ಶೀರ್ಷಿಕೆ : ಕೊಪ್ಪಳ : ಪಿಓಪಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ನಿಷೇಧ
ಲಿಂಕ್ : ಕೊಪ್ಪಳ : ಪಿಓಪಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ನಿಷೇಧ
ಕೊಪ್ಪಳ : ಪಿಓಪಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ನಿಷೇಧ
ಕೊಪ್ಪಳ ಜು. 27 (ಕರ್ನಾಟಕ ವಾರ್ತೆ): ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಪ್ ಪ್ಯಾರಿಸ್ (ಪಿಓಪಿ) ಮತ್ತು ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈಗಾಗಲೇ ಪಿ.ಓ.ಪಿ ಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆ ಹೊರಡಿಸಿದೆ. ಅಲ್ಲದೆ ರಾಜ್ಯದ ಉಚ್ಚ ನ್ಯಾಯಾಲಯವು ಕೇಸ್ ನಂ. 927 ರಿಂದ 931-2017 ಮತ್ತು 1322-2017 ರಲ್ಲಿ ಮಂಡಳಿಯು ಹೊರಡಿಸಿರುವ ಅಧಿಸೂಚನೆಯನ್ನು ಕ್ರಮ ಬದ್ಧಗೊಳಿಸಿರುತ್ತದೆ. ಆದುದರಿಂದ ಕೊಪ್ಪಳ ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಮತ್ತು ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳಿಗೆ ಉದ್ದಿಮೆ ಪರವಾನಿಗೆಯನ್ನು ನೀಡದಿರಲು ಸೂಚಿಸಲಾಗಿದೆ. ಅಲ್ಲದೆ, ಅನಧಿಕೃತವಾಗಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ಕೊಪ್ಪಳ ನಗರದಲ್ಲಿ ಪ್ಲಾಸ್ಟರ್ ಆಪ್ ಪ್ಯಾರಿಸ್ (ಪಿಓಪಿ) ಮತ್ತು ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳನ್ನು ತಯಾರಿಸುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ತಪ್ಪಿದ್ದಲ್ಲಿ ಕಾನೂನು ರೀತ್ಯಾ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಲಂ 45-ಎ ಅನ್ವಯ ದಂಡವನ್ನು (ರೂ. 10,000/- ವರೆಗೆ) ಮತ್ತು ಜೈಲು ವಾಸವನ್ನು ವಿಧಿಸುವ ಅವಕಾಶವಿದ್ದು, ತಯಾರಕರು, ಮಾರಾಟಗಾರರು ಹಾಗೂ ಸಾರ್ವಜನಿಕರು ಪ್ಲಾಸ್ಟರ್ ಆಪ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ಉಪಯೋಗಿಸದಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕೊಪ್ಪಳ : ಪಿಓಪಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ನಿಷೇಧ
ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ : ಪಿಓಪಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ನಿಷೇಧ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ : ಪಿಓಪಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ನಿಷೇಧ ಲಿಂಕ್ ವಿಳಾಸ https://dekalungi.blogspot.com/2018/07/blog-post_32.html
0 Response to "ಕೊಪ್ಪಳ : ಪಿಓಪಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ನಿಷೇಧ"
ಕಾಮೆಂಟ್ ಪೋಸ್ಟ್ ಮಾಡಿ