ಶೀರ್ಷಿಕೆ : News and photo Date: 26-6-2018
ಲಿಂಕ್ : News and photo Date: 26-6-2018
News and photo Date: 26-6-2018
ಮಾದಕ ವಸ್ತುಗಳ ದಾಸರು ಪ್ರಾಣಿಗಳಿಗೆ ಸಮ
*****************************************
ಕಲಬುರಗಿ,ಜೂ.26.(ಕ.ವಾ.)-ಮಾದಕ ವಸ್ತುಗಳ ಸೇವನೆಯಿಂದ ಕ್ಷಣಿಕ ಸುಖ ಪ್ರಾಪ್ತವಾಗುತ್ತದೆ. ಇವುಗಳನ್ನು ಪದೇ ಪದೇ ಸೇವಿಸಿ ಮಾದಕ ವಸ್ತುಗಳ ದಾಸರಾದಲ್ಲಿ ನಾಗರಿಕ ಸಮಾಜದಲ್ಲಿ ಪ್ರಾಣಿಗಳಂತೆ ವರ್ತಿಸಬೇಕಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಹೇಳಿದರು.
ಅವರು ಮಂಗಳವಾರ ಕಲಬುರಗಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಹಯೋಗದೊಂದಿಗೆ ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಣೆ ಅಂತರರಾಷ್ಟ್ರೀಯ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತಿ ಹಳೇ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಾದಕ ವಸ್ತುಗಳ ಬಳಕೆಯಿಂದ ಧನ, ಮಾನ ಹಾಗೂ ಪ್ರಾಣ ಹಾನಿ ಉಂಟಾಗುತ್ತದೆ. ಅಲ್ಲದೇ ಸಮಾಜದಿಂದ ತಿರಸ್ಕರಿಸಲ್ಪಡುತ್ತಾರೆ. ಯುವ ಜನಾಂಗ ಹೆಚ್ಚಾಗಿ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಯುವ ಮನಸ್ಸು ಮಾದಕ ವಸ್ತುಗಳತ್ತ ಸೆಳೆಯುತ್ತದೆ. ಅದನ್ನು ನಿಗ್ರಹಿಸಿ ಮಾದಕ ವ್ಯಸನಿಗಳಾಗದಂತೆ ಎಚ್ಚರಿಕೆ ವಹಿಸಬೇಕು. ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಸಂವಿಧಾನದಡಿ ಹಲವಾರು ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಕೃಷಿ ಕ್ಷೇತ್ರದಲ್ಲಿ ಗಾಂಜಾ, ಅಫೀಮು ದೊಡ್ಡ ಪ್ರಮಾಣದಲ್ಲಿ ಬೆಳೆಯದಂತೆ ಕಾನೂನು ರೂಪಿಸಲಾಗಿದೆ ಎಂದರು.
ಜಿಮ್ಸ್ ಮನೋವೈದ್ಯ ಡಾ. ಚಂದ್ರಶೇಖರ ಹುಡೇದ್ ಉಪನ್ಯಾಸ ನೀಡಿ, ಪಾಲಕರು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು ಮಕ್ಕಳ ಬೆಳವಣಿಗೆಯ ಮೇಲೆ ನಿಗಾವಹಿಸಬೇಕು. ಮಕ್ಕಳಲ್ಲಿ ಯಾವುದಾದರೂ ಬದಲಾವಣೆ ಕಂಡು ಬಂದಲ್ಲಿ ಅದನ್ನು ಕೂಲಂಕುಷವಾಗಿ ಪರಿಶೀಲಿಸಿ ಮಕ್ಕಳಿಗಿರುವ ತೊಂದರೆಗಳನ್ನು ನಿವಾರಿಸಬೇಕು. ಮಕ್ಕಳೊಂದಿಗೆ ಒಳ್ಳೆಯ ಬಾಂಧವ್ಯ ಬೆಳೆಸಿಕೊಂಡು ಅವರ ತೊಂದರೆಗಳನ್ನು ಆಲಿಸಿ ಮಕ್ಕಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ತಿಳಿ ಹೇಳಬೇಕು ಎಂದರು.
ಶೇ. 20ರಷ್ಟು ಮಾನಸಿಕ ರೋಗಿಗಳು ಮಾದಕ ವಸ್ತುಗಳ ವ್ಯಸನಿಗಳಾಗಿರುತ್ತಾರೆ. ತಂಬಾಕು, ಮದ್ಯ ಮಾರುಕಟ್ಟೆಗಳಲ್ಲಿ ಹೇರಳವಾಗಿ ದೊರೆಯುವುದರಿಂದ ಯುವಕರು ಹಾಗೂ ಮಹಿಳೆಯರು ತಂಬಾಕು ಮತ್ತು ಮದ್ಯದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಗಾಂಜಾ, ಹೇರಾಯಿನ್, ಎಂಫಿಟಾಮೈನ್ ಎಂಬ ಮಾದಕ ವಸ್ತುಗಳನ್ನು ಸಹ ಯುವಜನತೆ ಹೇರಳವಾಗಿ ಬಳಸುತ್ತಾರೆ. ಯುವಕರು ಒಮ್ಮೆ ಮಾದಕ ವಸ್ತುಗಳ ಬಳಕೆಯ ಚಟಕ್ಕೆ ಬಲಿಯಾದರೆ ಅವರ ಭವಿಷ್ಯ ಅಂಧಕಾರಕ್ಕೆ ಒಳಗಾಗುತ್ತದೆ ಎಂದರು ಹೇಳಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಶರಣಬಸಪ್ಪ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ತಂಬಾಕು ಉತ್ಪನ್ನಗಳನ್ನು ಸಹ ಮಾದಕ ವಸ್ತುಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಮಾದಕ ವಸ್ತುಗಳಿಗೆ ದಾಸರಾದವರು ಅವುಗಳಿಂದ ಹೊರ ಬರಲು ಕಷ್ಟಸಾಧ್ಯ. ಮಾದಕ ವಸ್ತುಗಳಿಗೆ ಬಲಿಯಾದವರನ್ನು ಸಮಾಲೋಚಿಸಿ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ವ್ಯಸಕಮುಕ್ತರನ್ನಾಗಿಸಲು ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಸನಮುಕ್ತ ಕೇಂದ್ರವು ಕಾರ್ಯನಿರ್ವಹಿಸುತ್ತಿದೆ. ಇದರ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು.
ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಡಾ. ಬಾಲಚಂದ್ರ ಜೋಶಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಕೆ. ಪಾಟೀಲ, ಡಾ|| ರಾಜೇಂದ್ರ ಭಾಲ್ಕೆ, ವಿಜಯಲಕ್ಷ್ಮೀ ವಲ್ಲಾಪುರೆ ಮತ್ತಿತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಮಾದಕ ವಸ್ತು ಬಳಸದಂತೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಇದಕ್ಕೂ ಮುನ್ನ ದಿನಾಚರಣೆ ಅಂಗವಾಗಿ ಜಾಥಾ ಏರ್ಪಡಿಸಲಾಗಿತ್ತು.

ಗಾಂಧಿ ಜಯಂತಿಗೆ ಜಿಲ್ಲೆಯನ್ನು ಬಯಲು ಶೌಚಮುಕ್ತವನ್ನಾಗಿಸಲು ಪ್ರಯತ್ನ
****************************************************************
ಕಲಬುರಗಿ,ಜೂ.26.(ಕ.ವಾ.)-ಪ್ರಸಕ್ತ ವರ್ಷದ ಗಾಂಧಿ ಜಯಂತಿಯಂದು ಕಲಬುರಗಿ ಜಿಲ್ಲೆಯನ್ನು ಬಯಲು ಶೌಚಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಪ್ರಯತ್ನಿಸಲಾಗುತ್ತಿದ್ದು, ಜಿಲ್ಲಾ ಪಂಚಾಯಿತಿಯೊಂದಿಗೆ ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
2012ರಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಸಮೀಕ್ಷೆಯ ಪ್ರಕಾರ 240384 ಕುಟುಂಬಗಳಿದ್ದು, ಪ್ರತಿ ಕುಟುಂಬಕ್ಕೆ ಶೌಚಾಲಯ ನಿರ್ಮಿಸಲು ಗುರಿ ಹೊಂದಲಾಗಿತ್ತು. ಈವರೆಗೆ ಒಟ್ಟು 138737 ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇನ್ನುಳಿದ 101647 ಶೌಚಾಲಯಗಳನ್ನು ನವೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಶೌಚಾಲಯ ನಿರ್ಮಾಣದಲ್ಲಿ ಚುರುಕು ತರಲು ಪ್ರತಿ 7 ರಿಂದ 8 ಗ್ರಾಮ ಪಂಚಾಯಿತಿಗಳಿಗೆ ಓರ್ವ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿ ಎಂದು ನೇಮಿಸಲಾಗಿದೆ. ಈ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಉಳಿದ ಶೌಚಾಲಯಗಳ ನಿರ್ಮಾಣಕ್ಕೆ ಪ್ರೇರೇಪಿಸುವ ಕಾರ್ಯ ಮಾಡುವಂತೆ ನಿರ್ದೇಶನ ನೀಡಲಾಗಿದೆ.
ಪ್ರಸಕ್ತ ವರ್ಷದಲ್ಲಿ 101647 ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 2306 ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಈವರೆಗೆ 34 ಗ್ರಾಮ ಪಂಚಾಯಿತಿ ವ್ಯಾಪ್ತಿಯ 209 ಹಳ್ಳಿಗಳನ್ನು ಬಯಲು ಶೌಚಮುಕ್ತ ಹಳ್ಳಿಗಳೆಂದು ಘೋಷಿಸಲಾಗಿದೆ. ಮುಂಬರುವ ಜುಲೈ ಅಂತ್ಯದೊಳಗಾಗಿ ಇನ್ನು 374 ಗ್ರಾಮಗಳನ್ನು ಬಯಲು ಶೌಚಮುಕ್ತ ಗ್ರಾಮಗಳೆಂದು ಘೋಷಿಸಲಾಗುವುದು.
ಜಿಲ್ಲೆಯ ಕಲಬುರಗಿ, ಅಫಜಲಪುರ ಮತ್ತು ಸೇಡಂ ತಾಲೂಕುಗಳಲ್ಲಿ ತಲಾ ಕೇವಲ 10,000 ಕುಟುಂಬಗಳಿಗೆ ಶೌಚಾಲಯ ನಿರ್ಮಿಸಬೇಕಾಗಿದೆ. ಆದರೆ ಆಳಂದ ತಾಲೂಕಿನಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ತುಂಬಾ ಮಂದಗತಿಯಲ್ಲಿದ್ದು, ಶೌಚಾಲಯವಿಲ್ಲದ ಕುಟುಂಬಗಳು ಹೆಚ್ಚಿವೆ. ಕಳೆದ ವರ್ಷ ರಾಜ್ಯದಲ್ಲೇ ಮಾದರಿಯಾದ ಕೂಸು ಮತ್ತು ಸಿರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅತೀ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಲಾಗಿತ್ತು.
ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳು, ಅಂಗಡಿ ಮಾಲೀಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಗರ್ಭಿಣಿಯರು ಹಾಗೂ ಶಾಲಾ ಶಿಕ್ಷಕರ ಸಹಭಾಗಿತ್ವದಲ್ಲಿ ಈ ವರ್ಷ ಶೌಚಾಲಯ ನಿರ್ಮಿಸಲಾಗುತ್ತಿದೆ. ಮುಂದಿನ 15 ದಿನದೊಳಗಾಗಿ ಪ್ರತಿ ಗ್ರಾಮದಲ್ಲಿ ಕನಿಷ್ಠ 50 ಶೌಚಾಲಯಗಳನ್ನು ನಿರ್ಮಿಸುವ ಗುರಿ ನೀಡಲಾಗಿದೆ. ಜಿಲ್ಲೆಯ 248 ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣ ಕ್ಲಿಷ್ಟಕರವಾಗಿದೆ. ಈ ಗ್ರಾಮಗಳಿಗೆ ಹೆಚ್ಚಿನ ಒತ್ತು ನೀಡಿ ಆಗಷ್ಟ್ 15ರೊಳಗಾಗಿ ಶೌಚಾಲಯ ನಿರ್ಮಾಣ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಲೋಕಾಯುಕ್ತ ಅಧೀಕ್ಷಕರಿಂದ ಪರಿಶೀಲನೆ
************************************
ಕಲಬುರಗಿ,ಜೂ.26.(ಕ.ವಾ.)-ಕಲಬುರಗಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಸವರಾಜ ಬಿ. ಕಡಕೋಳ ಹಾಗೂ ಪೊಲೀಸ್ ನಿರೀಕ್ಷಕ ಶಿವಾನಂದ ಗಾಣಿಗೇರ ಅವರು ಜೂನ್ 25 ರಂದು ಶಹಾಬಾದ ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ನಂತರ ಶಹಾಬಾದ ಸರ್ಕಾರಿ ಕನ್ನಡ ಮತ್ತು ಉರ್ದು ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಮವಸ್ತ್ರದ ಬಟ್ಟೆ ಮತ್ತು ಪುಸ್ತಕಗಳನ್ನು ವಿತರಿಸಿದ ಬಗ್ಗೆ, ಬಿಸಿಯೂಟ ಮತ್ತು ಬಿಸಿಯೂಟದ ಕುರಿತು ನಿರ್ವಹಿಸಲಾದ ಸ್ಟಾಕ್ ರಿಜಿಸ್ಟರ್, ಶೌಚಾಲಯದ ವ್ಯವಸ್ಥೆ, ಗ್ರಂಥಾಲಯ, ಆಟೋಪಕರಣಗಳ ಕುರಿತು ಚಿತ್ತಾಪೂರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಅವರ ಸಮಕ್ಷಮ ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹೊಲಿಸಲು ಹೊಲಿಗೆ ಫೀ ನೀಡಿದ ಕುರಿತು ರಿಜಿಸ್ಟರ್ ನಿರ್ವಹಿಸಿರುವುದಿಲ್ಲ, ಹಾಜರಾತಿ ವಹಿಯಲ್ಲಿ ಸಾಯಂಕಾಲ ಹೋಗುವಾಗ ಮಾಡಬೇಕಾದ ಸಹಿಯನ್ನು ಬೆಳಿಗ್ಗೆ ಮಾಡಿರುತ್ತಾರೆ. ಸರಿಯಾದ ಶೌಚಾಲಯ ವ್ಯವಸ್ಥೆ ಇರುವುದಿಲ್ಲ ಹಾಗೂ ಶಾಲೆಯ ವೇಳಾ ಪಟ್ಟಿಯಲ್ಲಿ ಸಮಯ ಇಲ್ಲದಿರುವುದು ಕಂಡುಬಂದಿರುತ್ತದೆ ಎಂದು ತಿಳಿಸಿದ್ದಾರೆ.
ನಂತರ ಬಾಲ ವಿದ್ಯಾ ಮಂದಿರ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಭೇಟಿ ನೀಡಿ ಅಲ್ಲಿಯೂ ಸಹ ಪರಿಶೀಲಿಸಿ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಕೊರತೆ ಕಂಡುಬಂದಿದ್ದು, ಅಲ್ಲಿ ಹಾಜರಿದ್ದ ಖಾಯಂ ಅಲ್ಲದ ಸಿಬ್ಬಂದಿಯ ವಿಚಾರಣೆಯಿಂದ ಖಾಯಂ ಅಲ್ಲದ ಶಿಕ್ಷಕರಿಗೆ ಸರ್ಕಾರ ನಿಗದಿಪಡಿಸಿದ ಸಂಬಳಕ್ಕಿಂತ ಕಡಿಮೆ ವೇತನ ಪಾವತಿಸುತ್ತಿರುವುದು, ಸರ್ಕಾರದ ಆದೇಶದಂತೆ ಪಿ.ಎಫ್. ಕಟಾವಣೆ ಮಾಡದಿರುವುದು ಕಂಡುಬಂದಿದ್ದು, ಹೊಸದಾಗಿ 8ನೇ ತರಗತಿಗೆ ದಾಖಲೆ ಮಾಡಿಕೊಳ್ಳುವ ಸಂದರ್ಭದಲ್ಲಿ ಪಡೆಯುವ ಹಣಕ್ಕೆ ರಶೀದಿ ನೀಡಿರುವುದಿಲ್ಲ ಹಾಗೂ ಹಣ ಪಡೆದ ಬಗ್ಗೆ ನಗದು ವಹಿಯಲ್ಲಿ ನಮೂದಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
ನಂತರ ಸಮಾಜ ಕಲ್ಯಾಣ ಇಲಾಖೆಯ (ಮೆಟ್ರಿಕ್ ಪೂರ್ವ) ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿ ಹಾಜರಿದ್ದ ಅಡುಗೆಯವರು ಸರಿಯಾಗಿ ಶುಚ್ಚಿತ್ವವನ್ನು ನಿರ್ವಹಿಸಿಕೊಂಡು ಹೋಗಲು ಮತ್ತು ಸರಿಯಾದ ರೀತಿಯಲ್ಲಿ ಅಡುಗೆ ಮಾಡಲು ತಿಳಿಸಿದ್ದಾರೆ.

ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ತರಬೇತಿ: ಅರ್ಜಿ ಆಹ್ವಾನ
***************************************************************
ಕಲಬುರಗಿ,ಜೂ.26.(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತÀ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ನೀಡಲಾಗುತ್ತಿದೆ. ಇದಕ್ಕಾಗಿ ಆಸಕ್ತಿಯುಳ್ಳ ಸವಿತಾ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ತರಬೇತಿ ನೀಡಲಾಗುತ್ತಿದೆ. ಕಲಬುರಗಿ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಜೂನ್ 30 ರೊಳಗಾಗಿ ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನ್ನು ಹಾಗೂ ಮೇಲ್ಕಂಡ ಸದರಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇಡಂ ಪಟ್ಟಣದಲ್ಲಿ 24ಘಿ7 ನೀರು ಸರಬರಾಜು:
******************************************
ಸಾರ್ವಜನಿಕರು ಶುಲ್ಕ ಭರಿಸಿ ನಳದ ಸಂಖ್ಯೆಯನ್ನು ಪಡೆಯಲು ಸೂಚನೆ
***************************************************************
ಕಲಬುರಗಿ,ಜೂ.26.(ಕ.ವಾ.)-ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ 24ಘಿ7 ನೀರು ಸರಬರಾಜು ಯೋಜನೆಯಡಿ ಸೇಡಂ ಪಟ್ಟಣದಲ್ಲಿ ನಳದ ಸಂಪರ್ಕವನ್ನು ಪಡೆದ ಸಾರ್ವಜನಿಕರು ಸೇಡಂ ಪುರಸಭೆ ಕಚೇರಿಯಲ್ಲಿ ಅರ್ಜಿ ಪಡೆದು ಸೂಕ್ತ ದಾಖಲೆಗಳೊಂದಿಗೆ ನಿಗದಿಪಡಿಸಿದ ಶುಲ್ಕ ಭರಿಸಿ ನಳದ ಸಂಖ್ಯೆಯನ್ನು ಪಡೆಯಬೇಕೆಂದು ಸೇಡಂ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ನಳದ ಸಂಖ್ಯೆಯನ್ನು ಪಡೆಯಲು ಜುಲೈ 6 ರಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ನಿಗದಿಪಡಿಸಿದ ಶುಲ್ಕ ಪಾವತಿಸಿ ಸೇಡಂ ಪುರಸಭೆ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಸೆಪ್ಟೆಂಬರ್ 25ರಂದು ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. 100 ರೂ.ಗಳ ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ. ನವೆಂಬರ್ 15ರ ನಂತರ ಅರ್ಜಿ ಸಲ್ಲಿಸುವ ಸಾರ್ವಜನಿಕರು 1000ರೂ.ಗಳ ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬೇಕು.. ಹೆಚ್ಚಿನ ಮಾಹಿತಿಗಾಗಿ ಸೇಡಂ ಪುರಸಭೆ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆ: ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು ಹೆಸರು
**************************************************************
ನೋಂದಾಯಿಸಿ
**************
ಕಲಬುರಗಿ,ಜೂ.26.(ಕ.ವಾ.)-ವಿಪತ್ತು ನಿರ್ವಹಣೆಯು ಅತೀ ಅವಶ್ಯವಾದ ಸೇವೆಗಳಲ್ಲಿ ಒಂದಾಗಿದೆ. ಈ ಒಂದು ಕಾರ್ಯದಲ್ಲಿ ಸೇವೆ ಸಲ್ಲಿಸುವುದಕ್ಕಾಗಿ ಸ್ವಯಂ ಸೇವಕರನ್ನು ಗುರುತಿಸಿ ವಿಪತ್ತು ನಿರ್ವಹಣಾ ಸಮಿತಿ ರಚಿಸಲು ತೀರ್ಮಾಸಲಾಗಿದೆ. ವಿಪತ್ತು ನಿರ್ವಹಣಾ ಸಮಿತಿಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛೆಯುಳ್ಳ ವಿದ್ಯಾರ್ಥಿಗಳು, ಯುವಕರು, ವೈದ್ಯರು, ನಿವೃತ್ತ ಸೈನ್ಯಾಧಿಕಾರಿಗಳು, ಮಹಿಳೆಯರು, ಎನ್.ಸಿ.ಸಿ., ಸ್ಕೌಟ್ಸ ಆಂಡ ಗೈಡ್ಸ್ ನಲ್ಲಿ ತರಬೇತಿ ಪಡೆದವರು ಮತ್ತು ಈಜು ಪರಿಣಿತರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಗೆ ಸಂಪರ್ಕಿಸಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ , #2ಎ, ನೆಲ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, (ಮಿನಿ ವಿಧಾನ ಸೌಧ), ಮುಖ್ಯ ರಸ್ತೆ, ಕಲಬುರಗಿ ಹಾಗೂ ದೂರವಾಣಿ : 08472 255317, ಮೊಬೈಲ್ ಸಂಖ್ಯೆ 7353416967ನ್ನು ಸಂಪರ್ಕಿಸಬೇಕು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ದೇಶದಾದ್ಯಂತ ಜನಪರವಾದ, ಜೀವಪರವಾದ ಸೇವೆಯನ್ನು ಸುಮಾರು ವರ್ಷಗಳಿಂದ ಮಾಡುತ್ತ ಬಂದಿದೆ. ಈ ಸಂಸ್ಥೆಯು ಪ್ರಥಮ ಚಿಕಿತ್ಸೆ, ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ನೇತ್ರ ಚಿಕಿತ್ಸೆ, ವಿಪತ್ತು ನಿರ್ವಹಣೆ ಇಂತಹ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡು ಜ್ಯೂನಿಯರ ರೆಡ್ ಕ್ರಾಸ್, ಯುಥ್ ರೆಡ್ ಕ್ರಾಸ್ ಹೀಗೆ ಪ್ರೌಢಶಾಲೆ ಮತ್ತು ಮಹಾವಿದ್ಯಾಲಯಗಳಲ್ಲಿ ತನ್ನ ಘಟಕಗಳನ್ನು ಸ್ಥಾಪಿಸಿ, ಇದರ ಮೂಲಕ ವಿದ್ಯಾರ್ಥಿಗಳಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಉದ್ದೇಶಗಳು ಹಾಗೂ ಇದರ ಉಪಯೋಗ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಹೀಗಾಗಿ ಲೇಖನಗಳು News and photo Date: 26-6-2018
ಎಲ್ಲಾ ಲೇಖನಗಳು ಆಗಿದೆ News and photo Date: 26-6-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 26-6-2018 ಲಿಂಕ್ ವಿಳಾಸ https://dekalungi.blogspot.com/2018/06/news-and-photo-date-26-6-2018.html

0 Response to "News and photo Date: 26-6-2018"
ಕಾಮೆಂಟ್ ಪೋಸ್ಟ್ ಮಾಡಿ