ಶೀರ್ಷಿಕೆ : news and photo 27-6-2018
ಲಿಂಕ್ : news and photo 27-6-2018
news and photo 27-6-2018
ವಸತಿ ನಿಲಯಗಳ ಮಕ್ಕಳಿಗೆ ಗ್ರಾಂ ಲೆಕ್ಕದ ಆಧಾರದ ಮೇಲೆ ಆಹಾರ ಪೂರೈಕೆ
********************************************************************
ಕಲಬುರಗಿ,ಜೂ.27.(ಕ.ವಾ.)-ವಸತಿ ನಿಲಯಗಳಲ್ಲಿ ದಾಖಲಾಗುವ ಮಕ್ಕಳ ತೂಕದ ಆಧಾರದ ಮೇಲೆ ಅವರಿಗೆ ಸಮರ್ಪಕವಾಗಿ ಬೇಕಾಗುವ ಆಹಾರ ಸಾಮಗ್ರಿಗಳನ್ನು ಗ್ರಾಂ ಲೆಕ್ಕದ ಮೇಲೆ ನೀಡಲು ಪ್ರಾಯೋಗಿಕವಾಗಿ ಕ್ರಮ ಜರುಗಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.
ಅವರು ಬುಧವಾರ ಚಿತ್ತಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಸತಿ ನಿಲಯಕ್ಕೆ ಮಕ್ಕಳ ಸಂಖ್ಯೆಗನುಗುಣವಾಗಿ ಹಾಗೂ ಲಭ್ಯವಿರುವ ಅನುದಾನಕ್ಕೆ ಅನುಗುಣವಾಗಿ ಆಹಾರ ಸಾಮಗ್ರಿಗಳನ್ನು ನೀಡಲಾಗುತ್ತಿತ್ತು. ಇತ್ತೀಚೆಗೆ ರಾಜ್ಯದಲ್ಲಿರುವ ವಸತಿ ನಿಲಯದಲ್ಲಿ ಶಿಕ್ಷಕ ಮತ್ತು ಮೇಲ್ವಿಚಾರಕರೊಂದಿಗೆ ಸಮಾಲೋಚಿಸಿದಾಗ ಮಕ್ಕಳ ತೂಕದ ಆಧಾರಕ್ಕನುಗುಣವಾಗಿ ಆಹಾರ ಸಾಮಗ್ರಿಗಳನ್ನು ನೀಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗುತ್ತಿದೆ ಎಂದರು.
ಪ್ರಸಕ್ತ ವರ್ಷದಿಂದ ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಎರಡು ವಸತಿ ನಿಲಯದ ಮಕ್ಕಳಿಗೆ ಗ್ರಾಂ ಲೆಕ್ಕದ ಮೇಲೆ ಆಹಾರ ಸಾಮಗ್ರಿ ನೀಡಲಾಗುತ್ತಿದೆ. ಇದರ ಪರಿಣಾಮವನ್ನಾಧರಿಸಿ ಎಲ್ಲ ವಸತಿ ನಿಲಯಗಳಿಗೆ ವಿಸ್ತರಿಸುವ ಕುರಿತು ಯೋಚಿಸಲಾಗುವುದು. ಮಕ್ಕಳ ಹಾಜರಾತಿಯನ್ನು ಬಯೋಮೆಟ್ರಿಕ್‍ನಲ್ಲಿ ದಾಖಲಿಸಲಾಗುತ್ತಿದೆ. ಮಕ್ಕಳ ಹಾಜರಾತಿಗನುಗುಣವಾಗಿ ಆಹಾರ ನೀಡಲಾಗುವುದು. ಈ ಹಿಂದೆ ವಸತಿ ನಿಲಯಗಳ ವಾರ್ಡನ ಮತ್ತು ಶಿಕ್ಷಕರ ನೇಮಕಾತಿಗಳು ನಡೆದಿದ್ದು, ಇದರಲ್ಲಿ ಯಾವುದೇ ತರಹದ ಅವ್ಯವಹಾರ ನಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳನ್ನು ಕ್ರೈಸ್ ಸಂಸ್ಥೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಲು ರೂಪರೇಷೆ ಹಮ್ಮಿಕೊಂಡಿದ್ದು, ಮಾದರಿ ವಸತಿ ನಿಲಯಗಳ ನಿರ್ಮಾಣಕ್ಕೆ ಸಧ್ಯದಲ್ಲಿ ಟೆಂಡರ್ ಕರೆಯಲಾಗುವುದು. ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯಗಳ ಪೂರೈಕೆಗೆ ಆದ್ಯತೆ ನೀಡಲಾಗುವುದು. ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ವಸತಿ ನಿಲಯಗಳಿಗೆ ಸ್ವಂತ ನಿವೇಶನ ಗುರುತಿಸಿ ವಸತಿ ನಿಲಯ ನಿರ್ಮಿಸಲಾಗುವುದು. ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕ್ರೈಸ್ ಸಂಸ್ಥೆಯ ಒಟ್ಟು 2500 ವಸತಿ ನಿಲಯಗಳಿದ್ದು, ಮುಂದಿನ 2 ವರ್ಷಗಳಲ್ಲಿ ಎಲ್ಲ ವಸತಿ ನಿಲಯಗಳಲ್ಲಿ ಅತ್ಯುತ್ತಮ ಮೂಲಭೂತ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಜರುಗಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ಎ.ಬಿ. ಮತ್ತು ಸಿ. ವೃಂದದ ನೇಮಕಾತಿಗಾಗಿ ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗಕ್ಕೆ ನಿರ್ದೇಶನ ನೀಡಲಾಗಿದೆ. ಇನ್ನು ಕೆಲವು ತಿಂಗಳುಗಳಲ್ಲಿ ಖಾಲಿಯಿರುವ ವಾರ್ಡನ ಮತ್ತು ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದರು.
ಸಮಾಜ ಕಲ್ಯಾಣ ಇಲಾಖೆಯು ಅತೀ ದೊಡ್ಡ ಇಲಾಖೆಯಾಗಿದ್ದು, ಸುಮಾರು 7000 ಕೋಟಿ ರೂ.ಗಳ ಅನುದಾನ ನೀಡಲಾಗಿದೆ. ರಾಜ್ಯದ 2 ಕೋಟಿ ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ವಿವಿಧ ಇಲಾಖೆಗಳಿಗೆ ನೀಡುವ ಅನುದಾನದ ಪೈಕಿ ಶೇ. 24.1ರಷ್ಟು ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಅನುದಾನ ಮೀಸಲಿಡಲು ಹಾಗೂ ಅದನ್ನು ಸಮರ್ಪಕವಾಗಿ ಬಳಕೆ ಮಾಡಲು ನೀತಿ ರೂಪಿಸಲಾಗುವುದು. ಹೈದ್ರಾಬಾದ ಕರ್ನಾಟಕ ಪ್ರದೇಶವು ಶಿಕ್ಷಣದಿಂದ ಹಿಂದುಳಿದಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಈ ಭಾಗಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಮೇಶ ಮರಗೋಳ, ಜಿಲ್ಲಾಪಂಚಾಯಿತಿ ಸದಸ್ಯರಾದ ಶಿವಾನಂದ ಪಾಟೀಲ, ಶಿವರುದ್ರ ಖೇಣಿ, ಮುಖಂಡರಾದ ಮುಖ್ತಾರ ಪಟೇಲ್, ಭೀಮಣ್ಣ ಸಾಲಿ, ನಾಗರೆಡ್ಡಿ ಕರದಾಳ, ಮಹಿಮೂದ್ ಸಾಹೇಬ, ಜಾಫರ ಪಟೇಲ್ ಮುಂತಾದವರು ಉಪಸ್ಥಿತರಿದ್ದರು.
ಸಚಿವರು ತಮ್ಮ ಮತಕ್ಷೇತ್ರಕ್ಕೆ ಸಮಾಜ ಕಲ್ಯಾಣ ಸಚಿವರಾದ ನಂತರ ಪ್ರಥಮ ಬಾರಿಗೆ ಭೇಟಿ ನೀಡಿದ್ದರಿಂದ ಬೃಹತ್ ಪ್ರಮಾಣದಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಸಚಿವರು ನಾಗಾಂವಿಯ ಯಲ್ಲಮ್ಮ ದೇವಸ್ಥಾನ, ಚಿತ್ತಾಪುರ ಚಿತಾವಲಿ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಗರದಲ್ಲಿರುವ ಅಂಬೇಡ್ಕರ, ಬಸವೇಶ್ವರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.

ಜೂನ್ 28ರಂದು ಮಲೇರಿಯಾ ವಿರೋಧಿ ಮಾಸಾಚರಣೆ
************************************************
ಕಲಬುರಗಿ,ಜೂ.27.(ಕ.ವಾ.)-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಲೇರಿಯಾ ವಿರೋಧಿ ಮಾಸಾಚರಣೆಯನ್ನು ಜೂನ್ 28ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ.
ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಡಾ. ಬಾಲಚಂದ್ರ ಜೋಶಿ ಮುಖ್ಯ ಅತಿಥಿಗಳಾಗಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಕೆ. ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಸ್ಟಾಫ್ ನರ್ಸ್ ಹುದ್ದೆಗಾಗಿ ಅರ್ಜಿ ಆಹ್ವಾನ
************************************
ಕಲಬುರಗಿ,ಜೂ.27.(ಕ.ವಾ.)-ಕಲಬುರಗಿ ಉತ್ತರ ಕಾಳಗನೂರ (ಪ.ಜಾತಿ) ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿಯಿರುವ ಸ್ಟಾಫ್ ನರ್ಸ್ (ಜೆಎನ್‍ಎಂ) ಹುದ್ದೆಯನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ವಸತಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಜೆಎನ್‍ಎಂ (ಜನರಲ್ ನರ್ಸಿಂಗ್ ಆಂಡ್ ಮಿಡ್‍ವೈಫರಿ-ಉeಟಿeಡಿಚಿಟ ಓuಡಿsiಟಿg ಚಿಟಿಜ ಒiಜತಿiಜಿeಡಿಥಿ) ತೇರ್ಗಡೆ ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 6 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಖುದ್ದಾಗಿ ಕಲಬುರಗಿ ತಾರಫೈಲ್ ಅಂಭಿಕಾ ನಗರದಲ್ಲಿರುವ ವಸತಿ ಶಾಲೆಯ ಕಚೇರಿಗೆ ಬಂದು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ವಸತಿ ಶಾಲೆಯನ್ನು ಅಥವಾ ಮೊಬೈಲ್ ಸಂಖ್ಯೆ 9481541177ನ್ನು ಸಂಪರ್ಕಿಸಲು ಕೋರಲಾಗಿದೆ.

ಜೂನ್ 29ರಂದು ಸಾಂಖ್ಯಿಕ ದಿನಾಚರಣೆ
**********************************
ಕಲಬುರಗಿ,ಜೂ.27.(ಕ.ವಾ.)-ಭಾರತ ಸರ್ಕಾರದ ಆದೇಶದನ್ವಯ ಜಿಲ್ಲಾ ಸಂಖ್ಯಾ ಸಂಗ್ರಹಣಾ ಇಲಾಖೆಯಿಂದ ಇದೇ ಜೂನ್ 29 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಾಂಖ್ಯಿಕ ತಜ್ಞರಾದ ಪ್ರೊ. ಪ್ರಶಾಂತ ಚಂದ್ರ ಮಹಾಲ್‍ನೋಬೀಸ್‍ರವರ ಜನ್ಮದಿನಾಚರಣೆಯನ್ನು ಸಾಂಖ್ಯಿಕ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ತಿಳಿಸಿದ್ದಾರೆ.

ಜೂನ್ 28ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
***********************************************
ಕಲಬುರಗಿ,ಜೂ.27.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-1ರ ಉಪ ವಿತರಣಾ ಕೇಂದ್ರದಿಂದ 33/11 ಕೆ.ವಿ. ಹಡಗಿಲ್ ಹಾರೂತಿ ಕೇಂದ್ರದಲ್ಲಿ 12 ಮೀಟರ್ ಐಬಿಎಮ್ ಕಂಬಗಳನ್ನು ಎತ್ತಲು ಹೈಕೋರ್ಟ್ 33/11 ಕೆ.ವಿ. ಜಿಆಯ್ ಸಬ್ ಸ್ಟೇಶನ್ ಲೈನ್‍ನಲ್ಲಿ ಕಾರ್ಯಕೈಗೊಂಡಿರುವ ಪ್ರಯುಕ್ತ ಇದೇ ಜೂನ್ 28ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಸದರಿ ಉಪ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಫೀಡರ್ ವ್ಯಾಪ್ತಿಯ ಗ್ರಾಮ ಹಾಗೂ ಇತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
33/11ಕೆ.ವಿ. ಹಡಗಿಲ್ ಹಾರೂತಿ ವಿತರಣಾ ಕೇಂದ್ರ: ಎಫ್-5 ಶರಣ ಶಿರಸಗಿ ಎನ್‍ಜೆವಾಯ್ ಹಾಗೂ ಎಫ್-6 ಬಬಲಾದ ಐಪಿ.

ಗ್ರಾಮೀಣಾಭಿವೃದ್ಧಿ ಸಚಿವರ ಪ್ರವಾಸ
********************************
ಕಲಬುರಗಿ,ಜೂ.27.(ಕ.ವಾ.)-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ ಅವರು ಯಶವಂತಪುರ-ಸೋಲಾಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜೂನ್ 29ರಂದು ಬೆಳಿಗ್ಗೆ 6.30 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಅಂದು ಸಚಿವರು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಲಬುರಗಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಕಾಮಗಾರಿಗಳ ಪರಿಶೀಲನೆಗಾಗಿ ಕ್ಷೇತ್ರ ಭೇಟಿ ನೀಡುವರು. ಅಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಅಂದು ಸಂಜೆ 7 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೀದರಿಗೆ ಪ್ರಯಾಣಿಸುವರು.

ಬೆಳೆ ವಿಮಾ ನೋಂದಣಿ ಕಾರ್ಯ ಚುರುಕುಗೊಳಿಸಲು ಸೂಚನೆ
******************************************************
ಕಲಬುರಗಿ,ಜೂ.27.(ಕ.ವಾ.)- ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ ಮತ್ತು ಮರುವಿನ್ಯಾಸಗೊಳಿಸಿದ ಹವಾಮಾನದ ಅಧಾರಿತ ಬೆಳೆ ವಿಮೆ ಯೋಜನೆಯಡಿ ಪ್ರಸಕ್ತ 2018-19ನೇ ಸಾಲಿನಲ್ಲಿ ಜಿಲ್ಲೆಯ ಅಧಿಸೂಚಿತ 23 ಬೆಳೆಗಳ 1.16 ಲಕ್ಷ ಹೇಕ್ಟರ್ ಪ್ರದೇಶವನ್ನು ವಿಮಾ ವ್ಯಾಪ್ತಿಗೆ ತರುವ ಗುರಿ ಹೊಂದಿದ್ದು, ವಿಮಾ ನೊಂದಣಿ ಕಾರ್ಯವನ್ನು ಚುರುಕುಗೊಳಿಸುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಸೂಚನೆ ನೀಡಿದರು.
ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬೆಳೆ ವಿಮೆ ನೋಂದಣಿ ಕುರಿತು ಬ್ಯಾಂಕರ್ಸ್ ಮತ್ತು ಕೃಷಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸಕ ವರ್ಷದ ಬಿತ್ತನೆ ಕಾರ್ಯ ಜಿಲ್ಲೆಯ ಎಲ್ಲೆಡೆ ಸಾಗಿದ್ದು, ಮುಂದಿನ 15 ದಿನಗಳಲ್ಲಿ ಬಿತ್ತನೆ ಕಾರ್ಯ ಮುಗಿಯಲಿದೆ. ಹೀಗಿದ್ದಾಗಿಯೂ ಇದೂವರೆಗೆ ಬೆಳೆ ವಿಮೆ ನೋಂದಣಿ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಸಾಗಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿ ಮುಂದಿನ ಒಂದು ತಿಂಗಳ ಒಳಗಾಗಿ ನೋಂದಣಿ ಕಾರ್ಯವನ್ನು ಚುರುಕುಗೊಳಸಬೇಕು ಮತ್ತು ಈ ನಿಟ್ಟಿನಲ್ಲಿ ಕೃಷಿ ಸಂಬಂಧಿತ ಇಲಾಖೆಗಳು ಮತ್ತು ಬ್ಯಾಂಕ್ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಈ ಕಾರ್ಯವನ್ನು ಮಾಡಬೇಕು. ಜಿಲ್ಲೆಯಲ್ಲಿ ಕಳೆದ ವರ್ಷ 82 ಸಾವಿರ ರೈತರು ಬೆಳೆ ವಿಮೆ ನೊಂದಣಿ ಮಾಡಿಸಿಕೊಂಡಿದ್ದರು ಎಂದರು.
ಬೆಳೆ ಸಾಲ ಪಡೆದ ರೈತರು ಕಡ್ಡಾಯವಾಗಿ ವಿಮೆ ಮಾಡಿಸಬೇಕಾಗಿರುವದರಿಂದ ಅವರ ಖಾತೆಯಿಂದ ಬೆಳೆ ವಿಮೆಯ ಪ್ರೀಮಿಯಂ ಮೊತ್ತವನ್ನು ನೇರವಾಗಿ ಕಟಾವು ಮಾಡಿ. ಇನ್ನುಳಿದಂತೆ ಸಾಲ ಪಡೆಯದ ಹೆಚ್ಚಿನ ಸಂಖ್ಯೆಯ ರೈತರಿಗೆ ವಿಮಾ ಯೋಜನೆ ಬಗ್ಗೆ ಮಾಹಿತಿ ನೀಡಿ ನೋಂದಣಿ ಮಾಡಿಸಿಕೊಳ್ಳುವಂತೆ ಅವರನ್ನು ಪ್ರೇರೇಪಿಸಿ. ಸಾಲ ಪಡೆದ ರೈತರು ತಮ್ಮ ಸಾಲದ ಖಾತೆಯನ್ನು ರಿನಿವಲ್ ಮಾಡಿಕೊಳ್ಳದಿದ್ದಲ್ಲಿ ಅಥವಾ ಸಾಲ ಕಟ್ಟದಿದ್ದದರು ಸಹ ವಿಮಾ ನೋಂದಣಿಗೆ ಮುಂದೆ ಬಂದಲ್ಲಿ ಅಂತಹವರನ್ನು ಬ್ಯಾಂಕುಗಳು ನೋಂದಣಿಗೆ ನಿರಾಕರಿಸಬಾರದು ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು ನೋಂದಣಿ ವೇಳೆ ವಿನಾಕಾರಣ ರೈತರಿಗೆ ತೊಂದರೆ ನೀಡಿದಲ್ಲಿ ಅಂತಹವರ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.
ಬೆಳೆ ಸಾಲ ಪಡೆದ ಮತ್ತು ಚಾಲ್ತಿಯಲ್ಲಿರುವ ಖಾತೆಗಳ ಕುರಿತು ಬ್ಯಾಂಕ್ ಅಧಿಕಾರಿಗಳು ಎರಡು ದಿನದೊಳಗಾಗಿ ಮಾಹಿತಿಯನ್ನು ಸಲ್ಲಿಸಬೇಕು. ಬೆಳೆ ವಿಮೆ ಕುರಿತು ಎಲ್ಲಾ ಬ್ಯಾಂಕುಗಳು ಯೋಜನೆ ಬಗ್ಗೆ ತಮ್ಮ ಶಾಖೆಯ ಸೂಚನಾ ಫಲಕದಲ್ಲಿ ಬೆಳೆ ಬಿಮೆ ಸಂಪೂರ್ಣ ಮಾಹಿತಿಯನ್ನು ಪ್ರಕಟಿಸುವ ಮೂಲಕ ರೈತರಿಗೆ ಮಾಹಿತಿ ಒದಗಿಸಬೇಕು. ಈ ನಿಟ್ಟಿನಲ್ಲಿ ಕೃಷಿ ಅಧಿಕಾರಿಗಳು ಸಂಬಂಧಿಸಿದ ಎಲ್ಲಾ ಬ್ಯಾಂಕುಗಳಿಗೆ ಬೆಳೆ ವಿಮೆ ಯೋಜನೆಯ ವಿವರವುಳ್ಳ ಕರಪತ್ರಗಳನ್ನು ಕೂಡಲೇ ಸರಬರಾಜು ಮಾಡಬೇಕು ಮತ್ತು ಬೆಳೆ ವಿಮೆ ನೋಂದಣಿ ಪ್ರತಿದಿನ ಬ್ಯಾಂಕುಗಳ್ಲಲಿ ಅಪಡೇಟ್ ಮಾಡಲು ಬ್ಯಾಂಕ ಅಧಿಕಾರಿಗಳು ಓರ್ವ ಡಾಟಾ ಅಪರೇಟರನ್ನು ನಿಯೋಜಿಸಬೇಕು. ಡಾಟಾ ಅಪರೇಟರಗಳಿಗೆ ತಾಲೂಕಾ ಹಂತದಲ್ಲಿ ತರಬೇತಿ ಸಹ ಆಯೋಜಿಸುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ಡಿ.ಸಿ. ಸೂಚಿಸಿದರು.
ಜಿಲ್ಲೆಯಲ್ಲಿ ಕೆನರಾ ಬ್ಯಾಂಕ್‍ನ ಕೆಲವು ಶಾಖೆಗಳಲ್ಲಿ ಬೆಳೆ ವಿಮಾ ನೊಂದಣಿಗೆ ಸಹಕರಿಸುತ್ತಿಲ್ಲ ಎಂಬ ದೂರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಮತ್ತು ಇಂದಿನ ಸಭೆಗೆ ಗೈರಾದ ಕೆನರಾ ಬ್ಯಾಂಕ್ ನಿಯಂತ್ರಣಾಧಿಕಾರಿಗಳಿಗೆ ನೋಟಿಸ್ ನೀಡಿ ಮೂರು ದಿನದೊಳಗಾಗಿ ಉತ್ತರ ನೀಡಲು ಸೂಚಿಸುವಂತೆ ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮುಸುಕಿನಜೋಳ(ಮಳೆ ಆಶ್ರಿತ), ಜೋಳ(ನೀ), ಜೋಳ(ಮ.ಆ), ಸಜ್ಜೆ (ಮ.ಆ), ಉದ್ದು (ಮ.ಆ), ತೊಗರಿ(ನೀ), ತೊಗರಿ(ಮ.ಆ), ಹೆಸರು(ಮ.ಆ), ಸೋಯಾ ಅವರೆ(ಮ.ಆ), ಎಳ್ಳು(ಮ.ಆ), ನೆಲಗಡಲೆ (ಶೇಂಗಾ)(ನೀ), ನೆಲಗಡಲೆ(ಶೇಂಗಾ)(ಮ.ಆ), ಹತ್ತಿ(ನೀ), ಹತ್ತಿ(ಮ.ಆ), ಟೊಮ್ಯಾಟೋ ಮತ್ತು ಅರಿಶಿಣ ಬೆಳೆಗಳ ವಿಮೆ ನೊಂದಣಿಗೆ 31-07-2018 ಕೊನೆಯ ದಿನಾಂಕವಾಗಿರುತ್ತದೆ. ಅದರಂತೆ ಭತ್ತ(ನೀ), ಮುಸುಕಿನ ಜೋಳ(ನೀ), ಸೂರ್ಯಕಾಂತಿ(ನೀ), ಸೂರ್ಯಕಾಂತಿ(ಮ.ಆ), ಈರುಳ್ಳಿ(ನೀ) ಮತ್ತು ಕೆಂಪು ಮೆಣಸಿನಕಾಯಿ (ನೀ) ಬೆಳೆಗಳ ವಿಮೆ ನೋಂದಣಿಗೆ 14-08-2018 ಕೊನೆ ದಿನ ಇರುತ್ತದೆ. ಇನ್ನು ಮರುವಿನ್ಯಾಸಗೊಳಿಸಿದ ಹವಾಮಾನದ ಅಧಾರಿತ ಬೆಳೆ ವಿಮೆ ಯೋಜನೆಯಡಿ ಪಪ್ಪಾಯ ಮತ್ತು ಹಸಿಮೆಣಸಿನಕಾಯಿ ಬೆಳೆಗಳಿಗೆ ವಿಮಾ ಮಾಡಿಸಬಹುದಾಗಿದೆ.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸುಗೂರ, ಕೃಷಿ ಉಪನಿರ್ದೇಶಕ ಸಮದ್ ಪಟೇಲ್, ಡಿ.ಸಿ.ಸಿ. ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಗೋಪಾಲ ನಾಯಕ್, ಲೀಡ್ ಬ್ಯಾಂಕ್ ಮ್ಯಾನೇಜರ್ ಆಳಂದಕರ್ ಸೇರಿದಂತೆ ವಿವಿಧ ಬ್ಯಾಂಕುಗಳ ಅಧಿಕಾರಿಗಳು, ಕೃಷಿ ಸಂಬಂಧಿತ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
**********************************************************************
ಕಲಬುರಗಿ,ಜೂ.27.(ಕ.ವಾ.)-ಕಲಬುರಗಿ ಜಿಲ್ಲೆಯಾದ್ಯಂತ ಪಿ.ಯು.ಸಿ. ದ್ವಿತೀಯ ವರ್ಷದ ಪೂರಕ ಪರೀಕ್ಷೆಗಳು 2018ರ ಜೂನ್ 29 ರಿಂದ ಜುಲೈ 10ರವರೆಗೆ ಕಲಬುರಗಿ ನಗರದ 11 ಹಾಗೂ ಇತರೆ ತಾಲೂಕು ಕೇಂದ್ರಗಳ 07 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು, ಪರೀಕ್ಷಾ ವಿದ್ಯಾರ್ಥಿಗಳು ಹೊರತುಪಡಿಸಿ ಇತರೆ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ ಹಾಗೂ ಈ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಜಿಲ್ಲಾ ದಂಡಾಧಿಕಾರಿ ಆರ್. ವೆಂಕಟೇಶಕುಮಾರ ಅವರು 1973ರ ಸಿಆರ್.ಪಿ.ಸಿ. ಕಲಂ 144ರ ಅನ್ವಯ ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ-35(ಸಿ)ರ ಅನ್ವಯ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಬೇರೆ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು, ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಬೇರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್ ಹಾಗೂ ವೈರಲೆಸ್ ಸೆಟ್‍ಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿನ ಎಲ್ಲ ಜಿರಾಕ್ಸ್ ಮತ್ತು ಪುಸ್ತಕ ಅಂಗಡಿ ಮುಂತಾದವನ್ನು ಮುಚ್ಚುವಂತೆಯೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.

ಜುಲೈ 3ರಂದು ಕಲಬುರಗಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ
************************************************************
ಕಲಬುರಗಿ,ಜೂ.27.(ಕ.ವಾ.)-ಕಲಬುರಗಿ ತಾಲೂಕು ಪಂಚಾಯಿತಿ ಎಂಟನೇ ಸಾಮಾನ್ಯ ಸಭೆಯು 2018ರ ಜುಲೈ 3 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜ ಕಲ್ಲಪ್ಪಾ ಸಜ್ಜನ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಲಬುರಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 29 ರಿಂದ ಪಿ.ಯು.ಸಿ. ಪೂರಕ ಪರೀಕ್ಷೆ ಸೂಸ್ರುತವಾಗಿ ನಡೆಸಲು ಸೂಚನೆ
**********************************************************************
ಕಲಬುರಗಿ,ಜೂ.27.(ಕ.ವಾ.)-ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಯು ಜೂನ್ 29 ರಿಂದ ಜುಲೈ 10ರ ವರಗೆ ಜರುಗಲಿದ್ದು, ಜಿಲ್ಲೆಯ 18 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಶಿಷ್ಠಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್ ತಿಳಿಸಿದರು.
ಅವರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳು, ರೂಟ್ ಅಧಿಕಾರಿಗಳು, ಮತ್ತು ಪರೀಕ್ಷಾ ಕೇಂದ್ರದ ಮುಖ್ಯ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷೆಯನ್ನು ಸೂಸ್ರುತಾವಾಗಿ ನಡೆಸುವಂತೆ ಪರಿಕ್ಷಾ ಕಾರ್ಯದಲ್ಲಿ ನಿರತರಾಗುವ ಅಧಿಕಾರಿ-ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.
18 ಪರೀಕ್ಷಾ ಕೇಂದ್ರಗಳಲ್ಲಿ 11 ಕೇಂದ್ರಗಳು ಕಲಬುರಗಿ ನಗರದಲ್ಲಿದ್ದರೆ ಉಳಿದ 7 ಕೇಂದ್ರಗಳು ತಾಲೂಕಾ ಸ್ಥಳಗಳಲ್ಲಿವೆ. ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಸೂಸೂತ್ರವಾಗಿ ನಡೆಯಲು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ 18 ಜಾಗೃತ ದಳದ ವೀಕ್ಷಕರನ್ನು, ಪ್ರಶ್ನೆ ಪತ್ರಿಕೆ ಸರಬರಾಜಿಗೆ 30 ಜನ ಮಾರ್ಗಾಧಿಕಾರಿಗಳನ್ನು, 18 ಪ್ರಶ್ನೆ ಪತ್ರಿಕೆ ಪಾಲಕರನ್ನು ನೇಮಿಸಲಾಗಿದೆ ಎಂದರು.
ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ.ಟಿ.ವಿ. ಅಳವಡಿಸಲಾಗಿದೆ. ಪರೀಕ್ಷೆಯಲ್ಲಿ ನಕಲು ಮಾಡುವ ಅಭ್ಯರ್ಥಿಗಳು ಮತ್ತು ಅದಕ್ಕೆ ಸಹಕರಿಸಿ ಅಕ್ರಮದಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನಿನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರದ ಅಧೀಕ್ಷಕರು ಕೇಂದ್ರದಲ್ಲಿಯೆ ಹಾಜರಿದ್ದು, ಪಿಯು.ಸಿ. ಮಂಡಳಿಯ ನಿರ್ದೇಶನದಂತೆ ಎಲ್ಲ ಅಗತ್ಯ ಮುನ್ನೆಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಮೊಬೈಲ್ ನಿಷೇಧ: ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಅಭ್ಯರ್ಥಿಗಳು ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್, ವೈರಲೆಸ್ ಸೆಟ್, ಸ್ಲೈಡರೂಲ್ ಕ್ಯಾಲ್ಕುಲೇಟರ್, ವಾಚ್ ಕ್ಯಾಲ್ಕುಲೇಟರ್, ಪಠ್ಯ ಪುಸ್ತಕ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರ ಸುತ್ತಮುತ್ತ 144 ಜಾರಿ:- ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಎಲ್ಲಾ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು, ಪರೀಕ್ಷಾ ವಿದ್ಯಾರ್ಥಿಗಳು ಹೊರತುಪಡಿಸಿ ಇತರೆ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿನ ಎಲ್ಲ ಜಿರಾಕ್ಸ್ ಮತ್ತು ಪುಸ್ತಕ ಅಂಗಡಿ ಮುಂತಾದವನ್ನು ಮುಚ್ಚುವಂತೆಯೂ ಜಿಲ್ಲಾ ದಂಡಾಧಿಕಾರಿಗಳಾದ ಆರ್.ವೆಂಕಟೇಶ ಕುಮಾರ ಆದೇಶಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ಬಿ. ಕಲಬುರಗಿ ಅವರು ಪರೀಕ್ಷೆ ಕುರಿತು ಕೈಗೊಳ್ಳಲಾದ ಸಿದ್ಧತೆ ಕುರಿತು ವಿವರಿಸಿದರು. ಸಭೆಯಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ವೀಕ್ಷಕರು, ಮಾರ್ಗಾಧಿಕಾರಿಗಳು ಸೇರಿದಂತೆ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ಹೀಗಾಗಿ ಲೇಖನಗಳು news and photo 27-6-2018
ಎಲ್ಲಾ ಲೇಖನಗಳು ಆಗಿದೆ news and photo 27-6-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo 27-6-2018 ಲಿಂಕ್ ವಿಳಾಸ https://dekalungi.blogspot.com/2018/06/news-and-photo-27-6-2018.html

0 Response to "news and photo 27-6-2018"
ಕಾಮೆಂಟ್ ಪೋಸ್ಟ್ ಮಾಡಿ