ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ ದೇಶದ ಗಮನ ಸೆಳೆದಿದೆ : ಸಂಜೀವ ವಿ. ಕುಲಕರ್ಣಿ

ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ ದೇಶದ ಗಮನ ಸೆಳೆದಿದೆ : ಸಂಜೀವ ವಿ. ಕುಲಕರ್ಣಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ ದೇಶದ ಗಮನ ಸೆಳೆದಿದೆ : ಸಂಜೀವ ವಿ. ಕುಲಕರ್ಣಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ ದೇಶದ ಗಮನ ಸೆಳೆದಿದೆ : ಸಂಜೀವ ವಿ. ಕುಲಕರ್ಣಿ
ಲಿಂಕ್ : ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ ದೇಶದ ಗಮನ ಸೆಳೆದಿದೆ : ಸಂಜೀವ ವಿ. ಕುಲಕರ್ಣಿ

ಓದಿ


ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ ದೇಶದ ಗಮನ ಸೆಳೆದಿದೆ : ಸಂಜೀವ ವಿ. ಕುಲಕರ್ಣಿ



ಕೊಪ್ಪಳ ಜು. 26 (ಕರ್ನಾಟಕ ವಾರ್ತೆ): ಬಾಲ್ಯ ವಿವಾಹ ನಿಷೇಧದ ಕುರಿತು "ಕರ್ನಾಟಕ ತಿದ್ದುಪಡಿ ಕಾಯ್ದೆ-2016" ಯು ದೇಶದ ಗಮನ ಸೆಳೆದಿದೆ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕರ್ಣಿ ಅವರು ಹೇಳಿದರು.   

    ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ "ಮಕ್ಕಳ ಹಕ್ಕುಗಳ ಸಂರಕ್ಷಣೆಯಲ್ಲಿ ಅಂಗನವಾಡಿ ಮೇಲ್ವಿಚಾರಕಿಯರ ಪಾತ್ರ" ಕುರಿತು ಕೊಪ್ಪಳ ನ್ಯಾಯಾಲಯ ಆವರಣದ ಸಾಕ್ಷಿದಾರರ ಮೊಗಸಾಲೆ ಹಾಲ್‍ನಲ್ಲಿ ಬುಧವಾರದಂದು ಆಯೋಜಿಸಲಾದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. 

ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವದಕ್ಕಾಗಿ ಕರ್ನಾಟಕವು ಇಡೀ ದೇಶದ ಗಮನ ಸೆಳೆದ ರಾಜ್ಯವಾಗಿದೆ.  ಈ ಕಾಯ್ದೆಗೆ ಕರ್ನಾಟಕ ಸರ್ಕಾರವು 2016ರಲ್ಲಿ ತಂದ ತಿದ್ದುಪಡಿಗಳು ಪ್ರಮುಖವಾಗಿದ್ದು, ರಾಷ್ಟ್ರ ಮಟ್ಟದಲ್ಲಿ ಹೆಸರಾಗಿದೆ.  ಈ ತಿದ್ದುಪಡಿಯಲ್ಲಿನ ಪ್ರಮುಖ ಅಂಶಗಳನ್ನು ಮನಗೊಂಡ ಕೇಂದ್ರ ಸರ್ಕಾರವು ಸಹ ಮೂಲ ಕಾಯ್ದೆಗೆ ತಿದ್ದುಪಡಿ ಮಾಡಲು ಮುಂದಾಗಿದೆ.  ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಸರ್ಮಪಕ ಅನುಷ್ಠಾನದಲ್ಲಿ  ಅಂಗನವಾಡಿ ಮೇಲ್ವಿಚಾರಕಿಯರ ಪಾತ್ರವು ಅತ್ಯಂತ ಪ್ರಮುಖವಾಗಿದೆ.  ಕರ್ನಾಟಕ ರಾಜ್ಯವನ್ನು ಬಾಲ್ಯ ವಿವಾಹ ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು “ಸಮಗ್ರ ಶಿಶು ಅಭಿವೃದ್ಧಿ ಯೋಜನಾ” ವ್ಯಾಪ್ತಿಯಲ್ಲಿನ ವಲಯ ಮಟ್ಟದಲ್ಲಿ ಅಂಗನವಾಡಿ ಮೇಲ್ವಿಚಾರಕಿಯರನ್ನು ಸಹ ಬಾಲ್ಯ ವಿವಾಹ ನಿಷೇದಾಧಿಕಾರಿಗಳನ್ನಾಗಿ ನೇಮಿಸಿದೆ.  ಮೇಲ್ವಿಚಾರಕಿಯರ ವಲಯ ವ್ಯಾಪ್ತಿಯಲ್ಲಿ ಯಾವುದೇ ಬಾಲ್ಯ ವಿವಾಹಗಳು ಜರುಗದಂತೆ ನೋಡಿಕೊಳ್ಳುವದು ಬಹಳ ಪ್ರಮುಖ ಜವಾಬ್ದಾರಿಯಾಗಿದ್ದು, ಬಾಲ್ಯ ವಿವಾಹಗಳನ್ನು ತಡೆಗಟ್ಟುವಲ್ಲಿ ಸರಕಾರವು ಅಂಗನವಾಡಿ ಮೇಲ್ವಿಚಾರಕಿಯರಿಗೆ ಅರಕ್ಷಕ ನಿರೀಕ್ಷಕರ ಅಧಿಕಾರವನ್ನು ನೀಡಿದೆ.  ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಯಾರೇ ಪ್ರಭಾವಿ ವ್ಯಕ್ತಿ ಅಥವಾ ಸಂಸ್ಥೆ ನಿಮ್ಮ ಮೇಲೆ ನಕರಾತ್ಮಕ ಪ್ರಭಾವ ಬೀರಿದಲ್ಲಿ ಅವರ ವಿರುದ್ಧವು ಸಹ ಬಾಲ್ಯ ವಿವಾಹಕ್ಕೆ ಕುಮಕ್ಕು ಅಥವಾ ಪ್ರೋತ್ಸಾಹಿಸಿದವರು ಎಂದು ಕಲಂ 10 ಹಾಗೂ 11ರಡಿಯಲ್ಲಿ ಪ್ರಕರಣವನ್ನು ದಾಖಲಿಸಬಹುದಾಗಿದೆ.  ಕಾಯ್ದೆ ಕಲಂ 13ರಡಿಯಲ್ಲಿ ಬಾಲ್ಯ ವಿವಾಹವನ್ನು ಅಥವಾ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ತಡೆಯಾಜ್ಞೆಯನ್ನು ನ್ಯಾಯಾಲಯದಿಂದ ಪಡೆದುಕೊಳ್ಳಬಹುದಾಗಿದೆ.  ಇದಕ್ಕೆ ಬೇಕಾದ ಯಾವುದೇ ರೀತಿಯ ಸಹಕಾರ, ನೆರವನ್ನು ಕಾನೂನು ಸೇವಾ ಪ್ರಾಧಿಕಾರದಿಂದ ಪಡೆದುಕೊಳ್ಳಿ.  ಈಗಾಲೇ ಜಿಲ್ಲೆಯಲ್ಲಿ ನ್ಯಾಯಾಲಯದಿಂದ “ತಡೆಯಾಜ್ಞೆ”ಯನ್ನು ಹೊರಡಿಸಿ ಒಂದು ಬಾಲ್ಯ ವಿವಾಹವನ್ನು ತಡೆಹಿಡಿಯಲಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ ಕುಲಕರ್ಣಿ ಅವರು ಹೇಳಿದರು. 
ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೀರ್ತೆಪ್ಪ ಗೋಟೂರು ಅವರು ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ಅಥವಾ ಹಲ್ಲೆಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ಗೆ ತಿದ್ದುಪಡಿ ಮಾಡಿ ಅಪರಾಧ ತಿದ್ದುಪಡಿ ಕಾಯ್ದೆ-2016ನ್ನು ಜಾರಿಗೊಳಿಸಿದೆ.  ಈ ಕಾಯ್ದೆ ಅನ್ವಯ 12ವರ್ಷದೊಳಗಿನ ವಯೋಮಾನದ ಮಗುವಿನ ಮೇಲಿನ ಲೈಂಗಿಕ ದೌರ್ಜನ್ಯ ಅಥವಾ ಹಲ್ಲೆ ಮಾಡುವುದು ತೀವ್ರತರ ಶಿಕ್ಷಾರ್ಹ ಅಪರಾಧವಾಗಿದೆ.  ಅಲ್ಲದೇ 16ವರ್ಷದೊಳಗಿನ ವಯೋಮಾನದ ಮಗುವಿನ ಮೇಲಿನ ಲೈಂಗಿಕ ದೌರ್ಜನ್ಯ ಅಥವಾ ಹಲ್ಲೆ ಮಾಡುವುದು ತೀವ್ರತರ ಶಿಕ್ಷಾರ್ಹ ಅಪರಾಧವಾಗಿದ್ದು, ಭಾರತೀಯ ದಂಡ ಸಂಹಿತೆ 376ಎಬಿ ಪ್ರಕಾರ ಈ ಕೃತ್ಯಗಳಿಗೆ ಕನಿಷ್ಠ 20ವರ್ಷದಿಂದ ಜೀವಾವಧಿ ಜೈಲು ಶಿಕ್ಷೆ ಮತ್ತು ದಂಡ ಅಥವಾ ಮರಣ ದಂಡನೆ ಶಿಕ್ಷೆಯನ್ನು ವಿಧಿಸಬಹುದಾಗಿದೆ.  ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಲೈಂಗಿಕ ಸಂಪರ್ಕವೂ ಸಹ ಅತ್ಯಾಚಾರವೆಂದು ಘನ ಸರ್ವೋಚ್ಛ ನ್ಯಾಯಾಲಯ ಆದೇಶಿಸಿದ್ದು, ಬಾಲ್ಯವಿವಾಹವಾಗಿ ಪತ್ನಿಯೊಂದಿಗೆ ಲೈಂಗಿಕ ಚಟುವಟಿಕೆ ನಡೆಸಿದರೆ ಅದೂ ಸಹ ಲೈಂಗಿಕ ಅಪರಾಧವಾಗಿದೆ.  ಇದಕ್ಕೆ ಮಕ್ಕಳ ಸಂರಕ್ಷಣಾ ಕಾಯ್ದೆ-2012ರನ್ವಯ ಅಪರಾಧವೆಂದು ಪರಿಗಣಿಸಿ ಶಿಕ್ಷೆ ವಿಧಿಸಬಹುದಾಗಿದೆ.  ಯಾವದೇ ಕಾರಣಕ್ಕೂ ಅಂಗನವಾಡಿ ಮೇಲ್ವಿಚಾರಕಿಯರು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ಜರುಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.  ಅಲ್ಲದೇ ಈ ಕುರಿತು ಸಮುದಾಯದಲ್ಲಿ ವ್ಯಾಪಕ ಪ್ರಚಾರವನ್ನು ಕೈಗೊಳ್ಳಿ.  ತಪ್ಪಿದಲ್ಲಿ ನಿಮ್ಮ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವದು ಎಂದರು.  
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ವಿರೇಂದ್ರ ನಾವದಗಿ ಸೇರಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಅಂಗನವಾಡಿ ಮೇಲ್ವಿಚಾರಕಿಯರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಭಾಗವಹಿಸಿದ್ದರು.  ರವಿಕುಮಾರ ಪವಾರ ಕಾರ್ಯಕ್ರಮ ನಿರೂಪಿಸಿದರು,  ಆರ್. ಜಯಶ್ರೀ ಕೊನೆಯಲ್ಲಿ ವಂದಿಸಿದರು.  ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ತರಬೇತಿ ಸಂಯೋಜಕ ಹರೀಶ್ ಜೋಗಿ ಅವರು "ಮಕ್ಕಳ ಹಕ್ಕುಗಳ ಸಂರಕ್ಷಣೆಯಲ್ಲಿ ಅಂಗನವಾಡಿ ಮೇಲ್ವಿಚಾರಕಿಯರ ಪಾತ್ರ" ಕುರಿತು, ಮಾನಸಿಕ ಆರೋಗ್ಯ ಚಿಕಿತ್ಸಕ ಡಾ. ಕೃಷ್ಣ ಓಂಕಾರ ಅವರು "ಮಾದಕ ವಸ್ತು ನಿಷೇಧ ಯೋಜನೆ-2015"ರ ಕುರಿತು ಹಾಗೂ ಅಪರ ಸರ್ಕಾರಿ ವಕೀಲರಾದ ಗೌರಮ್ಮ ದೇಸಾಯಿ ಅವರು "ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012"ರ ಕುರಿತು ಅಂಗನವಾಡಿ ಮೇಲ್ವಿಚಾರಕಿಯರಿಗೆ ವಿಶೇಷ ತರಬೇತಿಯನ್ನು ನೀಡಿದರು.


ಹೀಗಾಗಿ ಲೇಖನಗಳು ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ ದೇಶದ ಗಮನ ಸೆಳೆದಿದೆ : ಸಂಜೀವ ವಿ. ಕುಲಕರ್ಣಿ

ಎಲ್ಲಾ ಲೇಖನಗಳು ಆಗಿದೆ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ ದೇಶದ ಗಮನ ಸೆಳೆದಿದೆ : ಸಂಜೀವ ವಿ. ಕುಲಕರ್ಣಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ ದೇಶದ ಗಮನ ಸೆಳೆದಿದೆ : ಸಂಜೀವ ವಿ. ಕುಲಕರ್ಣಿ ಲಿಂಕ್ ವಿಳಾಸ https://dekalungi.blogspot.com/2018/07/blog-post_57.html

Subscribe to receive free email updates:

0 Response to "ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ ದೇಶದ ಗಮನ ಸೆಳೆದಿದೆ : ಸಂಜೀವ ವಿ. ಕುಲಕರ್ಣಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ