NEWS AND PHOTO DATE: 12--06--2018

NEWS AND PHOTO DATE: 12--06--2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE: 12--06--2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE: 12--06--2018
ಲಿಂಕ್ : NEWS AND PHOTO DATE: 12--06--2018

ಓದಿ


NEWS AND PHOTO DATE: 12--06--2018

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ
*****************************************************
ಕಲಬುರಗಿ,ಜೂ.12.(ಕ.ವಾ.)-ಅನಕ್ಷರತೆ ಮತ್ತು ಆರ್ಥಿಕ ಸಮಸ್ಯೆಯೆ ದೇಶದಲ್ಲಿನ ಬಾಲಕಾರ್ಮಿಕ ಪದ್ಧತಿಗೆ ಮೂಲ ಕಾರಣವಾಗಿದ್ದು, ಸರ್ಕಾರ ಒದಗಿಸಿರುವ ಹತ್ತು ಹಲವು ಸೌಲಭ್ಯಗಳನ್ನು ವಿವಿಧ ಇಲಾಖೆಗಳು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಮೂಲಕ ಮಕ್ಕಳ ಸರ್ವಾಂಗೀಣ ವಿಕಸನಕ್ಕೆ ಮಾರಕವಾಗಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರು ಕೈಜೋಡಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಪಿ.ಟಿ.ಕಟ್ಟಿಮನಿ ಕರೆ ನೀಡಿದರು.
ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಬಾಲಕಾರ್ಮಿಕ ನಿರ್ಮೂಲನಾ ಹಾಗೂ ಪುನರ್ವಸತಿ ಸಂಘ ಮತ್ತು ಮಕ್ಕಳ ಸಹಾಯವಾಣಿ 1098 ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ” ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಬಾಲಕಾರ್ಮಿಕರಲ್ಲಿ ಶೇ.60-70 ಕುಟುಂಬದೊಂದಿಗೆ ವ್ಯವಸಾಯದಲ್ಲಿ ನಿರತ ಕಾರ್ಮಿಕರೆ ಹೆಚ್ಚಾಗಿದ್ದಾರೆ ಎಂದರು.
ಸಂವಿಧಾನದ ಕಾಯ್ದೆ 21ಎ, 24 ಮತ್ತು 32ರಲ್ಲಿ ಮಕ್ಕಳಿಗೆ ಕಡ್ಡಾಯ ಶಿಕ್ಷಣ, ಆರೋಗ್ಯ ಮತ್ತು ಸಂರಕ್ಷಣೆಯನ್ನು ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಹೀಗಾಗಿ ಪಾಲಕರು ಮಕ್ಕಳನ್ನು ಕೆಲಸಕ್ಕೆ ದೂಡದೆ ಉತ್ತಮ ಶಿಕ್ಷಣ, ಆರೋಗ್ಯ ನೀಡುವುದರ ಮೂಲಕ ಉತ್ತಮ ಪ್ರಜೆಗಳನ್ನು ಮಾಡಿ ಅನಾದಿಕಾಲದಿಂದಲೂ ಬಂದಿರುವ ಜೀತ ಪದ್ಧತಿ, ಬಾಲಕಾರ್ಮಿಕ ಪದ್ಧತಿಗೆ ಇತಿಶ್ರೀ ಹಾಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಜಗತ್ತಿನಲ್ಲಿರುವ ಬಾಲಕಾರ್ಮಿಕರ ಸಂಖ್ಯೆಗಿಂತ ಆಫ್ರಿಕಾ ದೇಶದಲ್ಲಿರುವ ಕಾರ್ಮಿಕರ ಸಂಖ್ಯೆ ಅಧಿಕ ಎಂದು ಅಂಕಿ ಸಂಖ್ಯೆ ತಿಳಿಸುತ್ತವೆ. ಭಾರತದಲ್ಲಿ 1998ರಲ್ಲಿ 12.6 ಮಿಲಿಯನ್ ಮಕ್ಕಳನ್ನು ಬಾಲಕಾರ್ಮಿಕ ಕೆಲಸಕ್ಕೆ ಬಳಸಿಕೊಂಡಿದ್ದರೆ 2009ರಲ್ಲಿ ಇದರ ಸಂಖ್ಯೆ 4.98 ಮಿಲಿಯನ್‍ಗೆ ಇಳಿಕೆಗೊಂಡಿದ್ದು ಸಮಾಧಾನದ ವಿಚಾರ ಎಂದರು.
ಬಾಲ್ಯಾವಸ್ಥೆ ಹಾಗೂ ಕಿಶೋರಾವ್ಯವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1996 ಕುರಿತು ಮಾರ್ಗದರ್ಶಿ ಸಂಸ್ಥೆ ನಿರ್ದೇಶಕ ಆನಂದರಾಜ ವಿಶೇಷ ಉಪನ್ಯಾಸದಲ್ಲಿ ಮಾತನಾಡುತ್ತ, 2016-17ರಲ್ಲಿ ಬಾಲಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಹದಿಹರೆಯರ ಬಾಲಕಾರ್ಮಿಕ ಕಾಯ್ದೆಯಾಗಿ ಮಾರ್ಪಾಡು ಮಾಡಲಾಗಿದೆ. ತಿದ್ದುಪಡಿ ಕಾಯ್ದೆಯಲ್ಲಿ ಅಪಾಯಕಾರಿವಲ್ಲದ ಕ್ಷೇತ್ರದಲಿ ಕುಟುಂಬದೊಂದಿಗೆ ಶಾಲೆ ವೇಳೆ ಹೊರತುಪಡಿಸಿ ಹಾಗೂ ರಜಾ ದಿನ ಸಂದರ್ಭದಲ್ಲಿ ಮಕ್ಕಳು ಕೆಲಸ ಮಾಡಲು ಅವಕಾಶ ನೀಡಲಾಗಿದೆ. ಅಲ್ಲದೆ ಅಪಾಯಕಾರಿ ಕ್ಷೇತ್ರದಲ್ಲಿ ಕಾಯ್ದೆಗೆ ವಿರುದ್ಧವಾಗಿ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಂಡಲ್ಲಿ ಅಂತಹ ಮಾಲೀಕರ ವಿರುದ್ಧ ನ್ಯಾಯಾಲಯದಲ್ಲಿ ಮೊಕದಮ್ಮೆ ಹೂಡಿ 25-50 ಸಾವಿರ ರೂ. ದಂಡ ಮತ್ತು 6 ತಿಂಗಳ ಶಿಕ್ಷೆ ನೀಡಲು ಸಹ ಕಾಯ್ದೆಯಲ್ಲಿ ತಿಳಿಸಲಾಗಿದೆ ಎಂದರು.
ಕಲಬುರಗಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಎಂ.ಎನ್.ದೇವರಾಜು ಪ್ರಾಸ್ತಾವಿಕವಾಗಿ ಮಾತನಾಡಿ ಕಲಬುರಗಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಇಲಾಖೆಯು ಅನೇಕ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದ ಅವರು 2005-06 ರಿಂದ 2016-17ರ ವರೆಗೆ ವಿವಿದೆಡೆ ದಾಳಿ ಮಾಡಿ 4353 ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಿ ಅವರಿಗೆ ಮುಖ್ಯ ವಾಹಿನಿಗೆ ತರಲಾಗಿದೆ. 2017-18ರಲ್ಲಿ ಅಪಾಯಕಾರಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 43 ಮಕ್ಕಳನ್ನು ರಕ್ಷಿಸಿ ಬಾಲಕಾರ್ಮಿಕ ಶಾಲೆಗೆ ಸೇರಿಸಿದಲ್ಲದೆ ಕೆಲಸಕ್ಕೆ ಇಟ್ಟುಕೊಂಡು 43 ಮಾಲೀಕರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ಹೂಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೀನಾ ರಷ್ಮೀ ಡಿಸೋಜಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿ. ರವಿಂದ್ರ, ಕಲಬುರಗಿ ಕಟ್ಟಡ ಕೇಂದ್ರ ವಲಯದ ಕಟ್ಟಡ ಕಾರ್ಮಿಕರ ಜಿಲ್ಲಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯ ಶಂಕರ ಕಟ್ಟಿಸಂಗಾವಿ, ಜಿಲ್ಲಾ ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯರುಗಳಾದ ಸುರೇಶ ಬಡಿಗೇರ, ಶಿವಕುಮಾರ ರೇಷ್ಮಿ, ಚೈಲ್ಡ್‍ಲೈನ್ ನೋಡಲ್ ಕೇಂದ್ರದ ನಿರ್ದೇಶಕ ಡಾ. ಲಿಂಗರಾಜ ಕೋಣಿನ್, ಡಾನ್ ಬಾಸ್ಕೊ ಸಂಸ್ಥೆಯ ಫಾದರ ಸಜಿತ್, ಸಮಾಜ ಪರಿವರ್ತನಾ ಸಂಸ್ಥೆಯ ಸಂಚಾಲಕ ವಿಠ್ಠಲ ಚಿಕಣಿ ಸೇರಿದಂತೆ ಕಾರ್ಮಿಕ ಇಲಾಖೆಯ ಹಿರಿಯ-ಕಿರಿಯ ಅಧಿಕಾರಿಗಳು, ಸ್ವಯಂ ಸೇವಾ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು. ಆಶಾ ಹೆಗಡೆ ನಿರೂಪಿಸಿದರೆ ಎನ್.ಸಿ.ಎಲ್.ಪಿ. ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ವಂದಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಪಿ.ಟಿ.ಕಟ್ಟಿಮನಿ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ಬಾಲಕಾರ್ಮಿಕ ಮಕ್ಕಳಿಗೆ ಸನ್ಮಾನ ಮಾಡಲಾಯಿತು. ಸಂದೀಪ ನಿರ್ದೇಶನದ “ಮುಗ್ಧ ಕೈಗಳು” ಎಂಬ ಕಿರುಚಿತ್ರ ಪ್ರಸಾರ ಮಾಡಲಾಯಿತು.
ಇದಕ್ಕು ಮುನ್ನ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಹಮ್ಮಿಕೊಳ್ಳಲಾದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಜಾಥಾಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಮತ್ತು ಡಿಡಿಪಿಐ ಶಾಂತಗೌಡ ಪಾಟೀಲ ಚಾಲನೆ ನೀಡಿದರು.
ಜೂನ್ 14ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
*********************************************
ಕಲಬುರಗಿ,ಜೂ.12.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಕಾರ್ಯ ಮತ್ತು ಪಾಲನೆ ವೃತ್ತದ ವ್ಯಾಪ್ತಿಯಲ್ಲಿ ಕೆಳಕಂಡ ಜೆಸ್ಕಾಂ ಉಪವಿಭಾಗದ ಕಚೇರಿಗಳಲ್ಲಿ ಜೂನ್ 14ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಇಂಜಿನಿಯರರು ತಿಳಿಸಿದ್ದಾರೆ.
ಜೂನ್ 14ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಆಳಂದ ಜೆಸ್ಕಾಂ ಉಪವಿಭಾಗದ ಕಚೇರಿಯಲ್ಲಿ ಹಾಗೂ ಅಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಕಡಗಂಚಿ ಜೆಸ್ಕಾಂ ಉಪವಿಭಾಗದ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆÉ ಏರ್ಪಡಿಸಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
********************************
ಕಲಬುರಗಿ,ಜೂ.12.(ಕ.ವಾ.)-ಕನ್ನಡ ಪುಸ್ತಕ ಪ್ರಾಧಿಕಾರವು ದಲಿತ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ 35,000ರೂ.ಗಳ ಪ್ರೋತ್ಸಾಹ ಧನ ನೀಡುವ ಯೋಜನೆ ರೂಪಿಸಿದೆ. ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣಪತ್ರದೊಂದಿಗೆ ಎ4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಠ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾಗಿ ಸಲ್ಲಿಸುವ ಹಸ್ತಪ್ರತಿಯು ಸಾಹಿತ್ಯ, ಮಾನವಿಕ, ವಿಜ್ಞಾನ ವಿಚಾರ ಸಾಹಿತ್ಯ ಹಾಗೂ ಇತರ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬಂಧಿಸಿದ್ದಾಗಿದ್ದು, ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಳಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ.
ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೇ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ ಅಥವಾ ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತುಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಅರ್ಜಿಯನ್ನು ಜೂನ್ 30 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002 ಇವರಿಗೆ ಸಲ್ಲಿಬೇಕು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿ ದೂರವಾಣಿ ಸಂಖ್ಯೆ 080-22484516/22017704 ಅಥವಾ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ@gmಚಿiಟ.ಛಿom ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಿದೆ.
ಪ್ರೌಢಶಾಲೆಗಳಲ್ಲಿ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸುವ ಯೋಜನೆ: ಅರ್ಜಿ ಆಹ್ವಾನ
***********************************************************************
ಕಲಬುರಗಿ,ಜೂ.12.(ಕ.ವಾ.)-ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ “ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಅಥವಾ ರಸಪ್ರಶ್ನೆ ಕಾರ್ಯಕ್ರಮ” ಏರ್ಪಡಿಸುವ ಕುರಿತು ಯೋಜನೆ ಹಮ್ಮಿಕೊಂಡಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಈ ಯೋಜನೆಗಳಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢ ಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ “ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆಯ ಒಂದು ಕಾರ್ಯಕ್ರಮ” ಏರ್ಪಡಿಸಬಹುದಾಗಿದೆ. ಈ ಕಾರ್ಯಕ್ರಮ ಏರ್ಪಡಿಸಲು ಪ್ರಾಧಿಕಾರವು 5000 ರೂ.ಗಳ ಗರಿಷ್ಠ ಮಿತಿಯೊಳಗೆ ವಾಸ್ತವಿಕ ವೆಚ್ಚ ಭರಿಸಲಿದೆ. ತಮ್ಮ ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು ಇತ್ಯಾದಿ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಭರ್ತಿ ಮಾಡಿದ ಅರ್ಜಿಯನ್ನು ಜೂನ್ 30 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ಇವರಿಗೆ ಸಲ್ಲಿಬೇಕು. ಕಾರ್ಯಕ್ರಮ ನಡೆಸುವ ಮೊದಲು ಪ್ರಾಧಿಕಾರದಿಂದ ಪೂರ್ವಾನುಮೋದನೆ ಪಡೆಯುವುದು ಕಡ್ಡಾಯವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಹಾಗೂ ಕಚೇರಿ ದೂರವಾಣಿ ಸಂಖ್ಯೆ 080-22484516/22017704 ಅಥವಾ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ@gmಚಿiಟ.ಛಿom ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಿದೆ.
ಜೂನ್ 14 ಹಾಗೂ 25ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
********************************************************
ಕಲಬುರಗಿ,ಜೂ.12.(ಕ.ವಾ.)-ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ ಎಲ್ಲ ಉಪವಿಭಾಗಗಳಲ್ಲಿ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕುಂದುಕೊರತೆಗಳ ಬಗೆಹರಿಸಲು ಜೂನ್ 14 ಹಾಗೂ 25ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-1ರ ಕಾರ್ಯನಿರ್ವಾಹಕ ಇಂಜಿನಿಯರರು ತಿಳಿಸಿದ್ದಾರೆ.
ಜೂನ್ 14ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಆಳಂದ ಉಪವಿಭಾಗದಲ್ಲಿ, ಅಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಕಡಗಂಚಿ ಉಪವಿಭಾಗದಲ್ಲಿ, ಜೂನ್ 25ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಅಫಜಲಪುರ ಉಪವಿಭಾಗದಲ್ಲಿ, ಅಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಎಗ ಗ್ರಾಮೀಣ ಉಪವಿಭಾಗದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ-ಯಾದಗಿರಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ
ಕಲಬುರಗಿ,ಜೂ.12.(ಕ.ವಾ.)-ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದಿಂದ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ವಿಜ್ಞಾನ ಅಧಿಕಾರಿಗಳು ತಿಳಿಸಿದ್ದಾರೆ.
ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮದಲ್ಲಿ 8 ರಿಂದ 10 ನೇ ತರಗತಿಗಳಲ್ಲಿ ಓದುತ್ತಿರುವ ಕನ್ನಡ ಮತ್ತು ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಪ್ರತಿಶಾಲೆಯಿಂದ 3 ವಿದ್ಯಾರ್ಥಿಗಳನ್ನೊಳಗೊಂಡ ಒಂದು ತಂಡವನ್ನು ರಚಿಸಿ ತಂಡದ ಹೆಸರನ್ನು ಜಿಲ್ಲಾ ವಿಜ್ಞಾನ ಕೇಂದ್ರಕ್ಕೆ ಜೂನ್ 25ರೊಳಗಾಗಿ ಸಲ್ಲಿಸಬೇಕು.
ಜೂನ್ 28ರಂದು ಬೆಳಿಗ್ಗೆ 11 ಗಂಟೆಗೆ ರಸಪ್ರಶ್ನೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ. ನಂತರ ಪ್ರಥಮ ಸುತ್ತಿನ ಲಿಖಿತ ರಸಪ್ರಶ್ನೆ ಕಾರ್ಯಕ್ರಮ ಜರುಗಲಿದೆ. ಈ ಲಿಖಿತ ರಸಪ್ರಶ್ನೆಯ ಮೂಲಕ ಅತ್ಯುತ್ತಮ ತಂಡಗಳನ್ನು ಕ್ವಾರ್ಟರ್ ಫೈನಲ್ ರಸಪ್ರಶ್ನೆ ಕಾರ್ಯಕ್ರಮಕ್ಕೆ ಆಯ್ಕೆಮಾಡಲಾಗುವುದು. ಆಯ್ಕೆಯಾದ ತಂಡಗಳಿಗೆ 2018ರ ಜುಲೈ ದಿಂದ 2019ರ ಜನವರಿ ವರೆಗೆ ವಿವಿಧ ಹಂತಗಳಲ್ಲಿ ರಸಪ್ರಶ್ನೆ ನಡೆಸಲಾಗುವುದು. ಹೆಚ್ಛಿನ ಮಾಹಿತಿಗಾಗಿ ಜಿಲ್ಲಾ ವಿಜ್ಞಾನ ಕೇಂದ್ರವನ್ನು ಹಾಗೂ ದೂರವಾಣಿ ಸಂಖ್ಯೆ 08472-270608ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಜೂನ್ 18ರಂದು ಕಲಬುರಗಿ ತಾಲೂಕು ಪಂಚಾಯಿತಿ ಕೆ.ಡಿ.ಪಿ. ಸಭೆ
*********************************************************
ಕಲಬುರಗಿ,ಜೂ.12.(ಕ.ವಾ.)-ಕಲಬುರಗಿ ತಾಲೂಕು ಪಂಚಾಯಿತಿ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯು ಜೂನ್ 18ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಅವರ ಅಧ್ಯಕ್ಷತೆ ಜರುಗಲಿದೆ. ಈ ಸಭೆಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅನುಷ್ಠಾನಾಧಿಕಾರಿಗಳು ತಪ್ಪದೇ ಹಾಜರಾಗಬೇಕೆಂದು ಕಲಬುರಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









ಹೀಗಾಗಿ ಲೇಖನಗಳು NEWS AND PHOTO DATE: 12--06--2018

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 12--06--2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 12--06--2018 ಲಿಂಕ್ ವಿಳಾಸ https://dekalungi.blogspot.com/2018/06/news-and-photo-date-12-06-2018.html

Subscribe to receive free email updates:

0 Response to "NEWS AND PHOTO DATE: 12--06--2018"

ಕಾಮೆಂಟ್‌‌ ಪೋಸ್ಟ್‌ ಮಾಡಿ