ಶೀರ್ಷಿಕೆ : ವಿಶ್ವ ಜನಸಂಖ್ಯಾ ದಿನಾಚರಣೆ : ಜನಜಾಗೃತಿ ಜಾಥಕ್ಕೆ ಅಕ್ಷಯ್ ಶ್ರೀಧರ್ ಚಾಲನೆ
ಲಿಂಕ್ : ವಿಶ್ವ ಜನಸಂಖ್ಯಾ ದಿನಾಚರಣೆ : ಜನಜಾಗೃತಿ ಜಾಥಕ್ಕೆ ಅಕ್ಷಯ್ ಶ್ರೀಧರ್ ಚಾಲನೆ
ವಿಶ್ವ ಜನಸಂಖ್ಯಾ ದಿನಾಚರಣೆ : ಜನಜಾಗೃತಿ ಜಾಥಕ್ಕೆ ಅಕ್ಷಯ್ ಶ್ರೀಧರ್ ಚಾಲನೆ
ಕೊಪ್ಪಳ ಜು. 11 (ಕರ್ನಾಟಕ ವಾರ್ತೆ): ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಕೊಪ್ಪಳ ಹಳೇ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬುಧವಾರದಂದು ಹಮ್ಮಿಕೊಳ್ಳಲಾದ ಜನಜಾಗೃತಿ ಜಾಥಕ್ಕೆ ಐಎಎಸ್ ಪ್ರೊಬೆಷನರಿ ಅಧಿಕಾರಿ ಅಕ್ಷಯ್ ಶ್ರೀಧರ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಹೆಚ್. ಅವರು ಮಾತನಾಡಿ, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, "ಒಂದು ಸಾರ್ಥಕತೆಯ ನಾಳೆಯ ಜೀವನಕ್ಕಾಗಿ ಕುಟುಂಬ ಕಲ್ಯಾಣ ಯೋಜನೆಗಳ ಬಳಕೆ" ಎಂಬುವುದು ಈ ವರ್ಷದ ಘೋಷಣೆ ವಾಕ್ಯವಾಗಿದೆ. ಭಾರತ ದೇಶದ ಜನಸಂಖ್ಯೆಯು ಸದ್ಯ 110 ಕೋಟಿ ದಾಟಿದ್ದು, ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ. ವಿಶ್ವದ ಜನಸಂಖ್ಯೆಯು 700 ಕೋಟಿ ದಾಟಿದ್ದು, ಹಾಗೆಯೇ 2050 ಕ್ಕೆ ಸುಮಾರು ಒಂದು ಸಾವಿರ ಕೋಟಿಯಾಗುತ್ತದೆ ಎಂದು ಅಂದಾಜಿಸಬಹುದಾಗಿದೆ. ಇದರಿಂದ ಬಡತನ, ನಿರುದ್ಯೋಗಗಳಂತಹ ಹತ್ತು ಹಲವಾರು ಸಮಸ್ಯೆಗಳು ಉದ್ಬವವಾಗಬಹುದು. ಪ್ರತಿ 8 ಸೆಕೆಂಡ್‍ಗೆ ಒಂದು ಜನನ ಹಾಗೂ ಒಂದು ಮರಣವಾಗುತ್ತಿದೆ. ಜನನ-ಮರಣ ಪ್ರಮಾಣ ಸಮನಾಗಿದ್ದರು ಸಹ ಜನಸಂಖ್ಯೆ ಪ್ರಮಾಣ ಕಡಿಮೆ ಯಾಗದೇ ಹೆಚ್ಚಾಗುತ್ತಿದೆ. ಜನಸಂಖ್ಯೆ ನಿಯಂತ್ರಣಕ್ಕಾಗಿ ಜಾಗೃತಿ ಮೂಡಿಸಲು ಜಗತ್ತಿನಾದ್ಯಂತ 1999 ರಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಗುತ್ತಿದೆ. ಈ ನೀಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂ ಕಲ್ಯಾಣ ಇಲಾಖೆಯು ಹಲವಾರು ಯೋಜನೆಗಳನ್ನು ಹಾಗೂ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಕುಟುಂಬ ಕಲ್ಯಾಣ ವಿಧಾನವನ್ನು ಅಳವಡಿಸಿಕೊಂಡು ಜನಸಂಖ್ಯೆಯನ್ನು ನಿಯಂತ್ರಣ ಮಾಡಬಹುದಾಗಿದೆ ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ದಾನರಡ್ಡಿ, ಜಿಲ್ಲಾ ಮಾನಸಿಕ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಎಸ್.ಕೆ ದೇಸಾಯಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಅಲಕನಂದಾ ಮಳಗಿ, ಕುಟುಂಬ ಕಲ್ಯಾಣಾಧಿಕಾರಿ ಡಾ. ಜಂಬಯ್ಯ, ತಾಲೂಕ ಆರೋಗ್ಯಾಧಿಕಾರಿ ರಾಮಾಂಜನೇಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ, ಪೊಲೀಸ್ ಇಲಾಖೆಯ ಸಿ.ಕೆ ಮೂರ್ತಿ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಟ್ರೈನಿಂಗ್ ಎ.ಎನ್.ಎಂ ಸೆಂಟರ್‍ನ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಜನಜಾಗೃತಿ ಜಾಥವು ನಗರದ ಅಶೋಕ ಸರ್ಕಲ್, ಹಸನ್ ರಸ್ತೆ, ದಿವಟರ್ ವೃತ್ತ, ನಗರ ಪೊಲೀಸ್ ಠಾಣೆ, ಡಾ. ಸಿಂಪಿಲಿಂಗಣ್ಣ ರಸ್ತೆ ಮಾರ್ಗವಾಗಿ ಹಳೇ ಜಿಲ್ಲಾ ಆಸ್ಪತ್ರೆ ಆವರಣದವರೆಗೆ ಸಂಚರಿಸಿ ಜಾಗೃತಿ ಗೀತೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿತು.
ಹೀಗಾಗಿ ಲೇಖನಗಳು ವಿಶ್ವ ಜನಸಂಖ್ಯಾ ದಿನಾಚರಣೆ : ಜನಜಾಗೃತಿ ಜಾಥಕ್ಕೆ ಅಕ್ಷಯ್ ಶ್ರೀಧರ್ ಚಾಲನೆ
ಎಲ್ಲಾ ಲೇಖನಗಳು ಆಗಿದೆ ವಿಶ್ವ ಜನಸಂಖ್ಯಾ ದಿನಾಚರಣೆ : ಜನಜಾಗೃತಿ ಜಾಥಕ್ಕೆ ಅಕ್ಷಯ್ ಶ್ರೀಧರ್ ಚಾಲನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ : ಜನಜಾಗೃತಿ ಜಾಥಕ್ಕೆ ಅಕ್ಷಯ್ ಶ್ರೀಧರ್ ಚಾಲನೆ ಲಿಂಕ್ ವಿಳಾಸ https://dekalungi.blogspot.com/2018/07/blog-post_26.html
0 Response to "ವಿಶ್ವ ಜನಸಂಖ್ಯಾ ದಿನಾಚರಣೆ : ಜನಜಾಗೃತಿ ಜಾಥಕ್ಕೆ ಅಕ್ಷಯ್ ಶ್ರೀಧರ್ ಚಾಲನೆ"
ಕಾಮೆಂಟ್ ಪೋಸ್ಟ್ ಮಾಡಿ