ಶೀರ್ಷಿಕೆ : ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಯಶಸ್ವಿ
ಲಿಂಕ್ : ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಯಶಸ್ವಿ
ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಯಶಸ್ವಿ
ಕೊಪ್ಪಳ ಜು. 27 (ಕರ್ನಾಟಕ ವಾರ್ತೆ): ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಮತ್ತು ರ್ಯಾಗಿಂಗ್ ಜಾಗೃತಿ ಕುರಿತು ಹಲಗೇರಿ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಇತ್ತೀಚೆಗೆ ಆಯೋಜಿಸಲಾದ ಕಾನೂನು ಅರಿವು ನೆರವು ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಹಲಗೇರಿ ಸರಕಾರಿ ಪದವಿ ಪೂರ್ವ ಕಾಲೇಜು ಇವರ ಸಹಯೋಗದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ ಅವರು ಕಾರ್ಯಕ್ರಮ ಉದ್ಘಾಟಿಸಿ, ನಿರ್ಭಯ ಪ್ರಕರಣ (ಪ್ರಚಲಿತ) ಇತ್ತೀಚೆಗೆ ಸುಪ್ರೀಂ ಕೋರ್ಟ ನೀಡಿದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯ ಖಾಯಮಾತಿ ಬಗ್ಗೆ ವಿವರಿಸಿ, ಪೋಕ್ಸೋ ಅಧಿನಿಯಮದ ಬಗ್ಗೆ ಜಾಗೃತಿ ಹೊಂದುವಂತೆ ವಿದ್ಯಾರ್ಥಿಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಲಗೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶರಣಪ್ಪ ಬೇಲೇರಿ ಅವರು ವಹಿಸಿದ್ದರು. ನಿವೃತ್ತ ಶಿಕ್ಷಕ ರಾಮನಗೌಡ ಪಾಟೀಲ, ವಕೀಲರಾದ ಶರಣಬಸವನಗೌಡ ಪಾಟೀಲ ಹಾಗೂ ಶಿವಣ್ಣ ಆರ್. ಕುರಿ ಸೇರಿದಂತೆ ಕಾಲೇಜಿನ ಎಲ್ಲ ಉಪನ್ಯಾಸಕ ವೃದದವರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೊಪ್ಪಳದ ವಕೀಲರಾದ ಹನುಮಂತರಾವ ಅವರು ಯುವಜನತೆ ವ್ಯಕ್ತಿತ್ವ ವಿಕಾಸನತ ಮತ್ತು ರ್ಯಾಗಿಂಗ್ ಬಗ್ಗೆ ವಿಶೇಷ ಉಪನ್ಯಾಸದ ಮೂಲಕ ಜಾಗೃತಿ ಮೂಡಿಸಿದರು. ಇನ್ನೋರ್ವ ವಕೀಲರಾದ ನಿರಂಜನಸ್ವಾಮಿ ಹಿರೇಮಠ ಅವರು ಜನ ಸಾಮಾನ್ಯರಿಗಾಗಿ ಇರುವ ಕಾನೂನುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಅಲ್ಲದೇ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಜರುಗಿತು.
ಹೀಗಾಗಿ ಲೇಖನಗಳು ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಯಶಸ್ವಿ
ಎಲ್ಲಾ ಲೇಖನಗಳು ಆಗಿದೆ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಯಶಸ್ವಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಯಶಸ್ವಿ ಲಿಂಕ್ ವಿಳಾಸ https://dekalungi.blogspot.com/2018/07/blog-post_68.html
0 Response to "ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಯಶಸ್ವಿ"
ಕಾಮೆಂಟ್ ಪೋಸ್ಟ್ ಮಾಡಿ