ಶೀರ್ಷಿಕೆ : ಈಶಾನ್ಯ ಕರ್ನಾಟಕ ಪದವಿಧರ ಕ್ಷೇತ್ರ ಚುನಾವಣೆ : ಮದ್ಯ ಮಾರಾಟ ನಿಷೇಧ
ಲಿಂಕ್ : ಈಶಾನ್ಯ ಕರ್ನಾಟಕ ಪದವಿಧರ ಕ್ಷೇತ್ರ ಚುನಾವಣೆ : ಮದ್ಯ ಮಾರಾಟ ನಿಷೇಧ
ಈಶಾನ್ಯ ಕರ್ನಾಟಕ ಪದವಿಧರ ಕ್ಷೇತ್ರ ಚುನಾವಣೆ : ಮದ್ಯ ಮಾರಾಟ ನಿಷೇಧ
ಕೊಪ್ಪಳ ಜೂ. 04 (ಕರ್ನಾಟಕ ವಾರ್ತೆ): ಈಶಾನ್ಯ ಕರ್ನಾಟಕ ಪದವಿಧರ ಕ್ಷೇತ್ರ ಚುನಾವಣೆ ನಿಮಿತ್ಯ ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯಪಾನ, ಮದ್ಯ ಮಾರಾಟ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಭಾರತ ಚುನಾವಣಾ ಆಯೋಗ ನವದೆಹಲಿ ಇವರು ಈಶಾನ್ಯ ಕರ್ನಾಟಕ ಪದವಿಧರರ ಕ್ಷೇತ್ರ ಚುನಾವಣೆ ನಿಮಿತ್ಯ ಚುನಾವಣೆಯು ಮುಕ್ತ ಹಾಗೂ ನಿಸ್ಪಕ್ಷಪಾತವಾಗಿ ನಡೆಸಲು ಹಾಗೂ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮತದಾನ ದಿನದಂದು ಮದ್ಯಪಾನ, ಮದ್ಯ ಮಾರಾಟ ನಿಷೇಧಿಸುವಂತೆ ಸೂಚನೆ ನೀಡಿದ್ದು, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ 135 ಸಿರ ಪ್ರಕಾರ ಕೊಪ್ಪಳ ಜಿಲ್ಲೆಯಾದ್ಯಂತ ಜೂ. 07ರ ಸಂಜೆ 6 ಗಂಟೆಯಿಂದ ಜೂ. 09 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯಪಾನ, ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ಮುಖಂಡತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು, ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಈಶಾನ್ಯ ಕರ್ನಾಟಕ ಪದವಿಧರ ಕ್ಷೇತ್ರ ಚುನಾವಣೆ : ಮದ್ಯ ಮಾರಾಟ ನಿಷೇಧ
ಎಲ್ಲಾ ಲೇಖನಗಳು ಆಗಿದೆ ಈಶಾನ್ಯ ಕರ್ನಾಟಕ ಪದವಿಧರ ಕ್ಷೇತ್ರ ಚುನಾವಣೆ : ಮದ್ಯ ಮಾರಾಟ ನಿಷೇಧ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಈಶಾನ್ಯ ಕರ್ನಾಟಕ ಪದವಿಧರ ಕ್ಷೇತ್ರ ಚುನಾವಣೆ : ಮದ್ಯ ಮಾರಾಟ ನಿಷೇಧ ಲಿಂಕ್ ವಿಳಾಸ https://dekalungi.blogspot.com/2018/06/blog-post_98.html
0 Response to "ಈಶಾನ್ಯ ಕರ್ನಾಟಕ ಪದವಿಧರ ಕ್ಷೇತ್ರ ಚುನಾವಣೆ : ಮದ್ಯ ಮಾರಾಟ ನಿಷೇಧ"
ಕಾಮೆಂಟ್ ಪೋಸ್ಟ್ ಮಾಡಿ