NEWS AND PHOTO DATE; 06-06-2018

NEWS AND PHOTO DATE; 06-06-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE; 06-06-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE; 06-06-2018
ಲಿಂಕ್ : NEWS AND PHOTO DATE; 06-06-2018

ಓದಿ


NEWS AND PHOTO DATE; 06-06-2018

ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು 24 ಗಂಟೆಯಲ್ಲಿ ಖಾಲಿ ಮಾಡುವಂತೆ
************************************************************
ಜಿಲ್ಲಾಧಿಕಾರಿಗಳ ಖಡಕ್ ಎಚ್ಚರಿಕೆ
******************************
ಕಲಬುರಗಿ,ಜೂ.06.(ಕ.ವಾ.)-ಜಿಲ್ಲೆಯ ವಿವಿಧ ಅಂಗಡಿ, ಮುಗ್ಗಟ್ಟುಗಳಲ್ಲಿ ಸಂಗ್ರಹಿಸಲಾಗಿರುವ ಪ್ಲಾಸ್ಟಿಕ್ ಮತ್ತು ಪಾಲಿಥಿನ್ ಬ್ಯಾಗ್, ಪ್ಲಾಸ್ಟಿಕ್ ಕಪ್, ಗ್ಲಾಸ್, ಪ್ಲೇಟ್, ಚಮಚ ಇತ್ಯಾದಿಗಳನ್ನು 24 ಗಂಟೆಯೊಳಗಾಗಿ ಖಾಲಿ ಮಾಡದಿದ್ದಲ್ಲಿ ಅಂಗಡಿ ಮಾಲೀಕರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಖಡಕ್ ಎಚ್ಚರಿಕೆ ನೀಡಿದರು.
ಅವರು ಬುಧವಾರ ಕಲಬುರಗಿ ನಗರದ ಸುಪರ ಮಾರ್ಕೇಟಿನ ಕಪಡಾ ಬಜಾರ ಮತ್ತು ಪುಟಾಣಿ ಗಲ್ಲಿಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ಹಠಾತ್ತಾಗಿ ದಾಳಿ ನಡೆಸಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ಅಂಗಡಿ ಮಾಲೀಕರಿಗೆ ಸೂಚನೆಗಳನ್ನು ನೀಡಿದರು.
50 ಮೈಕ್ರಾನ್‍ಗಿಂತ ಕಡಿಮೆ ಗಾತ್ರದ ಪ್ಲಾಸ್ಟಿಕ್ ಮತ್ತು ಪಾಲಿಥಿನ್ ಬ್ಯಾಗ್‍ಗಳನ್ನು, ಪ್ಲಾಸ್ಟಿಕ್‍ನಲ್ಲಿ ತಯಾರಿಸಿದ ಕುಡಿಯುವ ನೀರಿನ ಗ್ಲಾಸ್, ಚಹ ಕುಡಿಯುವ ಕಪ್, ಊಟ ಮತ್ತು ಉಪಹಾರಕ್ಕೆ ಬಳಸುವ ತಟ್ಟೆಗಳು, ಚಮಚಗಳು, ಥರ್ಮೋಕಾಲ್‍ನಿಂದ ತಯಾರಿಸಿದ ತಟ್ಟೆ ಮತ್ತು ಬಟ್ಟಲುಗಳು ಮಾನವ ಉಪಯೋಗಕ್ಕೆ ನಿಷೇಧಿಸಿ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಮೇಲಿಂದ ಮೇಲೆ ಹಠಾತ್ ದಾಳಿಗಳನ್ನು ಕೈಗೊಳ್ಳಲಾಗುವುದು ಎಂದರು.
ಸಾರ್ವಜನಿಕರು ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವ ಬದಲು ಬಟ್ಟೆ, ಕಾಗದ, ಸೆಣಬು, ಗಾಜು, ಸ್ಟೀಲ್‍ಗಳಿಂದ ತಯಾರಿಸಿದ ವಸ್ತುಗಳನ್ನು ಬಳಸಲು ರೂಢಿಸಿಕೊಳ್ಳಬೇಕು. ನಗರದಲ್ಲಿ ಪ್ಲಾಸ್ಟಿಕ್ ಬಳಕೆಯು ಹೆಚ್ಚಾಗಿದ್ದು, ಅನುಪಯುಕ್ತ ಪ್ಲಾಸ್ಟಿಕ್‍ನ್ನು ಚರಂಡಿಗಳಲ್ಲಿ ಹಾಕುವುದರಿಂದ ಚರಂಡಿ ನೀರು ಸರಾಗವಾಗಿ ಹರಿದು ಹೋಗುವುದಿಲ್ಲ. ಇದರಿಂದಾಗಿ ರಸ್ತೆಯಲ್ಲಿ ನೀರು ಸಂಗ್ರಹವಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ರಘುನಂದನಮೂರ್ತಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ದಿವಾಕರ, ಮಹಾನಗರ ಪಾಲಿಕೆಯ ಪರಿಸರ ಇಂಜಿನಿಯರ್‍ಗಳಾದ ಮುನಾಫ್ ಪಟೇಲ್, ಸುಷ್ಮಾ, ಚೇತನ ಮತ್ತಿತರರು ಪಾಲ್ಗೊಂಡಿದ್ದರು.
ಜಿಲ್ಲಾಧಿಕಾರಿಗಳಿಂದ 8 ಟನ್ ಪ್ಲಾಸ್ಟಿಕ್ ಜಪ್ತಿ
*************************************
ಕಲಬುರಗಿ,ಜೂ.06.(ಕ.ವಾ.)-ಕಲಬುರಗಿ ನಗರದ ಸುಪರ ಮಾರ್ಕೆಟ್ ಹಾಗೂ ಪುಟಾಣಿ ಗಲ್ಲಿಗಳಲ್ಲಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಸ್ವತ: ಪ್ಲಾಸ್ಟಿಕ್ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ಮಾಡಿ ಸುಮಾರು 8 ಟನ್ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿ ಮಾಡಿದರು.
ಸುಪರ ಮಾರ್ಕೇಟಿನ ಕಪಡಾ ಬಜಾರನಲ್ಲಿರುವ ಇಂಟರ್‍ನ್ಯಾಷನಲ್ ಟ್ರೇಡರ್ಸ್, ಪುಟಾಣಿ ಗಲ್ಲಿಯ ಪಾಟೀಲ ಕಾಂಪ್ಲೆಕ್ಸ್‍ನಲ್ಲಿರುವ ಸುಮೀತ ಪ್ಲಾಸ್ಟಿಕ್ಸ್, ವಿಕಾಸ ಏಜೆಸ್ಸಿಗಳ ಮೇಲೆ ದಾಳಿ ಮಾಡಿ ಈ ಅಂಗಡಿಗಳಲ್ಲಿರುವ 50 ಮೈಕ್ರಾನ್‍ಗಿಂತ ಕಡಿಮೆ ಗಾತ್ರದ ಪ್ಲಾಸ್ಟಿಕ್ ಮತ್ತು ಪಾಲಿಥಿನ್ ಬ್ಯಾಗ್‍ಗಳು, ಪ್ಲಾಸ್ಟಿಕ್‍ನಿಂದ ತಯಾರಿಸಿದ ಕಪ್ ಮತ್ತು ತಟ್ಟೆಗಳಂತಹ ವಸ್ತುಗಳನ್ನು ವಶಪಡಿಸಿಕೊಂಡರು.
ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿ ಇನ್ನು ಮುಂದೆ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡದಂತೆ ಎಚ್ಚರಿಸಿದರು. ನಂತರ ವಾರ್ಡ ನಂ. 32ರಲ್ಲಿರುವ ಟಿಪ್ಪು ಸುಲ್ತಾನ ಕಾಲೇಜಿನ ಹಿಂಬದಿಯ ಮಿಲ್ಲತ್‍ನಗರ ಪ್ರದೇಶದಲ್ಲಿ ಅನಧಿಕೃತವಾಗಿ ಪ್ಲಾಸ್ಟಿಕ್ ಬ್ಯಾಗ್‍ಗಳನ್ನು ತಯಾರಿಸುತ್ತಿದ್ದ ಇಮಾಮ್ ಎಂಬುವವರ ಪ್ಲಾಸ್ಟಿಕ್ ಬ್ಯಾಗ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿದರು.
ಇಮಾಮ ಎಂಬುವವರು ಅನಧಿಕೃತವಾಗಿ 50 ಮೈಕ್ರಾನ್‍ಗಿಂತ ಕಡಿಮೆ ಗಾತ್ರದ ಪ್ಲಾಸ್ಟಿಕ್ ಬ್ಯಾಗ್‍ಗಳನ್ನು ಹಾಗೂ ಪ್ಲಾಸ್ಟಿಕ್ ರೋಲ್‍ನ್ನು ತಯಾರಿಸುತ್ತಿದ್ದು, ಘಟಕದಲ್ಲಿರುವ ಎಲ್ಲ ಯಂತ್ರ ಮತ್ತು ಸಾಮಗ್ರಿಗಳ ವಿಡಿಯೋ ಚಿತ್ರೀಕರಣ ಮಾಡಿ ಯಂತ್ರ ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಂಡು ಪ್ಲಾಸ್ಟಿಕ್ ತಯಾರಿಕಾ ಘಟಕವನ್ನು ಸೀಜ್ ಮಾಡುವಂತೆ ಆದೇಶಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ರಘುನಂದನಮೂರ್ತಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ದಿವಾಕರ, ಮಹಾನಗರ ಪಾಲಿಕೆಯ ಪರಿಸರ ಇಂಜಿನಿಯರ್‍ಗಳಾದ ಮುನಾಫ್ ಪಟೇಲ್, ಸುಷ್ಮಾ, ಚೇತನ ಮತ್ತಿತರರು ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲಿಸಿದರು. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಶ್ರಮದಾನ ಮಾಡಿ ಬಸ್ ನಿಲ್ದಾಣದ ಆವರಣವನ್ನು ಸ್ವಚ್ಛಗೊಳಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎ.ಹೆಚ್. ನಾಗೇಶ, ವಿಭಾಗೀಯ ಸಂಚಾರ ಅಧಿಕಾರಿ ಎಸ್.ಆರ್. ಕುಲಕರ್ಣಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ಡಿ. ಸುಂದರ, ಡಿಪೋ-1ರ ವ್ಯವಸ್ಥಾಪಕ ನಾಗರಾಜ ಮತ್ತಿತರರು ಉಪಸ್ಥಿತರಿದ್ದರು.
ಸೇಡಂ-ಮುಧೋಳ: ವಸತಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
************************************************************
ಕಲಬುರಗಿ,ಜೂ.06.(ಕ.ವಾ.)-ಸೇಡಂ ತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 2018-19ನೇ ಸಾಲಿಗೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮುಧೋಳ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಹಾಗೂ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಸೇಡಂಗಳಲ್ಲಿ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೇಡಂ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
ಈ ವಸತಿ ನಿಲಯಗಳಲ್ಲಿ ಶೇ. 75 ಸ್ಥಾನಗಳನ್ನು ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಹಾಗೂ ಉಳಿದ ಶೇ. 25ರಷ್ಟು ಸ್ಥಾನಗಳನ್ನು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸೇಡಂ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ (ಮೊಬೈಲ್ ಸಂಖ್ಯೆ 9972554852) ಹಾಗೂ ಮುಧೋಳ ವಸತಿ ನಿಲಯ ಮೊಬೈಲ್ ಸಂಖ್ಯೆ 7760680162, ಸೇಡಂ ವಸತಿ ನಿಲಯಗಳ ಮೊಬೈಲ್ ಸಂಖ್ಯೆ 9632960015, 9741168681ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಬಿ.ಎ., ಬಿ.ಕಾಂ. ಹಾಗೂ ಬಿ.ಎಸ್.ಸಿ. ಪ್ರವೇಶ ಪ್ರಕ್ರಿಯೆ ಪ್ರಾರಂಭ
*******************************************************
ಕಲಬುರಗಿ,ಜೂ.06.(ಕ.ವಾ.)-ಕಲಬುರಗಿ ನಗರದ ಹಳೆಯ ಜೇವರ್ಗಿ ರಸ್ತೆಯಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ., ಬಿ.ಕಾಂ. ಮತ್ತು ಬಿ.ಎಸ್.ಸಿ. ಪ್ರಥಮ ವರ್ಷದ ಪ್ರವೇಶ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವೇಶ ಪಡೆಯಲು ಜೂನ್ 19 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾರ್ಯಾಲಯವನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-251097, 9448913320, 9980629204ಗಳನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಚಿತ್ತಾಪುರ: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಲಬುರಗಿ,ಜೂ.06.(ಕ.ವಾ.)-ಚಿತ್ತಾಪುರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2018-19ನೇ ಸಾಲಿಗೆ ಕೆಳಕಂಡ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಅನುದಾನಿತ ವಸತಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿತ್ತಾಪುರ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
ಪ್ರವೇಶ ಬಯಸುವ ವಿದ್ಯಾರ್ಥಿಗಳು 5 ರಿಂದ 10ನೇ ತರಗತಿಯಲ್ಲಿ ಓದುತ್ತಿರಬೇಕು. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾತಿಗೆ ಸೇರಿದವರಾಗಿರಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಜೂನ್ 20ರೊಳಗಾಗಿ ಚಿತ್ತಾಪುರ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಿತ್ತಾಪುರ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ವಸತಿ ನಿಲಯಗಳ ವಿವರ ಇಂತಿದೆ. ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಚಿತ್ತಾಪುರ, ಆಲಹಳ್ಳಿ, ಭೀಮನಳ್ಳಿ, ನಾಲವಾರ, ಕೊಲ್ಲೂರ, ಕಾಳಗಿ, ನಿಪ್ಪಾಣಿ, ರೇವಗ್ಗಿ, ಮಂಗಲಗಿ, ತೇಂಗಳಿ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಚಿತ್ತಾಪುರ, ನಾಲವಾರ. ಅನುದಾನಿತ ವಿದ್ಯಾರ್ಥಿ ನಿಲಯ ಶ್ರೀ ಸಿದ್ದೇಲಿಂಗೇಶ್ವರ ವಸತಿ ಪ್ರಸಾದ ನಿಲಯ ರಾವೂರ, ಕೋರಿಸಿದ್ದೇಶ್ವರ ಬಿ.ಸಿ.ಎಂ. ವಸತಿ ನಿಲಯ ನಾಲವಾರ, ಗುರುನಂಜೇಶ್ವರ ವಸತಿ ನಿಲಯ ಭರತನೂರ.
ಕೋಳಿ ಸಾಕಾಣಿಕೆ ತರಬೇತಿ: ಹೆಸರು ನೋಂದಾಯಿಸಲು ಮನವಿ
********************************************************
ಕಲಬುರಗಿ,ಜೂ.06.(ಕ.ವಾ.)-ಕಲಬುರಗಿ ನಗರದ ಸೇಡಂ ರಸ್ತೆಯ ಪಶು ಆಸ್ಪತ್ರೆ ಆವರಣದಲ್ಲಿರುವ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ಪ್ರಾದೇಶಿಕ ಕಚೇರಿಯಿಂದ 2018-19ನೇ ಸಾಲಿಗೆ ಪ್ರತಿ ಮಾಹೆ ಐದು ದಿನಗಳ ಕೋಳಿ ಸಾಕಾಣಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಚ್ಛೆಯುಳ್ಳ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಮೇ 18ರೊಳಗಾಗಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕೆಂದು ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳ ಕಲಬುರಗಿ ಪ್ರಾದೇಶಿಕ ಕೇಂದ್ರದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಏಳನೇ ತರಗತಿ ಪಾಸಾದ ಅಂಕಪಟ್ಟಿ, ವರ್ಗಾವಣೆ/ ಜಾತಿ ಪ್ರಮಾಣಪತ್ರ, ಎರಡು ಭಾವಚಿತ್ರ, ಮೂಲ ವಾಸಸ್ಥಳ ಪತ್ರ, ಆಧಾರ ಕಾರ್ಡ, ಸಹಾಯಕ ನಿರ್ದೇಶಕರು/ ಪಶು ವೈದ್ಯಾಧಿಕಾರಿಗಳು ನೀಡಿರುವ ಶಿಫಾರಸ್ಸು ಪತ್ರ ಅಥವಾ ಗ್ರಾಮ ಪಂಚಾಯಿತಿಯಿಂದ ವಾಸಸ್ಥಳ ಪ್ರಮಾಣಪತ್ರ, ತಮ್ಮ ಹೆಸರಿನ ಬ್ಯಾಂಕ್ ಪಾಸ್‍ಬುಕ್ ಜಿರಾಕ್ಸ್ ಪ್ರತಿ ದಾಖಲಾತಿಗಳನ್ನು ಲಗತ್ತಿಸಿ ಮೇಲ್ಕಂಡ ಕಚೇರಿಯಲ್ಲಿ ಮೇ 18ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.
ಗ್ರಾಮೀಣ ಅಭ್ಯರ್ಥಿಗಳಿಗೆ ಪ್ರಥಮಾದ್ಯತೆ ನೀಡಲಾಗುವುದು. ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ದಿನಕ್ಕೆ 200ರೂ.ಗಳ ದಿನಭತ್ಯೆ ನೀಡಲಾಗುವುದು. ಮೀಸಲಾತಿ ಹಾಗೂ ಮೊದಲು ಹೆಸರು ನೋಂದಾಯಿಸಿಕೊಂಡಿರುವ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆಮಾಡಿ ತರಬೇತಿ ನಡೆಯುವ ನಾಲ್ಕು ದಿನ ಮುನ್ನ ಅಭ್ಯರ್ಥಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಲಾಗುವುದು. ಹೆಚ್ಚಿನ ವಿವರಗಳಿಗಾಗಿ ಸದರಿ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-241256ನ್ನು ಸಂಪರ್ಕಿಸಲು ಕೋರಿದೆ
.
ಜೂನ್ 7ರಂದು ಕಾನೂನು ಅರಿವು ನೆರವು ಕಾರ್ಯಕ್ರಮ
************************************************
ಕಲಬುರಗಿ,ಜೂ.06.(ಕ.ವಾ.)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಅರಣ್ಯ ಇಲಾಖೆ, ಬೆಥನಿ ಕಾನ್ವೆಂಟ್ ಶಾಲೆ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತರ ಸಂಘ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಜೂನ್ 7ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಹೈಕೋರ್ಟ್ ಎದುರಿಗೆಯಿರುವ ಬೆಥನಿ ಕಾನ್ವೆಂಟ್ ಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು. ಬೆಥಣಿ ಕಾನ್ವೆಂಟ್ ಶಾಲೆಯ ಮುಖ್ಯೋಪಾಧ್ಯಾಯ ಸಿಸ್ಟರ್ ಅಲ್ವಿನ್ ಸೌಜ್ ಅಧ್ಯಕ್ಷತೆ ವಹಿಸುವರು. ಕಲಬುರಗಿ ವಲಯ ಅರಣ್ಯಾಧಿಕಾರಿ ಗುರುಸಿಂಗ್, ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಕೆ. ಹಿರೇಮಠ, ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ಅಧ್ಯಕ್ಷ ಸಿದ್ರಾಮಯ್ಯ ಹಿರೇಮಠ ಮುಖ್ಯ ಅತಿತಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ವಲಯ ಅರಣ್ಯಾಧಿಕಾರಿ ಐಶ್ವರ್ಯ ಬಗ್ಗೂರ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.
ಜೂನ್ 7ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
********************************************
ಕಲಬುರಗಿ,ಜೂ.06.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11ಕೆ.ವಿ. ಶಾಂತಿನಗರ ಹಾಗೂ 11ಕೆ.ವಿ. ಹೌಸಿಂಗ್ ಬೋರ್ಡ್ ಫೀಡರ್‍ಗಳ ಮೇಲೆ ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡಿರುವ ಪ್ರಯುಕ್ತ ಜೂನ್ 7ರಂದು ಬೆಳಗಿನ 10ರಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಕೇಂದ್ರದ ಮೇಲೆ ಬರುವ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
11 ಕೆ.ವಿ. ಶಾಂತಿ ನಗರ ಫೀಡರ್: ಎಂ.ಎಸ್.ಕೆ ಮಿಲ್ ಗೇಟ್, ಖಾದ್ರಿ ಚೌಕ್, ಮಹ್ಮದಿ ಚೌಕ್, ಗಾಲಿಬ್ ಕಾಲೋನಿ, ವೆಂಕಟೇಶ್ವರ ಗುಡಿ (ಎನ್.ಆರ್. ಕಾಲೋನಿ), ಅಫಜಲಪುರ ಕ್ರಾಸ್ ಪ್ರದೇಶ, ಶಾಂತಿನಗರ, ವಿದ್ಯಾನಗರ, ವಡ್ಡರ ಗಲ್ಲಿ, ಬೋರಾಬಾಯಿ ನಗರ, ಬಸವ ನಗರ, ಹಿರಾಪುರ, ಮಿಸಬಾ ನಗರ, ಕೆ.ಎಸ್.ಆರ್.ಸಿ. ಕ್ವಾರ್ಟರ್ಸ್, ಹೀರಾ ನಗರ, ಭೀಮನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ. ಹೌಸಿಂಗ್ ಬೋರ್ಡ್ ಫೀಡರ್: ಗಂಜ್ ಬ್ಯಾಂಕ್ ಕಾಲೋನಿ, ಗಂಜ್ ಬಸ್‍ಸ್ಟ್ಯಾಂಡ್ ಎದುರುಗಡೆ, ಭವಾನಿ ಗುಡಿ, ಈಶ್ವರ ಗುಡಿ, ರಾಮಮಂದಿರ, ಬಿಯಾನಿ, ಜಿ.ಓ.ಎಸ್. ಪ್ರದೇಶ, ಲಾಹೋಟಿ ಕಲ್ಯಾಣ ಮಂಟಪ ಹಿಂಭಾಗ ಪ್ರದೇಶ, ಆದರ್ಶ ಸ್ಕೂಲ್ ಪ್ರದೇಶ ಕೆ.ಎಚ್.ಬಿ. ಕಾಲೋನಿ, ಕಲಂತ್ರಿ ಬಿಲ್ಡಿಂಗ್ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಕ್ರೀಡಾಂಗಣದ ಕ್ರೀಡಾ ವಸತಿ ನಿಲಯದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ
*********************************************************************
ಕಲಬುರಗಿ,ಜೂ.06.(ಕ.ವಾ.)-ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಸ್ಪಂದನ ಕೇಂದ್ರದಿಂದ ವಿಶ್ವ ಪರಿಸರ ದಿನಾಚಾರಣೆ ಅಂಗವಾಗಿ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಕ್ರೀಡಾ ವಸತಿ ನಿಲಯದ ಆವರಣದಲ್ಲಿ ಕ್ರೀಡಾ ಶಾಲೆಯ ಮಕ್ಕಳೊಂದಿಗೆ ಸಸಿ ನೆಡುವ ಕಾರ್ಯಕ್ರಮ ಮಂಗಳವಾರ ಏರ್ಪಡಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್. ಜಿ. ನಾಡಗೀರ, ಸಿಬ್ಬಂದಿಯಾದ ಬಿ. ಕೀರ್ತಿವರ್ಧನ, ಹಾಕಿ ತರಬೇತುದಾರ ಸಂಜಯ ಭಾಣದ, ಅಥ್ಲೇಟಿಕ್ಸ ತರಬೇತುದಾರ ರಾಜು ಚವ್ಹಾಣ ಹಾಗೂ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಎಲ್ಲಾ ಸಿಬ್ಬಂದಿಗಳು ಹಾಗೂ ಯುವ ಪರಿವರ್ತಕರು ಮತ್ತು ಕ್ರೀಡಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಪರಿಸರ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಈಶಾನ್ಯ ಪದವೀಧರರ ಮತಕ್ಷೇತ್ರ ಚುನಾವಣೆ:
*****************************************
157 ಮತಗಟ್ಟೆಗಳಿಗೆ 980 ಸಿಬ್ಬಂದಿಗಳ ನಿಯೋಜನೆ
**************************************************
ಕಲಬುರಗಿ,ಜೂ.06.(ಕ.ವಾ.)-ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆಗಾಗಿ ಒಟ್ಟು 157 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಚುನಾವಣೆ ಸುವ್ಯವಸ್ಥಿವಾಗಿ ಜರುಗಲು 980 ಸಿಬ್ಬಂದಿಗಳನ್ನು ಮತಗಟ್ಟೆಗಳಿಗೆ ನಿಯೋಜಿಸಲಾಗಿದೆ ಎಂದು ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ಪಂಕಜಕುಮಾರ ಪಾಂಡೆ ತಿಳಿಸಿದ್ದಾರೆ.
ಪ್ರತಿ ಮತಗಟ್ಟೆಗೆ ಒಬ್ಬರಂತೆ 172 ಅಧಿಕಾರಿಗಳನ್ನು ಮೈಕ್ರೋ ವೀಕ್ಷಕರನ್ನು ಹಾಗೂ ಮತಗಟ್ಟೆ ಕೇಂದ್ರದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಯನ್ನು ಸೆರೆ ಹಿಡಿಯಲು 157 ವಿಡಿಯೋಗ್ರಾಫರ್‍ಗಳನ್ನು ನೇಮಿಸಲಾಗಿದೆ. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 82054 ಪದವೀಧರ ಮತದಾರರಿದ್ದು, ಇದರಲ್ಲಿ 57852 ಪುರುಷರು, 241945 ಮಹಿಳೆಯರು ಹಾಗೂ 08 ಇತರೆ ಮತದಾರರಿದ್ದಾರೆ.
ಜೂನ್ 7ರಂದು ಎಲ್ಲ ತಹಶೀಲ್ದಾರರ ಕಚೇರಿಗಳಿಂದ ಹಾಗೂ ಮಹಾನಗರ ಪಾಲಿಕೆಯಿಂದ ಮಸ್ಟರಿಂಗ್ ಕೆಲಸ ಪ್ರಾರಂಭಿಸಲಾಗುವುದು. ಮತದಾನ ಕೇಂದ್ರಕ್ಕೆ ಮತಗಟ್ಟೆ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ಹಾಗೂ ಇತರೆ ಚುನಾವಣಾ ಸಾಮಗ್ರಿಗಳನ್ನು ತಲುಪಿಸಲು ವಾಹನ ವ್ಯವಸ್ಥೆ ಮಾಡಲಾಗಿದ್ದು, ಸಿಬ್ಬಂದಿ ಚುನಾವಣಾ ಸಾಮಗ್ರಿಗಳೊಂದಿಗೆ ಸುರಕ್ಷಿತವಾಗಿ ತಲುಪಿರುವ ಬಗ್ಗೆ ಮಾಹಿತಿ ಪಡೆಯಲು ರೂಟ್ ಅಧಿಕಾರಿಗಳನ್ನು/ನೋಡಲ್ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ.
ಜೂನ್ 8ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನದ ಸಮಯ ನಿಗದಿಪಡಿಸಲಾಗಿದೆ. ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಬೇಕು ಎಂದು ಕೋರಿರುವ ಚುನಾವಣಾಧಿಕಾರಿಗಳು ಈ ಚುನಾವಣೆಯಲ್ಲಿ ಮತದಾನವು ಪ್ರಾಶಸ್ತ್ಯ ಮತ ನೀಡುವುದರ ಮೂಲಕ ಮತದಾನ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಪ್ರಥಮ ಪ್ರಶಸ್ತ್ಯ ಮತ ನೀಡುವುದು ಕಡ್ಡಾಯವಾಗಿದೆ. ಮತಗಟ್ಟೆ ಕೇಂದ್ರದಲ್ಲಿ ನೀಡಲಾಗುವ ವೈಲೆಟ್ ಸ್ಕೇಚ್ ಪೇನ್‍ನಿಂದ ಆಯಾ ಅಭ್ಯರ್ಥಿಗಳ ಹೆಸರಿನ ಮುಂದೆ ಅರೆಬಿಕ್/ರೋಮನ್ ಅಥವಾ ಭಾರತ ಸಂವಿಧಾನದ ಅನುಸೂಚಿ-8ರಲ್ಲಿ ನಮೂದಿಸಿರುವ ಭಾಷೆಯ ಅಂಕಿಗಳಿಂದ ತಮ್ಮ ಪ್ರಾಶಸ್ತ್ಯ ಮತವನ್ನು ಗುರುತಿಸಬಹುದಾಗಿದೆ. ಮತ ಚಲಾಯಿಸುವ ಮತದಾರರ ಎಡಗೈ ಉಂಗುರ ಬೆರಳಿಗೆ ಅಳಿಸಲಾಗದ ಶಾಹಿ ಲೇಪಿಸಲಾಗುವುದು.
ಮೊಬೈಲ್ ನಿಷೇಧ: ಮತದಾನ ದಿನದಂದು ಮತಗಟ್ಟೆ ಕೇಂದ್ರದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಚುನಾವಣೆ ನಡೆಯಲಿರುವ ವ್ಯಾಪ್ತಿಯ ಪ್ರದೇಶದಲ್ಲಿ ಜೂನ್ 6ರ ಸಂಜೆ 5 ಗಂಟೆಯಿಂದ 8ರ ಮಧ್ಯರಾತ್ರಿಯವರೆಗೆ ಮದ್ಯಪಾನ ನಿಷೇಧಿಸಿ ಆದೇಶ ಹೊರಡಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈಶಾನ್ಯ ಪದವೀಧರರ ಮತಕ್ಷೇತ್ರ ಚುನಾವಣೆ:
******************************************
ಮತ ಚಲಾಯಿಸಲು ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ
******************************************************
ಕಲಬುರಗಿ,ಜೂ.06.(ಕ.ವಾ.)- ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆಯು ಮತದಾನವು ಜೂನ್ 8ರಂದು ನಡೆಯಲಿದ್ದು, ಚುನಾವಣೆ ಮತಕ್ಷೇತ್ರದಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೇಂದ್ರ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಪದವೀಧರರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಹಾಗೂ ಎಲ್ಲ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಇನ್ನಿತರ ಎಸ್ಟಾಬ್ಲಿಷ್‍ಮೆಂಟ್‍ಗಳಲ್ಲಿ ಖಾಯಂ ಆಗಿ ಹಾಗೂ ದಿನಗೂಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಅರ್ಹ ಮತದಾರರಿಗೆ ಸೀಮಿತವಾದಂತೆ ಮತದಾನ ಮಾಡಲು ಅನುಕೂಲವಾಗುವಂತೆ ಜೂನ್ 8ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಲಾಗಿದೆ ಎಂದು ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ಪಂಕಜಕುಮಾರ ಪಾಂಡೆ ತಿಳಿಸಿದ್ದಾರೆ. \
ಈಶಾನ್ಯ ಪದವೀಧರರ ಮತಕ್ಷೇತ್ರ ಚುನಾವಣೆ:
*****************************************
ಪರ್ಯಾಯ ದಾಖಲಾತಿಗಳಲ್ಲಿ ಒಂದು ತೋರಿಸಿ ಮತ ಚಲಾಯಿಸಿ
********************************************************
ಕಲಬುರಗಿ,ಜೂ.06.(ಕ.ವಾ.)-ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆಯು ಮತದಾನವು ಜೂನ್ 8ರಂದು ನಡೆಯಲಿದ್ದು, ಮತದಾರರು ಮತದಾರರ ಗುರುತಿನ ಚೀಟಿ ಹೊಂದಿಲ್ಲದಿದ್ದರೂ ಚುನಾವಣಾ ಆಯೋಗವು ತಿಳಿಸಿದ ಕೆಳಕಂಡ ಭಾವಚಿತ್ರವಿರುವ ಪರ್ಯಾಯ ಗುರುತಿನ ಚೀಟಿ ದಾಖಲೆಗಳಲ್ಲಿ ಒಂದು ದಾಖಲಾತಿಯನ್ನು ತೋರಿಸಿ ಮತದಾನ ಮಾಡಬಹುದಾಗಿದೆ ಎಂದು ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ಪಂಕಜಕುಮಾರ ಪಾಂಡೆ ತಿಳಿಸಿದ್ದಾರೆ.
ಪರ್ಯಾಯ ದಾಖಲೆಗಳ ವಿವರ ಇಂತಿದೆ. ಆಧಾರ ಕಾರ್ಡ್, ಪಾಸ್‍ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಕೇಂದ್ರ/ ರಾಜ್ಯ ಸರ್ಕಾರದ ಹಾಗೂ ಅರೆ ಸರ್ಕಾರಿ ಮತ್ತು ಸಾರ್ವಜನಿಕ ಸ್ವಾಮ್ಯದ ಪಿಎಸ್‍ಯು/ ಪಬ್ಲಿಕ್ ಲಿಮಿಟೆಡ್ ಕಂಪನಿಗಳು ತಮ್ಮ ಸಿಬ್ಬಂದಿಗೆ ನೀಡಿರುವ ಫೋಟೋ ಗುರುತಿನ ಚೀಟಿಗಳು, ಬ್ಯಾಂಕ್/ ಅಂಚೆ ಕಚೇರಿಯಿಂದ ಭಾವಚಿತ್ರದೊಂದಿಗೆ ನೀಡಲಾಗಿರುವ ಪಾಸ್‍ಬುಕ್ (2018ರ ಮೇ 31ರೊಳಗೆ ಪಡೆದಿರಬೇಕು), ಪ್ಯಾನ್ ಕಾರ್ಡ್, ಎನ್‍ಪಿಆರ್ ಅಡಿ ಆರ್‍ಜಿಐ ನೀಡಿರುವ ಸ್ಮಾರ್ಟ್ ಕಾರ್ಡ್, ಭಾವಚಿತ್ರವಿರುವ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್ (2018ರ ಮೇ 31 ರೊಳಗೆ ಪಡೆದಿರಬೇಕು), ಭಾವಚಿತ್ರವುಳ್ಳ ಪಿಂಚಣಿ ದಾಖಲೆ (2018ರ ಮೇ 31ರೊಳಗೆ ಪಡೆದಿರಬೇಕು), ಭಾವಚಿತ್ರ ಹೊಂದಿರುವ ಸ್ವಾತಂತ್ರ್ಯ ಹೋರಾಟಗಾರರ ಗುರುತಿನ ಚೀಟಿ, ಆಯುಧ ಪರವಾನಿಗೆ ಹೊಂದಿರುವ ಗುರುತಿನ ಚೀಟಿ (2018ರ ಮೇ 31 ರೊಳಗೆ ಪಡೆದಿರಬೇಕು), ವಿಕಲಚೇತನರ ಗುರುತಿನ ಚೀಟಿ (2018ರ ಮೇ 31ರೊಳಗೆ ಪಡೆದಿರಬೇಕು), ಭಾವಚಿತ್ರ ಹೊಂದಿರುವ ಮಾಜಿ ಸೈನಿಕರಿಗೆ ನೀಡಲಾಗುವ ಕ್ಯಾಂಟೀನ್ ಸ್ಮಾರ್ಟ್ ಕಾರ್ಡ್.











ಹೀಗಾಗಿ ಲೇಖನಗಳು NEWS AND PHOTO DATE; 06-06-2018

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE; 06-06-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE; 06-06-2018 ಲಿಂಕ್ ವಿಳಾಸ https://dekalungi.blogspot.com/2018/06/news-and-photo-date-06-06-2018.html

Subscribe to receive free email updates:

0 Response to "NEWS AND PHOTO DATE; 06-06-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ