಗಳಾದ ಕೊಪ್ಪಳ ತಾಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಗಣೇಶ ತಗ್ಗು, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಬಿಲಾಲ್ ನಗರ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಕಲ್ಯಾಣ ನಗರ, ಗಂಗಾವತಿ ತಾಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಉಪ್ಪಾರ ಓಣಿ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಸರೋಜಿನಗರ, ಕುಷ್ಟಗಿ ತಾಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಕರೀಂ ಕಾಲೋನಿ, ಯಲಬುರ್ಗಾ ತಾಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಹುಡ್ಕೋ ಕಾಲೋನಿ ಹಾಗೂ ಕಾರಟಗಿ ತಾಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಕಾರಟಗಿ, ಈ 08 ವಸತಿ ನಿಲಯಗಳಲ್ಲಿ ಸ್ಥಾನಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ್ದು, ರಾಜ್ಯದ ನಿವಾಸಿಯಾಗಿರಬೇಕು. ಸರ್ಕಾರಿ ಅಥವಾ ಅಂಗಿಕೃತ ಶಾಲೆಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರಬೇಕು. ಕುಟುಂಬದ ವಾರ್ಷಿಕ ವರಮಾನವು ರೂ. 44500/- ಗಳು ಹಾಗೂ ಪ್ರವರ್ಗ-1 ಕ್ಕೆ ರೂ.1 ಲಕ್ಷ ಮೀರಬಾರದು. ಪ್ರತಿ ವಿದ್ಯಾರ್ಥಿನಿಲಯಗಳಲ್ಲಿ ಶೇ.75% ರಷ್ಟು ಸ್ಥಾನಗಳನ್ನು ಅಲ್ಪಸಂಖ್ಯಾತರ ಜನಾಂಗದ ವಿದ್ಯಾರ್ಥಿಗಳಿಗೆ ಹಾಗೂ ಶೇ.25 ರಷ್ಟು ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಮುಸ್ಲಿಂ-.82%, ಕ್ರಿಶ್ಚಿಯನ್-.12%, ಜೈನ್-4%, ಭೌದ್ಧ-1% ಹಾಗೂ ಸಿಖ್‍ರಿಗೆ ಶೇ. 1% ರಷ್ಟು ಪ್ರವೇಶ ನೀಡಲಾಗುವುದು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೇ.90 ರಷ್ಟು ಹಾಗೂ ಪಟ್ಟಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೇ.10 ರಷ್ಟು ಸ್ಥಾನಗಳನ್ನು ನೀಡಲಾಗುವುದು. ಪ್ರವೇಶ ಪಡೆಯುವ ವಿದ್ಯಾರ್ಥಿಗಳು ತಮ್ಮ ಹಿಂದಿನ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು. ಸರ್ಕಾರ ನಡೆಸುತ್ತಿರುವ, ಸಕಾರದಿಂದ ಅಂಗಿಕೃತವಾದ ಶೈಕ್ಷಣಿಕ ಸಂಸ್ಥೆಗಳಲ್ಲಿ ಪಿ.ಯು.ಸಿ, ಪದವಿ (ಬಿ.ಎ., ಬಿ.ಕಾಂ., ಬಿ.ಎಡ್, ಬಿ.ಬಿ.ಎಂ., ಬಿ.ಸಿ.ಎ., ಇತ್ಯಾದಿ), ಸ್ನಾತಕೋತ್ತರ (ಎಂ.ಎ., ಎಂ.ಕಾಂ., ಎಂ.ಎಸ್.ಸಿ., ಇತ್ಯಾದಿ) ಹಾಗೂ ವೃತ್ತಿಪರ ಕೋರ್ಸ್ ಐಟಿಐ, ಡಿಪೆÇ್ಲೀಮಾ, ನರ್ಸಿಂಗ್, ಬಿಇಡಿ, ಇತ್ಯಾದಿ ಕೋರ್ಸ್‍ಗಳಲ್ಲಿ ಓದುತ್ತಿರಬೇಕು. ವ್ಯಾಸಂಗ ಮಾಡುವ ಕಾಲೇಜನಿಂದ 5 ಕಿ.ಮೀ ವ್ಯಾಪ್ತಿಯ ಹೊರಗೆ ಇರುವ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿನಿಲಯದ ಸೌಲಭ್ಯಕ್ಕೆ ಅರ್ಹರಿರುತ್ತಾರೆ. ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮತ್ತು ಪ್ರವೇಶ ಮಿಸಲಾತಿ ನಿಯಮಾನುಸಾರ ಆಯ್ಕೆ ಸಮಿತಿ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಪ್ರವೇಶ ಬಯಸುವ ವಸತಿ ನಿಲಯಗಳಿಗೆ ಹಾಗೂ ತಾಲೂಕ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯ ಕೊಪ್ಪಳ, ಗಂಗಾವತಿ, ಕುಷ್ಟಗಿ, (ಕಛೇರಿ ವೇಳೆಯಲ್ಲಿ) ಅರ್ಜಿ ಪಡೆದು, ಭರ್ತಿ ಮಾಡಿ ವ್ಯಾಸಂಗ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಪ್ರಾಶುಂಪಾಲಕರಿಂದ ದೃಢೀಕರಿಸಿ, ಭರ್ತಿ ಮಾಡಿದ ಅರ್ಜಿಯೊಂದಿಗೆ ಕಂದಾಯ ಇಲಾಖೆಯ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಿಸಿದ ಪ್ರಮಾಣ ಪತ್ರ, ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಅಂಕ ಪಟ್ಟಿಯ ದೃಢೀಕೃತ ಪ್ರತಿ, ವಾಸಸ್ಥಳ, ಆಧಾರ ಕಾರ್ಡ ಹಾಗೂ ವಿದ್ಯಾರ್ಥಿ ಪಾಸ್‍ಪೆÇರ್ಟ ಅಳತೆಯ ಇತ್ತೀಚಿನ 2 ಭಾವಚಿತ್ರಗಳೊಂದಿಗೆ ಜುಲೈ. 10 ರೊಳಗಾಗಿ ಸಲ್ಲಿಸಬೇಕು ಎಂದು ಕೊಪ್ಪಳ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/06/blog-post_72.html
0 Response to "ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ