ಶೀರ್ಷಿಕೆ : ಯಲಬುರ್ಗಾ : ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಯಲಬುರ್ಗಾ : ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಯಲಬುರ್ಗಾ : ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಜು. 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಯಲಬುರ್ಗಾ ಪಟ್ಟಣ ಪಂಚಾಯತ್ ವತಿಯಿಂದ ಪ್ರಸಕ್ತ ಸಾಲಿನ ದೀನ್‍ದಯಾಳ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಹಾಗೂ ಸ್ವ-ಸಹಾಯ ಗುಂಪಿಗೆ ಮತ್ತು ವಿವಿಧ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ಯಲಬುರ್ಗಾ ಪಟ್ಟಣ ಪಂಚಾಯತ್‍ಯಿಂದ ಸ್ವಂತ ಉದ್ಯೋಗಕ್ಕಾಗಿ ಸಾಲ ಸೌಲಭ್ಯಕ್ಕಾಗಿ 4 ಜನ ಫಲಾನುಭವಿಗಳಿಗೆ ಮತ್ತು ಸ್ವ-ಸಹಾಯ ಗುಂಪಿಗೆ 1, ಹಾಗೂ ಸ್ವ-ಸಹಾಯ 3, ಗುಂಪಿಗೆ ಕ್ರೇಡಿಟ್ ಲಿಂಕೇಜ್ 5, ಸ್ವ-ಸಹಾಯ ಸಂಘಗಳ ರಚನೆ ಹಾಗೂ ವಿವಿಧ ತರಬೇತಿಗಾಗಿ 24 ಗುರಿಯನ್ನು ನಿಗದಿ ಪಡಿಸಲಾಗಿದ್ದು, ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು. ಆಸಕ್ತರು ಅರ್ಜಿಯನ್ನು ಪ.ಪಂ. ಕಾರ್ಯಾಲಯದಿಂದ ಪಡೆದು ಭರ್ತಿ ಮಾಡಿ, ಜಾತಿ, ಆದಾಯ, ವಿದ್ಯಾರ್ಹತೆ ಪ್ರಮಾಣ ಪತ್ರಗಳು, ಮತದಾರರ ಭಾವಚಿತ್ರ ವಿರುವ ಕಾರ್ಡ್, ಬಿ.ಪಿ.ಎಲ್. ರೇಶನ್ ಕಾರ್ಡ್, 2 ಭಾವಚಿತ್ರ ಹಾಗೂ ಆಧಾರ ಕಾರ್ಡ್, ಈ ಎಲ್ಲಾ ದಾಖಲೆಗಳನ್ನು ಕಡ್ಡಾಯವಾಗಿ ದೃಢೀಕರಿಸಿ ಲಗತ್ತಿಸಿ, ದ್ವಿ ಪ್ರತಿಯಲ್ಲಿ ಜು. 20 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ವೇಳೆಯಲ್ಲಿ ವಿಷಯ ನಿರ್ವಾಹಕರ ಹತ್ತಿರ ಪಡೆಯಬಹುದಾಗಿದೆ ಎಂದು ಯಲಬುರ್ಗಾ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಯಲಬುರ್ಗಾ : ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಯಲಬುರ್ಗಾ : ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಯಲಬುರ್ಗಾ : ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_6.html
0 Response to "ಯಲಬುರ್ಗಾ : ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ