ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸಿ- ಕರಡಿ ಸಂಗಣ್ಣ

ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸಿ- ಕರಡಿ ಸಂಗಣ್ಣ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸಿ- ಕರಡಿ ಸಂಗಣ್ಣ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸಿ- ಕರಡಿ ಸಂಗಣ್ಣ
ಲಿಂಕ್ : ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸಿ- ಕರಡಿ ಸಂಗಣ್ಣ

ಓದಿ


ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸಿ- ಕರಡಿ ಸಂಗಣ್ಣ



ಕೊಪ್ಪಳ ಜು. 04 (ಕರ್ನಾಟಕ ವಾರ್ತೆ): ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದು, ಸದ್ಯ ಕೊಪ್ಪಳ ತಾಲೂಕು ಹೊರತುಪಡಿಸಿ, ಉಳಿದೆಡೆ ಮಳೆಯಾಗಿದೆ,  ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಯಾವುದೇ ಕೊರತೆಯಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಸೂಚನೆ ನೀಡಿದರು.

     ಕೊಪ್ಪಳದ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಕೊಪ್ಪಳ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮೇ ಮತ್ತು ಜೂನ್ ತಿಂಗಳಿನಲ್ಲಿ ಉತ್ತಮ ಮಳೆಯಾಗಿದೆ.  ಸದ್ಯ ಕೊಪ್ಪಳ ತಾಲೂಕು ಹೊರತುಪಡಿಸಿ, ಉಳಿದ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ.  ರೈತರು ಉತ್ತಮ ಬೆಳೆಯ ಭರವಸೆಯೊಂದಿಗೆ ಬಿತ್ತನೆ ಪ್ರಾರಂಭಿಸಿದ್ದು, ಜಿಲ್ಲೆಯ ಯಾವುದೇ ತಾಲೂಕುಗಳಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಕೊರತೆಯಾಗಬಾರದು.  ಇದರ ಜೊತೆಗೆ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ನೊಂದಾಯಿಸುವ ಕುರಿತು ರೈತರಿಗೆ ಮಾಹಿತಿ ನೀಡಬೇಕು.  ಈ ಬಗ್ಗೆ ಹೆಚ್ಚಿನ ಪ್ರಚಾರಕ್ಕೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ ಸಂಸದರು,  ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆ ಯೋಜನೆ ವಿಳಂಬವಾಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಂಟಿಕೃಷಿ ನಿರ್ದೇಶಕ ಹೊನ್ನಪ್ಪಗೌಡ ಅವರು, ಜಿಲ್ಲೆಯಲ್ಲಿ ಜನವರಿಯಿಂದ ಮೇ ತಿಂಗಳಿನವರೆಗೆ ಪೂರ್ವ ಮುಂಗಾರು ಮಳೆ ಉತ್ತಮವಾಗಿದ್ದು, 81 ಮಿ.ಮೀ. ವಾಡಿಕೆ ಮಳೆ ಬದಲಿಗೆ 120 ಮಿ.ಮೀ. ಆಗಿದ್ದು ಶೇ. 45 ರಷ್ಟು ಹೆಚ್ಚಾಗಿದೆ.  ಜೂನ್ ತಿಂಗಳಿನಲ್ಲಿ 153 ಮಿ.ಮೀ. ಬದಲಿಗೆ 207 ಮಿ.ಮೀ. ಮಳೆಯಾಗಿದೆ.  ಈ ತಿಂಗಳಿನಲ್ಲಿ ಕೊಪ್ಪಳ ತಾಲೂಕಿನಲ್ಲಿ ಮಾತ್ರ ಮೂರು ವಾರಗಳಿಂದ ಮಳೆಯಾಗದಿರುವುದರಿಂದ ಶೇ. 30 ರಷ್ಟು ಮಳೆಯ ಕೊರತೆ ಕಂಡುಬಂದಿದ್ದು, ಉಳಿದಂತೆ ಯಲಬುರ್ಗಾ, ಕುಷ್ಟಗಿ ಮತ್ತು ಗಂಗಾವತಿ ತಾಲೂಕಿನಲ್ಲಿ ಮಳೆಯಾಗಿದೆ.  ಜಿಲ್ಲೆಯಲ್ಲಿ ಸದ್ಯ ಮುಂಗಾರು ಹಂಗಾಮಿನಲ್ಲಿ ಶೇ. 57 ರಷ್ಟು ಬಿತ್ತನೆಯಾಗಿದೆ.  ಮೆಕ್ಕೆಜೋಳ, ಜೋಳ, ತೊಗರಿ, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳ 8400 ಕ್ವಿಂ. ಬಿತ್ತನೆ ಬೀಜ ದಾಸ್ತಾನಿದ್ದು, 10500 ಮೆ.ಟನ್ ರಸಗೊಬ್ಬರ ದಾಸ್ತಾನು ಇದೆ.  ಇನ್ನೂ ಒಂದು ರೇತ್ ರಸಗೊಬ್ಬರ ಈ ತಿಂಗಳಿನಲ್ಲಿ ಬರಲಿದೆ.  ಹೀಗಾಗಿ ಜಿಲ್ಲೆಯಲ್ಲಿ ಬೀಜ ಹಾಗೂ ಗೊಬ್ಬರದ ಕೊರತೆ ಸಾಧ್ಯತೆ ಇಲ್ಲ.  ಮಣ್ಣು ಆರೋಗ್ಯ ಕಾರ್ಡ್ ವಿತರಣೆ ಯೋಜನೆಯಡಿ 1. 40 ಲಕ್ಷ ಕಾರ್ಡ್ ವಿತರಿಸಲಾಗಿದ್ದು, ರೈತರ ಭೂಮಿಯ ಸರ್ವೆ ನಂ. ಡೌನ್‍ಲೋಡ್‍ನಲ್ಲಿ ತೊಂದರೆ ಆಗುತ್ತಿರುವುದರಿಂದ ವಿಳಂಬವಾಗಲು ಕಾರಣವಾಗಿದೆ.  ಶೀಘ್ರದಲ್ಲಿಯೇ ಎಲ್ಲರಿಗೂ ಮಣ್ಣು ಆರೋಗ್ಯಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.  ರೈತರಿಗೆ ನೀಡುವ ಪ್ರೋತ್ಸಾಹಧನ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ.  2016-17 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 34433 ರೈತರಿಗೆ 53. 25 ಕೋಟಿ ಪರಿಹಾರಧನ ಪಾವತಿಸಲಾಗಿದ್ದು, 4097 ರೈತರಿಗೆ 5. 27 ಕೋಟಿ ಪರಿಹಾರ ನೀಡಬೇಕಿದೆ.  16-17 ರ ಹಿಂಗಾರು ಹಂಗಾಮಿನಲ್ಲಿ 33877 ರೈತರಿಗೆ 30. 55 ಕೋಟಿ ರೂ ಪರಿಹಾರಧನ ನೀಡಿದ್ದು, ಇನ್ನೂ 31643 ರೈತರಿಗೆ 46. 96 ಕೋಟಿ ರೂ. ಪಾವತಿಸಬೇಕಾಗಿದೆ ಎಂದರು.
ಬಹುಗ್ರಾಮ ಯೋಜನೆ ವಿಳಂಬ :
*********** ಜಿಲ್ಲೆಯಲ್ಲಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕೆನ್ನುವ ಆಶಯದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಜಾರಿಗೆ ತಂದಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಹಲವು ಯೋಜನೆಗಳು ಇನ್ನೂ ಪೂರ್ಣಗೊಂಡಿಲ್ಲ.  ಮುಂಡರಗಿ ಮತ್ತು 87 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಬೇಕಿದ್ದ ಯೋಜನೆ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯದಿಂದಾಗಿ ಹಂತ-01 ಮತ್ತು 02 ರ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ.  ಅವೈಜ್ಞಾನಿಕವಾಗಿ ಡಿಸೈನ್ ಮಾಡಿರುವುದರಿಂದ, ಪೈಪ್‍ಲೈನ್ ಕಾಮಗಾರಿ ಕೈಗೊಂಡಿದ್ದು, ಕೋಟ್ಯಾಂತರ ರೂ. ನಷ್ಟವಾಗಿದ್ದು, ಇದಕ್ಕೆ ಯಾರು ಹೊಣೆ.  ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ, ಸರ್ಕಾರದ ಹಣ ಪೋಲಾಗುತ್ತಿರುವುದು ಅಲ್ಲದೆ, ಅನಗತ್ಯ ವಿಳಂಬವಾಗಿ, ಜನರು ಶುದ್ಧ ನೀರಿನಿಂದ ವಂಚಿತರಾಗುತ್ತಿರುವುದು ವಿಷಾದನೀಯ.  ಕೂಡಲೆ ಈ ಯೋಜನೆಗೆ ಕೈಗೊಂಡ ಡಿಸೈನ್, ಕಾಮಗಾರಿ ವಿವರ, ಅನುದಾನ ಬಿಡುಗಡೆ ಮತ್ತು ವೆಚ್ಚದ ವಿವರವುಳ್ಳ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸಂಸದ ಕರಡಿ ಸಂಗಣ್ಣ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ತಾಕೀತು ಮಾಡಿದರು.
ಕೊಪ್ಪಳ ಪ್ರಮುಖ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ :
***************** ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಿಂದ, ಜಿಲ್ಲಾಡಳಿತ ಭವನವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಸಿಮೆಂಟ್ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಳಿಸಿಲ್ಲ.  ನಾಲ್ಕು ತಿಂಗಳ ಒಳಗಾಗಿ ಪೂರ್ಣಗೊಳಿಸುವ ಭರವಸೆ ನೀಡಲಾಗಿತ್ತು.  ಆದರೆ ಇನ್ನೂ ಪೂರ್ಣಗೊಂಡಿಲ್ಲ.  ಕೆಲವೆಡೆ ಕಾಮಗಾರಿಯನ್ನು ಕೈಗೊಳ್ಳದೆ ಬಾಕಿ ಉಳಿಸಲಾಗಿದೆ.  ಯು.ಜಿ.ಡಿ. ಕಾಮಗಾರಿಯೂ ಪೂರ್ಣಗೊಳ್ಳದಿರುವುದು, ಇನ್ನಷ್ಟು ತೊಂದರೆ ಉಂಟುಮಾಡುತ್ತಿದೆ ಎಂದು ಸಂಸದರು ತಿಳಿಸಿದರು.  ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಪ್ರತಿಕ್ರಿಯಿಸಿ,  ಈಗಾಗಲೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಹಗಲು-ರಾತ್ರಿ ಕಾಮಗಾರಿ ಕೈಗೊಂಡರೂ ಸರಿ, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.  ಕಾಮಗಾರಿ ಕೈಗೊಳ್ಳುವ ವೇಳೆ ಸೂಕ್ತ ಸುರಕ್ಷತಾ ವ್ಯವಸ್ಥೆಯನ್ನು ಕೈಗೊಳ್ಳಬೇಕು.  ರಸ್ತೆಯಲ್ಲಿ ಬೀದಿ ದೀಪಗಳಿಲ್ಲದ ಕಾರಣದಿಂದ, ರಾತ್ರಿ ವೇಳೆಯಲ್ಲಿ ವಾಹನ ಸವಾರರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ.  ಅಪಘಾತಕ್ಕೂ ಕಾರಣವಾಗುವ ಸಾಧ್ಯತೆ ಇದೆ.  ಹೀಗಾಗಿ ಕೂಡಲೆ ಬೀದಿ ದೀಪದ ವ್ಯವಸ್ಥೆಯನ್ನಾದರೂ ತ್ವರಿತವಾಗಿ ಕೈಗೊಂಡು, ಸುರಕ್ಷಾ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉದ್ಯೋಗಖಾತ್ರಿಯಲ್ಲಿ ಹಿಂದೆ :
************ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ಕಳೆದ ವರ್ಷ ಜಿಲ್ಲೆಯಲ್ಲಿ 29. 87 ಲಕ್ಷ ಮಾನವ ದಿನಗಳನ್ನು ಸೃಜಿಸಿದ್ದು, 140. 83 ಕೋಟಿ ರೂ. ಆರ್ಥಿಕ ಗುರಿಯ ಬದಲಿಗೆ  105. 88 ಕೋಟಿ ರೂ. ವೆಚ್ಚ ಮಾಡಿದ್ದು, ಶೇ. 75 ರಷ್ಟು ಸಾಧನೆಯಾಗಿದೆ.  ಗಂಗಾವತಿ ಮತ್ತು ಕುಷ್ಟಗಿ ತಾಲೂಕುಗಳಲ್ಲಿ ಶೇ. 100 ಕ್ಕಿಂತ ಹೆಚ್ಚು ಸಾಧನೆಯಾಗಿದೆ.  ಆದರೆ ಕೊಪ್ಪಳ ತಾಲೂಕಿನಲ್ಲಿ 33. 58 ಕೋಟಿ ರೂ. ಬದಲಿಗೆ 14. 92 ಕೋಟಿ ರೂ. ಮಾತ್ರ ವೆಚ್ಚವಾಗಿದ್ದು, ಶೇ. 44. 43 ರಷ್ಟು ಸಾಧನೆಯಾಗಿದೆ.  ಯಲಬುರ್ಗಾ ತಾಲೂಕಿನಲ್ಲಿ 30. 54 ಕೋಟಿ ರೂ. ಖರ್ಚಾಗುವ ಬದಲಿಗೆ 10. 35 ಕೋಟಿ ರೂ. ಮಾತ್ರ ವೆಚ್ಚವಾಗಿದ್ದು ಕೇವಲ ಶೇ. 33. 91 ರಷ್ಟು ಮಾತ್ರ ಸಾಧನೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಕೊಪ್ಪಳ ಮತ್ತು ಯಲಬುರ್ಗಾ ತಾಲೂಕುಗಳಲ್ಲಿ ಉದ್ಯೋಗಖಾತ್ರಿ ಯೋಜನೆಯಡಿ ನಿರೀಕ್ಷಿತ ಮಟ್ಟದಲ್ಲಿ ಸಾಧನೆಯಾಗದಿರುವುದಕ್ಕೆ ಅಧಿಕಾರಿಗಳು ವಿವರಣೆ ನೀಡಬೇಕು ಎಂದು ಸಂಸದರು ಸೂಚನೆ ನೀಡಿದರು.
ಬೆಳೆ ಉಳಿಸಿಕೊಳ್ಳಲು ರೈತರಿಗೆ ನೆರವಾಗಿ :
************ ಕೊಪ್ಪಳ ತಾಲೂಕಿನಲ್ಲಿ ಸದ್ಯ ಮಳೆಯ ಕೊರತೆ ಉಂಟಾಗಿದೆ.  ಸಿಂಗಟಾಲೂರು ಏತನೀರಾವರಿ ಯೋಜನೆಯಡಿ ಕೊಪ್ಪಳ ತಾಲೂಕಿನ ಮೈನಳ್ಳಿ, ಬಿಕನಳ್ಳಿ, ಗುಡಿಗೇರಿ, ಕವಲೂರು ಭಾಗಗಳಲ್ಲಿ ಈಗಾಗಲೆ ಕಾಲುವೆ ಇದೆ.  ಸಿಂಗಟಾಲೂರು ನೀರಾವರಿ ಯೋಜನೆಯಡಿ ಕಾಲುವೆಗೆ ಸ್ವಲ್ಪ ಪ್ರಮಾಣದಲ್ಲಿ ನೀರು ಹರಿಸಿದಲ್ಲಿ, ರೈತರು ಕೃಷಿ ಇಲಾಖೆ ನೀಡಿರುವ ಪಂಪ್‍ಸೆಟ್ ಬಳಸಿ, ನೀರು ಪೂರೈಸಿಕೊಂಡು, ಒಣಗುತ್ತಿರುವ ಬೆಳೆಗಳನ್ನು ಉಳಿಸಿಕೊಳ್ಳುವುದಾಗಿ ರೈತರು ಬೇಡಿಕೆ ಇಟ್ಟಿದ್ದಾರೆ.  ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲ ಮಾಡಿಕೊಡಿ ಎಂದು ಸಂಸದ ಕರಡಿ ಸಂಗಣ್ಣ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
     ಸಭೆಯಲ್ಲಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ದಿಶಾ ಸಮಿತಿ ಸದಸ್ಯ ವೀರೇಶ ಸಜ್ಜನ, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


ಹೀಗಾಗಿ ಲೇಖನಗಳು ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸಿ- ಕರಡಿ ಸಂಗಣ್ಣ

ಎಲ್ಲಾ ಲೇಖನಗಳು ಆಗಿದೆ ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸಿ- ಕರಡಿ ಸಂಗಣ್ಣ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸಿ- ಕರಡಿ ಸಂಗಣ್ಣ ಲಿಂಕ್ ವಿಳಾಸ https://dekalungi.blogspot.com/2018/07/blog-post_25.html

Subscribe to receive free email updates:

0 Response to "ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸಿ- ಕರಡಿ ಸಂಗಣ್ಣ"

ಕಾಮೆಂಟ್‌‌ ಪೋಸ್ಟ್‌ ಮಾಡಿ