ಶೀರ್ಷಿಕೆ : ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ
ಲಿಂಕ್ : ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ
ಕೊಪ್ಪಳ ಜು. 11 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ 35 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಂ4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದು. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸೃಜನಶೀಲ, ಸೃಜನೇತರ ಸಾಹಿತ್ಯವಾಗಿರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560 002 - ಈ ವಿಳಾಸಕ್ಕೆ ಜುಲೈ 21 ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ವೆಬ್ ಸೈಟ್ : https://ift.tt/1tU4YjE ದೂರವಾಣಿ ಸಂಖ್ಯೆ: 080-22484516 / 22017704 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/07/blog-post_69.html
0 Response to "ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ