ಶೀರ್ಷಿಕೆ : news and photo Date: 12-7-2018
ಲಿಂಕ್ : news and photo Date: 12-7-2018
news and photo Date: 12-7-2018
ಎರಡು ತಿಂಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
******************************************************************
ಕಲಬುರಗಿ,ಜು.12.(ಕ.ವಾ.)-ಕಲಬುರಗಿ ವಿಮಾನ ನಿಲ್ದಾಣವನ್ನು ಉಡಾನ್ ಯೋಜನೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಭಾಗದ ಅಭಿವೃದ್ಧಿಗೆ ವಿಮಾನ ನಿಲ್ದಾಣ ಕಾಮಗಾರಿಯನ್ನು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಿ ವಿಮಾನ ಸೇವೆ ಕಾರ್ಯಾರಂಭ ಮಾಡುವಂತಾಗಬೇಕು ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಗುರುವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ವಿಮಾನ ನಿಲ್ದಾಣಕ್ಕೆ ಅವಶ್ಯಕವಿರುವ ವಿದ್ಯುತ್ ಸಂಪರ್ಕ, ನೀರು ಸರಬರಾಜು ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳನ್ನು ಆದಷ್ಟು ಬೇಗ ಖರೀದಿಸಬೇಕು ಎಂದರು.
ವಿಮಾನ ನಿಲ್ದಾಣದ ರನ್‍ವೇ ಮಾರ್ಕಿಂಗ್ ಮತ್ತು ಆವರಣ ಗೋಡೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಲ್ಲಿ ಪ್ರಾಯೋಗಿಕ ವಿಮಾನ ಹಾರಾಟ ಪ್ರಾರಂಭಿಸುವುದಾಗಿ ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯು ತಿಳಿಸಿದೆ. ಈ ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯಿಂದ ದಿನಾಂಕ ಪಡೆದು ಪ್ರಾಯೋಗಿಕ ವಿಮಾಣ ಹಾರಾಟ ಪ್ರಾರಂಭಿಸಬಹುದಾಗಿದೆ ಎಂದು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಹೆಚ್.ಕೆ.ಆರ್.ಡಿ.ಬಿ. ಯಿಂದ ವಿಮಾನ ನಿಲ್ದಾಣ ಆವರಣದಲ್ಲಿ 4 ಬೊರವೇಲ್ ಕೊರೆದು ಅವಶ್ಯಕ ನೀರು ಪೂರೈಸಲಾಗುತ್ತಿದೆ ಹಾಗೂ ತಾತ್ಕಾಲಿಕ ಅಗ್ನಿಶಾಮಕ ಠಾಣೆ ನಿರ್ಮಿಸುವ ಮೂಲಕ ವಿಮಾನ ಹಾರಾಟ ಕೈಗೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ವಿಮಾನ ನಿಲ್ದಾಣದಲ್ಲಿ ರನ್‍ವೇ, ಆವರಣ ಗೋಡೆ, 10 ಕಿ.ಮೀ. ರಸ್ತೆ, ಟರ್ಮಿನಲ್ ಕಟ್ಟಡ, ಎಟಿಸಿ ಕಟ್ಟಡ, ಅಗ್ನಿಶಾಮಕ ಕಟ್ಟಡ ಪೂರ್ಣಗೊಳಿಸಲಾಗಿದೆ. ಸರ್ಕಾರವು ವಿಮಾನ ನಿಲ್ದಾಣ ಕಾಮಗಾರಿಯನ್ನು 175 ಕೋಟಿ ರೂ.ಗಳಿಗೆ ಪರಿಷ್ಕøತವಾಗಿ ಅನುಮೋದನೆ ನೀಡಿದೆ. ಈಗಾಗಲೇ ಹೆಚ್.ಕೆ.ಆರ್.ಡಿ.ಬಿ.ಯು 55.94 ಕೋಟಿ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯು 40.96 ಕೋಟಿ ರೂ. ಹೀಗೆ ಒಟ್ಟು 96.90 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಅಧಿಕಾರಿ ಅಮೀನ್ ಮುಖ್ತಾರ ಮಾಹಿತಿ ನೀಡಿದರು.
ರಾಷ್ಟ್ರೀಯ ಹೆದ್ದಾರಿ: ಅನಂತಪುರ, ತೆಲಂಗಾಣಾ, ಆಂಧ್ರಾ ಹಾಗೂ ರಾಜ್ಯದ ಇತರೆ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ಜಿಲ್ಲೆಗೆ ಸಂಬಂಧಿಸಿದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳ ಮಾಹಿತಿ ನೀಡಬೇಕು. ಕ್ರಿಯಾ ಯೋಜನೆ ರೂಪಿಸಬೇಕಾಗಿರುವ ಹಾಗೂ ಈಗಾಗಲೇ ಮಂಜೂರಾತಿ ಸಿಕ್ಕಿರುವ ರಸ್ತೆಗಳ ವಿವರ ಮುಂದಿನ ಸಭೆಯಲ್ಲಿ ಚರ್ಚಿಸುವಾಗ ಅಧಿಕಾರಿಗಳು ನೀಡಬೇಕೆಂದರು. .
ಹೆದ್ದಾರಿಗಳನ್ನು ಯಾವ ಭಾಗದಲ್ಲಿ ಸಿಮೆಂಟ್‍ನಿಂದ ಹಾಗೂ ಡಾಂಬರ್‍ನಿಂದ ನಿರ್ಮಿಸಲಾಗುತ್ತಿದೆ ಎಂಬ ಮಾಹಿತಿ ನೀಡಬೇಕು. ರಸ್ತೆ ನಿರ್ಮಿಸಿದಾಗ ರಸ್ತೆ ಪಕ್ಕದಲ್ಲಿ ಮುರುಮ್ ತುಂಬಬೇಕು ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದ ಸಂಸದರು, ಚೌಡಾಪುರದಿಂದ ಗಾಣಗಾಪುರವರೆಗೆ ನಿರ್ಮಿಸಿರುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಇದರಿಂದ ಭಕ್ತಾದಿಗಳಿಗೆ ತೊಂದರೆ ಉಂಟಾಗುತ್ತಿದೆ. ಅವುಗಳನ್ನು ಆದಷ್ಟು ಬೇಗ ಮುಚ್ಚಬೇಕು ಎಂದರು.
ಭಾರತ ಸರ್ಕಾರದಿಂದ ರಾಷ್ಟ್ರೀಯ ಹೆದ್ದಾರಿಗಳಿಗೆ ಪರವಾನಿಗೆ ನೀಡಬೇಕಾಗಿರುವ ಕ್ರಿಯಾ ಯೋಜನೆಗೆ ಅನುಮೋದನೆ ಸಿಗಬೇಕಾಗಿರುವ ಹಾಗೂ ಅವಶ್ಯಕ ಕಾಮಗಾರಿಗಳಿಗೆ ನೀಡಬೇಕಾದ ಪರವಾನಿಗೆ ಕುರಿತು ಹಾಗೂ ಕೇಂದ್ರ ಸರಕಾರದಿಂದ ಬಿಡುಗಡೆ ಆಗಬೇಕಾಗಿರುವ ಅನುದಾನದ ವಿವರ ಮಾಹಿತಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸಂಸದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ಶರಣಕುಮಾರ ಮೋದಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಮಹಾನಗರ ಪಾಲಿಕೆ ಆಯುಕ್ತ ರಘುನಂದನ ಮೂರ್ತಿ, ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ, ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ರೈಲ್ವೆ ಕಾಮಗಾರಿಗಳನ್ನು ವಿನಾಕರಣ ವಿಳಂಬ ಮಾಡದಂತೆ ಎಚ್ಚರಿಕೆ
************************************************************
ಕಲಬುರಗಿ,ಜು.12.(ಕ.ವಾ.)-ಕಲಬುರಗಿ ವಿಭಾಗದಲ್ಲಿ ಕೈಗೊಂಡಿರುವ ಎಲ್ಲ ರೈಲ್ವೆ ಕಾಮಗಾರಿಗಳಿಗೆ ಅವಶ್ಯಕವಿರುವ ಸಹಕಾರ ಮತ್ತು ಸವಲತ್ತುಗಳನ್ನು ಬೇಡಿಕೆಯಂತೆ ಪೂರೈಸಲಾಗಿದೆ. ವಿನಾಕಾರಣ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಮತ್ತು ಪೂರ್ಣಗೊಳಿಸುವಲ್ಲಿ ವಿಳಂಬ ಮಾಡಬಾರದು ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅವರು ಗುರುವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಈ ಹಿಂದೆ ರೈಲ್ವೆ ಇಲಾಖೆಯ ಪ್ರಮುಖ ಯೋಜನೆಗಳನ್ನು ಕೇವಲ 11 ತಿಂಗಳಲ್ಲಿ ಪೂರ್ಣಗೊಳಿಸಲಾಗಿದೆ. ನಗರದಲ್ಲಿ ಕೈಗೊಂಡಿರುವ ಮದರ ಥೆರೆಸಾ ಹತ್ತಿರದ ಹಾಗೂ ಅಫಜಲಪುರ ರಸ್ತೆಯ ಮೇಲ್ಸೆತುವೆಗಳನ್ನು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ವಾಡಿ, ಹೀರಾಪುರ, ಮದರ ಥೆರೆಸಾ ಶಾಲೆ ಹತ್ತಿರ, ಅಫಜಲಪುರ ರಸ್ತೆ ಹಾಗೂ ಇನ್ನಿತರೆ ಕಡೆಗಳಲ್ಲಿ ಹಮ್ಮಿಕೊಂಡಿರುವ ರಸ್ತೆ ಮೇಲ್ಸೆತುವೆ ಕಾಮಗಾರಿ, ರೈಲ್ವೆ ವಿದ್ಯದ್ದೀಕರಣ ಹಾಗೂ ಲೈನ್ ಡಬಲಿಂಗ್ ಕಾಮಗಾರಿಗಳನ್ನು ಜಿಲ್ಲಾಧಿಕಾರಿಗಳು 15 ದಿನಗಳಿಗೊಂದು ಬಾರಿ ಸಭೆ ಕರೆದು ಪ್ರಗತಿ ಪರಿಶೀಲಿಸಬೇಕು. ಈ ಕಾಮಗಾರಿಗಳಿಗೆ ರಾಜ್ಯದ ಪಾಲನ್ನು ಬಿಡುಗಡೆ ಮಾಡುವಂತೆ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಗೆ ಪತ್ರ ಬರೆಯಬೇಕು ಎಂದರು.
ಕಲಬುರಗಿ ರೈಲು ನಿಲ್ದಾಣದ ತಾರಫೈಲ್ ಪ್ರದೇಶದ ಕಡೆಯಲ್ಲಿ 3-4 ಸಾಮೂಹಿಕ ಶೌಚಾಲಯಗಳನ್ನು ಸ್ವಚ್ಛ ಭಾರತ ಅಡಿಯಲ್ಲಿ ನಿರ್ಮಿಸಿ ಓವರ್ ಹೆಡ್ ಟ್ಯಾಂಕ್ ಮೂಲಕ ನೀರಿನ ಸಂಪರ್ಕ ಕಲ್ಪಿಸಬೇಕು. ರೈಲ್ವೆ ಕಾಮಗಾರಿಗಳನ್ನು ಪ್ರಾರಂಭಿಸುವಲ್ಲಿ ಅಥವಾ ಪೂರ್ಣಗೊಳಿಸುವಲ್ಲಿ ಯಾವುದೇ ತೊಂದರೆ ಇದ್ದಲ್ಲಿ ರೈಲ್ವೆ ಅಧಿಕಾರಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಲೋಕೋಪಯೋಗಿ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರದ ಫಸಲ ಬಿಮಾ ಯೋಜನೆಯಡಿ ಕಳೆದ ವರ್ಷ 81612 ರೈತರು ಬೆಳೆ ವಿಮೆ ಮಾಡಿಸಿ ಸುಮಾರು 8.78 ಕೋಟಿ ರೂ. ವಿಮಾ ಮೊತ್ತವನ್ನು ಪಾವತಿಸಿದ್ದಾರೆ. ಈ ಪೈಕಿ ಕೇವಲ 143 ರೈತರಿಗೆ ಮಾತ್ರ ಫಸಲ ಬಿಮಾ ಯೋಜನೆ ಪ್ರಯೋಜನ ದೊರೆತ್ತಿದ್ದು, ಅವರಿಗೆ ಕೇವಲ 3.53 ಲಕ್ಷ ರೂ.ಗಳನ್ನು ವಿಮಾ ಪಾವತಿಸಲಾಗಿದೆ. ರೈತರಿಂದ ಕೋಟ್ಯಾಂತರ ರೂಪಾಯಿ ವಿಮಾ ಮೊತ್ತ ಪಡೆದು ಅವರಿಗೆ ಕೇವಲ ಲಕ್ಷ ರೂ.ಗಳಲ್ಲಿ ವಿಮೆ ಪಾವತಿಸಲಾಗುತ್ತಿದೆ. ಫಸಲ ಬಿಮಾ ಯೋಜನೆ ವಿಮಾ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಯೋಜನೆ ಇದಾಗಿದೆ ಎಂದು ಸಂಸದರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ಶರಣಕುಮಾರ ಮೋದಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಮಹಾನಗರ ಪಾಲಿಕೆ ಆಯುಕ್ತ ರಘುನಂದನ ಮೂರ್ತಿ, ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ, ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ತಿಚಕ್ರ ಪೆಟ್ರೋಲ್ ವಾಹನ ವಿತರಣೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಕಲಬುರಗಿ ಜಿಲ್ಲೆಗೆ 2017-18ನೇ ಸಾಲಿಗೆ ದೈಹಿಕ ವಿಕಲಚೇತನರ ಅನುಕೂಲವಾಗುವ ದೃಷ್ಟಿಯಿಂದ 175 ತ್ರಿಚಕ್ರ ಪೆಟ್ರೊಲ್ ವಾಹನಗಳನ್ನು ಸರಬರಾಜು ಮಾಡಿದೆ. ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ದೈಹಿಕ ವಿಕಲಚೇತನರಿಗೆ ತ್ರಿಚಕ್ರ ಪೆಟ್ರೋಲ್ ವಾಹನ ವಿತರಿಸಿದರು. ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಪ್ರವಾಸ
***************************************
ಕಲಬುರಗಿ,ಜು.12.(ಕ.ವಾ.)-ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಡಾ. ಸುಚೇತನ ಸ್ವರೂಪ ಅವರು ರೈಲಿನ ಮೂಲಕ ಇದೇ ಜುಲೈ 16 ರಂದು ಬೆಳಿಗ್ಗೆ 6 ಗಂಟೆಗೆ ಕಲಬುರಗಿಗೆ ಆಗಮಿಸುವರು. ಅಂದು ಬೆಳಿಗ್ಗೆ 11 ಗಂಟೆಗೆ ಹಾಗೂ ಮಧ್ಯಾಹ್ನ 3 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಕರಣಗಳ ವಿಚಾರಣೆ ನಡೆಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಜುಲೈ 17ರಂದು ಬೆಳಿಗ್ಗೆ 10.30 ಗಂಟೆಗೆ ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳ ಜೊತೆ ಮಾಹಿತಿ ಹಕ್ಕು ಅಧಿನಿಯಮ-2005ರ ಬಗ್ಗೆ ಸಂವಾದ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಕಲಬುರಗಿಯಿಂದ ಬೀದರಕ್ಕೆ ಪ್ರಯಾಣ ಬೆಳೆಸುವರು. ಜುಲೈ 18ರಂದು ಬೀದರದಿಂದ ಮರಳಿ ಕಲಬುರಗಿಗೆ ಆಗಮಿಸಿ, ಸಂಜೆ 6.40 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
ಜುಲೈ 23ರಂದು ಜಿ.ಪಂ. ಸಾಮಾನ್ಯ ಸಭೆ
*************************************
ಕಲಬುರಗಿ,ಜು.12.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿಯ 12ನೇ ಸಾಮಾನ್ಯ ಸಭೆಯು 2018ರ ಜುಲೈ 23ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಹೊಸ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಈ ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಆಯಾ ಇಲಾಖೆಗಳ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಖುದ್ದಾಗಿ ಈ ಸಭೆಗೆ ಹಾಜರಾಗಬೇಕು. ಯಾವುದೇ ಅಧಿಕಾರಿಗಳು ರಜೆ ಮೇಲೆ ಅಥವಾ ಸಭೆಗೆ ತೆರಳುಬೇಕಾದಲ್ಲಿ ಅಧ್ಯಕ್ಷರ ಅನುಮತಿ ಪಡೆದುಕೊಂಡು ಹೋಗಬೇಕೆಂದು ಅವರು ತಿಳಿಸಿದ್ದಾರೆ.
ಸಹಾಯಧನದ 41 ಪ್ರವಾಸಿ ಟ್ಯಾಕ್ಸಿಗಾಗಿ ಅರ್ಜಿ ಆಹ್ವಾನ
*************************************************
ಕಲಬುರಗಿ,ಜು.12.(ಕ.ವಾ.)-ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ಪ್ರವಾಸೋದ್ಯಮ ಇಲಾಖೆಯ ಎಸ್.ಸಿ.ಪಿ./ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ 2018-19ನೇ ಸಾಲಿನಲ್ಲಿ ಒಟ್ಟು 41 ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳು ಪ್ರವಾಸಿ ಟ್ಯಾಕ್ಸಿ ಖರೀದಿಯ ಸಹಾಯಧನ ಒದಗಿಸುವ ಗುರಿ ಹೊಂದಲಾಗಿದೆ. ಪ್ರವಾಸಿ ಟ್ಯಾಕ್ಸಿ ಖರೀದಿಯ ಸಹಾಯಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಇದರ ಪೈಕಿ ಎಸ್.ಸಿ.-21, ಎಸ್.ಟಿ.-06 ಹಾಗೂ ಓ.ಬಿ.ಸಿ.-14 ಅಭ್ಯರ್ಥಿಗಳು ಸೇರಿದಂತೆ ಒಟ್ಟು 41 ಅಭ್ಯರ್ಥಿಗಳಿಗೆ ಪ್ರತಿ ಪ್ರವಾಸಿ ಟ್ಯಾಕ್ಸಿಗೆ 3 ಲಕ್ಷ ರೂ.ಗಳ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಒದಗಿಸಲಾಗುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಲಘು ವಾಹನ ಚಾಲನಾ ಪರವಾನಗಿ (ಲೈಸೆನ್ಸ್) ಹಾಗೂ ಎಲ್.ಎಂ.ವಿ. ಬ್ಯಾಡ್ಜ್ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ/ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳು ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿ ಹೊಂದಿರಬೇಕು. ಲಘು ಮೋಟಾರ ವಾಹನ ಚಾಲನಾ ಪರವಾನಿಗೆ ಪಡೆದು ಕನಿಷ್ಠ ಒಂದು ವರ್ಷ ಅವಧಿಯಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಷರತ್ತು ನಿಬಂಧನೆಗಳ ಪ್ರತಿಯನ್ನು ಉಪನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸಾರ್ವಜನಿಕ ಉದ್ಯಾನವನ ಕಲಬುರಗಿ ಕಚೇರಿಯಿಂದ ಜುಲೈ 16 ರಿಂದ ರಜಾದಿನಗಳನ್ನು ಹೊರತುಪಡಿಸಿ ಪಡೆದು ಭರ್ತಿ ಮಾಡಿ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಅಗತ್ಯವಾದ ಎಲ್ಲ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ದ್ವಿಪ್ರತಿಯಲ್ಲಿ ಲಕೋಟೆಯನ್ನು 2018ರ ಆಗಸ್ಟ್ 14ರ ಸಂಜೆ 4 ಗಂಟೆಯೊಳಗಾಗಿ ಸದರಿ ಕಚೇರಿಯಲ್ಲಿ ಖುದ್ದಾಗಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯ ದೂರವಾಣಿ ಸಂಖ್ಯೆ 08472-277848ನ್ನು ಸಂಪರ್ಕಿಸಲು ಕೋರಲಾಗಿದೆ.
ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನೆ ಯೋಜನೆ: ಅಭ್ಯರ್ಥಿಗಳಿಗೆ ಸಂದರ್ಶನ
*************************************************************************
ಕಲಬುರಗಿ,ಜು.12.(ಕ.ವಾ.)-ಪ್ರಸಕ್ತ 2018-19ನೇ ಸಾಲಿಗೆ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನೆ ಯೋಜನೆಯಡಿ 2018ರ ಜೂನ್ 1 ರಿಂದ 30ರವರೆಗೆ ಆನ್‍ಲೈನ್ ಮೂಲಕ ಸಲ್ಲಿಸಿರುವ ಅಭ್ಯರ್ಥಿಗಳ ಅರ್ಜಿಗಳ ಪರಿಶೀಲನೆ ಮತ್ತು ಸಂದರ್ಶನವನ್ನು 2018ರ ಜುಲೈ 18 ಹಾಗೂ 19ರಂದು ಕಲಬುರಗಿ ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಜುಲೈ 18ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸೇಡಂ, ಚಿತ್ತಾಪುರ, ಮತ್ತು ಚಿಂಚೋಳಿ ತಾಲೂಕುಗಳ ಅಭ್ಯರ್ಥಿಗಳಿಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5.30 ಗಂಟೆಯವರೆಗೆ ಆಳಂದ ತಾಲೂಕಿನ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುವುದು.
ಜುಲೈ 19ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಮತ್ತು ಅಫಜಲಪುರ ತಾಲೂಕುಗಳ ಅಭ್ಯರ್ಥಿಗಳಿಗೆ ಹಾಗೂ ಅಂದು ಮಧ್ಯಾಹ್ನ 2.30 ರಿಂದ ಸಂಜೆ 5.30 ಗಂಟೆಯವರೆಗೆ ಜೇವರ್ಗಿ ತಾಲೂಕಿನ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಯಲಿದೆ.
ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ಅರ್ಜಿಯಲ್ಲಿ ನಮೂದಿಸಿರುವ ಎಲ್ಲ ದಾಖಲಾತಿಗಳನ್ನು ದ್ವಿಪ್ರತಿಯಲ್ಲಿ ಮತ್ತು ಮೂಲ ದಾಖಲಾತಿಗಳೊಂದಿಗೆ ಪರಿಶೀಲನೆಗಾಗಿ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
**********************************
ಕಲಬುರಗಿ,ಜು.12.(ಕ.ವಾ.)-ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ 35,000 ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ ಇರುವ ಜಾತಿ ಪ್ರಮಾಣಪತ್ರದೊಂದಿಗೆ ಎ4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಠ 200 ಪುಟಗಳಿಂದ ಕೃತಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡಾ ಅರ್ಜಿ ಸಲ್ಲಿಸಲು ಅವಕಾಶವಿದ್ದು, 18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರು ಕೂಡ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸೃಜನಶೀಲ ಸಾಹಿತ್ಯವಾಗಿರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು / ಹಸ್ತ ಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ಜುಲೈ 21ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ ಬೆಂಗಳೂರು ಹಾಗೂ ಕಚೇರಿ ದೂರವಾಣಿ ಸಂಖ್ಯೆ 080-22484516, 22017704ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ
**********************************************
ಕಲಬುರಗಿ,ಜು.12.(ಕ.ವಾ.)-ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ವಾರ್ಷಿಕವಾಗಿ ಗರಿಷ್ಠ 1 ಲಕ್ಷ ರೂ.ಗಳವರೆಗೆ ಸಾಲ ಮಂಜೂರು ಮಾಡಲಾಗುತ್ತಿದೆ. ಇದಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ 2(ಎ), 3(ಎ) ಮತ್ತು 3(ಬಿ) ವರ್ಗಕ್ಕೆ (ವಿಶ್ವಕರ್ಮ ಮತ್ತು ಉಪಜಾತಿಗಳು, ಅಲ್ಪಸಂಖ್ಯಾತರು ಮತ್ತು ಅದರ ಉಪಜಾತಿಗಳನ್ನು ಹೊರತುಪಡಿಸಿ) ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2018-19ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ(ಇಂಜಿನಿಯರಿಂಗ್ ಕೋರ್ಸ್‍ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮಾತ್ರ) ಪಿ.ಜಿ ಕೋರ್ಸ್‍ಗಳಾದ, ಎಂ.ಬಿ.ಎ., ಎಂ.ಸಿ.ಎ., ಎಂ.ಟಿಕ್., ಎಂ.ಇ., ಕೋರ್ಸ್‍ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆಯಾಗಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ.ಗೆ ಪಾವತಿಸಬೇಕಾದ ಶುಲ್ಕವನ್ನು ಸಿ.ಇ.ಟಿ ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಶುಲ್ಕ ಹೊಂದಾಣಿಕೆ ಮಾಡಲಾಗುತ್ತದೆ. ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ 3.50 ಲಕ್ಷ ರೂ.ಗಳ ಮಿತಿಯೊಳಗಿರಬೇಕು. ಸ್ವೀಕೃತಗೊಂಡ ಅರ್ಜಿಗಳಲ್ಲಿ ಅನುದಾನ ಲಭ್ಯತೆ, ಸರ್ಕಾರದ ಆದೇಶದನ್ವಯ ಪ್ರವರ್ಗವಾರು 70:30ರ ಅನುಪಾತ ಹಾಗೂ ರ್ಯಾಂಕ್‍ವಾರು ಪರಿಗಣಿಸಿ ಆಯ್ಕೆ ಮಾಡಲಾಗುವುದು.
ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ರಲ್ಲಿ ಲಾಗಿನ್ ಆಗಿ ವೆಬ್‍ಸೈಟ್‍ನಲ್ಲಿ ಲಭ್ಯವಿರುವ Useಡಿಟಿಚಿme iಟಿಜಿಡಿಚಿ\ಜbಛಿಜಛಿಚಿಡಿivu ಮತ್ತು Pಚಿssತಿಚಿಡಿಜ ಆಃ(ಜ#098 ನ್ನು ನಮೂದಿಸಿ ಅರ್ಜಿಯನ್ನು ಆನ್‍ಲೈನ್‍ಲ್ಲಿ ಭರ್ತಿ ಮಾಡಬೇಕು. ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ., ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ. ಸಿ.ಇ.ಟಿ ಪ್ರವೇಶ ಪರೀಕ್ಷೆ ಅಡ್ಮಿಶನ್ ಟಿಕೆಟ್ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅರ್ಜಿಯೊಂದಿಗೆ ಆನ್‍ಲೈನ್‍ಲ್ಲಿ ಜುಲೈ 31 ರೊಳಗೆ ಸಲ್ಲಿಸಬೇಕು. ವಿದ್ಯಾರ್ಥಿಯು ಒಂದಕ್ಕಿಂತ ಹೆಚ್ಚಿನ ಜಿಲ್ಲೆಯಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುವುದು..
ಅದೇ ರೀತಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳನ್ನು ಹೊರತುಪಡಿಸಿದ ಕೋರ್ಸ್‍ಗಳಾದ ಪಿ.ಹೆಚ್.ಡಿ., ಬಿಸಿಎ/ಎಂ.ಸಿ.ಎ., ಎಂ.ಎಸ್.ಆಗ್ರಿಕಲ್ಚರ್., ಬಿ.ಎಸ್ಸಿ ನರ್ಸಿಂಗ್., ಬಿ.ಎಸ್ಸಿ ಪ್ಯಾರಾಮೆಡಿಕಲ್., ಬಿ.ಎಸ್ಸಿ. ಬಯೋ ಟೆಕ್ನಾಲಜಿ., ಬಿಟೆಕ್., ಬಿ.ಪಿ.ಟಿ., ಜಿ.ಎನ್.ಎಂ., ಬಿ.ಹೆಚ್.ಎಮ್., ಎಂ.ಡಿ.ಎಸ್., ಎಂ.ಎಸ್.ಡಬ್ಲ್ಯೂ., ಎಲ್.ಎಲ್.ಎಂ., ಎಂ.ಎಫ್.ಎ., ಎಂ.ಎಸ್ಸಿ. ಬಯೋಟೆಕ್ನಾಲಜಿ., ಎಂ.ಎಸ್ಸಿ ಎಜಿ ಕೋರ್ಸ್‍ಗಳಲ್ಲಿ 2018-19ನೇ ಸಾಲಿನಲ್ಲಿ ಪ್ರಥಮ ವರ್ಷಕ್ಕೆ ಸರ್ಕಾರಿ, ಅನುದಾನಿತ ಕಾಲೇಜುಗಳಿಗೆ ನೇರ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಕೋಣೆ ಸಂಖ್ಯೆ: 22, 3ನೇ ಮಹಡಿ, ವಿಕಾಸ ಭವನ, ಮಿನಿ ವಿಧಾನ ಸೌಧ ಕಲಬುರಗಿ ಇವರಿಂದ ಜುಲೈ 25 ರೊಳಗೆ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಆಗಸ್ಟ್ 4ರೊಳಗಾಗಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.
ಡೇ-ನಲ್ಮ್ ಯೋಜನೆಯಡಿ ಅರ್ಜಿ ಆಹ್ವಾನ
*************************************
ಕಲಬುರಗಿ,ಜು.12.(ಕ.ವಾ.)-ಪ್ರಸಕ್ತ 2018-19ನೇ ಸಾಲಿಗೆ ಮಹಾನಗರ ಪಾಲಿಕೆಯ ಡೇ-ನಲ್ಮ್ ಯೋಜನೆಯಡಿ ಒಟ್ಟು 100 ಗುರಿಯನ್ನು ಹೊಂದಿದ್ದು, ಸಿ.ಎಲ್.ಎಫ್. ಉತ್ತರಕ್ಕೆ 50 ಗುರಿ ಇರುತ್ತದೆ. ಕಲಬುರಗಿ ಮಹಾನಗರ ಪಾಲಿಕೆ ಉತ್ತರ ವ್ಯಾಪ್ತಿಯಲ್ಲಿನ ಫಲಾನುಭವಿಗಳಿಂದ ಸ್ವಯಂ ಉದ್ಯೋಗ ಮತ್ತು ಗುಂಪು ಸಾಲಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ಅರ್ಜಿದಾರರ ಕುಟುಂಬದಲ್ಲಿ ಸ್ವಸಹಾಯ ಗುಂಪಿನ ಸದಸ್ಯರಾಗಿರಬೇಕು. ಬೀದಿ ವ್ಯಾಪಾರಿಗಳು, ಅಂಗವಿಕಲರು, ಮಂಗಳಮುಖಿಯರಿಗೆ ಮತ್ತು ವಿಧವೆಯರಿಗೆ ಆದ್ಯತೆ ನೀಡಲಾಗುವುದು. ಅರ್ಜಿಗಳನ್ನು ಕಲಬುರಗಿ ಮಹಾನಗರ ಪಾಲಿಕೆಯ ಡೇ-ನಲ್ಮ್ ಉತ್ತರ ಶಾಖೆಯಿಂದ ಜುಲೈ 16 ರಿಂದ 28ರೊಳಗಾಗಿ ಪಡೆದು ಭರ್ತಿ ಮಾಡಿ ಆಗಸ್ಟ್ 10ರೊಳಗಾಗಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಡೇ-ನಲ್ಮ್ ಶಾಖೆಗೆ ಸಂಪರ್ಕಿಸಲು ಕೋರಲಾಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆ: ಹತ್ತನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಲಬುರಗಿ,ಜು.12.(ಕ.ವಾ.)-ಚಿತ್ತಾಪುರ ತಾಲೂಕಿನ (ಆಂಗ್ಲ ಮಾಧ್ಯಮ) ಗುಂಡಗುರ್ತಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಿತ್ತಾಪುರ ತಾಲೂಕಿನ (ಆಂಗ್ಲ ಮಾಧ್ಯಮ) ಗುಂಡಗುರ್ತಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯನ್ನು ಹಾಗೂ ಮೊಬೈಲ್ ಸಂಖ್ಯೆ 7276384783, 9036692398 ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಜುಲೈ 13ರಂದು ಕಾನೂನು ಸಾಕ್ಷರತಾ ಕ್ಲಬ್ ಉದ್ಘಾಟನೆ
*************************************************
ಕಲಬುರಗಿ,ಜು.12.(ಕ.ವಾ.)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಶಿಕ್ಷಣ ಇಲಾಖೆ ಮತ್ತು ಕನ್ಯಾ ಪ್ರೌಢಶಾಲೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಸಾಕ್ಷರತಾ ಕ್ಲಬ್ ಉದ್ಘಾಟನಾ ಕಾರ್ಯಕ್ರಮವನ್ನು 2018ರ ಜುಲೈ 13ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಹಳೆಯ ಎಸ್.ಪಿ. ಆಫೀಸ್ ಕಚೇರಿಯ ಎದುರಿಗೆಯಿರುವ ಕನ್ಯಾ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಪಿ.ಟಿ. ಕಟ್ಟಿಮನಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಹಿಳಾ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಶಿವಾಜಿ ಪಾಟೀಲ ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ, ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಕೆ. ಹಿರೇಮಠ, ಕನ್ಯಾ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಈಶ್ವರಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಅನುಪಯುಕ್ತ ಉಪಕರಣಗಳ ಬಹಿರಂಗ ಹರಾಜು ಜುಲೈ 25ಕ್ಕೆ ಮುಂದೂಡಿಕೆ
*******************************************************************
ಕಲಬುರಗಿ,ಜು.12.(ಕ.ವಾ.)-ಜೇವರ್ಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿರುವ ಅನುಪಯುಕ್ತ ಕಚ್ಛಾ ಸಾಮಗ್ರಿ ಹಾಗೂ ಸಣ್ಣ ಉಪಕರಣಗಳನ್ನು ಸಂಸ್ಥೆಯ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡುವ ದಿನಾಂಕವನ್ನು 2018ರ ಜುಲೈ 25ಕ್ಕೆ ಮುಂದೂಡಲಾಗಿದೆ ಎಂದು ಜೇವರ್ಗಿ ಸರ್ಕಾರಿ ತರಬೇತಿ ಸಂಸ್ಥೆಯ ಪ್ರಾಚಾರ್ಯ ಶರಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಆವರಣದಲ್ಲಿ ನಡೆಯುವ ಹರಾಜಿನಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಜೇವರ್ಗಿ ಇವರ ಹೆಸರಿಗೆ ತೆಗೆಯಲಾದ 2500 ರೂ.ಗಳ ಡಿ.ಡಿ.ಯೊಂದಿಗೆ ದರಪಟ್ಟಿಯನ್ನು ಮುಚ್ಚಿದ ಲಕೋಟೆಯನ್ನು ಜುಲೈ 19ರ ಸಾಯಂಕಾಲ 5 ಗಂಟೆ ಒಳಗಾಗಿ ಸಂಸ್ಥೆಗೆ ಸಲ್ಲಿಸಿ ಹೆಸರು ನೊಂದಾಯಿಸಿಕೊಳ್ಳಬೇಕು.
ಹರಾಜಿಗೆ ಇಡಲಾದ ಸಾಮಗ್ರಿಗಳನ್ನು ಕಚೇರಿ ವೇಳೆಯಲ್ಲಿ ವೀಕ್ಷಿಸಬಹುದಾಗಿದ್ದು, ಷರತ್ತ ಹಾಗೂ ಇನ್ನೀತರ ಮಾಹಿತಿಗೆ ಐ.ಟಿ.ಐ ಸಂಸ್ಥೆಗೆ ಸಂಪರ್ಕಿಸಲು ಕೋರಿದೆ. ಈ ಹಿಂದೆ ಜುಲೈ 20ರಂದು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡುವ ದಿನಾಂಕವನ್ನು ನಿಗದಿಪಡಿಸಲಾಗಿತ್ತೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ.-ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು
****************************************************
ಅಂಕ ಪಡೆದವರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
********************************************
ಕಲಬುರಗಿ,ಜು.12.(ಕ.ವಾ.)-ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿಗೆ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ವಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಸಹಾಯವಾಗಲು ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಚಿದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
2017-18ನೇ ಸಾಲಿನ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 95ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ 10,000ರೂ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 20,000ರೂ.ಗಳ ಮೊತ್ತದ ಪ್ರೋತ್ಸಾಹಧನ ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳು ಇಲಾಖೆಯ hಣಣಠಿ://ತಿತಿತಿ.goಞಜom.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಆಗಸ್ಟ್ 5 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಾರ್ಯಾಲಯವನ್ನು (ದೂರವಾಣಿ ಸಂಖ್ಯೆ 08472-247260) ಅಥವಾ ಮೇಲ್ಕಂಡ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.
ಹೀಗಾಗಿ ಲೇಖನಗಳು news and photo Date: 12-7-2018
ಎಲ್ಲಾ ಲೇಖನಗಳು ಆಗಿದೆ news and photo Date: 12-7-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo Date: 12-7-2018 ಲಿಂಕ್ ವಿಳಾಸ https://dekalungi.blogspot.com/2018/07/news-and-photo-date-12-7-2018.html








0 Response to "news and photo Date: 12-7-2018"
ಕಾಮೆಂಟ್ ಪೋಸ್ಟ್ ಮಾಡಿ