ಶೀರ್ಷಿಕೆ : ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆ ಅನಧಿಕೃತ : ಪ್ರವೇಶ ಪಡೆಯದಂತೆ ಸೂಚನೆ
ಲಿಂಕ್ : ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆ ಅನಧಿಕೃತ : ಪ್ರವೇಶ ಪಡೆಯದಂತೆ ಸೂಚನೆ
ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆ ಅನಧಿಕೃತ : ಪ್ರವೇಶ ಪಡೆಯದಂತೆ ಸೂಚನೆ
ಕೊಪ್ಪಳ ಜೂ. 22 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಯಡಿಯಾಪೂರ ಗ್ರಾಮದ ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆಯು ಅನಧಿಕೃತವಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿದ್ಯಾರ್ಥಿಗಳು ಪ್ರವೇಶ ಪಡೆಯದಂತೆ ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.
ಯಡಿಯಾಪೂರದ ರಮಾಬಾಯಿ ಅಂಬೇಡ್ಕರ್ ಪ್ರೌಢ ಶಾಲೆಯನ್ನು ಈಗಾಗಲೇ ಮುಚ್ಚಲಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಪೂರ್ವಾನುಮತಿ ಪಡೆಯದೇ ಅನಧಿಕೃತವಾಗಿ 2017-18ನೇ ಸಾಲಿನಲ್ಲಿ ಪ್ರಾರಂಭಿಸಿದ ಬಗ್ಗೆ ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಈ ಶಾಲೆಯು 2006-07ನೇ ಸಾಲಿನಿಂದ ನಿರಂತರವಾಗಿ ನಡೆಯದೇ ಇರುವುದರಿಂದ 2017-18ನೇ ಸಾಲಿನ ಎಸ್.ಎಸ್.ಎಲ್.ಸಿ. ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ನೋಂದಣಿಗಾಗಿ ಸಲ್ಲಿಸಿರುವ ಪ್ರಸ್ತಾವನೆಯನ್ನು ಕಾರ್ಯದರ್ಶಿಗಳು, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, ಬೆಂಗಳೂರು ಇವರು ತಿರಸ್ಕರಿಸಿರುತ್ತಾರೆ. ಶಾಲೆಯು ಇಲಾಖೆಯ ಪೂರ್ವಾನುಮತಿ ಪಡೆಯದೇ ಪ್ರಾರಂಭಿಸಿದ್ದು, ಕರ್ನಾಟಕ ಶಿಕ್ಷಣ ಕಾಯೆ 1983 ರ ನಿಯಮಾವಳಿಯ ವಿರುದ್ಧವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ರಮಾಬಾಯಿ ಅಂಬೇಡ್ಕರ್ ಪ್ರೌಢ ಶಾಲೆಯು ಅನಧಿಕೃತ ಶಾಲೆಯಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿದ್ಯಾರ್ಥಿಗಳು ಪ್ರವೇಶ ಪಡೆಯಬಾರದು ಎಂದು ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆ ಅನಧಿಕೃತ : ಪ್ರವೇಶ ಪಡೆಯದಂತೆ ಸೂಚನೆ
ಎಲ್ಲಾ ಲೇಖನಗಳು ಆಗಿದೆ ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆ ಅನಧಿಕೃತ : ಪ್ರವೇಶ ಪಡೆಯದಂತೆ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆ ಅನಧಿಕೃತ : ಪ್ರವೇಶ ಪಡೆಯದಂತೆ ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/06/blog-post_75.html
0 Response to "ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆ ಅನಧಿಕೃತ : ಪ್ರವೇಶ ಪಡೆಯದಂತೆ ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ