News and photo Date: 18-6-2018

News and photo Date: 18-6-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo Date: 18-6-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo Date: 18-6-2018
ಲಿಂಕ್ : News and photo Date: 18-6-2018

ಓದಿ


News and photo Date: 18-6-2018

ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ
****************************************************
ಕಲಬುರಗಿ,ಜೂ.18.(ಕ.ವಾ.)-ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಆಯುಷ್ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಜೂನ್ 21ರಂದು ಬೆಳಗಿನ 7 ಗಂಟೆಗೆ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಾಲ್ಕನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಯೋಗ ದಿನಾಚರಣೆ ಪೂರ್ವಭಾವಿಯಾಗಿ ಜೂನ್ 19ರಂದು ಬೆಳಗಿನ 8.30 ಗಂಟೆಗೆ ಕಲಬುರಗಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಯೋಗ ನಡಿಗೆ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ಅಧಿಕಾರಿಗಳು, ನೌಕರರು ಯೋಗ ನಡಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಲಬುರಗಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ನಾಗರತ್ನ ಚಿಮ್ಮಲಗಿ ಅವರು ತಿಳಿಸಿದ್ದಾರೆ.
ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಲು ಮುಂದಾಗಿ
**************************************************
ಕಲಬುರಗಿ ಜೂನ್.18: ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಲು ಮುಂದಾಗಬೇಕೆಂದು ಗೃಹ ರಕ್ಷಕ ದಳದ ಕಮಾಂಡೆಂಟ್ ಸಂತೋಷ ಪಾಟೀಲ ಕರೆ ನೀಡಿದರು.
ಅವರು ರವಿವಾರ ಗೃಹ ರಕ್ಷಕ ದಳದ ಕಚೇರಿಯಲ್ಲಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಮತ್ತು ಜಿಲ್ಲಾ ಗೃಹ ರಕ್ಷಕ ದಳದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವುದರ ಮೂಲಕ ಜನರ ಜೀವ ಉಳಿಸಲು ಮುಂದಾಗಬೇಕು. ದೇಶದಲ್ಲಿ ರಕ್ತದ ಕೊರತೆ ಇದ್ದು, ಈ ದಿಸೆಯಲ್ಲಿ ರೆಡ್‍ಕ್ರಾಸ್ ಸಂಸ್ಥೆ ಒಳ್ಳೆಯ ಕೆಲಸ ಮಾಡುತ್ತಿದೆ. ಜಿಲ್ಲಾ ಶಾಖೆಗೆ ಎಲ್ಲರೂ ಸಹಕಾರ ನೀಡುವುದರ ಮೂಲಕ ಎಲ್ಲರೂ ಸಹಾಯ ಮಾಡಬೇಕೆಂದು ತಿಳಿದರು.
ವಿಶೇಷ ಉಪನ್ಯಾಸ ನೀಡಿದ ಡಾ. ಶರಣಬಸಪ್ಪ ಗಣಜಲಖೇಡ ಅವರು ರಕ್ತದಾನದಿಂದ ಹೃದಯಾಘಾತ, ಪಾಶ್ರ್ವವಾಯು ಆಘಾತಗಳನ್ನು ತಡೆಯಬಹುದು. ಕೊಬ್ಬಿನಾಂಶ ಮತ್ತು ದೇಹದ ತೂಕ ಕಡಿಮೆಯಾಗುವದು. ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಕೆಲವು ಕ್ಯಾನ್ಸರ್‍ಗಳನ್ನು ಕೂಡ ತಡೆಯಬಹುದಾಗಿದೆ. ಪುರುಷರು ವರ್ಷಕ್ಕೆ 4 ಸಲ, ಮಹಿಳೆಯರು ವರ್ಷಕ್ಕೆ 3 ಸಲ ರಕ್ತದಾನ ಮಾಡಬಹುದು. ಇದರಿಂದ ರಕ್ತದಾನಿಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ ಒಂದು ಬಾಟಲ್ ರಕ್ತದಿಂದ 4 ಜನರ ಜೀವವನ್ನು ಉಳಿಸಬಹುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ. ಶರಣಪ್ಪ ಗಿರಿ, ಉಪ ಕಮಾಂಡೆಂಟ ಮಲ್ಲಪ್ಪ, ಅರುಣಕುಮಾರ ಲೋಯಾ, ಭಾಗ್ಯಲಕ್ಷ್ಮಿ ಎಂ, ವಿ.ಎನ್. ಚಿತ್ತಾರಿ, ನಾಗಣ್ಣ ಗಣಜಲಖೇಡ, ಧನರಾಜ ಭಾಸಗಿ ಮತ್ತಿತರರು ಪಾಲ್ಗೊಂಡಿದ್ದರು. ಈ ಶಿಬಿರದಲ್ಲಿ ಒಟ್ಟು 34 ಜನ ಗೃಹ ರಕ್ಷಕ ದಳದ ಸಿಬ್ಬಂದಿ ರಕ್ತದಾನ ಮಾಡಿದರು. ಬಸವೇಶ್ವರ ಆಸ್ಪತ್ರೆ ರಕ್ತನಿಧಿ ಸಿಬ್ಬಂದಿ ರಕ್ತ ಪಡೆದುಕೊಂಡರು.
ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆಯ ಚೇರಮನ್‍ರಾದ ಅಪ್ಪಾರಾವ ಅಕ್ಕೋಣೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ರೆಡ್‍ಕ್ರಾಸ್ ಕಾರ್ಯದರ್ಶಿ ರವೀಂದ್ರ ಶಾಬಾದಿ ಸ್ವಾಗತಿಸಿದರು. ಚಂದ್ರಕಾಂತ ವಂದಿಸಿದರು. ಸಿದ್ರಾಮಪ್ಪ ಬಮನಾಳಕರ ಕಾರ್ಯಕ್ರಮ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಹೆಚ್ಚು ಬಾರಿ ರಕ್ತದಾನ ಮಾಡಿದ ಪ್ರವೀಣ ನಾಯಕ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಹೆಚ್ಚು ಬಾರಿ ರಕ್ತದಾನ ಮಾಡಿದ ಪ್ರವೀಣ ನಾಯಕ ರಕ್ತದಾನದ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ
************************************************
ಕಲಬುರಗಿ,ಜೂ.18.(ಕ.ವಾ.)-ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ 1ನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾದಲ್ಲಿ ವ್ಯಾಸಂಗ ಮಾಡುತ್ತಿರುವ ಮಿಲಟರಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ 2018-19ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸಕ್ತ 2018-19ನೇ ಸಾಲಿನಿಂದ ಶಿಷ್ಯ ವೇತನವು ಮಾಜಿ ಸೈನಿಕರ ಬ್ಯಾಂಕ್ ಖಾತೆಗೆ ಜಮಾ ಆಗಲಿದ್ದು, ಕಡ್ಡಾಯವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್.ಬಿ.ಐ.) ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಪಾಲಕರ ಹಾಗೂ ವಿದ್ಯಾರ್ಥಿಗಳ ಆಧಾಡ ಕಾರ್ಡ್‍ನ್ನು ಕಡ್ಡಾಯವಾಗಿ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಹೊಸದಾಗಿ ಸಿದ್ದಪಡಿಸಲಾಗಿದ್ದು, ಹೊಸದಾಗಿ ಸಿದ್ದಪಡಿಸಲಾದ ನಮೂನೆಯಲ್ಲಿಯೆ ಅರ್ಜಿ ಸಲ್ಲಿಸಬೇಕು. ಹಳೇ ನಮೂನೆಗಳಲ್ಲಿ ಸಲ್ಲಿಸಿದ ಅರ್ಜಿ ಅಂಗಿಕರಿಸಲಾಗುವುದಿಲ್ಲ.
ಕಲಬುರಗಿ, ಬೀದರ, ರಾಯಚೂರ ಮತ್ತು ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳು ಶಿಷ್ಯ ವೇತನದ ಹೊಸ ಅರ್ಜಿ ನಮೂನೆಗಳನ್ನು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರ ಕಾರ್ಯಾಲಯದಿಂದ ಉಚಿತವಾಗಿ 2018ರ ಜುಲೈ 1 ರಿಂದ ಪಡೆದು, ಭರ್ತಿ ಮಾಡಿ ಶಿಷ್ಯವೇತನ ಅರ್ಜಿಗಳನ್ನು 2018ರ ಸೆಪ್ಟೆಂಬರ್ 30ರೊಳಗೆ ಇದೇ ಕಾರ್ಯಾಲಯದಲ್ಲಿ ಖುದ್ದಾಗಿ ಬಂದು ಸಲ್ಲಿಸಬೇಕು.
ಪದವಿ ಪೂರ್ವದಲ್ಲಿ ಕೃಷಿ, ತಾಂತ್ರಿಕ, ಪಾಲಿಟೆಕ್ನಿಕ್, ವೈದ್ಯಕೀಯ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಹಿಂದಿನ ವರ್ಷ ತೇರ್ಗಡೆಯಾದ ಬಗ್ಗೆ ಅಂಕಪಟ್ಟಿಗಳನ್ನು ಲಗತ್ತಿಸಬೇಕು. ಅಪೂರ್ಣ ಮತ್ತು ನಿಗದಿತ ನಮೂನೆಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಸೂಚನೆ ನೀಡದೆ ತಿರಸ್ಕರಿಸಲಾಗುವುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಪೂರ್ವ ತರಬೇತಿ ಶಿಬಿರ
*****************************
ಕಲಬುರಗಿ,ಜೂ.18.(ಕ.ವಾ.)-ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಪೋಲಿಸ್ ಸಬ್‍ಇನ್ಸ್‍ಪೆಕ್ಟರ್ ಹಾಗೂ ಪೋಲಿಸ್ ಪೇದೆಗಳ ನೇರ ನೇಮಕಾತಿ ಸಂಬಂಧಿಸಿದಂತೆ ನುರಿತ ಉಪನ್ಯಾಸಕರಿಂದ 2018ರ ಜೂನ್ 18 ರಿಂದ 27ರವರೆಗೆ ಪ್ರತಿದಿನ ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ ನಗರದ ಎಂ.ಎಸ್.ಕೆ.ಮಿಲ್ ರಸ್ತೆಯ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ತರಬೇತಿ ನೀಡಲಾಗುತ್ತಿದೆ. ಅರ್ಹ ಯುವಕ, ಯುವತಿಯರು ಈ ತರಬೇತಿ ಶಿಬಿರದ ಸದುಪಯೋಗ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-274846ನ್ನು ಸಂಪರ್ಕಿಸಲು ಕೋರಲಾಗಿದೆ.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*********************************************************************
ಕಲಬುರಗಿ,ಜೂ.18.(ಕ.ವಾ.)-ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಲಬುರಗಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಸತಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಕಲಬುರಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯ ಆಳಂದ, ಅಫಜಲಪುರ ಹಾಗೂ ಕಲಬುರಗಿ ವಸತಿ ನಿಲಯಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ. ಶೇ. 75ರಷ್ಟು ಸ್ಥಾನಗಳನ್ನು ಮುಸ್ಲೀಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಹಾಗೂ ಶೇ. 25ರಷ್ಟು ಸ್ಥಾನಗಳನ್ನು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಿರಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಆಯಾ ವಸತಿ ನಿಲಯಗಳಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಜುಲೈ 15ರೊಳಗೆ ಸಲ್ಲಿಸಬೇಕು. ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರಥಮಾದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಆಳಂದ, ಅಫಜಲಪುರ ಹಾಗೂ ಆಳಂದ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯಗಳನ್ನು ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವಕರ್ಮ ಸಮುದಾಯದವರಿಂದ ವಿವಿಧ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
******************************************************************
ಕಲಬುರಗಿ,ಜೂ.18.(ಕ.ವಾ.)-ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳು ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶದ ದಿನಾಂಕ:30-03-2002ರನ್ವಯ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು. ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿದಾರರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕಲ್ಲದೇ ಒಂದೇ ಕಡೆ ಹೊಂದಿಕೊಂಡಿರುವಂತೆ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು.
ರಾಜ್ಯ ಸರ್ಕಾರದ ಯೋಜನೆಗಳ ವಿವರ: ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ, ಕಮ್ಮಾರಿಕೆ, ಅಕ್ಕಸಾಲಿ ಮತ್ತು ಬಡಗಿ ಉದ್ಯಮಿಗಳಿಗೆ ತರಬೇತಿ ಮತ್ತು ಸಾಲ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಎನ್.ಬಿ.ಸಿ.ಎಫ್.ಡಿ.ಸಿ. ಯೋಜನೆಗಳ ವಿವರ: ಅವಧಿ ಸಾಲ ಯೋಜನೆಗಳು-ಕೃಷಿ ವಲಯ, ಸಣ್ಣ ವ್ಯಾಪಾರ, ಸೇವವಲಯ, ಸಾರಿಗೆ ವಲಯ, ಶೈಕ್ಷಣಿಕ ಸಾಲ ಯೋಜನೆ-(ಅ) ಭಾರತದಲ್ಲಿ (ಆ) ವಿದೇಶದಲ್ಲಿ, ನ್ಯೂ ಸ್ವರ್ಣಿಮಾ ಸಾಲ (ಮಹಿಳಾ ಯೋಜನೆ), ಶಿಲ್ಪಸಂಪದ, ಸಕ್ಷಮ ಸಾಲ, ಮೈಕ್ರೋ ಫೈನಾನ್ಸ್, ಕೃಷಿಸಂಪದ, ಮಹಿಳಾ ಸಮೃದ್ಧಿ ಯೋಜನೆ (ಮಹಿಳಾ ಸ್ವಸಹಾಯ ಗುಂಪುಗಳಿಗೆ ಮತ್ತು ವೈಯಕ್ತಿಕ ಸಾಲ) ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಸಾಲಸೌಲಭ್ಯ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಮೂರನೇ ಮಹಡಿ, ಕೊಠಡಿ ಸಂಖ್ಯೆ 22, ವಿಕಾಸ ಭವನ (ಮಿನಿ ವಿಧಾನಸೌಧ) ಬೆಂಗಳೂರು ಹಾಗೂ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಜುಲೈ 16ರೊಳಗೆ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜುಲೈ 25ರೊಳಗೆ ಸಲ್ಲಿಸಬೇಕು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಸಹಾಯಕ ಪ್ರಧಾನ ವ್ಯವಸ್ಥಾಪಕರ ಕಚೇರಿ, ಮತ್ತು ಕೇಂದ್ರ ಕಚೇರಿಯಲ್ಲಿ ಸಂಪರ್ಕಿಸಬಹುದಾಗಿದೆ ಅಥವಾ ನಿಗಮದ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಞvಛಿಜಛಿಟ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.


ಹೀಗಾಗಿ ಲೇಖನಗಳು News and photo Date: 18-6-2018

ಎಲ್ಲಾ ಲೇಖನಗಳು ಆಗಿದೆ News and photo Date: 18-6-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 18-6-2018 ಲಿಂಕ್ ವಿಳಾಸ https://dekalungi.blogspot.com/2018/06/news-and-photo-date-18-6-2018.html

Subscribe to receive free email updates:

0 Response to "News and photo Date: 18-6-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ