ಶೀರ್ಷಿಕೆ : ಡಿ. ದೇವರಾಜ ಅರಸು ನಿಗಮದಡಿ ವಿವಿಧ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಡಿ. ದೇವರಾಜ ಅರಸು ನಿಗಮದಡಿ ವಿವಿಧ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಡಿ. ದೇವರಾಜ ಅರಸು ನಿಗಮದಡಿ ವಿವಿಧ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಜು. 06 (ಕರ್ನಾಟಕ ವಾರ್ತೆ): ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕೊಪ್ಪಳ, ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಸಾಲ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗದ ಜನರ ಶ್ರೇಯೋಭಿವೃದ್ಧಿಗಾಗಿ ಜಾರಿಗೊಳಿಸಲಾಗಿರುವ ವಿವಿಧ ಸಾಲ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಸರ್ಕಾರದ ಯೋಜನೆಗಳ ವಿವರ ಇಂತಿದೆ.
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ : ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಜನರ ಸ್ವಯಂ ಉದ್ಯೋಗಕ್ಕೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಚಟುವಟಿಕೆ ಅನುಸಾರ ಗರಿಷ್ಠ ರೂ. 2 ಲಕ್ಷಗಳ ವರೆಗೆ ಆರ್ಥಿಕ ನೆರವು. ಇದರಲ್ಲಿ, ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ.
ಕಿರುಸಾಲ ಯೋಜನೆ : ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಸ್ವ-ಸಹಾಯ ಗುಂಪುಗಳ ಸದಸ್ಯರು ಕೈಗೊಳ್ಳುವ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರದ ಚಟುವಟಿಕೆಗಳಿಗೆ ಅಂದರೆ, ಹಣ್ಣು, ತರಕಾರಿ, ಹಾಲು, ಹೂ ಮಾರುವವರು, ತಳ್ಳುವ ಗಾಡಿ ವ್ಯಾಪಾರಿಗಳು ಮುಂತಾದ ಸಣ್ಣ ಪ್ರಮಾಣದ ವ್ಯಾಪಾರ ಚಟುವಟಿಕೆಗಳಿಗೆ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಗರಿಷ್ಠ ರೂ. 10 ಸಾವಿರ ಸಾಲ ಹಾಗೂ ರೂ. 5 ಸಾವಿರಗಳ ಸಹಾಯಧನ ಸೌಲಭ್ಯ ನೀಡಲಾಗುವುದು. ಅರ್ಜಿದಾರರು ಬಿಪಿಎಲ್ ಕುಟುಂಬಕ್ಕೆ ಸೇರಿರಬೇಕು ಹಾಗೂ ಸರ್ಕಾರಿ/ ಅರೆ ಸರ್ಕಾರಿ ಉದ್ಯೋಗದಲ್ಲಿ ಇರಬಾರದು.
ಸಾಂಪ್ರದಾಯಿಕ ಕಾರ್ಯಗಳಿಗೆ ಸಾಲ ಮತ್ತು ಸಹಾಯಧನ : ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಮತ್ತು ಸಹಾಯಧನ ವದಗಿಸಲಾಗುತ್ತಿದ್ದು, ವಿವರ ಇಂತಿದೆ. ಹಿಂದುಳಿದ ವರ್ಗಗಳ ಸಾಂಪ್ರದಾಯಿಕ ವೃತ್ತಿದಾರರು ಅಥವಾ ವೃತ್ತಿ ಕಸುಬುದಾರರು ತಮ್ಮ ವೃತ್ತಿಯ ಅಭಿವೃದ್ಧಿಗಾಗಿ, ಆಧುನಿಕ ಉಪಕರಣಗಳನ್ನು ಖರೀದಿಸಲು, ತಾಂತ್ರಿಕತೆಯನ್ನು ಮೇಲ್ದರ್ಜೆಗೇರಿಸಲು, ವೃತ್ತಿ ಅನುಸಾರ ಗರಿಷ್ಠ ರೂ. 2 ಲಕ್ಷಗಳ ವರೆಗೆ ಆರ್ಥಿಕ ನೆರವು. ಇದರಲ್ಲಿ ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ಶೇ.2ರ ಬಡ್ಡಿದರದಲ್ಲಿ ಸಾಲ.
ಬಡ್ಡಿರಹಿತ ಸಾಲ ಯೋಜನೆ : ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಯೋಜನೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಗಳಾದ ಪೋಸ್ಟ್‍ಡಾಕ್ಟ್ರಲ್, ಪಿ.ಹೆಚ್.ಡಿ., ಮಾಸ್ಟರ್ ಡಿಗ್ರಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ವಾರ್ಷಿಕ ರೂ. 3.50 ಲಕ್ಷಗಳಂತೆ, ಮೂರು ವರ್ಷಗಳ ಕೋರ್ಸ್‍ನ ಅವಧಿಗೆ, ಗರಿಷ್ಠ ರೂ. 10 ಲಕ್ಷಗಳ ಬಡ್ಡಿರಹಿತ ಸಾಲ ಮಂಜೂರು. ಅರ್ಜಿದಾರರು ಗರಿಷ್ಠ 35 ವರ್ಷಗಳ ವಯೋಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರೂ. 3.50 ಲಕ್ಷಕ್ಕೆ ಮೀರಿರಬಾರದು ಹಾಗೂ ಅರ್ಹತಾ ಪರೀಕ್ಷೆಗಳಲ್ಲಿ ಶೇ.60 ಕ್ಕಿಂತ ಹೆಚ್ಚಿನ ಅಂಕಗಳಿಸಿರಬೇಕು.
ಗಂಗಾ ಕಲ್ಯಾಣ : ಈ ಯೋಜನೆಯಲ್ಲಿ ವೈಯಕ್ತಿಕ ಕೊಳವೆಬಾವಿ ಯೋಜನೆ ಹಾಗೂ ಸಾಮೂಹಿಕ ನೀರಾವರಿ ಯೋಜನೆ ಸೌಲಭ್ಯ ನೀಡಲಾಗಿದೆ. ವೈಯಕ್ತಿಕ ಕೊಳವೆಬಾವಿ ಯೋಜನೆಯಡಿ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್‍ಸೆಟ್ಟು, ಉಪಕರಣಗಳನ್ನು ಸರಬರಾಜು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ. 2.50 ಲಕ್ಷಗಳಲ್ಲಿ ರೂ. 2 ಲಕ್ಷಗಳ ಸಹಾಯಧನ ಹಾಗೂ ರೂ. 50 ಸಾವಿರಗಳ ಶೇ.4ರ ಬಡ್ಡಿದರದಲ್ಲಿ ಸಾಲ.
ಸಾಮೂಹಿಕ ನೀರಾವರಿ ಯೋಜನೆಯಡಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಕನಿಷ್ಠ 3 ಜನರು ಹೊಂದಿರುವ 8 ರಿಂದ 15 ಎಕರೆ ಜಮೀನಿಗೆ ರೂ. 4 ಲಕ್ಷಗಳ ವೆಚ್ಚದಲ್ಲಿ ಎರಡು ಕೊಳವೆ ಬಾವಿ, 15 ಎಕರೆಗಿಂತ ಹೆಚ್ಚಿನ ಜಮೀನಿಗೆ ರೂ. 6 ಲಕ್ಷಗಳ ವೆಚ್ಚದಲ್ಲಿ ಮೂರು ಕೊಳವೆ ಬಾವಿ ಕೊರೆಯಿಸಿ ಪಂಪ್ ಸೇಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡಿ ನೀರಾವರಿ ಸೌಲಭ್ಯ ವಿದ್ಯುದೀಕರಣಕ್ಕೆ ಪ್ರತಿ ಕೊಳವೆ ಬಾವಿಗೆ ರೂ. 50 ಸಾವಿರಗಳನ್ನು ವಿದ್ಯುತ್ ಸರಬರಾಜು ಕಂಪನಿಗೆ ಪಾವತಿಸಲಾಗುವುದು. ಮಲೆನಾಡು ಪ್ರದೇಶಗಳಲ್ಲಿ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚದಲ್ಲಿ ತೆರೆದ ಬಾವಿಗಳ ಮಂಜೂರು. ಭೂ ಮಟ್ಟದಲ್ಲಿ ದೊರೆಯುವ ನದಿ ಮತ್ತು ಜಲಾಶಯಗಳ ನೀರಾವರಿ ಸಂಪನ್ಮೂಲಗಳಿಂದ ಏತ ನಿರಾವರಿ ಮೂಲಕ ನೀರಾವರಿ ಸೌಲಭ್ಯ.
ಅರ್ಜಿಯನ್ನು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ತಾಲೂಕಿ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಅಥವಾ ನಿಗಮದ ವೆಬ್ ಸೈಟ್ https://ift.tt/2rXHMBJ ನಲ್ಲಿ ಜು. 16 ರೊಳಗೆ ಪಡೆಯಬೇಕು. ಭರ್ತಿಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜು. 31 ರೊಳಗಾಗಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್‍ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಡಿ. ದೇವರಾಜ ಅರಸು ನಿಗಮದಡಿ ವಿವಿಧ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಡಿ. ದೇವರಾಜ ಅರಸು ನಿಗಮದಡಿ ವಿವಿಧ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಡಿ. ದೇವರಾಜ ಅರಸು ನಿಗಮದಡಿ ವಿವಿಧ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_34.html
0 Response to "ಡಿ. ದೇವರಾಜ ಅರಸು ನಿಗಮದಡಿ ವಿವಿಧ ಸಾಲ ಯೋಜನೆ : ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ