ಶೀರ್ಷಿಕೆ : ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ : ಶಿವಾನಂದ ಪೂಜಾರ
ಲಿಂಕ್ : ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ : ಶಿವಾನಂದ ಪೂಜಾರ
ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ : ಶಿವಾನಂದ ಪೂಜಾರ
ಕೊಪ್ಪಳ ಜೂ. 13 (ಕರ್ನಾಟಕ ವಾರ್ತೆ): ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ. ಪೂಜಾರ ಅವರು ಹೇಳಿದರು.

ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಅಂಗವಾಗಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಛೇರಿ ಹಾಗೂ ಸರಕಾರಿ ಬಾಲಕಿಯರ ಪ್ರೌಢಶಾಲೆ ಇವರ ವತಿಯಿಂದ ಬಾಲಕಿಯರ ಪ್ರೌಢಶಾಲೆಯಲ್ಲಿ ಬುಧವಾರದಂದು ಆಯೋಜಿಸಲಾದ ಜನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷ ಜೂನ್ ತಿಂಗಳಲ್ಲಿ ಮುಂಗಾರು ಪ್ರಾರಂಭವಾಗುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಮಲೇರಿಯಾ, ಡೆಂಗ್ಯೂ, ಚಿಕುನ್‍ಗುನ್ಯ ದಂತಹ ರೋಗಗಳು ಕಾಣಿಸಿಕೊಳ್ಳತ್ತವೆ. ಮಲೇರಿಯಾ ಜ್ಚರ ಅನಾಫಿಲಿಸ್ ಹೆಣ್ಣು ಸೊಳ್ಳೆಯ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಯು ತನ್ನ ಸಂತಾನಾಭಿವೃದ್ಧಿಗಾಗಿ ಮನುಷ್ಯನ ರಕ್ತವನ್ನೇ ಅವಲಂಬಿಸಿರುತ್ತದೆ. ಮಲೇರಿಯಾ ಜ್ವರ ಇರುವ ರೋಗಿಯನ್ನು ಕಚ್ಚಿದಾಗ ಅವನಲ್ಲಿರುವ ಪ್ಯಾರಾಸೈಟ ರೋಗಾಣು ಸೊಳ್ಳೆಯ ಜೊಲ್ಲಿನ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮಲೇರಿಯಾ ರೋಗದ ಲಕ್ಷಣಗಳಾದ ವಿಪರಿತ ಜ್ವರ, ವಿಪರಿತ ಚಳಿ, ಮೈಬೆವರುವುದು, ಮೈಕೈ ನೋವು, ತಲೆನೋವು, ವಾಂತಿ, ಸುಸ್ತು ಉಂಟಾದರೆ ತಕ್ಷಣ ರಕ್ತ ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳು ಹೆಚ್ಚಾಗಿ ಉತ್ಪತ್ತಿಗೊಂಡು ಹಲವಾರು ರೋಗಗಳಿಗೆ ಕಾರಣವಾಗುತ್ತದೆ. ಆದ್ದರಿಂದ ಅವುಗಳ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. 2020 ಇಸ್ವಿ ವೇಳೆಗೆ ಮಲೇರಿಯಾ ಮುಕ್ತ ರಾಜ್ಯವನ್ನಾಗಿ ಮಾಡಲು ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ. ಪೂಜಾರ ಅವರು ಕರೆ ನೀಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಮಾತನಾಡಿ, ರಕ್ತ ಹೀನತೆ ಹೇಗೆ ಉಂಟಾಗುತ್ತದೆ. ಅದರ ಲಕ್ಷಣಗಳು ಹಾಗೂ ಪರಿಹಾರ ಕುರಿತು ತಿಳುವಳಿಕೆ ಅತ್ಯವಶ್ಯಕವಾಗಿದೆ. ಶುಚಿ ಯೋಜನೆ, ಕಬ್ಬಿಣಾಂಶ ಮಾತ್ರೆ, ಜಂತು ನಿವಾರಕ ಮಾತ್ರೆಗಳನ್ನು ತೆಗೆದುಕೊಳ್ಳಬೇಕು. ನಿಂತ ನೀರು ಸೊಳ್ಳೆ ಉತ್ಪತ್ತಿಯ ತಾಣವಾಗಿದ್ದು, ಶಾಲೆ ಅಥವಾ ಮನೆಯ ಸುತ್ತ-ಮುತ್ತಲೂ ನೀರು ನಿಲ್ಲದಂತೆ ಸ್ವಚ್ಛತೆ ಕಾಪಡಬೇಕು. ಮೈ ತುಂಬಾ ಬಟ್ಟೆ ಹಾಕಿಕೊಳ್ಳಬೇಕು. ಮಲಗುವಾಗ ತಪ್ಪದೇ ಸೊಳ್ಳೆ ಪರದೆ ಉಪಯೋಗಿಸಬೇಕು. ಸಾಯಂಕಾಲ ವೇಳೆ ಸಾಧ್ಯವಾದಲ್ಲಿ ಮನೆಯ ಬಳಿ ಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಅವಶ್ಯಕತೆ ಇದ್ದರೆ ಮನೆಗಳಿಗೆ ಕೀಟನಾಶಕ ಮಾಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಸಹ ಶಿಕ್ಷಕಿ ನಾಗರತ್ನ ಮಾತನಾಡಿ, ಪ್ರಸ್ತುತ ದಿನಮಾನದಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ಹಮ್ಮಿಕೊಂಡ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾಗಿವೆ. ಇಂತಹ ಕಾರ್ಯಕ್ರಮಗಳು ಎಲ್ಲ ಶಾಲೆಗಳಲ್ಲಿ ಹಮ್ಮಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಹಕರಿಸಬೇಕು ಎಂದರು.
ತಾಲೂಕಾ ಮಲೇರಿಯಾ ಮೇಲ್ವಿಚಾರಕ ಪ್ರಮೋದ ಸೇರಿದಂತೆ ವಿಜಯಕುಮಾರ, ಬಸವರಾಜ ಮತ್ತಿತರರು ಉಪಸ್ಥಿತರಿದ್ದರು. ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಹೀಗಾಗಿ ಲೇಖನಗಳು ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ : ಶಿವಾನಂದ ಪೂಜಾರ
ಎಲ್ಲಾ ಲೇಖನಗಳು ಆಗಿದೆ ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ : ಶಿವಾನಂದ ಪೂಜಾರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ : ಶಿವಾನಂದ ಪೂಜಾರ ಲಿಂಕ್ ವಿಳಾಸ https://dekalungi.blogspot.com/2018/06/blog-post_83.html
0 Response to "ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ : ಶಿವಾನಂದ ಪೂಜಾರ"
ಕಾಮೆಂಟ್ ಪೋಸ್ಟ್ ಮಾಡಿ