News and photo Date: 19-07-2018

News and photo Date: 19-07-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo Date: 19-07-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo Date: 19-07-2018
ಲಿಂಕ್ : News and photo Date: 19-07-2018

ಓದಿ


News and photo Date: 19-07-2018

ಗ್ರಾಮ ಸ್ವರಾಜ ಅಭಿಯಾನ ಗುರಿ ಜುಲೈ ಅಂತ್ಯಕ್ಕೆ ಪೂರ್ಣಗೊಳಿಸಲು ಸೂಚನೆ
********************************************************************
ಕಲಬುರಗಿ,ಜು.19(ಕ.ವಾ.)-ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಂದ ವಂಚಿತರಾದ ಕಲಬುರಗಿ ಜಿಲ್ಲೆಯ 67 ಗ್ರಾಮಗಳ ಬಿ.ಪಿ.ಎಲ್. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಸವಲತ್ತುಗಳನ್ನು ವಿತರಿಸಲು ಮುಂದುವರೆದ ಗ್ರಾಮ ಸ್ವರಾಜ ಅಭಿಯಾನದ ಮೂಲಕ ನೀಡಲಾದ ಗುರಿಯನ್ನು ಜುಲೈ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕೆಂದು ಮುಂದುವರೆದ ಗ್ರಾಮ ಸ್ವರಾಜ ಅಭಿಯಾನದ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕೇಂದ್ರ ಸರ್ಕಾರದ ಹಣಕಾಸು ಖಾತೆಯ ನಿರ್ದೇಶಕ ಕೆ.ವಿ. ಕೃಷ್ಣಕುಮಾರ ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಂದುವರೆದ ಗ್ರಾಮ ಸ್ವರಾಜ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಯೋಜನೆಗಳ ಅನುಷ್ಠಾನಕ್ಕೆ ಯಾವುದೇ ತೊಂದರೆ ಇದ್ದಲ್ಲಿ ಸಂಬಂಧಿಸಿದ ಇಲಾಖೆಗಳ ಮೇಲಾಧಿಕಾರಿಗಳ ತಿಳಿಸಬೇಕು. ಅವರು ತೊಂದರೆಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ. ಗ್ರಾಮ ಮಟ್ಟಗಳಲ್ಲಿ ಕ್ಯಾಂಪ್‍ಗಳನ್ನು ಹಮ್ಮಿಕೊಳ್ಳುವ ಮೂಲಕ ತೀವ್ರ ಗತಿಯಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಗುರಿ ಸಾಧಿಸಬೇಕು ಎಂದರು.
ಕಡುಬಡವರ ಮನೆಯಲ್ಲಿಯೂ ಸಹ ಗ್ಯಾಸ್ ಸೌಲಭ್ಯ ದೊರಕಿಸಬೇಕೆಂಬ ಉದ್ದೇಶದಿಂದ ಪ್ರಾರಂಭಿಸಲಾದ ಪ್ರಧಾನಮಂತ್ರಿ ಉಜ್ವಲ್ ಯೋಜನೆ ನಿರೀಕ್ಷೆಗಳು ಹೆಚ್ಚಾಗಿದ್ದು, ಗ್ರಾಮೀಣ ಮಟ್ಟದಲ್ಲಿ ಫಲಾನುಭವಿಗಳನ್ನು ಗುರುತಿಸಿ ನಿಗದಿತ ಸಮಯದಲ್ಲಿ ಯೋಜನೆ ಫಲ ದೊರಕಿಸಬೇಕು. ಕೆಲವು ಬ್ಯಾಂಕುಗಳಲ್ಲಿ ಉಜ್ವಲ್ ಯೋಜನೆ ಫಲಾನುಭವಿಗಳು ಬ್ಯಾಂಕ್ ಖಾತೆ ತೆರೆಯಲು ಪ್ಯಾನ್ ಕಾರ್ಡ ಕೇಳುತ್ತಿರುವರು ಎಂಬ ದೂರುಗಳಿವೆ. ಬ್ಯಾಂಕ್ ಖಾತೆ ತೆರೆಯಲು ಯಾವುದೇ ಬ್ಯಾಂಕಿನ ಶಾಖೆಯಲ್ಲಿ ಪ್ಯಾನ್ ಕಾರ್ಡ ಕಡ್ಡಾಯಗೊಳಿಸಬಾರದು ಎಂದ ಅವರು ಜನಧನ ಯೋಜನೆಯಡಿಯಲ್ಲಿ ನೀಡಿರುವ ಗುರಿಯನ್ನು ತಲುಪಿದಾಗ ಮಾತ್ರ ಬೇರೆ ಯೋಜನೆಗಳ ಸುಲಭ ಅನುಷ್ಠಾನಕ್ಕೆ ಅನುಕೂಲವಾಗುವುದು ಎಂದರು.
ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನಮಂತ್ರಿ ಜನಧನ ಯೋಜನೆ ಹಾಗೂ ಮಿಷನ್ ಇಂದ್ರಧನುಷ ಕಾರ್ಯಕ್ರಮಗಳ ಪ್ರಗತಿ ಚೆನ್ನಾಗಿದೆ. ಇನ್ನುಳಿದ ಪ್ರಧಾನಮಂತ್ರಿ ಉಜ್ವಲ್ ಯೋಜನಾ, ಪ್ರಧಾನಮಂತ್ರಿ ಸಹಜ ಬಿಜಲಿ ಹರಘರ ಯೋಜನಾ (ಸೌಭಾಗ್ಯ), ಉಜಾಲಾ, ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನಾ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕಾಗಿದೆ. ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಕಾರ್ಯಕ್ರಮಗಳ ಪ್ರಯೋಜನ ದೊರಕಿಸಿದಾಗ ಅದನ್ನು ಕೇಂದ್ರ ಸರ್ಕಾರದ ವೆಬ್‍ಸೈಟ್‍ನಲ್ಲಿ ಅಳವಡಿಸಬೇಕು. ಆಗ ಮಾತ್ರ ಪ್ರಗತಿ ಕಂಡು ಬರುತ್ತದೆ ಎಂದರು.
ಉಜಾಲಾ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿಗಳನ್ನು ಕೇಂದ್ರ ಸರ್ಕಾರ ನೇಮಿಸಿದ್ದು, ಈ ಅಧಿಕಾರಿಗೆ ಉಜಾಲಾ ಯೋಜನೆಯ ಫಲಾನುಭವಿಗಳ ಮಾಹಿತಿ ಲಭ್ಯವಿಲ್ಲ. ಯಾವುದೇ ಸಭೆಗೆ ಹಾಜರಾಗದೇ ಯೋಜನೆಯ ಬಗ್ಗೆ ತಿಳಿದುಕೊಂಡಿಲ್ಲ. ಉಜಾಲಾ ಯೋಜನೆ ಗುರಿ ಸಾಧನೆಗೆ ಇದು ತೊಂದರೆಯಾಗುತ್ತಿದೆ. ಉಜಾಲಾ ಯೋಜನೆ ನೋಡಲ್ ಅಧಿಕಾರಿ ಯಾವುದಕ್ಕೂ ಸ್ಪಂದಿಸುತ್ತಿಲ್ಲ ಎಂಬ ವಿಷಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದರು.
ಪ್ರಧಾನಮಂತ್ರಿ ಉಜ್ವಲ್ ಯೋಜನಾ: ಕಲಬುರಗಿ ಜಿಲ್ಲೆಯ 67 ಗ್ರಾಮಗಳಲ್ಲಿ ಒಟ್ಟು 11512 ಅಡುಗೆ ಅನಿಲ ಸಂಪರ್ಕಗಳನ್ನು ನೀಡಬೇಕಾಗಿದೆ. ಈಗಾಗಲೇ 5780 ಅರ್ಜಿಗಳನ್ನು ಸ್ವೀಕರಿಸಿ ಈ ಪೈಕಿ 3700 ಅನಿಲ ಸಂಪರ್ಕ ನೀಡಲಾಗಿದೆ. ಉಳಿದ ಗುರಿಯನ್ನು ಒಂದು ವಾರದೊಳಗಾಗಿ ಪೂರ್ಣಗೊಳಿಸಬೇಕು. ತೈಲ ಕಂಪನಿಗಳು ಈ ಗ್ರಾಮಗಳಲ್ಲಿ ನಿಖರವಾದ ಸಮೀಕ್ಷೆ ಕೈಗೊಂಡು ಫಲಾನುಭವಿಗಳ ಖಚಿತ ಸಂಖ್ಯೆ ತಿಳಿಯಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪ್ರಧಾನಮಂತ್ರಿ ಸಹಜ ಬಿಜಲಿ ಹರಘರ ಯೋಜನಾ (ಸೌಭಾಗ್ಯ): ಈ ಯೋಜನೆಯಲ್ಲಿ ಒಟ್ಟು 1928 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಾಗಿದ್ದು, ಈ ವರೆಗೆ ಯಾವುದೇ ಪ್ರಗತಿಯಾಗಿಲ್ಲ. ವಿದ್ಯುತ್ ಸಂಪರ್ಕ ಶೀಘ್ರವಾಗಿ ಕಲ್ಪಿಸಿ ಗುರಿ ತಲುಪಲು ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಸಂಪರ್ಕ ನೀಡುವ ತಂಡಗಳನ್ನು ರಚಿಸಬೇಕು. ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಿದ ಮಾಹಿತಿಯನ್ನು ದಿನಂಪ್ರತಿ ಸಲ್ಲಿಸಬೇಕು. ಯಾವುದಾದರೂ ಗ್ರಾಮದಲ್ಲಿ ಟ್ರಾನ್ಸ್‍ಫಾರ್ಮರ್, ವಿದ್ಯುತ್ ಕಂಬಗಳನ್ನು ಅಳವಡಿಸಬೇಕಾದ ಅವಶ್ಯಕತೆ ಇದ್ದಲ್ಲಿ ಈಗಿನಿಂದಲೇ ಕೆಲಸ ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಉಜಾಲಾ: ಗ್ರಾಮೀಣ ಪ್ರದೇಶದಲ್ಲಿ ಎಲ್.ಇ.ಡಿ. ಬಲ್ಬ್‍ಗಳ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ವತಿಯಿಂದ ಸಬ್ಸಿಡಿ ದರದಲ್ಲಿ ಎಲ್.ಇ.ಡಿ. ಬಲ್ಬ್‍ಗಳನ್ನು ವಿತರಿಸುವ ಯೋಜನೆ ಇದಾಗಿದ್ದು, ಜಿಲ್ಲೆಯ 67 ಗ್ರಾಮಗಳಲ್ಲಿ 5360 ಎಲ್.ಇ.ಡಿ. ಬಲ್ಬಗಳನ್ನು ವಿತರಿಸುವ ಗುರಿ ನೀಡಲಾಗಿದೆ. ಇಲ್ಲಿಯವರೆಗೆ ಈ ಗ್ರಾಮಗಳಲ್ಲಿ ಎಲ್.ಇ.ಡಿ. ಬಲ್ಬ ವಿತರಣೆಯ ಯಾವುದೇ ಪ್ರಗತಿ ಕಂಡು ಬಂದಿಲ್ಲ. ವಿತರಕರು ಹೆಚ್ಚಿನ ಮುತುವರ್ಜಿವಹಿಸಿ ಮುಂದುವರೆದ ಗ್ರಾಮ ಸ್ವರಾಜ ಅಭಿಯಾನದಲ್ಲಿ ಗುರುತಿಸಲಾದ ಗ್ರಾಮಗಳಲ್ಲಿ ಸಾರ್ವಜನಿಕರಿಂದ ಆಧಾರ್ ಕಾರ್ಡಗಳನ್ನು ಪಡೆದು ಕನಿಷ್ಠ 2 ಹಾಗೂ ಗರಿಷ್ಠ 5 ಬಲ್ಬ್‍ಗಳನ್ನು ಸಬ್ಸಿಡಿ ದರದಲ್ಲಿ ವಿತರಿಸಲು ಅಗತ್ಯ ಕ್ರಮ ಕೈಗೊಂಡು ಜುಲೈ ಅಂತ್ಯದೊಳಗಾಗಿ ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಹಾಗೂ ಸುರಕ್ಷಾ ಬಿಮಾ ಯೋಜನಾ: ಪ್ರಧಾನಮಂತ್ರಿ ಜೀವನ ಜ್ಯೋತಿ ಯೋಜನೆಗಾಗಿ 4900 ಫಲಾನುಭವಿಗಳ ಹಾಗೂ ಸುರಕ್ಷಾ ಬಿಮಾ ಯೋಜನೆಗಾಗಿ 5400 ಫಲಾನುಭವಿಗಳ ಗುರಿ ನೀಡಲಾಗಿದೆ. ಈ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ಅಪಘಾತ ಸಂಭವಿಸಿದಾಗ ಮರಣ ಹೊಂದಿದ್ದಲ್ಲಿ 2 ಲಕ್ಷ ರೂ.ಗಳ ವಿಮೆ ಹಣ ಸಿಗುತ್ತದೆ. ಸಾರ್ವಜನಿಕರಲ್ಲಿ ಈ ಯೋಜನೆಗಳ ಜಾಗೃತಿ ಇಲ್ಲದ ಕಾರಣ ಹೆಚ್ಚಿಗೆ ವಿಮೆ ಪಾವತಿಸಲು ಮುಂದೆ ಬರುತ್ತಿಲ್ಲ. ಜೀವನ ಜ್ಯೋತಿ ಯೋಜನೆಗಾಗಿ ಪ್ರತಿವರ್ಷ 330 ರೂ. ಹಾಗೂ ಸುರಕ್ಷಾ ಬಿಮಾ ಯೋಜನೆಗಾಗಿ ಪ್ರತಿ ವರ್ಷ 12ರೂ. ಪಾವತಿಸಿದ್ದಲ್ಲಿ ಯೋಜನೆಯ ಪ್ರಯೋಜನ ದೊರೆಯುವುದು. ಗ್ರಾಮೀಣ ಪ್ರದೇಶದಲ್ಲಿರುವ ಬ್ಯಾಂಕ್ ಶಾಖೆಗಳ ವ್ಯವಸ್ಥಾಪಕರು ಈ ಯೋಜನೆಯ ಜಾಗೃತಿ ಮೂಡಿಸಿ ಬ್ಯಾಂಕ್ ಖಾತೆದಾರರಿಂದ ವಿಮಾ ಶುಲ್ಕ ಪಾವತಿಸಲು ಸಮ್ಮತಿ ಪಡೆದು ಗುರಿ ಸಾಧಿಸಬೇಕು. ವಿಮಾ ಶುಲ್ಕ ಪಾವತಿಸುವ ಸಮ್ಮತಿ ಪತ್ರಗಳನ್ನು ಎ.ಟಿ.ಎಂ. ಕೇಂದ್ರಗಳಲ್ಲೂ ಸಹ ಲಭ್ಯವಾಗುವ ಹಾಗೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಐಎಎಸ್. ಪ್ರೊಬೇಷನರಿ ಅಧಿಕಾರಿ ಲೋಖಂಡೆ ಸ್ನೇಹಾಳ ಸುಧಾಕರ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು.
ಶೀಘ್ರ ನ್ಯಾಯಾದಾನಕ್ಕೆ ತ್ವರಿತ ವರದಿ ಸಲ್ಲಿಸಿ
****************************************
-ಕೆ.ಬಿ.ಚೆಂಗಪ್ಪ
*************
ಕಲಬುರಗಿ,ಜು.19.(ಕ.ವಾ.)- ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗವು ಮಾಹಿತಿ ಅಪೇಕ್ಷಿಸಿದಾಗ ತಕ್ಷಣ ಜಿಲ್ಲಾ ಮಟ್ಟದ ಅಧಿಕಾರಿಗಳು ಮಾಹಿತಿ ನೀಡಿದಲ್ಲಿ ನೋಂದ ನಿರ್ಗತಿಕರಿಗೆ ಶೀಘ್ರ ನ್ಯಾಯದಾನ ನೀಡಲು ಸಾಧ್ಯವಾಗುತ್ತದೆ. ಇಂತಹ ಪ್ರಕರಣಗಳಲ್ಲಿ ಅಧಿಕಾರಿಗಳು ಹೆಚ್ಚು ವೇಗವಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಕೆ.ಬಿ.ಚೆಂಗಪ್ಪ ಹೇಳಿದರು.
ಅವರು ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಪ್ರಕರಣಗಳ ಬಗ್ಗೆ ಪ್ರಸ್ತುತ ಸ್ಥಿತಿಗತಿ ಮಾಹಿತಿ ಪಡೆದುಕೊಂಡು ಮಾತನಾಡಿದರು.
ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಕೋರುವುದು ಆಯೋಗದ ಕರ್ತವ್ಯ. ಇದನ್ನು ಅಧಿಕಾರಿಗಳು ಅನ್ಯತಾ ಭಾವಿಸದೆ ಕೇಳಿರುವ ಮಾಹಿತಿಯನ್ನು ಕೂಡಲೆ ಸಲ್ಲಿಸಿದಲ್ಲಿ ಸಮಸ್ಯೆಗಳ ಪರಿಹಾರ ಕೋರಿ ಬರುವವರಿಗೆ ತ್ವರಿತವಾಗಿ ಪರಿಹಾರ ನೀಡಬಹುದಾಗಿದೆ. ಒಟ್ಟಾರೆ ಜನರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕಾಗಿದೆ ಎಂದರು.
ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಒಟ್ಟು 91 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 27 ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯೋಗಕ್ಕೆ ಅಧಿಕಾರಿಗಳಿಂದ ವರದಿ ಬರಬೇಕಾಗಿದೆ. ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳ ಮಾಹಿತಿಯನ್ನು ಕೂಡಲೆ ಆಯೋಗಕ್ಕೆ ಸಲ್ಲಿಸುವಂತೆ ಸೂಚಿಸಿದ ಅವರು ಇತರೆ ಜಿಲ್ಲೆಗೆ ಹೋಲಿಸಿದರೆ ಕಲಬುರಗಿ ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಪ್ರಕರಣಗಳು ಸಂಖ್ಯೆ ಕಡಿಮೆ ಎಂದರು.
ಇನ್ನು ಕೆಲವು ಮಾನವ ಹಕ್ಕುಗಳ ಕಾರ್ಯಕರ್ತರು ತಮ್ಮ ವಾಹನಗಳ ಮೇಲೆ ರಾಜ್ಯ ಮತ್ತು ರಾಷ್ಟ್ರ ಲಾಂಛನಗಳನ್ನು ಹಾಕಿಕೊಂಡು ಓಡಾಡುತ್ತಿದ್ದು ಆಯೋಗದ ಗಮನಕ್ಕೆ ಬಂದಿದ್ದು, ಇದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೆಕ್ಚನ್ 3ರ ಸ್ಪಷ್ಠ ಉಲ್ಲಂಘನೆಯಾಗುತ್ತದೆ. ಇಂತಹ ಸಂಘ-ಸಂಸ್ಥೆಗಳ ನೋಂದಣಿ ಮಾಡುವ ಜಿಲ್ಲಾ ನೋಂದಣಾಧಿಕಾರಿಗಳು ಇದರ ಬಗ್ಗೆ ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನಿಡಿದರು.
ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳ ಮಾಹಿತಿಯನ್ನು ಮಾನವ ಹಕ್ಕುಗಳ ಆಯೋಗದ ಸದಸ್ಯರ ಗಮನಕ್ಕೆ ತಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೋರ್ಲಪಾಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಜಯಪ್ರಕಾಶ, ಸಹಾಯಕ ಆಯುಕ್ತ ರಾಚಪ್ಪ, ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ತದನಂತರ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಕೆ.ಬಿ.ಚೆಂಗಪ್ಪ ಅವರು ಆಳಂದ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ಮಹಿಳಾ ನಿಲಯ, ಬಾಲಕೀಯರ ಬಾಲ ಮಂದಿರ ಮತ್ತು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜುಲೈ 20ರಂದು ಕಾನೂನು ಸಾಕ್ಷರತಾ ಕ್ಲಬ್ ಉದ್ಘಾಟನೆ
**************************************************
ಕಲಬುರಗಿ,ಜು.19(ಕ.ವಾ.)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರೌಢಶಾಲೆ ಆದರ್ಶ ನಗರ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಸಾಕ್ಷರತಾ ಕ್ಲಬ್‍ನ ಉದ್ಘಾಟನಾ ಕಾರ್ಯಕ್ರಮವನ್ನು ಜುಲೈ 20ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಆದರ್ಶ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್.ಮಾಣಿಕ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕರ್ನಾಟಕ ಅಧ್ಯಾಪಕರ ಸಂಘದ ಕಾರ್ಯದರ್ಶಿ ಸಿದ್ದನ್ಣ ಬಿ. ಪೂಜಾರಿ ಅಧ್ಯಕ್ಷತೆ ವಹಿಸುವರು. ಕಲಬುರಗಿ ಉತ್ತರ ವಲಯದ ಕ್ಷೇತ್ರ ಶಿಕ್ಷಣಾದಿಕಾರಿ ಚನ್ನಬಸಪ್ಪ ಮುಧೋಳ, ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಕೆ. ಹಿರೇಮಠ, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಪ್ರತಿಮಾ ಜಿ. ದೇವೂರ ಹಾಗೂ ಮೇಲ್ವಿಚಾರಕ ಶಿಕ್ಷಕಿ ಶಶಿಕಲಾ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಡೇ-ನಲ್ಮ್ ಯೋಜನೆ: ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕಲಬುರಗಿ,ಜು.19(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆಯ 2018-19ನೇ ಸಾಲಿನ ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ದಡಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು (ವೈಯಕ್ತಿಕ ಮತ್ತು ಗುಂಪು) ಸಾಲ ಸೌಲಭ್ಯಕ್ಕಾಗಿ ನಗರ ಪ್ರದೇಶದಲ್ಲಿ ವಾಸಿಸುವ ಬಡ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಈ ಯೋಜನೆಯಡಿ ಮಹಾನಗರಪಾಲಿಕೆಯ ದಕ್ಷಿಣ ಸಿ.ಎಲ್.ಎಫ್.ಗೆ ಒಟ್ಟು 50 (SಇP-I) ವೈಯಕ್ತಿಕ ಸಾಲಕ್ಕಾಗಿ ಹಾಗೂ ಗುಂಪು ಸಾಲಕ್ಕಾಗಿ (SಇP-ಉ) ಒಟ್ಟು 6 ಗುರಿ ನಿಗದಿಪಡಿಸಲಾಗಿದೆ. ವೈಯಕ್ತಿಕ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಗರ ಪ್ರದೇಶದ ಬಿ.ಪಿ.ಎಲ್. ಕಾರ್ಡ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ಸ್ವಸಹಾಯ ಸಂಘದ ಸದಸ್ಯರಾಗಿರಬೇಕು. ಬೀದಿ ವ್ಯಾಪಾರಿಗಳು, ಅಂಗವಿಕಲರು, ಮಂಗಳಮುಖಿಯರು ಮತ್ತು ವಿಧವೆಯರಿಗೆ ಆದ್ಯತೆ ನೀಡಲಾಗುವುದು. ಗುಂಪು ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಸ್ವಸಹಾಯ ಗುಂಪಿನವರು ನಲ್ಮ್ ಶಾಖೆಯಿಂದ ಸುತ್ತುನಿಧಿ ಪಡೆದಿರಬೇಕು ಮತ್ತು ಗುಂಪು ಚಟುವಟಿಕೆಯಲ್ಲಿ ತೊಡಗಿರಬೇಕು.
ಕಲಬುರಗಿ ನಗರ ವ್ಯಾಪ್ತಿಯಲ್ಲಿ ರಚಿತಗೊಂಡ ಸ್ವಸಹಾಯ ಗುಂಪು/ ಸಂಘಗಳನ್ನು ಆಯಾ ಏರಿಯಾದ ಸಮುದಾಯ ಸಂಘಟಕರನ್ನು ಸಂಪರ್ಕಿಸಿ ತಮ್ಮ ಗುಂಪಿನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಅರ್ಜಿಯನ್ನು ಮಹಾನಗರಪಾಲಿಕೆಯ ಡೆ-ನಲ್ಮ್ ದಕ್ಷಿಣ ಶಾಖೆಯಿಂದ ಪಡೆದು ಭರ್ತಿ ಮಾಡಿ 2018ರ ಆಗಸ್ಟ್ 10 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ಡೆ-ನಲ್ಮ್ ಶಾಖೆಯ ಸಮುದಾಯ ಸಂಘಟನಾಧಿಕಾರಿ (ದಕ್ಷಿಣ) ಅವರನ್ನು ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಚಿತ ಆರೋಗ್ಯ ಶಿಬಿರ: 870 ಜನರಿಗೆ ಔಷಧ ವಿತರಣೆ
***********************************************
ಕಲಬುರಗಿ,ಜು.19(ಕ.ವಾ.)-ಕಲಬುರಗಿ ಆಯುಷ್ ಇಲಾಖೆಯಿಂದ ಕಾಳಗಿ ತಾಲೂಕಿನ ರಾಜಾಪುರ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಹಾಗೂ ಕಲಬುರಗಿ ತಾಲೂಕಿನ ಬಬಲಾದ ಐ.ಕೆ. ಗ್ರಾಮದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 870 ಜನರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಿ ಔಷಧಿಯನ್ನು ನೀಡಲಾಯಿತು.
ಶ್ರೀ ಚನ್ನವೀರ ಮಠದ ಪೀಠಾಧಿಪತಿಗಳಾದ ಶ್ರೀ ಗುರುಪಾದಲಿಂಗ ಮಹಾಸ್ವಾಮಿಗಳು ಈ ಶಿಬಿರವನ್ನು ಉದ್ಘಾಟಿಸಿದರು. ಈ ಶಿಬಿರದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ|| ನಾಗರತ್ನ ಚಿಮ್ಮಲಗಿ ಹಾಗೂ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯವರು ಭಾಗವಹಿಸಿದ ಸಾರ್ವಜನಿಕರಿಗೆ ಉಚಿತವಾಗಿ ವೈದ್ಯಕೀಯ ತಪಾಸಣೆ ಮಾಡಿ ಔಷಧಿಗಳನ್ನು ವಿತರಿಸಲಾಯಿತು.
ಸೇನೆಗೆ ಸೇರಬಯಸುವ ಅಭ್ಯರ್ಥಿಗಳಿಗೆ
***********************************
ಆಯ್ಕೆಯ ಪೂರ್ವಸಿದ್ಧತಾ ತರಬೇತಿ: ಅರ್ಜಿ ಆಹ್ವಾನ
*********************************************
ಕಲಬುರಗಿ,ಜು.19(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿಗೆ ಭಾರತೀಯ ಸೇನೆಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆಯ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ನೀಡಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ವಸತಿ ಸೌಲಭ್ಯದೊಂದಿಗೆ ತರಬೇತಿ ನೀಡಲಾಗುತ್ತಿದೆ. ಅಭ್ಯರ್ಥಿಗಳು ಇಲಾಖೆಯ www.backwardclasses.kar.nic.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ 2018ರ ಜುಲೈ 25 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ವೆಬ್‍ಸೈಟ್‍ನ್ನು ಅಥವಾ ಸಹಾಯವಾಣಿ ಸಂಖ್ಯೆ 8050770004ಗಳಿಗೆ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲಾ ಕಟ್ಟಡ ನಿರ್ಮಾಣ: ಆಕ್ಷೇಪಣೆ ಸಲ್ಲಿಸಲು ಸೂಚನೆ
**************************************************
ಕಲಬುರಗಿ,ಜು.19(ಕ.ವಾ.)-ಕಲಬುರಗಿ ನಗರದ ಕೋಟನೂರ ಕಾಲೋನಿಯ ನಿವೇಶನ ಸಂಖ್ಯೆ 2563/ಎ ಸರ್ವೇ ನಂ. 19 ಕೋಟನೂರ (ಕೋಟನೂರ-ದರಿಯಾಪುರ) ರಲ್ಲಿ ಶಾಲಾ ಕಟ್ಟಡ ನಿರ್ಮಿಸಲು ಸಪ್ನಾರೆಡ್ಡಿ ಪಾಟೀಲ ಅವರು ಅರ್ಜಿ ಸಲ್ಲಿಸಿದ್ದಾರೆಂದು ಕಲಬುರಗಿ ಮಹಾನಗರ ಪಾಲಿಕೆ ವಲಯ-1ರ ಕಚೇರಿ ಆಯುಕ್ತರು ತಿಳಿಸಿದ್ದಾರೆ.
ದಿನಾಂಕ: 19-09-2009ರ ಸುತ್ತೋಲೆಯಂತೆ ಕಟ್ಟಡ ಪರವಾನಿಗೆ ಮಂಜೂರು ಮಾಡುವ ಪೂರ್ವದಲ್ಲಿ ಸಾರ್ವಜನಿಕರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಆಹ್ವಾನಿಸುವಂತೆ ಸರ್ಕಾರದ ನಿರ್ದೇಶನವಿರುತ್ತದೆ. ಈ ಕುರಿತು ಸ್ಥಳೀಯ ಸಾರ್ವಜನಿಕರಿಂದ ಏನಾದರೂ ಆಕ್ಷೇಪಣೆ ಅಥವಾ ಅಹವಾಲುಗಳಿದ್ದಲ್ಲಿ ತಕರಾರು ಅರ್ಜಿಯನ್ನು 15 ದಿನದೊಳಗಾಗಿ ಕಲಬುರಗಿ ಐವಾನ್-ಏ-ಶಾಹಿಯಲ್ಲಿರುವ ಮಹಾನಗರ ಪಾಲಿಕೆ ವಲಯ-1ರ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.








ಹೀಗಾಗಿ ಲೇಖನಗಳು News and photo Date: 19-07-2018

ಎಲ್ಲಾ ಲೇಖನಗಳು ಆಗಿದೆ News and photo Date: 19-07-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 19-07-2018 ಲಿಂಕ್ ವಿಳಾಸ https://dekalungi.blogspot.com/2018/07/news-and-photo-date-19-07-2018.html

Subscribe to receive free email updates:

0 Response to "News and photo Date: 19-07-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ