News and photo Date: 19-6-2018

News and photo Date: 19-6-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo Date: 19-6-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo Date: 19-6-2018
ಲಿಂಕ್ : News and photo Date: 19-6-2018

ಓದಿ


News and photo Date: 19-6-2018

ಜಿ.ಪಂ. ಅಧ್ಯಕ್ಷರಿಂದ ಯೋಗ ನಡಿಗೆ ಚಾಲನೆ
***************************************
ಕಲಬುರಗಿ,ಜೂ.19.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ ಅವರು ಮಂಗಳವಾರ ಜಗತ್ ವೃತ್ತದಲ್ಲಿ ಯೋಗ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಆಯುಷ್ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಕಲಬುರಗಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಯೋಗ ನಡಿಗೆ ಹಮ್ಮಿಕೊಳ್ಳಲಾಗಿತ್ತು. ಯೋಗ ನಡಿಗೆಯಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿದ್ಯಾಲಯ, ರೋಟರಿ ಕ್ಲಬ್, ಪತಂಜಲಿ ಯೋಗ ಸಮಿತಿಯ ಜಿಲ್ಲಾ ಘಟಕ, ಟಿಪ್ಪು ಸುಲ್ತಾನ ಯೂನಾನಿ ಮೆಡಿಕಲ್ ಕಾಲೇಜು, ಹಿಂಗುಲಾಂಬಿಕಾ ಆಯುರ್ವೇದಿಕ ಮೆಡಿಕಲ್ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಕಲಬುರಗಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ನಾಗರತ್ನ ಚಿಮ್ಮಲಗಿ ಈ ಸಂದರ್ಭದಲ್ಲಿ ಮಾತನಾಡಿ, ಯೋಗವು ಭಾರತೀಯ ಸಂಸ್ಕøತಿಯ ಅತಮೂಲ್ಯ ಕೊಡುಗೆಯಾಗಿದೆ. ಯೋಗದಿಂದ ದೇಹಕ್ಕೆ ಸ್ಫೂರ್ತಿ, ಚೇತನ ಸಿಗುತ್ತದೆ. ದೇಹವನ್ನು ಆರೋಗ್ಯ ಮತ್ತು ಸದೃಢವಾಗಿರಿಸಲು ಯೋಗ ಅತೀ ಮುಖ್ಯವಾಗಿದೆ. ದಿನಂಪ್ರತಿ ಯೋಗ ಮಾಡುವುದರಿಂದ ಶಾರೀರಿಕ, ಭೌತಿಕ, ಮಾನಸಿಕವಾಗಿ ಸುಸ್ಥಿತಿಯಲ್ಲಿ ಇರಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಬ್ರಹ್ಮಕುಮಾರಿ ವಲಯ ಮುಖ್ಯಸ್ಥೆ ರಾಜಯೋಗಿನಿ ಬಿ.ಕೆ. ವಿಜಯಾ ದಿದಿ, ಹಿಂಗುಲಾಂಬಿಕಾ ಆಯುರ್ವೇದಿಕ ಮೆಡಿಕಲ್ ಕಾಲೇಜಿನ ಡಾ. ವಿಜಯಲಕ್ಷ್ಮೀ ಮತ್ತಿತರರು ಪಾಲ್ಗೊಂಡಿದ್ದರು.
ಜೂನ್ 21ರಂದು ಬೆಳಗಿನ 7 ಗಂಟೆಗೆ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಾಲ್ಕನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ಅಧಿಕಾರಿಗಳು, ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ.
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ: ನಿಷೇಧಾಜ್ಞೆ
******************************************
ಕಲಬುರಗಿ,ಜೂ.19.(ಕ.ವಾ.)-ಕಲಬುರಗಿ ಜಿಲ್ಲೆಯಾದ್ಯಂತ ಇದೇ ಜೂನ್ 21 ರಿಂದ 28ರವರೆಗೆ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಳು ಒಟ್ಟು 48 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪ್ರಯುಕ್ತ 1973ರ ಸಿಆರ್.ಪಿ.ಸಿ. ಕಲಂ 144ರ ಅನ್ವಯ ಸದರಿ ದಿನಗಳಂದು ಕಲಬುರಗಿ ಜಿಲ್ಲೆಯಲ್ಲಿನ ಎಲ್ಲ 48 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಮಯದಲ್ಲಿ ಸಂಬಂಧಪಟ್ಟ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿಗಳು ಸದರಿ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಅದೇ ರೀತಿ ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ-35(ಸಿ)ರಡಿ ಈ 48 ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಎಲ್ಲ ಜಿರಾಕ್ಸ್, ಪುಸ್ತಕ ಅಂಗಡಿ ಮುಂತಾದವನ್ನು ಮುಚ್ಚುವಂತೆ ಆದೇಶಿಸಿದ್ದಾರೆ. ಪರೀಕ್ಷಾ ಸಮಯದಲ್ಲಿ ಸಂಬಂಧಪಟ್ಟ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಬೇರೇ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಯಾವುದೇ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್ ಹಾಗೂ ವೈರಲೇಸ್ ಸೆಟ್‍ಗಳು ಸೇರಿದಂತೆ ಇತರ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಿದ್ದಾರೆ.
ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ
*********************************
ಕಲಬುರಗಿ,ಜೂ.19.(ಕ.ವಾ.)-ಕಲಬುರಗಿ ನಗರದ ಬ್ರಹ್ಮಪುರ ಬಡಾವಣೆಯ ಶ್ರೀ ಅನಂತಶಯನ ದೇವಸ್ಥಾನವು (ಕರ್ನಾಟಕ ರಾಜ್ಯಪತ್ರ ನಂ. ಆರ್‍ಡಿ 87 ಎಂಯುಎಎಬಿಐ 2012, ಬೆಂಗಳೂರು ದಿನಾಂಕ: 29-09-2012ರಲ್ಲಿ ಪುಟ ಸಂಖ್ಯೆ 348 ಕ್ರಮ ಸಂಖ್ಯೆ 40) ಅಧಿಸೂಚಿತ ಸಂಸ್ಥೆಗಳ ಪಟ್ಟಿಯಿಂದ ಕೈಬಿಡುವ ಕುರಿತು ಸಾರ್ವಜನಿಕರಿಂದ ಸಲಹೆ, ಸೂಚನೆ ಹಾಗೂ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕರಿಂದ ಈ ಕುರಿತು ಏನಾದರೂ ಸಲಹೆ, ಸೂಚನೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ಈ ಪತ್ರಿಕಾ ಪ್ರಕಟಣೆ ಪ್ರಕಟಗೊಂಡ ದಿನಾಂಕದಿಂದ 15 ದಿನದೊಳಗಾಗಿ ಲಿಖಿತವಾಗಿ ಕಲಬುರಗಿಯ (ವಿಕಾಸ ಭವನ) ಮಿನಿ ವಿಧಾನಸೌಧದಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಜೂನ್ 20 ರಿಂದ 23ರವರೆಗೆ ಲಾರ್ವಾ ಸಮೀಕ್ಷೆ
****************************************************
ಕಲಬುರಗಿ,ಜೂ.19.(ಕ.ವಾ.)-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಡೆಂಗ್ಯೂ ಮತ್ತು ಚಿಕುನ್‍ಗುನ್ಯಾ ರೋಗಗಳ ನಿಯಂತ್ರಣ ಮತ್ತು ಮುಂಜಾಗೃತಾ ಹಾಗೂ ಸ್ವಚ್ಛತಾ ಆಂದೋಲನದ ಅಂಗವಾಗಿ ಕಲಬುರಗಿ ಜಿಲ್ಲೆಯಲ್ಲಿ ಇದೇ ಜೂನ್ 20 ರಿಂದ 23ರವರೆಗೆ ಲಾರ್ವಾ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಲಾರ್ವಾ ಸಮೀಕ್ಷೆಗಾಗಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮಹಾನಗರ ಪಾಲಿಕೆ ಪೌರ ಕಾರ್ಮಿಕರು ಮನೆ ಮನೆಗೆ ಭೇಟಿ ನೀಡಲಿದ್ದು, ಈ ಸಮೀಕ್ಷೆ ಸಂದರ್ಭದಲ್ಲಿ ಸಾರ್ವಜನಿಕರು ಮನೆಯಲ್ಲಿರುವ ನೀರಿನ ತಾಣಗಳನ್ನು ತೋರಿಸಿ ಸಹಕರಿಸಬೇಕು.
ಸಾರ್ವಜನಿಕರು ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸಬೇಕಲ್ಲದೇ ಮನೆಯಲ್ಲಿರುವ ನೀರಿನ ಸಂಗ್ರಹ ಮಾಡುವ ಡ್ರಮ್, ಬ್ಯಾರಲ್, ನೀರಿನ ಕೇಲುಗಳು, ತೊಟ್ಟಿಗಳು ವಾರಕ್ಕೊಮ್ಮೆ ಖಾಲಿ ಮಾಡಿ ಚೆನ್ನಾಗಿ ತಿಕ್ಕಿ ತೊಳೆದು ಒಣಗಿಸಿ ನೀರು ತುಂಬಿ ಭದ್ರವಾಗಿ ಮುಚ್ಚಬೇಕು. ತ್ಯಾಜ್ಯ ವಸ್ತುಗಳಾದ ಟೈರು, ಟೆಂಗಿನ ಚಿಪ್ಪು, ಒಡೆದ ಬಕೆಟ್ ಪ್ಲಾಸ್ಟಿಕ್ ವಸ್ತುಗಳನ್ನು ಒಳ್ಳೆಯ ರೀತಿಯಿಂದ ವಿಲೇವಾರಿ ಮಾಡಿ ಸಾರ್ವಜನಿಕರು ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.
ಜೂನ್ 21ರಂದು ಮಹಿಳಾ ನಿಲಯದ ನಿವಾಸಿಗೆ ಕಂಕಣಬಲ
***************************************************
ಕಲಬುರಗಿ,ಜೂ.19.(ಕ.ವಾ.)-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದ ಕಲಬುರಗಿ ನಗರದ ಆಳಂದ ರಸ್ತೆಯಲ್ಲಿರುವ ರಾಜ್ಯ ಮಹಿಳಾ ನಿಲಯದ ನಿವಾಸಿ ಶಬಾನಾಗೆ ಕಂಕಣಬಲ ಕೂಡಿ ಬಂದಿದೆ. ಶಬಾನಾ ವಿವಾಹವು ಬೀದರ ಜಿಲ್ಲೆಯ ಮನ್ನಳ್ಳಿಯ ವಿಮಲಾಬಾಯಿ ವಿನಾಯಕರಾವ ಸಾವಜಿ ಅವರ ಪುತ್ರ ವಿಕ್ರಮ ಅವರೊಂದಿಗೆ ಇದೇ ಜೂನ್ 21ರಂದು ಮಧ್ಯಾಹ್ನ 12-35 ನಿಮಿಷಕ್ಕೆ ಕಲಬುರಗಿ ನಗರದ ಆಳಂದ ಕಾಲೋನಿಯ ರಾಜ್ಯ ಮಹಿಳಾ ನಿಲಯದಲ್ಲಿ ನಡೆಯಲಿದೆ ಎಂದು ನಿಲಯದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾನೂನು ಪದವಿಧರರಿಗೆ ನ್ಯಾಯಾಧೀಕರಣ
**************************************
ಆಡಳಿತದ ವೃತ್ತಿ ತರಬೇತಿ: ಅರ್ಜಿ ಆಹ್ವಾನ
************************************
ಕಲಬುರಗಿ,ಜೂ.19.(ಕ.ವಾ.)-ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿನ ಕಾನೂನು ಪದವಿಧರರಿಗೆ ಆಡಳಿತ ನ್ಯಾಯಾಧೀಕರಣ ಆಡಳಿತ ವೃತ್ತಿ ತರಬೇತಿಗಾಗಿ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ಜನಾಂಗದ ಕಲಬುರಗಿ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ರೂ. ಮಿತಿಯೊಳಗಿರಬೇಕು. ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಆದಾಯ ಮಿತಿ ಇರುವುದಿಲ್ಲ. ತರಬೇತಿ ಅವಧಿಯು 4 ವರ್ಷಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ತಲಾ 4000 ರೂ.ಗಳ ತರಬೇತಿ ಭತ್ಯೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ವಯಸ್ಸು 30 ವರ್ಷ ಮೀರಿರಬಾರದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಎರಡು ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ಹೆಸರನ್ನು ನೋಂದಾಯಿಸಿರಬೇಕು.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ 2018ರ ಜುಲೈ 20ರೊಳಗಾಗಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯಾಲಯದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಸಲ್ಲಿಸಬೇಕು. ಅಪೂರ್ಣವಾದ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-247260ನ್ನು ಸಂಪರ್ಕಿಸಲು ಕೋರಿದೆ.
ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
********************************************************
ಕಲಬುರಗಿ,ಜೂ.19.(ಕ.ವಾ.)-ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಯಲ್ಲಿ 15ನೇ ತಂಡದ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಗ್ರಂಥಾಲಯ ತರಬೇತಿ ಶಾಲೆಯ ಉಪನಿರ್ದೇಶಕರು ಹಾಗೂ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇ. 40 ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕನಿಷ್ಠ ಶೇ. 35ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು. ಅರ್ಹ ಅಭ್ಯರ್ಥಿಗಳು ಅರ್ಜಿ ಶುಲ್ಕ 20 ರೂ.ಪಾವತಿಸಿ ಪ್ರವೇಶ ಅರ್ಜಿಯನ್ನು ಖುದ್ದಾಗಿ ಪಡೆಯಬೇಕು.
ಭರ್ತಿ ಮಾಡಿದ ಅರ್ಜಿಯನ್ನು ಉಪನಿರ್ದೇಶಕರು, ನಗರ ಕೇಂದ್ರ ಗ್ರಂಥಾಲಯ ಜಗತ್, ಕಲಬುರಗಿ ಇವರಿಗೆ ಜುಲೈ 18ರ ಸಾಯಂಕಾಲ 5 ಗಂಟೆಯೊಳಗಾಗಿ ಸಲ್ಲಿಸಬೇಕು. ಷರತ್ತು, ಅರ್ಹತೆ, ವಯೋಮಿತಿ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-221543ನ್ನು ಸಂಪರ್ಕಿಸಲು ಕೋರಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ: ಸಾಲ ಮಂಜೂರಾತಿಗಾಗಿ ಅರ್ಜಿ ಆಹ್ವಾನ
********************************************************************
ಕಲಬುರಗಿ,ಜೂ.19.(ಕ.ವಾ.)-ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿಗೆ ಅರಿವು/ಶೈಕ್ಷಣಿಕ ಸಾಲ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪ್ರವೇಶ ಪಡೆದು ವಿವಿಧ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಸಾಲ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ (ಹಿಂದುಳಿದ ವರ್ಗಗಳ ಪಟ್ಟಿಯಲ್ಲಿನ ಪ್ರವರ್ಗ-1ರ ಕ್ರಮ ಸಂಖ್ಯೆ 53ಎ ಯಿಂದ “ವಿ” ರವರೆಗಿನ ಜಾತಿಗಳಿಗೆ) ವಿದ್ಯಾರ್ಥಿಗಳ ವ್ಯಾಸಂಗ, ಕೋರ್ಸಿನ ವಾಸ್ತವಿಕ ವೆಚ್ಚ ಅಥವಾ ವಾರ್ಷಿಕ ಗರಿಷ್ಠ 1 ಲಕ್ಷ ರೂ.ಗಳನ್ನು ಶೇ.2ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ. ವಿದ್ಯಾರ್ಥಿಗಳು ಸಿ.ಇ.ಟಿ. ಮೂಲಕ ಅಥವಾ ಮೆರಿಟ್ ಆಧಾರದ ಮೇಲೆ ಸೀಟು ಪಡೆದು ಈ ಕೆಳಕಂಡ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಬೇಕು.
ಬಿ.ಇ., ಎಂ.ಬಿ.ಬಿ.ಎಸ್., ಬಿ.ಯೂ.ಎಂ.ಎಸ್., ಬಿ.ಡಿ.ಎಸ್., ಬಿ.ಎ.ಎಂ.ಎಸ್., ಬಿ.ಹೆಚ್.ಎಂ.ಎಸ್., ಎಂ.ಬಿ.ಎ., ಎಂ.ಟೆಕ್., ಎಂ.ಇ., ಎಂ.ಡಿ., ಪಿಹೆಚ್.ಡಿ., ಬಿ.ಸಿ.ಎ./ಎಂ.ಸಿ.ಎ., ಎಂ.ಎಸ್.ಆಗ್ರ್ರಿಕಲ್ಚರ್, ಬಿ.ಎಸ್‍ಸಿ. ನರ್ಸಿಂಗ್, ಬಿ.ಪಾರಂ/ ಎಂ.ಫಾರಂ, ಬಿ.ಎಸ್‍ಸಿ. ಪ್ಯಾರಾ ಮೆಡಿಕಲ್, ಬಿ.ಎಸ್‍ಸಿ. ಬಯೋ ಟೆಕ್ನಾಲಜಿ, ಬಿ.ಟೆಕ್, ಬಿ.ಪಿ.ಟಿ., ಬಿ.ವಿ.ಎಸ್.ಸಿ/ಎಂ.ವಿ.ಎಸ್.ಸಿ., ಬಿ.ಎನ್.ಎಂ., ಬಿ.ಹೆಚ್.ಎಮ್., ಎಂ.ಡಿ.ಎಸ್., ಎಂ.ಎಸ್.ಡಬ್ಲ್ಯೂ, ಎಲ್.ಎಲ್.ಎಂ., ಎಂ.ಎಫ್.ಎ., ಎಂ.ಎಸ್‍ಸಿ., ಬಯೋಟೆಕ್ನಾಲಜಿ ಮತ್ತು ಎಂ.ಎಸ್‍ಸಿ.ಎಜಿ.
ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನವು 3.50 ಲಕ್ಷ ರೂ.ಗಳ ಮಿತಿಯೊಳಗಿರಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಕೋಣೆ ಸಂಖ್ಯೆ: 22, 3ನೇ ಮಹಡಿ, ವಿಕಾಸ ಭವನ, ಮಿನಿ ವಿಧಾನ ಸೌಧ ಕಲಬುರಗಿ ಕಚೇರಿಯನ್ನು ಸಂಪರ್ಕಿಸಬೇಕು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಅಪೂರ್ಣ ಮಾಹಿತಿಯ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಂದೂವರೆ ತಿಂಗಳಲ್ಲಿ ವಿಮಾನ ಹಾರಾಟ ಸಾಧ್ಯ
******************************************
ಕಲಬುರಗಿ,ಜೂ.19.(ಕ.ವಾ.)-ಮುಂದಿನ ಒಂದೂವರೆ ತಿಂಗಳುಗಳಲ್ಲಿ ವಿಮಾನ ನಿಲ್ದಾಣ ಸಂಪೂರ್ಣವಾಗಿ ಕಾರ್ಯನಿರ್ವಹಿಸುವಂತೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.
ಅವರು ಮಂಗಳವಾರ ಶ್ರೀನಿವಾಸ ಸರಡಗಿ ಹತ್ತಿರದ ಗುಲಬರ್ಗಾ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಮಾತನಾಡಿ, ವಿಮಾನ ನಿಲ್ದಾಣದ 3.25 ಕಿ.ಮೀ. ರನವೇ ಕಾಮಗಾರಿ ಸಂಪೂರ್ಣವಾಗಿ ಪೂರ್ಣಗೊಂಡಿದೆ. ಇದಕ್ಕೆ ಮಾರ್ಕಿಂಗ್ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ವಿಮಾನ ನಿಲ್ದಾಣದ ಜೀವಾಳವೆಂದೇ ಭಾವಿಸಲಾಗಿರುವ ಎಟಿಸಿ ಕಟ್ಟಡ, ಫೈರ್ ಸ್ಟೇಶನ್ ಹಾಗೂ ಟರ್ಮಿನಲ್ ಬಿಲ್ಡಿಂಗ್ ನಿರ್ಮಾಣ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ರನ್‍ವೇ ಕಾಮಗಾರಿ ಹಾಗೂ ಕಂಪೌಂಡ ಗೋಡೆ ಸಂಪೂರ್ಣವಾಗಿ ನಿರ್ಮಿಸಿದಲ್ಲಿ ರಾಜ್ಯ ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಿಂದ ಯಾವುದೇ ಸಮಯದಲ್ಲಿ ಪ್ರಾಯೋಗಿಕವಾಗಿ ವಿಮಾನ ಹಾರಾಟ ನಡೆಸಲು ಸಿದ್ಧರಿದ್ದು, ಆದಷ್ಟು ಬೇಗ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ವಿಮಾನ ನಿಲ್ದಾಣ ಕಾಮಗಾರಿಯ ಮೊತ್ತವನ್ನು ಪರಿಷ್ಕøತ 175 ಕೋಟಿ ರೂ.ಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ. ಇದಕ್ಕೆ ಅನುಗುಣವಾಗಿ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪಾಲನ್ನು ನೀಡಲಾಗುವುದು. ಈಗಾಗಲೇ ವಿಮಾನ ನಿಲ್ದಾಣ ಕಾಮಗಾರಿಗೆ 92 ಕೋಟಿ ರೂ.ಗಳನ್ನು ಪಾವತಿಸಲಾಗಿದ್ದು, ಹಣಕಾಸಿನ ಯಾವುದೇ ತೊಂದರೆ ಇರುವುದಿಲ್ಲ. ಒಂದು ತಿಂಗಳ ಕಾಲಾವಧಿಯಲ್ಲಿ ವಿಮಾನ ನಿಲ್ದಾಣದ ಉಳಿದ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಹೇಳಿದರು.
ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಜೀಜುದ್ದೀನ್ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ:
********************************
ವಿಮಾ ಕಂತು ಪಾವತಿಗೆ ಜೂನ್ 30 ಕೊನೆಯ ದಿನ
*********************************************
ಕಲಬುರಗಿ,ಜೂ.19.(ಕ.ವಾ.)-ಪ್ರಸಕ್ತ 2018-19ನೇ ಸಾಲಿನ ಮುಂಗಾರು ಹಂಗಾಮಿಗಾಗಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆವಿಮಾ ಯೋಜನೆಯನ್ನು ಜಿಲ್ಲೆಯ ರೈತರಿಗೆ ಸರ್ಕಾರ ಘೋಷಿಸಿದೆ. ಕಲಬುರಗಿ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ತೋಟಗಾರಿಕಾ ಬೆಳೆಗಳಾದ ಪಪ್ಪಾಯ ಮತ್ತು ಹಸಿರು ಮೆಣಸಿನಕಾಯಿ (ನೀರಾವರಿ) ಬೆಳೆಗಳನ್ನು ಈ ಯೋಜನೆಯ ವಿಮೆ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಹಸಿರು ಮೆಣಸಿನಕಾಯಿ (ನೀರಾವರಿ) ಬೆಳೆಗೆ 3550ರೂ. ಹಾಗೂ ಪಪ್ಪಾಯಿ ಬೆಳೆಗೆ 6700 ರೂ.ಗಳನ್ನು ಪ್ರತಿ ಹೆಕ್ಟೇರಿಗೆ ರೈತರು ತಮ್ಮ ವಿಮೆ ಕಂತಿನ ಮೊತ್ತವನ್ನು ಪಾವತಿಸಬೇಕು. ಸಾಲ ಪಡೆದ ಮತ್ತು ಸಾಲ ಪಡೆಯದ ರೈತರು ವಿಮಾ ಕಂತನ್ನು ಪಾವತಿಸಲು 2018ರ ಜೂನ್ 30 ಕೊನೆಯ ದಿನವಾಗಿದೆ.
ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ ಆದ್ಯತೆ ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೇಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸಿರುವ ಅಂಶಗಳ ಆಧಾರದ ಮೇಲೆ ಬೆಳೆ ವಿಮಾ ನಷ್ಟವನ್ನು ತೀರ್ಮಾನಿಸಲಾಗುವುದು.
ಎಲ್ಲ ರೈತರು ಇದರ ಸದುಪಯೋಗ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ತಮ್ಮ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ, ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್‍ಗಳ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಉಪನಿರ್ದೇಶಕರ ಹುದ್ದೆ ಭರ್ತಿ: ಮಾಜಿ ಸೇನಾಧಿಕಾರಿಗಳ ಮಾಹಿತಿ ಸಂಗ್ರಹ
******************************************************************
ಕಲಬುರಗಿ,ಜೂ.19.(ಕ.ವಾ.)-ಕರ್ನಾಟಕ ರಾಜ್ಯ ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಯಲ್ಲಿ ಖಾಲಿಯಿರುವ 5 ಉಪನಿರ್ದೇಶಕರ ಬ್ಯಾಕ್‍ಲಾಗ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಬಾಕಿಯಿದ್ದು, ಇದರಲ್ಲಿ ವಿಭಾಗೀಯ ಕಚೇರಿ ಕಲಬುರಗಿ ಉಪನಿರ್ದೇಶಕ (ಒಂದು ಹುದ್ದೆ) ಖಾಲಿಯಿದ್ದು ಈ ಹುದ್ದೆಯ ನೇಮಕಾತಿಗೆ ವಿಭಾಗದ ಜಿಲ್ಲೆಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಇಲಾಖೆಯ ಕಲಬುರಗಿ ಉಪನಿರ್ದೇಶಕರ ಕಚೇರಿಯ ಪ್ರಕಟಣೆ ತಿಳಿಸಿದೆ.
ಒಟ್ಟು 5 ಹುದ್ದೆಗಳಲ್ಲಿ 4 ಹುದ್ದೆ ಪರಿಶಿಷ್ಠ ಜಾತಿಗೆ ಮತ್ತು 1 ಹುದ್ದೆ ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿರುತ್ತದೆ. ಕಲಬುರಗಿ ವಿಭಾಗದ ಒಂದು ಹುದ್ದೆಗಾಗಿ ಸಶಸ್ತ್ರ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯ (ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್/ ಮೇಜರ್ ಆಗಿ ಅಥವಾ ಸರಿಸಮಾನ ಹುದ್ದೆಗಳಲ್ಲಿ ನೇವಿ ಮತ್ತು ಏರ್‍ಫೋರ್ಸ್‍ನಲ್ಲಿ) ಸೇವೆ ಸಲ್ಲಿಸಿ ನಿವೃತ್ತರಾದ ಗರಿಷ್ಠ 52 ವರ್ಷ ವಯೋಮಾನದ ಅರ್ಹ ಮಾಜಿ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ನಂ.58 ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ರಸ್ತೆ, ಬೆಂಗಳೂರು-560025 ಇವರಿಗೆ 2018ರ ಜೂನ್ 20ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸೈನಿಕ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08472-225003ನ್ನು ಸಂಪರ್ಕಿಸಲು ಕೋರಲಾಗಿದೆ.
ಜೂನ್ 21ರಂದು ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆಯಿಂದ ವಿಶ್ವ ಯೋಗ ದಿನಾಚರಣೆ
*****************************************************************
ಕಲಬುರಗಿ,ಜೂ.19.(ಕ.ವಾ.)-ಕಲಬುರಗಿ ಜಿಲ್ಲಾ ಶಾಖೆ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯಿಂದ ವಿಶ್ವ ಯೋಗ ದಿನಾಚರಣೆಯನ್ನು ಇದೇ ಜೂನ್ 21ರಂದು ಬೆಳಿಗ್ಗೆ 7.30 ಗಂಟೆಗೆ ಕಲಬುರಗಿ ಕುಸನೂರ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಪ್ರಾದೇಶಿಕ ಕೇಂದ್ರದಲ್ಲಿ ಏರ್ಪಡಿಸಲಾಗಿದೆ.
ಯೋಗ ಪರಿಣಿತ ಸುಭಾಷ ಎಚ್. ಹಾಗೂ ನಿವೃತ್ತ ಇಂಜಿನಿಯರ್ ಪತಂಗೆ ಅವರುಗಳು ಯೋಗ ಪ್ರದರ್ಶನದ ನೇತೃತ್ವ ವಹಿಸಲಿದ್ದಾರೆ ಎಂದು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*********************************************************
ಕಲಬುರಗಿ,ಜೂ.19.(ಕ.ವಾ.)-ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಕಾರ್ಯನಿರ್ವಹಿಸುತ್ತಿರುವ ಕಲಬುರಗಿ ದರಿಯಾಪುರ ಮಹಾದೇವಪ್ಪ ರಾಂಪೂರೆ ಜಗತ್ ಬಡಾವಣೆಯಲ್ಲಿರುವ (ಕನ್ನಡ ಮಾಧ್ಯಮ) ಮೊರಾರ್ಜಿ ದೇಸಾಯಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪ್ರತಿಭಾನ್ವಿತ ಬಾಲಕಿಯರ ವಸತಿ ಪ್ರೌಢಶಾಲೆಯಲ್ಲಿ 9ನೇ ತರಗತಿಯ ಪ್ರವೇಶಕ್ಕಾಗಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೊರಾರ್ಜಿ ದೇಸಾಯಿ ಪ.ಜಾ/ಪ.ಪಂ. ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಪ್ರಸಕ್ತ 2018-19ನೇ ಸಾಲಿನಲ್ಲಿ 9 ತರಗತಿಯಲ್ಲಿ ಓದುತ್ತಿರುವ ಸಾಮಾನ್ಯ ವರ್ಗ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ಬಾಲಕಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತಿಯುಳ್ಳ ವಿದ್ಯಾರ್ಥಿನಿಯರು ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಕಲಬುರಗಿ ಜಗತ್‍ನಲ್ಲಿರುವ ಮೊರಾರ್ಜಿ ದೇಸಾಯಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರತಿಭಾನ್ವಿತ ಬಾಲಕಿಯರ (ಕನ್ನಡ ಮಾಧ್ಯಮ) ವಸತಿ ಪ್ರೌಢಶಾಲೆಯ ಪ್ರಾಂಶುಪಾಲಕರಿಗೆ ಅರ್ಜಿಯನ್ನು ಜೂನ್ 26ರೊಳಗೆ ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ವಸತಿ ನಿಲಯ ಹಾಗೂ ಮೊಬೈಲ್ ಸಂಖ್ಯೆ 9986969088, 9945434428, 9901360670ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಜೂನ್ 20ರಂದು ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆ ತರಬೇತಿ
*****************************************************************
ಕಲಬುರಗಿ,ಜೂ.19.(ಕ.ವಾ.)-ಕಲಬುರಗಿ ಜಿಲ್ಲಾ ಶಾಖೆಯ ರೆಡ್‍ಕ್ರಾಸ್ ಸಂಸ್ಥೆಯಿಂದ ಜೂನ್ 20 ರಂದು ಬೆಳಿಗ್ಗೆ 10 ರಿಂದ ಸಂಜೆಯವರೆಗೆ ಕಲಬುರಗಿ ನಗರದಲ್ಲಿರುವ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ (ಎಂ.ಪಿ.ಎಚ್.ಎಸ್.) ದಲ್ಲಿ ಪ್ರಥಮ ಚಿಕಿತ್ಸೆ ತರಬೇತಿಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ಅವರು ತಿಳಿಸಿದ್ದಾರೆ.
ಈ ಶಿಬಿರವನ್ನು ನುರಿತ ತರಬೇತಿದಾರರಿಂದ ನಡೆಸಲಾಗುತ್ತಿದ್ದು, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಸಭಾಪತಿ ಅಪ್ಪಾರಾವ ಅಕ್ಕೋಣೆ ಶಿಬಿರದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಆಸಕ್ತರು ಇದರ ಸದುಪಯೋಗಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.







ಹೀಗಾಗಿ ಲೇಖನಗಳು News and photo Date: 19-6-2018

ಎಲ್ಲಾ ಲೇಖನಗಳು ಆಗಿದೆ News and photo Date: 19-6-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 19-6-2018 ಲಿಂಕ್ ವಿಳಾಸ https://dekalungi.blogspot.com/2018/06/news-and-photo-date-19-6-2018.html

Subscribe to receive free email updates:

0 Response to "News and photo Date: 19-6-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ