ಶೀರ್ಷಿಕೆ : ಕೃಷಿ ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿ
ಲಿಂಕ್ : ಕೃಷಿ ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿ
ಕೃಷಿ ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿ
ಕೊಪ್ಪಳ ಜು. 04 (ಕರ್ನಾಟಕ ವಾರ್ತೆ): ಕೊಪ್ಪಳ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ "ಕೃಷಿ ಅಭಿಯಾನ" ಕಾರ್ಯಕ್ರಮದ ಸಮಾರೋಪ ಸಮಾರಂಭ ಬುಧವಾರದಂದು ತಾಲೂಕಿನ ಹಿರೇಬೊಮ್ಮನಾಳ ಗ್ರಾಮದಲ್ಲಿ ಜರುಗಿತು.

ಹಿರೇಬೊಮ್ಮನಾಳ ಗ್ರಾ.ಪಂ. ಅಧ್ಯಕ್ಷೆ ಹನುಮವ್ವ ಹೆಚ್. ಪೂಜಾರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಕೃಷಿ ನಿರ್ದೇಶಕ ತುಕಾರಾಮ ನಾರಾಯಣದೇವರಕೆರೆ ಅವರು ಕೃಷಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ತಿಳಿಸಿ ರೈತರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥ ಡಾ. ಎಂ.ಬಿ ಪಾಟೀಲ, ಡಾ. ಪ್ರದೀಪ, ಕೃಷಿ ಸಮಾಜದ ರಾಜ್ಯ ಪ್ರತಿನಿಧಿ ಶಂಕರಪ್ಪ ಚವಡಿ, ಜಂಟಿ ಕೃಷಿ ನಿರ್ದೇಶಕರ ಕಛೇರಿ ಜಾಗೃತದಳದ ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ಕನ್ನಾರಿ, ಕೃಷಿ ಅಧಿಕಾರಿ ಯು.ಎಸ್ ಹಳ್ಳದ, ಅನುವುಗಾರರಾದ ಅಂಬಣ್ಣ, ಚನ್ನಪ್ಪ, ಶರಣಪ್ಪ ಮತ್ತು ಜಾಫರ್ ಸೇರಿದಂತೆ ಪಶುಸಂಗೋಪನಾ ಇಲಾಖೆ ವೈದ್ಯಾಧಿಕಾರಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಎನ್.ಎಫ್.ಎಸ್.ಎಂ ತಾಂತ್ರಿಕ ಸಹಾಯಕ ಮಾರುತಿ ಪೂಜಾರ ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.
ಹೀಗಾಗಿ ಲೇಖನಗಳು ಕೃಷಿ ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿ
ಎಲ್ಲಾ ಲೇಖನಗಳು ಆಗಿದೆ ಕೃಷಿ ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೃಷಿ ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿ ಲಿಂಕ್ ವಿಳಾಸ https://dekalungi.blogspot.com/2018/07/blog-post_11.html
0 Response to "ಕೃಷಿ ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿ"
ಕಾಮೆಂಟ್ ಪೋಸ್ಟ್ ಮಾಡಿ