news and photo 16-7-2018

news and photo 16-7-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು news and photo 16-7-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : news and photo 16-7-2018
ಲಿಂಕ್ : news and photo 16-7-2018

ಓದಿ


news and photo 16-7-2018

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ಪ್ರವಾಸ
***********************************************************
ಕಲಬುರಗಿ,ಜು.16.(ಕ.ವಾ.)-ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯರಾದ ಕೆ.ಬಿ. ಚನಗಪ್ಪ ಅವರು ಯಶವಂತಪುರ-ಸೋಲಾಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜುಲೈ 19ರಂದು ಬೆಳಿಗ್ಗೆ 6.25ಕ್ಕೆ ಕಲಬುರಗಿಗೆ ಆಗಮಿಸುವರು.
ಅಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳ ಅರಿವು ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯ ಕಾನ್ಫ್‍ರೆನ್ಸ್ ಹಾಲ್‍ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಕುರಿತು ಸಭೆ ನಡೆಸುವರು. ಸಂಜೆ 5.30 ಗಂಟೆಗೆ ಸಾರ್ವಜನಿಕರಿಂದ ದೂರನ್ನು ಸ್ವೀಕರಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಜುಲೈ 20ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವರು. ನಂತರ ರಾತ್ರಿ 9.05 ಗಂಟೆಗೆ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ಗ್ರಾಮೀಣಾಭಿವೃದ್ಧಿ ಸಚಿವರ ಪ್ರವಾಸ
*******************************
ಕಲಬುರಗಿ,ಜು.16.(ಕ.ವಾ.)-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ ಅವರು ಯಶವಂತಪುರ-ಸೋಲಾಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜುಲೈ 17ರಂದು ಬೆಳಿಗ್ಗೆ 6.30 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಸಚಿವರು ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಲಬುರಗಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಕಾಮಗಾರಿಗಳ ಪರಿಶೀಲನೆಗಾಗಿ ಕ್ಷೇತ್ರ ಭೇಟಿ ನೀಡುವರು. ಅಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 5 ರಿಂದ 7 ಗಂಟೆಯವರೆಗೆ ಕಾಯ್ದಿರಿಸಲಾಗಿದೆ. ಅಂದು ಸಂಜೆ 7 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೀದರಕ್ಕೆ ಪ್ರಯಾಣಿಸುವರು.
ಮಾಹಿತಿ ಹಕ್ಕು: ಸಂಘ ಸಂಸ್ಥೆಗಳ ಹೆಸರಲ್ಲಿ ಮಾಹಿತಿ ಕೇಳಿದರೆ ಅರ್ಜಿ ತಿರಸ್ಕøತ
ಕಲಬುರಗಿ,ಜು.16.(ಕ.ವಾ.)-ಮಾಹಿತಿ ಪಡೆಯುವ ಹಕ್ಕನ್ನು ನಾಗರಿಕರಾಗಿ ಚಲಾಯಿಸಬೇಕು. ಯಾವುದೇ ಸಂಘ ಸಂಸ್ಥೆ ಅಥವಾ ಲೇಟರ್ ಹೆಡ್‍ನಲ್ಲಿ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಡಾ. ಸುಚೇತನ ಸ್ವರೂಪ ತಿಳಿಸಿದರು.
ಅವರು ಸೋಮವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಹಿತಿ ಹಕ್ಕು ಮೇಲ್ಮನವಿ ಪ್ರಾಧಿಕಾರದಲ್ಲಿ ಬಾಕಿಯಿರುವ ಪ್ರಕರಣಗಳ ವಿಚಾರಣೆ ನಡೆಸಿ ಅರ್ಜಿದಾರರು ಸಾಮಾಜಿಕ ಹಿತಾಸಕ್ತಿಗಾಗಿ ಮಾಹಿತಿ ಹಕ್ಕನ್ನು ಬಳಸಿಕೊಳ್ಳಬೇಕು. ವೈಯಕ್ತಿಕ ದ್ವೇಷ ಅಥವಾ ತೊಂದರೆ ನೀಡುವ ಉದ್ದೇಶ ಹೊಂದಿರಬಾರದು. ಬಹಳಷ್ಟು ಅರ್ಜಿಗಳು ಕ್ರಮಬದ್ಧವಾಗದಿರುವ ಕಾರಣ ಸಮರ್ಪಕ ಉತ್ತರ ಸಿಗುತ್ತಿಲ್ಲ ಎಂದು ಹೇಳಿದರು.
ಮಾಹಿತಿ ಹಕ್ಕು ಕಾಯ್ದೆಯನ್ನು ಅಧಿಕಾರಿಗಳು ಗಂಭೀರ ರೀತಿಯಲ್ಲಿ ಪರಿಗಣಿಸಿ ಮಾಹಿತಿ ನೀಡುವುದು ತಮ್ಮ ಕರ್ತವ್ಯ ಎಂದು ಭಾವಿಸಬೇಕು. ನಿಗದಿತ ಸಮಯದಲ್ಲಿ ಮಾಹಿತಿ ನೀಡುವ ಮೂಲಕ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿಗಳು ಬರದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ವೈಯಕ್ತಿಕವಾದಂತಹ ಶೈಕ್ಷಣಿಕ ಅರ್ಹತೆ, ಜಾತಿ, ಸೇವಾ ಪುಸ್ತಕ ಮಾಹಿತಿಯನ್ನು ಒದಗಿಸಬಾರದು. ಮಾಹಿತಿ ಹಕ್ಕಿನಡಿ ಒದಗಿಸುವ ಮಾಹಿತಿಯನ್ನು ಬೇರೆ ಸ್ಥಳಗಳಿಗೆ ರವಾನಿಸಬೇಕಾದಲ್ಲಿ ಅವುಗಳನ್ನು ಕಡ್ಡಾಯವಾಗಿ ನೋಂದಾಯಿತ ಅಂಚೆ ಮೂಲಕ ರವಾನಿಸಿ ದಾಖಲೆ ಇಟ್ಟುಕೊಳ್ಳಬೇಕು ಎಂದು ಹೇಳಿದರು.
ರಾಜ್ಯಮಟ್ಟದಲ್ಲಿ ಬೃಹತ್ ಬೆಂಗಳೂರು ಮಹಾನಗರಪಾಲಿಕೆಗೆ ಹೆಚ್ಚಿನ ಮಾಹಿತಿ ಹಕ್ಕು ಅರ್ಜಿಗಳು ಸಲ್ಲಿಕೆಯಾಗುತ್ತವೆ. ನಂತರ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಮಾಹಿತಿ ಪಡೆಯಲಾಗುತ್ತಿದೆ. ಜಿಲ್ಲಾ ಮಟ್ಟಕ್ಕೆ ಹೋಲಿಸಿದರೆ ಮಾಹಿತಿ ಅರ್ಜಿ ಸಲ್ಲಿಕೆಯಲ್ಲಿ ಪ್ರಥಮ ಸ್ಥಾನ ರಾಯಚೂರಿಗೆ ದೊರೆಯುತ್ತದೆ. ನಂತರ ಬೆಳಗಾವಿ, ಕಲಬುರಗಿ ಜಿಲ್ಲೆಗಳು ಬರುತ್ತವೆ. ಇಲಾಖೆವಾರು ಹೋಲಿಸಿದರೆ ಸುಮಾರು ಶೇ. 50ಕ್ಕಿಂತ ಹೆಚ್ಚು ಮಾಹಿತಿ ಅರ್ಜಿಗಳು ಕಂದಾಯ ಇಲಾಖೆಗೆ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಗೆ ಸೇರಿರುತ್ತವೆ ಎಂದು ವಿವರಿಸಿದರು.
ಕೇಂದ್ರ ಸರ್ಕಾರ ರೂಪಿಸಿರುವ ಮಾಹಿತಿ ಹಕ್ಕು ಕಾಯ್ದೆಯನ್ನು ತಿದ್ದುಪಡಿ ಮಾಡಲು ಬರುವುದಿಲ್ಲ. ಆದರೆ ಎಲ್ಲ ರಾಜ್ಯ ಸರ್ಕಾರಗಳು ಮಾಹಿತಿ ನಿಯಮಗಳನ್ನು ರೂಪಿಸಿಕೊಳ್ಳಬಹುದಾಗಿದೆ. ಇದರಡಿ ಕರ್ನಾಟಕದಲ್ಲಿ ನಿಯಮ 14 ರೂಪಿಸಲಾಗಿದೆ. ಈ ನಿಯಮದಡಿಯಲ್ಲಿ ಅರ್ಜಿದಾರರು ತಮ್ಮ ಅರ್ಜಿಯಲ್ಲಿ 150 ಪದಗಳು ಮೀರದಂತೆ ಮಾಹಿತಿ ಕೇಳಬೇಕು. ಕೇಳಿರುವ ಮಾಹಿತಿಯು ಒಂದೇ ವಿಷಯಕ್ಕೆ ಸೀಮಿತವಾಗಿರಬೇಕು ಹಾಗೂ ಮಾಹಿತಿಯು ಒಂದೇ ಕಡತಕ್ಕೆ ಸಂಬಂಧಿಸಿರಬೇಕು. ಅರ್ಜಿದಾರರು ಅರ್ಜಿಯಲ್ಲಿ 3-4 ವಿಷಯಗಳ ಕುರಿತು ಮಾಹಿತಿ ಕೇಳಿದ್ದಲ್ಲಿ ಅಧಿಕಾರಿಗಳು ಯಾವುದೇ ಒಂದು ವಿಷಯ ಕುರಿತು ಮಾಹಿತಿ ಒದಗಿಸಬೇಕು ಎಂದರು.
ಎರಡು ವರ್ಷಗಳ ಹಿಂದೆ ರಾಜ್ಯ ಮಾಹಿತಿ ಆಯೋಗದಲ್ಲಿ 40,000 ಪ್ರಕರಣಗಳು ಬಾಕಿ ಇದ್ದವು. ರಾಜ್ಯದ ಮುಖ್ಯ ಮಾಹಿತಿ ಆಯುಕ್ತರುಗಳು ಏಕಕಾಲದಲ್ಲಿ ಪ್ರಕರಣಗಳನ್ನು ವಿಚಾರಣೆಗೆ ಕೈಗೊಂಡು ಬಾಕಿ ಕಡತಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡವರು, ಅನ್ಯಾಯವಾಗಿ ನಡೆದುಕೊಂಡವರು ಸಲ್ಲಿಸಿರುವ ಅರ್ಜಿಗಳನ್ನು ಸುಮಾರು 5 ನ್ಯಾಯಾಧೀಶರ ಪೂರ್ಣ ಪೀಠಕ್ಕೆ ಒಳಪಡಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದರು.
ಕಲಬುರಗಿಯಲ್ಲಿ ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಡಾ. ಸುಚೇತನ ಸ್ವರೂಪ ಅವರು 102 ಅರ್ಜಿಗಳನ್ನು ಪರಿಶೀಲನೆ ಮಾಡಿದರು. ಈ ಪೈಕಿ 60 ಪ್ರಕರಣಗಳನ್ನು ವಿಲೇವಾರಿ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ದಯಾನಂದ ಪಾಟೀಲ, ಆಯೋಗದ ತೀರ್ಪು ಬರಹಗಾರ ಅಪ್ಪಾಜಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ದೂರುದಾರರು ಪಾಲ್ಗೊಂಡಿದ್ದರು.

ಜುಲೈ 19ರಂದು ಕಲಬುರಗಿಯಲ್ಲಿ ಮಾನ್ಯುವಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆ
***************************************************************
ಕಲಬುರಗಿ,ಜು.16.(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆ, ನ್ಯಾಶನಲ್ ಸಫಾಯಿ ಕರ್ಮಚಾರಿ ಪೈನಾನ್ಸ್ ಆಂಡ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಇದೇ ಜುಲೈ 19 ರಂದು ಕಲಬುರಗಿ ನಗರ ವ್ಯಾಪ್ತಿಯಲ್ಲಿನ ಮ್ಯಾನ್ಯುವಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆಯನ್ನು ಕಲಬುರಗಿಯ ಮಹಾನಗರ ಪಾಲಿಕೆಯ ಇಂದಿರಾ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಘುನಂದನಮೂರ್ತಿ ತಿಳಿಸಿದ್ದಾರೆ.
ಖಿhe ಠಿಡಿohibiಣioಟಿ oಜಿ ಇmಠಿಟoಥಿmeಟಿಣ ಚಿs ಒಚಿಟಿuಚಿಟ sಛಿಚಿveಟಿgeಡಿs ಚಿಟಿಜ ಣheiಡಿ ಖehಚಿbiಟiಣಚಿಣioಟಿ ಂಛಿಣ 2013 ಕಾಯ್ದೆಯು ಜಾರಿಗೆ ಬರುವುದಕ್ಕಿಂತ ಮುಂಚೆ ನಗರದ ವ್ಯಾಪ್ತಿಯಲ್ಲಿ ಯಾರಾದರೂ ಮ್ಯಾನ್ಯುವಲ್ ಸ್ಕ್ಯಾವೆಂಜರ್‍ಗಳಾಗಿದ್ದಲ್ಲಿ ತಮ್ಮ ಹೆಸರು ಹಾಗೂ ವಿಳಾಸವನ್ನು ಕಲಬುರಗಿ ಮಹಾನಗರ ಪಾಲಿಕೆಯ ಇಂದಿರಾ ಸ್ಮಾರಕ ಭವನಕ್ಕೆ ಬಂದು ನಿಯಮಾನುಸಾರ ನೋಂದಾಯಿಸಬೇಕೆಂದು ಅವರು ತಿಳಿಸಿದ್ದಾರೆ.

ಜುಲೈ 19ರಂದು ಉದ್ಯೋಗ ಮೇಳ
*******************************
ಕಲಬುರಗಿ,ಜು.16.(ಕ.ವಾ.)-ವಿಶ್ವ ಕೌಶಲ್ಯ ದಿನದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 19ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರ (ಬಯೋಡೇಟಾ) ದೊಂದಿಗೆ ಭಾಗವಹಿಸಬೇಕೆಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ. ಹುಬ್ಬಳ್ಳಿಯ ಶ್ರೀ ಸಾಯಿ ಬಯೋ ಫರ್ಟಿಲೈಜರ್‍ನಲ್ಲಿ ಫೀಲ್ಡ್ ಆಫೀಸರ್, ಗ್ರೂಪ್ ಲೀಡರ್ಸ್, ಟೀಮ್ ಮ್ಯಾನೇಜರ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಪಾಸಾದ 18 ರಿಂದ 35ವರ್ಷದೊಳಗಿನ ಪುರುಷ ಅಭ್ಯರ್ಥಿಗಳು, ಕಲಬುರಗಿಯ ಎಲ್. ಆಂಡ್ ಟಿ ಫೈನಾನ್ಸ್ ಕಂಪನಿಯಲ್ಲಿ ಫೀಲ್ಡ್ ಆಫೀಸರ್ ಹುದ್ದೆಗೆ 20 ರಿಂದ 28 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗÀವಹಿಸಬಹುದಾಗಿದೆ.
ಕಲಬುರಗಿ ಮಹಿಂದ್ರಾ ಸಪ್ತಗಿರಿ ಮೋಟರ್ಸ್‍ನಲ್ಲಿ ಸೇಲ್ಸ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ ಹೊಂದಿರುವ ಪುರುಷ ಅಭ್ಯರ್ಥಿಗಳು, ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಪುರುಷ ಅಭ್ಯರ್ಥಿಗಳು ಮತ್ತು ಸೇಲ್ಸ್ ಶೋರೂಂ ಕನ್ಸಲ್‍ಟೆಂಟ್ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಪಿಯುಸಿ ಅಥವಾ ಯಾವುದೇ ಪದವಿ ಪಾಸಾಗಿರಬೇಕು. ಡ್ರೈವರ್ ಹುದ್ದೆಗೆ ಎಸ್.ಎಸ್.ಎಲ್.ಸಿ. (ಹೆಚ್.ಡಿ.ಎಲ್.) ಪಾಸಾದ ಪುರುಷ ಅಭ್ಯರ್ಥಿಗಳು, ಮೆಕ್ಯಾನಿಕ್, ಎಲೆಕ್ಟ್ರಿಶಿಯನ್, ಸ್ಪೆರ್ ಪಾಟ್ರ್ಸ್ ಹುದ್ದೆಗಳಿಗೆ 25 ರಿಂದ 40 ವರ್ಷದೊಳಗಿನ ಐಟಿಐ ಪಾಸಾದ ಪುರುಷ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಶಿವಮೊಗ್ಗಾದ ಗುರುಕುಲ್ ಕರಿಯರ್ ಅಕಾಡೆಮಿಯಲ್ಲಿ ಲೋನ್ ಅಪ್ರೂವಲ್ ಆಫೀಸರ್ ಹುದ್ದೆಗೆ ಪುರುಷ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ. ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಬೆಳಗಾವಿಯ ಸ್ಫೂರ್ತಿ ಹರ್ಬಲ್ ಕಂಪನಿಯಲ್ಲಿ ಬ್ರ್ಯಾಂಚ್ ಮ್ಯಾನೇಜರ್, ಅಸಿಸ್ಟಂಟ್ ಬ್ರ್ಯಾಂಚ್ ಮ್ಯಾನೇಜರ್ ಮತ್ತು ಸೆಲ್ಸ್ ಮ್ಯಾನೇಜರ್, ಸೆಲ್ಸ್ ಆಫೀಸರ್ ಮತ್ತು ಸೆಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿಯುಸಿ, ಯಾವುದೇ ಪದವಿ, ಡಿಪ್ಲೋಮಾ ಮತ್ತು ಸ್ನಾತಕೋತ್ತರ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ನ್ನು ಸಂಪರ್ಕಿಸಲು ಕೋರಲಾಗಿದೆ

ಸಸ್ಯ ಸಂತೆ ಮಾರಾಟ ಮುಂದುವರಿಕೆ
********************************
ಕಲಬುರಗಿ,ಜು.16.(ಕ.ವಾ.)-ತೋಟಗಾರಿಕೆ ಇಲಾಖೆಯಿಂದ ತೋಟಗಾರಿಕೆ ಇಲಾಖೆಯಲ್ಲಿ ಉತ್ಪಾದಿಸಿರುವ ವಿವಿಧ ಕಸಿ/ಸಸಿಗಳ ಮಾರಾಟ ಮಾಡುವ ಕುರಿತು ಸಾರ್ವಜನಿಕರ ಬೇಡಿಕೆ ಮತ್ತ ಋತುಮಾನದ ಅನುಗುಣವಾಗಿ ಕಲಬುರಗಿ ಐವಾನ್-ಎ-ಶಾಹಿ ಪ್ರದೇಶದಲ್ಲಿರುವ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಆಯೋಜಿಸಲಾದ ಸಸ್ಯ ಸಂತೆ ಮಾರಾಟವನ್ನು ಮುಂದುವರಿಸಲಾಗಿದೆ. ಈ ಹಿಂದೆ ಜುಲೈ 14ರವರೆಗೆ ಮಾತ್ರ ಸಸ್ಯ ಸಂತೆ ಮಾರಾಟದ ದಿನಾಂಕವನ್ನು ನಿಗದಿಪಡಿಸಲಾಗಿತ್ತು ಎಂದು ಕಲಬುರಗಿ (ಜಿ.ಪಂ.) ಉಪ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 17ರಂದು ಕಾನೂನು ಅರಿವು ನೆರವು ಕಾರ್ಯಕ್ರಮ
**************************************************
ಕಲಬುರಗಿ,ಜು.16.(ಕ.ವಾ.)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಗಜ್ಯೋತಿ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಕೊಹಿನೂರ ವಾಣಿಜ್ಯ ಮಹಾವಿದ್ಯಾಲಯ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ನ್ಯಾಯ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಜುಲೈ 17ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಸಾಯಿ ಮಂದಿರ ಹತ್ತಿರದ ಕೊಹಿನೂರ ವಾಣಿಜ್ಯ ಪದವಿ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.
ಕಲಬುರಗಿ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್. ಮಾಣಿಕ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೊಹಿನೂರ ವಾಣಿಜ್ಯ ಪದವಿ ಕಾಲೇಜಿನ ಪ್ರಾಚಾರ್ಯ ಹನುಮಂತರಾವ ಬಿ. ಕುಂಟೇಗೋಳ ಅಧ್ಯಕ್ಷತೆ ವಹಿಸುವರು. ಜಗಜ್ಯೋತಿ ಬಸವೇಶ್ವರ ಸಮಾಜ ಸೇವಾ ಬಳಗದ ಅಧ್ಯಕ್ಷ ಹೆಚ್.ಬಿ. ಪಾಟೀಲ, ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಕೆ.ಹಿರೇಮಠ, ನ್ಯಾಯವಾದಿ ಅಂಬರಾಯ ಎಸ್. ಹಾಗರಗಿ ಹಾಗೂ ಜಗಜ್ಯೋತಿ ಬಸವೇಶ್ವರ ಸಮಾಜ ಸೇವಾ ಬಳಗದ ಕಾರ್ಯದರ್ಶಿ ರಾಜಶೇಖರ ಮರಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಲಲಿತಕಲಾ ಅಕಾಡೆಮಿ: ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನ
********************************************************
ಕಲಬುರಗಿ,ಜು.16.(ಕ.ವಾ.)-ಕರ್ನಾಟಕ ಲಲಿತ ಕಲಾ ಅಕಾಡೆಮಿಯು ಪ್ರತಿ ವರ್ಷದಂತೆ 2018ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರದ ಚಿತ್ರಕಲೆಗೆ ಸಂಬಂಧಿಸಿದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಪುಸ್ತಕಕ್ಕೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಪುಸ್ತಕಗಳು 2017ರ ಜನವರಿ 1ರಿಂದ ಡಿಸೆಂಬರ್ 31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಪುಸ್ತಕಗಳಾಗಿರಬೇಕು. ಪುಸ್ತಕದ ತಾಂತ್ರಿಕ ಪುಟದಲ್ಲಿ ಪ್ರಥಮ ಮುದ್ರಣ 2017 ಎಂದು ಮುದ್ರಿತವಾಗಿರಬೇಕು. ಪುಸ್ತಕ ಬಹುಮಾನದ ಮೊತ್ತ 25,000 ರೂ. ಇರುತ್ತದೆ.
ಬಹುಮಾನಕ್ಕೆ ಕಳುಹಿಸುವ ಪುಸ್ತಕವು ಪುನರ್ ಮುದ್ರಣವಾಗಿರಬಾರದು. ಮೊದಲ ಆವೃತ್ತಿಯಲ್ಲಿ ಪ್ರಕಟಗೊಂಡಿರಬೇಕು. ಅಕಾಡೆಮಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಸ್ವೀಕೃತವಾದ ಪುಸ್ತಕಗಳನ್ನು 3 ಜನ ವಿಷಯ ತಜ್ಞರಿಗೆ ಕಳುಹಿಸಿ ಅವರಿಂದ ಬಂದಂತಹ ಶಿಫಾರಸ್ಸು ಅಕಾಡೆಮಿಯ ಸಭೆಯಲ್ಲಿ ಮಂಡಿಸಿ ಅಕಾಡೆಮಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
ಪುಸ್ತಕದ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, ಜೆಸಿ ರಸ್ತೆ ಬೆಂಗಳೂರು-590002 ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ/ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಆಗಸ್ಟ್ 29 ರೊಳಗೆ ಕಳುಹಿಸಬೇಕು. ಕಳುಹಿಸಲ್ಪಡುವ ಪುಸ್ತಕದ ಮೇಲೆ ಯಾವ ಚಿತ್ರಕಲಾ ಪ್ರಕಾರಕ್ಕೆ ಸೇರುತ್ತದೆ ಎಂಬುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಬರೆದಿರಬೇಕು.

ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ನೀಡಿದ್ದಲ್ಲಿ ಸಾಧನೆ ಮಾಡಲು ಸಾಧ್ಯ
*************************************************************
ಕಲಬುರಗಿ,ಜು.10.(ಕ.ವಾ.)-ಕಲಬುರಗಿಯ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಲಬುರಗಿ ಜಿಲ್ಲಾ ಮಟ್ಟದ ಪ್ರತಿಭಾನ್ವಿತ ಕ್ರೀಡಾಕೂಟವನ್ನು ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ ಅವರು ಇತ್ತೀಚೆಗೆ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ದಸರಾ ಕ್ರೀಡಾಕೂಟಗಳು ನಡೆಯುವುದಕ್ಕಿಂತ ಮುಂಚಿತವಾಗಿ ಜಿಲ್ಲಾ ಮಟ್ಟದಲ್ಲಿ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ನೀಡಿದ್ದಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕ ಎಂ.ಎಸ್. ರಮೇಶ ಅವರು ಇಲಾಖೆ ಪ್ರಯುಖ ಚಟುವಟಿಕೆಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಕಾರ್ಪೋರೇಟರ್ ಅನೀಲ ಪಾಟೀಲ, ತರಬೇತುದಾರರು, ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಂಡಿದ್ದರು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಜಿ.ನಾಡಿಗೇರ ಸ್ವಾಗತಿಸಿದರು. ಹಾಕಿ ತರಬೇತುದಾರ ಸಂಜಯ ಬಾಣದ ವಂದಿಸಿದರು. ಅಥ್ಲೇಟಿಕ್ಸ್ ತರಬೇತುದಾರ ಶ್ರೀ ರಾಜು ಚವ್ಹಾಣ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಮಟ್ಟದ ಪ್ರತಿಭಾನ್ವಿತ ಕ್ರೀಡಾಕೂಟದ ಅಂಗವಾಗಿ ಜುಲೈ 12 ಹಾಗೂ 13ರಂದು ಎರಡು ದಿನಗಳ ಕಾಲ ಅಥ್ಲೇಟಿಕ್ಸ್, ಹಾಕಿ, ಜುಡೋ ಮತ್ತು ಫಿಟನೆಸ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಇಂದ್ರಧನುಷ ನಗರ ಲಸಿಕಾ ಅಭಿಯಾನಕ್ಕೆ ಚಾಲನೆ
*********************************************
ಕಲಬುರಗಿ,ಜು.16.(ಕ.ವಾ.)-ಸೋಮವಾರ ಕಲಬುರಗಿ ನಗರದ ರಾಮಜಿ ನಗರದ ಬುದ್ದ ಮಂದಿರದಲ್ಲಿ ಆಯೋಜಿಸಲಾಗಿದ್ದ ಇಂದ್ರಧನುಷ ನಗರ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಕಲಬುರಗಿ ಮಹಾನಗರಪಾಲಿಕೆ ಮಹಾಪೌರ ಶರಣುಕುಮಾರ ಮೋದಿ ಅವರು ಚಾಲನೆ ನೀಡಿದರು.
ಕಲಬುರಗಿ ನಗರಾದ್ಯಾಂತ 55 ವಾರ್ಡಗಳಲ್ಲಿ ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಈಗಾಗಲೇ ಸಮೀಕ್ಷೆ ಕೈಗೊಂಡು 489 ಗರ್ಭಿಣಿಯರು, 0-2 ವರ್ಷದ 2454 ಹಾಗೂ 5-6 ವರ್ಷದ 414 ಮಕ್ಕಳು ಲಸಿಕೆಯಿಂದ ಬಿಟ್ಟು ಹೋಗಿದ್ದು, 2018ರ ಜುಲೈ ಮಾಹೆಯ 16,17,18,20 ರಂದು, ಅಗಸ್ಟ್ ಮಾಹೆಯ 13,14,15,17ರಂದು ಹಾಗೂ ಸೆಪ್ಟೆಂಬರ್ ಮಾಹೆಯ 10,11,12, 14ನೇ ರಂದು 3 ತಿಂಗಳು ಕಾಲ ಗುರುತಿಸಿದ ಅಂಗನವಾಡಿ ಕೇಂದ್ರಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ, ಜಿಲ್ಲಾ ಆಸ್ಪತ್ರೆಯಲ್ಲಿ, ಲಸಿಕೆಯಿಂದ ಬಿಟ್ಟುಹೋದ ಫಲಾನುಬವಿಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಇದಾಗಿದ್ದು ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಕಿವಿಮಾತು ಹೇಳಿದರು.
ಜಿಲ್ಲಾ ನೋಡಲ್ ಅಧಿಕಾರಿ ಡಾ|| ಶಿವರಾಜ ಸಜ್ಜನಶೆಟ್ಟಿ ಮಾತನಾಡಿ ಈ ಕಾರ್ಯಕ್ರಮವು 0-2 ಹಾಗೂ 5-6 ವರ್ಷ ಮಕ್ಕಳಿಗೆ ಮತ್ತು ಗರ್ಭಿಣಿ ಸ್ತ್ರೀಯರಿಗೆ ಈಗಾಗಲೇ ಸಮೀಕ್ಷೆ ಮುಖಾಂತರ ಲಸಿಕಾ ವಂಚಿತ ಫಲಾನುಭವಿಗಳನ್ನು ಗುರುತಿಸಲಾಗಿದೆ. ಸಾರ್ವತ್ರಿಕ ಲಸಿಕಾ ವೇಳಾಪಟ್ಟಿಯಂತೆ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಲಸಿಕೆ ಹಾಕಿಸಿ 9 ಮಾರಕ ರೋಗಗಳಿಂದ ರಕ್ಷಿಸಬಹುದಾಗಿದೆ. ಲಸಿಕೆಯಿಂದ ಯಾವುದೇ ರೀತಿಯಿಂದ ಅಡ್ಡಪರಿಣಾಮಗಳಾಗುವುದಿಲ್ಲ. ಸಮಯಕ್ಕೆ ಸರಿಯಾಗಿ ಲಸಿಕೆ ಹಾಕಿಸಬೇಕೆಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಮಾಧವರಾವ ಪಾಟೀಲ ಮಾತನಾಡಿ, ಈ ಕಾರ್ಯಕ್ರಮದ ದಿನಗಳಂದು ಲಸಿಕೆ ವಂಚಿತ ಮತ್ತು ಲಸಿಕೆಯಿಂದ ಬಿಟ್ಟುಹೋದ ಮಕ್ಕಳನ್ನು ಪಾಲಕರು ನಿರ್ಲಕ್ಷ್ಯವಹಿಸದೇ ಲಸಿಕೆ ಹಾಕಿಸುವುದು ಪಾಲಕರ ಕರ್ತವ್ಯವಾಗಿದೆ. ಒಂದು ವೇಳೆ ಈ ಕಾರ್ಯಕ್ರಮದಲ್ಲಿ ಲಸಿಕೆ ಹಾಕಿಸಲು ತಪ್ಪಿದರೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ದಿನಗಳಂದು ಲಸಿಕೆ ಹಾಕಿಸಲು ಇಲಾಖೆಯ ಆಶಾ, ಅಂಗನವಾಡಿ ಮತ್ತು ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಮಜೀ ನಗರದ ಮಹಾನಗರಪಾಲಿಕೆ ಸದಸ್ಯ ಜಾವೇದ, ಜಿಲ್ಲಾ ಆರ್.ಸಿ.ಹೆಚ್ ಹಾಗೂ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ|| ಎ.ಎಸ್.ರುದ್ರವಾಡಿ, ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಡಾ|| ವಿನೋದ ಕುಮಾರ, ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಕಲಬುರಗಿ ನಗರ ಪ್ರದೇಶದ ಸಿ.ಡಿ.ಪಿ.ಓ, ಹಾಗೂ ಸ್ಥಳೀಯ ಮುಖಂಡರು ಅಮೃತ ಸಾಗರ ಲಸಿಕಾ ಮೇಲ್ವಿಚಾರಕರು ಉಪಸ್ಥಿತರಿದ್ದರು. ಪ್ರಭಾರ ತಾಲೂಕಾ ಆರೋಗ್ಯಾಧಿಕಾರಿ ಡಾ|| ವೇಣುಗೋಪಾಲ ಕಾರ್ಯಕ್ರಮ ನಿರ್ವಹಿಸಿದರು.

ಜುಲೈ 25-26ರಂದು ಕಲಾವಿದರ ಆಯ್ಕೆಗಾಗಿ ಸಂದರ್ಶನ
****************************************************
ಕಲಬುರಗಿ,ಜು.16.(ಕ.ವಾ.)-ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಜಿಲ್ಲಾ ಮಟ್ಟದ ಪ್ರಾಯೋಜನೆ ಕಾರ್ಯಕ್ರಮಡಿ ಜಿಲ್ಲಾ ಮಟ್ಟದ ಕಲಾವಿದರ ಆಯ್ಕೆಗಾಗಿ ಅರ್ಜಿ ಸಲ್ಲಿಸಿದ ಕಲಾವಿದರ ಆಯ್ಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಇದೇ ಜುಲೈ 25 ಹಾಗೂ 26ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯ ಆವರಣದಲ್ಲಿ ಸಂದರ್ಶನ ಏರ್ಪಡಿಸಲಾಗಿದೆ ಎಂದು ಕಲಬುರಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





ಹೀಗಾಗಿ ಲೇಖನಗಳು news and photo 16-7-2018

ಎಲ್ಲಾ ಲೇಖನಗಳು ಆಗಿದೆ news and photo 16-7-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo 16-7-2018 ಲಿಂಕ್ ವಿಳಾಸ https://dekalungi.blogspot.com/2018/07/news-and-photo-16-7-2018.html

Subscribe to receive free email updates:

0 Response to "news and photo 16-7-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ