News and photo Date: 25-7-2018

News and photo Date: 25-7-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photo Date: 25-7-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photo Date: 25-7-2018
ಲಿಂಕ್ : News and photo Date: 25-7-2018

ಓದಿ


News and photo Date: 25-7-2018

ಲೋಕಸಭಾ ಸದಸ್ಯರ ಪ್ರವಾಸ
*****************************
ಕಲಬುರಗಿ,ಜು.25.(ಕ.ವಾ.)-ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಹೈದ್ರಾಬಾದ್‍ದಿಂದ ರಸ್ತೆ ಮೂಲಕ ಇದೇ ಜುಲೈ 28ರಂದು ಮಧ್ಯಾಹ್ನ 3 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಸಂಜೆ 4 ಗಂಟೆಗೆ ಕಲಬುರಗಿಯಲ್ಲಿ ಬಸವೇಶ್ವರ ಪ್ರತಿಮೆ ಅನಾವರಣ ಹಾಗೂ ಅಕ್ಕಮಹಾದೇವಿ ಪಾರ್ಕ್ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ನಂತರ ಜುಲೈ 29ರಂದು ಮಧ್ಯಾಹ್ನ 12.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣ ಬೆಳೆಸುವರು.
ಕಾಯಕಲ್ಪ ಪ್ರಶಸ್ತಿ ಪಡೆದ ಆರೋಗ್ಯ ಸಂಸ್ಥೆಗಳು ಮಾದರಿಯಾಗಿ
********************************************************
ಕಾರ್ಯನಿರ್ವಹಿಸಲು ಸೂಚನೆ
**************************
ಕಲಬುರಗಿ,ಜು.25.(ಕ.ವಾ.)-ಆಸ್ಪತ್ರೆಗಳಲ್ಲಿ ಸ್ವಚ್ಛತಾ ಕ್ರಮಗಳನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಪ್ರಾರಂಭಿಸಿರುವ ಕಾಯಕಲ್ಪ ಪ್ರಶಸ್ತಿಯನ್ನು ಪಡೆದ ಜಿಲ್ಲೆಯ ಹದಿಮೂರು ಆಸ್ಪತ್ರೆಗಳು ಎಲ್ಲರಿಗೂ ಮಾದರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾಯಕಲ್ಪ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿ, ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಸ್ವಚ್ಛತೆ ಮತ್ತು ಇತರೆ ವಿಷಯಗಳ ಕೊರತೆ ಇದೆಯೆಂದು ಭಾವಿಸಲಾಗುತ್ತದೆ. ಆಸ್ಪತ್ರೆಗಳಲ್ಲಿ ಸ್ವಚ್ಛತೆ ಇಲ್ಲದ ಕಾರಣ ತಾಯಿ ಮತ್ತು ಶಿಶುವಿನ ಮರಣವೂ ಹೆಚ್ಚಾಗುವ ಸಂಭವಗಳಿರುತ್ತವೆ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ವಚ್ಛವಾಗಿಡಲು ಎಲ್ಲರೂ ತಂಡದ ರೂಪದಲ್ಲಿ ಕೆಲಸ ನಿರ್ವಹಿಸಬೇಕು ಎಂದರು.
ಸ್ವಚ್ಛ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿಗೆ ಆಯ್ಕೆ ಮಾಡುವಾಗ ನೈರ್ಮಲ್ಯ ಮತ್ತು ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಕ್ರಮವನ್ನು ಪರಿಗಣಿಸಲಾಗಿದೆ. ಇನ್ನು ಮುಂದೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ವಚ್ಛವಾಗಿಡಲು ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ಪ್ರಯತ್ನಿಸಬೇಕು. ಮುಂದಿನ ವರ್ಷ ನಮ್ಮ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆಯುವ ಹಾಗೆ ರೂಪುಗೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮಾತನಾಡಿ, ಸ್ವಚ್ಛ ಭಾರತ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸ್ವಚ್ಛ ಸರ್ವೇಕ್ಷಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕಳೆದ ವರ್ಷ ಸ್ವಚ್ಛ ಸರ್ವೇಕ್ಷಣ ಕಾರ್ಯಕ್ರಮವನ್ನು ನಗರ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವರ್ಷ ಆಗಸ್ಟ್ ಒಂದರಿಂದ ಗ್ರಾಮೀಣ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಆಸ್ಪತ್ರೆ, ಶಾಲಾ-ಕಾಲೇಜು, ದೇವಸ್ಥಾನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಲು ಹೆಚ್ಚಿನ ಪ್ರಯತ್ನಗಳು ಬೇಕಾಗುತ್ತವೆ. ಎಲ್ಲರೂ ಸರ್ಕಾರಿ ಹಾಗೂ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡಲು ಪ್ರಯತ್ನಿಸಬೇಕೆಂದು ತಿಳಿಸಿದರು.
ಆಸ್ಪತ್ರೆಗಳನ್ನು ಕಾಯಕಲ್ಪ ಪ್ರಶಸ್ತಿಗಾಗಿ ಆಯ್ಕೆ ಮಾಡಲು ಆಸ್ಪತ್ರೆ ಮತ್ತು ಉಪಕರಣಗಳ ಸಂರಕ್ಷಣೆ, ಆಸ್ಪತ್ರೆ ಹಾಗೂ ಆವರಣದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವಿಕೆ, ಆಸ್ಪತ್ರೆ ತ್ಯಾಜ್ಯ ಸೇರಿದಂತೆ ಘನತ್ಯಾಜ್ಯ ನಿರ್ವಹಣೆ, ರೋಗ ಹರಡದಂತೆ ತಡೆಯುವ ಕ್ರಮ, ಆರೋಗ್ಯ ಚಿಕಿತ್ಸೆಯೊಂದಿಗೆ ಬೆಂಬಲ ಸೇವೆ, ನೈರ್ಮಲ್ಯ ಅಭಿವೃದ್ಧಿ ಹಾಗೂ ಆಸ್ಪತ್ರೆ ಹೊರಗೆ ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ತುಂಬುವಂತಹ ವಿಷಯಗಳನ್ನು ಪರಿಗಣನೆಗೆ ತೆಗೆದುಕೊಂಡು ಈ ವಿಷಯಗಳಲ್ಲಿ ಶೇ. 70ಕ್ಕಿಂತ ಹೆಚ್ಚು ಅಂಕ ಪಡೆದ ಆಸ್ಪತ್ರೆಗಳಿಗೆ ಪ್ರಶಸ್ತಿ ನೀಡಲಾಗಿದೆ.
ಆಳಂದ ತಾಲೂಕಿನ ಬೆಳಮಗಿ ಪ್ರಾಥಮಿಕ ಆರೋಗ್ಯ ಕೇಂದ್ರವು ಜಿಲ್ಲೆಯ ಅತ್ಯುತ್ತಮ ಕೇಂದ್ರವೆಂದು ಪರಿಗಣಿಸಿ 2 ಲಕ್ಷ ರೂ. ಬಹುಮಾನ ನೀಡಲಾಗಿದೆ. ಜೇವರ್ಗಿ ತಾಲೂಕಿನ ಮಂದೆವಾಲ, ಗಂವಾರ, ಮಳ್ಳಿ, ಅಫಜಲಪುರ ತಾಲೂಕಿನ ಗೊಬ್ಬರ(ಬಿ), ಚಿಂಚೋಳಿ ತಾಲೂಕಿನ ರಟಕಲ್, ಕಲಬುರಗಿ ತಾಲೂಕಿನ ಡೊಂಗರಗಾಂವ, ಅಶೋಕನಗರ, ಶಿವಾಜಿನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ತಲಾ 50,000 ರೂ.ಗಳ ನಗದು ಬಹುಮಾನ ಪಡೆದಿವೆ. ಜಿಲ್ಲೆಯ ನರೋಣಾ, ಹೆಬ್ಬಾಳ, ಯಡ್ರಾಮಿ ಹಾಗೂ ಗುಂಡಗುರ್ತಿ ಸಮುದಾಯ ಆರೋಗ್ಯ ಕೇಂದ್ರಗಳು ತಲಾ 1 ಲಕ್ಷ ರೂ.ಗಳ ಬಹುಮಾನ ಪಡೆದಿವೆ. ಈ ಸಂಸ್ಥೆಗಳು ಪಡೆದ ಬಹುಮಾನದ ಶೇ. 75ರಷ್ಟನ್ನು ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ಶೇ. 25ರಷ್ಟು ಹಣವನ್ನು ಸಿಬ್ಬಂದಿಗಳಿಗೆ ನೀಡುವ ಮೂಲಕ ಪ್ರೇರೇಪಿಸಲು ಬಳಸಿಕೊಳ್ಳಬಹುದಾಗಿದೆ. ಕಾರ್ಯಕ್ರಮದಲ್ಲಿ ಐ.ಎಸ್.ಎಸ್. ಪ್ರೊಬೇಷನರಿ ಅಧಿಕಾರಿ ಲೋಖಂಡೆ ಸ್ನೇಹಲ ಸುಧಾಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಾಧವರಾವ ಕೆ. ಪಾಟೀಲ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಬಾಲಚಂದ್ರ ಜೋಶಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಮನೆ ಹೆರಿಗೆಯಾಗದಂತೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ
*******************************************************
ಕಲಬುರಗಿ,ಜು.25.(ಕ.ವಾ.)-ಮನೆಯಲ್ಲಿ ಹೆರಿಗೆಯಾಗುವುದರಿಂದ ಹೆಚ್ಚಾಗಿ ತಾಯಿ ಮತ್ತು ಮಗುವಿಗೆ ಗಂಡಾಂತರ ಒದಗುವ ಸಂಭವಗಳು ಹೆಚ್ಚು ಕಾರಣ ಮನೆಯಲ್ಲಿ ಹೆರಿಗೆಯಾಗುವುದನ್ನು ನಿಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಇಲಾಖೆ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಏಪ್ರಿಲ್‍ನಿಂದ ಈವರೆಗೆ 28 ಹೆರಿಗೆಗಳು ಮನೆಯಲ್ಲಿ ಆಗಿವೆ. ಹೆರಿಗೆಗಳು ಮನೆಯಲ್ಲಾಗಲು ಕಾರಣಗಳೇನು ಎಂಬುವುದರ ಬಗ್ಗೆ ಮಾಹಿತಿ ನೀಡಲು ತಿಳಿಸಲಾಗಿತ್ತು. ಮುಂದಿನ ಒಂದು ವಾರದಲ್ಲಿ ಮನೆಯಲ್ಲಾದ ಎಲ್ಲ ಹೆರಿಗೆಗಳ ವಿವರ ಮಾಹಿತಿ ನೀಡುವಂತೆ ಸೂಚಿಸಿದರು.
ತಾಲೂಕು ಆರೋಗ್ಯಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಬ್ಬರು ಹಿರಿಯ ವೈದ್ಯಕೀಯ ಅಧಿಕಾರಿಗಳು ಸೇರಿದಂತೆ ಸಮಿತಿಯೊಂದನ್ನು ತಾಲೂಕು ಮಟ್ಟದಲ್ಲಿ ರಚಿಸಿಕೊಂಡು ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿ ಮನೆಯಲ್ಲಾಗಿರುವ ಹೆರಿಗೆಗಳ ಕುರಿತು ಸವಿವರ ಮಾಹಿತಿ ನೀಡಬೇಕು. ಗರ್ಭಿಣಿಯರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೋಂದಣಿ, ಅವರಿಗೆ ತಾಯಿ ಕಾರ್ಡ ನೀಡಿರುವ ಬಗ್ಗೆ, ಆಶಾ ಕಾರ್ಯಕರ್ತೆಯರಿಂದ ನಿಯಮಿತ ವಿಚಾರಣೆ, ಹೆರಿಗೆ ದಿನಾಂಕ ಮುಂಚಿತವಾಗಿ ಗೊತ್ತುಪಡಿಸಿರುವ ಬಗ್ಗೆ ಮಾಹಿತಿ ಪಡೆಯಬೇಕು, ಗರ್ಭಿಣಿಯರು ಮಾತೃಪೂರ್ಣ ಯೋಜನೆಯಡಿಯಲ್ಲಿ ಪೌಷ್ಠಿಕ ಆಹಾರ ಪಡೆಯುತ್ತಿದ್ದು, ಅಂಗನವಾಡಿ ಅಥವಾ ಆಶಾ ಕಾರ್ಯಕರ್ತೆಯರ ಸಂಪರ್ಕಕ್ಕೆ ಇರುತ್ತಾರೆ. ಗರ್ಭಿಣಿಯರ ಹೆರಿಗೆ ದಿನಾಂಕ ನಿಗದಿಯಾದಾಗ 1-2 ದಿನಗಳ ಮುಂಚಿತವಾಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮನೆಯಲ್ಲಾಗುವ ಹೆರಿಗೆಗಳನ್ನು ತಪ್ಪಿಸಬೇಕು ಎಂದರು.
ಜಿಲ್ಲೆಯಲ್ಲಿ ಗರ್ಭಿಣಿಯರ ಮತ್ತು ಹುಟ್ಟುವ ಮಕ್ಕಳ ದಾಖಲಾತಿ ಪ್ರಮಾಣ ತುಂಬಾ ಕಡಿಮೆ ಇದೆ. ಏಪ್ರಿಲ್‍ನಿಂದ ಜೂನ್ ಮಾಹೆಯ ಪ್ರಥಮ ತ್ರೈಮಾಸಿಕದಲ್ಲಿ ಒಟ್ಟು 11211 ಮಕ್ಕಳು ಜನಿಸಿದರೆ 9900 ಮಕ್ಕಳು ನೋಂದಣಿಯಾಗಿದ್ದಾರೆ. ಕಲಬುರಗಿ ನಗರ ಪ್ರದೇಶದಲ್ಲಿ ಜನನವಾದ ಮಕ್ಕಳ ನೋಂದಣಿ ತುಂಬಾ ಕಡಿಮೆ ಇದೆ. ಇದನ್ನು ತುಂಬಾ ಗಂಭೀರವಾಗಿ ಪರಿಗಣಿಸಬೇಕು. ಆಸ್ಪತ್ರೆಯಲ್ಲಿ ತಾಯಿ ಕಾರ್ಡ ಇಲ್ಲದೇ ಹೆರಿಗೆಯಾದಾಗ ತಾಯಿಯ ಮತ್ತು ಮಗುವಿನ ನೋಂದಣಿ ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ತಾಯಿ ಕಾರ್ಡ ಇಲ್ಲದೇ ಹೆರಿಗೆಯಾಗಿರುವ ಗರ್ಭಿಣಿಯರ ವಿವರ ಪಡೆದು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹಾಗೂ ತಾಲೂಕು ಆಸ್ಪತ್ರೆಗಳಿಗೆ ನೀಡಿ ಅವರಿಂದ ಗರ್ಭಿಣಿಯರ ತಾಯಿ ಕಾರ್ಡ ವಿವರ ಪಡೆದು ಜಿಲ್ಲಾ ಆಸ್ಪತ್ರೆಗೆ ನೀಡಿದ್ದಲ್ಲಿ ತಾಯಿ ಮತ್ತು ಮಗುವಿನ ನೋಂದಣಿ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದರು.
ಶಿಶುವಿನ ಮರಣ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗಬೇಕು. ಆದರೆ ಆಗುತ್ತಿಲ್ಲ. ಇದು ಗಂಭೀರವಾದ ಸಮಸ್ಯೆಯಾಗಿದ್ದು, ಶಿಶು ಮರಣ ಪ್ರಮಾಣ ತಗ್ಗಿಸಲು ಎಲ್ಲ ಹಂತದ ಆಸ್ಪತ್ರೆಗಳಲ್ಲಿ ಅವಶ್ಯಕ ಕ್ರಮಗಳನ್ನು ಜರುಗಿಸಬೇಕು. ತಾಯಿ ಮತ್ತು ಶಿಶುವಿನ ಮರಣದ ಕುರಿತು ಆಡಿಟ್ ಕೈಗೊಳ್ಳಬೇಕು. ಸಾವಿಗೆ ಕಾರಣವೇನು ಎಂಬುದನ್ನು ತಿಳಿಯಬೇಕು. ನರ್ಸಿಂಗ್ ಹೋಂಗಳಲ್ಲಿ ತಾಯಿ ಮತ್ತು ಮಗುವಿನ ಮರಣ ಸಂಭವಿಸಿದ್ದಲ್ಲಿ ಅವರಿಂದ ನಿಗದಿತ ನಮೂನೆಯಲ್ಲಿ ವರದಿ ಪಡೆಯಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ಜನಿಸುವ ಮಕ್ಕಳು ಸಹ ಸಾವಿಗಿಡಾಗುತ್ತಿದ್ದಾರೆ. ಇದನ್ನು ಕಡಿಮೆ ಮಾಡಲು ಜೇವರ್ಗಿ ಮತ್ತು ಸೇಡಂಗಳಲ್ಲಿರುವ ಹುಟ್ಟಿರುವ ಮಕ್ಕಳ ಆರೋಗ್ಯ ಸ್ಥಿರಗೊಳಿಸುವ (ಎನ್.ಬಿ.ಎಸ್.ಯು) ಘಟಕಗಳನ್ನು ಕಾರ್ಯಾರಂಭಗೊಳಿಸಬೇಕು. ಈ ಘಟಕಗಳಿಗೆ ಪ್ಯಾರಾ ಮೆಡಿಕಲ್ ಸಿಬ್ಬಂದಿ ಬೇಕಾದಲ್ಲಿ ಹೆರಿಗೆ ಕಡಿಮೆಯಿರುವ ಆಸ್ಪತ್ರೆಗಳ ನರ್ಸ್‍ಗಳಿಗೆ ತರಬೇತಿ ನೀಡಿ ನಿಯೋಜಿಸಬೇಕು. ಡಿ.ಹೆಚ್.ಓ. ಅವರು ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ಎನ್.ಬಿ.ಎಸ್.ಯು. ಘಟಕಗಳು ಕಾರ್ಯಾರಂಭ ಮಾಡುವ ಹಾಗೆ ಕ್ರಮ ಕೈಗೊಳ್ಳಬೇಕು ಎಂದರು.
ಈಗಾಗಲೇ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವ ಸೊಳ್ಳೆಗಳ ನಿಯಂತ್ರಣ ಕ್ರಮಗಳನ್ನು ಕೈಗೊಂಡಿರುವುದರಿಂದ ಈ ವರ್ಷ ಡೆಂಗ್ಯೂ ಪ್ರಕರಣಗಳು ಕಳೆದ ಬಾರಿಯಷ್ಟು ವರದಿಯಾಗಿಲ್ಲ. ಆದಾಗ್ಯೂ ಆಗಸ್ಟ್ ಮಾಹೆಯಲ್ಲಿ ಮಳೆ ಬರುವ ಸಂಭವ ಇರುವುದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ತಿಂಗಳಿಗೆ ಎರಡು ಬಾರಿ ಬೂತ ಮಟ್ಟದ ತಂಡಗಳನ್ನು ರಚಿಸಿ ಮನೆ ಮನೆಗೆ ಭೇಟಿ ನೀಡಿ ಸೊಳ್ಳೆ ಉತ್ಪಾದನಾ ತಾಣಗಳನ್ನು ನಾಶಪಡಿಸಬೇಕು. ಅವಶ್ಯಕವಿದ್ದಲ್ಲಿ ಫಾಗಿಂಗ್ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ರುದ್ರವಾಡಿ ಮಾತನಾಡಿ, ಕೇಂದ್ರ ಸರ್ಕಾರವು ಹಮ್ಮಿಕೊಂಡಿರುವ ಮಿಷನ್ ಇಂದ್ರಧನುಷ ಮಾದರಿಯಲ್ಲಿ ರಾಜ್ಯ ಸರ್ಕಾರವು ಇಡೀ ರಾಜ್ಯಕ್ಕೆ ಮಿಷನ್ ಇಂದ್ರಧನುಷ ಕಾರ್ಯಕ್ರಮ ವಿಸ್ತರಿಸಿದೆ. ಈ ಕಾರ್ಯಕ್ರಮದಡಿ ಇಂದ್ರಧನುಷ ಲಸಿಕಾ ಕಾರ್ಯಕ್ರಮ, ಗರ್ಭಿಣಿಯರಿಗೆ ಮತ್ತು ತಾಯಿಗೆ ಗುಣಮಟ್ಟದ ತಪಾಸಣೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಲಕ್ಷ ಸರ್ಟಿಫಿಕೇಟ್, ಮಗುವಿಗೆ ಎದೆ ಹಾಲಿನ ಜೊತೆಗೆ ಪೂರಕ ಆಹಾರ ನೀಡುವುದು, ಕ್ಷಯರೋಗ ತಪಾಸಣೆ ಮತ್ತು ನಿಯಂತ್ರಣ, ಪೋಷಣೆ, ಗ್ರಾಮೀಣ ನೈರ್ಮಲ್ಯೀಕರಣ ಸಮಿತಿ ರಚನೆ ಹಾಗೂ ತರಬೇತಿ ಸೇರಿದಂತೆ ಒಟ್ಟು 10 ಅಂಶಗಳನ್ನು ಅಳವಡಿಸಿಕೊಂಡು ಜಾರಿಗೊಳಿಸಲಾಗುತ್ತಿದೆ. ಆಗಸ್ಟ್ 13ರಂದು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕಾಗಿದ್ದು, ಇದಕ್ಕೂ ಮುಂಚೆ ಜಿಲ್ಲೆಯಲ್ಲಿ ಸಮೀಕ್ಷೆ ಕೈಗೊಂಡು ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಾಧವರಾವ ಕೆ. ಪಾಟೀಲ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಬಾಲಚಂದ್ರ ಜೋಶಿ ಮತ್ತಿತರರು ಪಾಲ್ಗೊಂಡಿದ್ದರು.
ಸಮಾಜ ಕಲ್ಯಾಣ ಸಚಿವರ ಪ್ರವಾಸ
*******************************
ಕಲಬುರಗಿ,ಜು.25.(ಕ.ವಾ.)-ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಅವರು ಯಶವಂತಪುರ-ಸೋಲಾಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜುಲೈ 26ರಂದು ಬೆಳಿಗ್ಗೆ 6.25 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಿಗದಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 4.15 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣಿಸುವರು.
ಚಿತ್ತಾಪುರ ತಾಲೂಕು: ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ
ಕಲಬುರಗಿ,ಜು.25.(ಕ.ವಾ.)-ಪ್ರಸಕ್ತ 2018-19ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಚಿತ್ತಾಪುರ ತಾಲೂಕಿನಲ್ಲಿ ತೊಗರಿ, ಹೆಸರು, ಉದ್ದು, ಸಜ್ಜೆ, ಸೂರ್ಯಕಾಂತಿ ಹಾಗೂ ಮಳೆಯಾಶ್ರಿತ ಹತ್ತಿ ಬೆಳೆಗಳಿಗೆ ರೈತರು ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ ಎಂದು ಚಿತ್ತಾಪುರ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಚಿತ್ತಾಪುರ ತಾಲೂಕಿನ ರೈತ ಬಾಂಧವರು ಕೂಡಲೇ ತಮಗೆ ಸಂಬಂಧಿಸಿದ ಸಹಕಾರಿ ಬ್ಯಾಂಕ್ ಅಥವಾ ಗ್ರಾಮೀಣ ಬ್ಯಾಂಕ್ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ದಾಖಲೆ ಸಲ್ಲಿಸಿ ವಿಮೆ ಕಂತು ಪಾವತಿಸಿ ಬೆಳೆ ವಿಮೆ ಮಾಡಿಸಿಕೊಳ್ಳಬಹುದಾಗಿದೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 28ರಂದು ಎ.ಸಿ.ಬಿ.ಅಧಿಕಾರಿಗಳಿಂದ ಅಹವಾಲು ಸ್ವೀಕಾರ
********************************************************
ಕಲಬುರಗಿ,ಜು.25.(ಕ.ವಾ.)-ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಕೃಷ್ಣಪ್ಪ ಕಲ್ಲೆದೇವರು ಅವರು ಚಿಂಚೋಳಿ ತಾಲೂಕುಗಳಿಗೆ ಸಂಬಂಧಿಸಿದಂತೆ ಇದೇ ಜುಲೈ 28ರಂದು ಬೆಳಗಿನ 11 ರಿಂದ ಸಂಜೆ 4 ಗಂಟೆಯವರೆಗೆ ಚಿಂಚೋಳಿ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಲಿದ್ದಾರೆ.
ಪೊಲೀಸ್ ಇನ್ಸ್‍ಪೆಕ್ಟರ್ ಕೃಷ್ಣಪ್ಪ ಕಲ್ಲೆದೇವರು ಅವರ ಮೊಬೈಲ್ ಸಂ. 9480803610 ಇದ್ದು, ಸಾರ್ವಜನಿಕರು ಮೇಲ್ಕಂಡ ದಿನಾಂಕದಂದು ಎ.ಸಿ.ಬಿ. ಅಧಿಕಾರಿಗಳಿಗೆ ಭೇಟಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಕಲಬುರಗಿ ಭ್ರಷ್ಟಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜೀವಗಾಂಧಿ ಮಾನಸ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
*****************************************************
ಕಲಬುರಗಿ,ಜು.25.(ಕ.ವಾ.)-ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ, ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚಿನ ಸೇವೆಯನ್ನು ಸಲ್ಲಿಸಿರುವಂತಹ ವ್ಯಕ್ತಿ ಮತ್ತು ಸಂಸ್ಥೆಗಳನ್ನು ಗುರುತಿಸಿ ರಾಜೀವಗಾಂಧಿ ಮಾನವ ಸೇವಾ ಪ್ರಶಸ್ತಿಯನ್ನು 03 ವ್ಯಕ್ತಿಗಳಿಗೆ ಹಾಗೂ 05 ಸಂಸ್ಥೆಗಳಿಗೆ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಇದಕ್ಕಾಗಿ 2018ನೇ ಸಾಲಿನ ಕಲಬುರಗಿ ಜಿಲ್ಲೆಯ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು 1,00,000 ರೂ. ನಗದು ಮತ್ತು ಪ್ರಶಸ್ತಿ ಪತ್ರ ಹಾಗೂ ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿಯು 3,00,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಸಂಘ ಸಂಸ್ಥೆಗಳಲ್ಲಿ ವೇತನ ಪಡೆಯುತ್ತಿರುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಈ ಪ್ರಶಸ್ತಿಗೆ ಆಯ್ಕೆ ಮಾಡಲು ಇರುವ ಒಂದೇ ಮಾನದಂಡ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಮಾಡಿರುವ ಕೆಲಸದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ.
ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದ ಎದುರಿಗೆಯಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಇದೇ ಕಚೇರಿಯಲ್ಲಿ 2018ರ ಆಗಸ್ಟ್ 2ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278659ನ್ನು ಸಂಪರ್ಕಿಸಲು ಕೋರಲಾಗಿದೆ.
ಯುವಶಕ್ತಿ ಸಂಘ ಯೋಜನೆ: ಪ್ರಸ್ತಾವನೆ ಆಹ್ವಾನ
******************************************
ಕಲಬುರಗಿ,ಜು.25.(ಕ.ವಾ.)-ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2018-19ನೇ ಸಾಲಿನಲ್ಲಿ ‘ಯುವ ನೀತಿ’ ಅನುಷ್ಠಾನ ಅಡಿಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಯುವ ಸಂಘಗಳು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಹಾಗೂ ಸುತ್ತು ನಿಧಿ ಓದಗಿಸಲು ಜಿಲ್ಲೆಯ ಒಂದು ಉತ್ತಮ ಯುವಕ/ಯುವತಿ ಸಂಘಕ್ಕೆ 5 ಲಕ್ಷ ರೂ.ಗಳ ಅನುದಾನ ಪಡೆಯಲು ಅರ್ಹ ಯುವಕ/ಯುವತಿ ಶಕ್ತಿ ಸಂಘಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತಾವನೆ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08472-268637 ಸಂಪರ್ಕಿಸಲು ಕೋರಿದೆ.
ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿ: ಗ್ರಾಮೀಣ ಕ್ರೀಡಾ ಪ್ರತಿಭೆ ಗುರುತಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಆಳಂದ ತಾಲೂಕಿನ ನರೋಣಾ ಡಾ||ಅಂಬೇಡ್ಕರ ಕ್ರಾಂತಿಕಾರಿ ಯುವಕ ಸಂಘದ ಇವುಗಳ ಸಂಯುಕ್ತ ಆಶ್ರಯದಲ್ಲಿ ಇದೇ ಜುಲೈ 30ರಂದು ಬೆಳಿಗ್ಗೆ 10 ಗಂಟೆಗೆ ಆಳಂದ ತಾಲೂಕಿನ ನರೋಣಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 17 ವರ್ಷದೊಳಗಿನ ಬಾಲಕರಿಗೆ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ.
ಅರ್ಹತೆ ಪಡೆದ ಬಾಲಕರಿಗೆ ಮೈಸೂರು ದಸರಾ ಕುಸ್ತಿ ಪಂದ್ಯಾವಳಿಗೆ ಜಿಲ್ಲೆಯಿಂದ ನಿಯೋಜಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶ್ರೀಶಿವಪುತ್ರಪ್ಪ ರಾಗಿ ಇವರ ಮೊಬೈಲ್ ಸಂಖ್ಯೆ 9663295989 ಅಥವಾ ತರಬೇತುದಾರ ಅಶೋಕ ಇವರ ಮೊಬೈಲ್ ಸಂಖ್ಯೆ 9900636909ನ್ನು ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲಿ ತಿಳಿಸಿದ್ದಾರೆ.
ಜುಲೈ 26ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
**********************************************
ಕಲಬುರಗಿ,ಜು.25.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11 ಕೆವಿ. ನೃಪತುಂಗ, ಐಟಿ ಪಾರ್ಕ್, ಪೊಲೀಸ್ ಕಾಲೋನಿ, ಹೌಸಿಂಗ್ ಬೋರ್ಡ್ ಕಾಲೋನಿ, ಗೋದುತಾಯಿ ನಗರ, ಮಹಾವೀರ ನಗರ, ರಾಘವೇಂದ್ರ ಕಾಲೋನಿ, ವಿಠ್ಠಲನಗರ, ಐವಾನ ಶಾಹಿ, ಎ.ಐ.ಆರ್., ನಂದಿಕೂರ ಫೀಡರುಗಳ ಮೇಲೆ 11ಕೆ.ವಿ. ಬ್ಯಾಂಕ್ ಸಿಟಿ/ಪಿಟಿ ಬದಲಾವಣೆ ಮತ್ತು 11 ಕೆ.ವಿ. ಬ್ಯಾಂಕ್ 2,3, ಮತ್ತು 5ರಲ್ಲಿ ಬರುವ 1000 ಎಸ್‍ಕ್ಯೂಎಂಎಂ ಕೇಬಲ್ ದಿಂದ 400 ಎಸ್‍ಕ್ಯೂಎಂಎಂ ಬದಲಾವಣೆ ಕಾರ್ಯ ಕೈಗೊಂಡಿರುವ ಪ್ರಯುಕ್ತ ಹಾಗೂ ಸಿನಿಮಾ ಮತ್ತು ಗಾಜಿಪುರ ಫೀಡರುಗಳ ಮೇಲೆ 33/11 ಕೆ.ವಿ. ಜಿಆಯ್ ಸಬ್ ಸ್ಟೇಶನ್, ಸರ್ವಿಸ್ ಸ್ಟೇಶನ್-44 ಸ್ಟ್ರಿಂಗಿಂಗ್ ಕಾರ್ಯ ಕೈಗೆತ್ತಿಕೊಂಡಿರುವ ಪ್ರಯುಕ್ತ ಇದೇ ಜುಲೈ 26ರಂದು ಗುರುವಾರ ಬೆಳಗಿನ 10ರಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಕೇಂದ್ರದ ಮೇಲೆ ಬರುವ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
11ಕೆ.ವಿ. ನೃಪತುಂಗಾ ಫೀಡರ್: ಜಿ.ಡಿ.ಎ. ಕೋಟನುರ ಪ್ರದೇಶ, ನ್ಯೂ ಓಝಾ ಲೇಔಟ್, ಧನಶೆಟ್ಟಿ ನಗರ, ಸ್ಲಮ್ ಬೋರ್ಡ್ ವಸತಿ ಗೃಹಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ. ಐ.ಟಿ.ಪಾರ್ಕ್ ಫೀಡರ್: ಸಂತೋಷ ಕಾಲೋನಿ, ವರ್ಗಿಸ್ ಅಪಾರ್ಟ್‍ಮೆಂಟ್, ಮಾಣಿಕ ಪ್ರಭು ಕಾಲೋನಿ, ಐ.ಟಿ.ಪಾರ್ಕ್, ನಂದ ಗೋಕುಲ ಮತ್ತು ಜಯತೀರ್ಥ ಕಲ್ಯಾಣ ಮಂಟಪ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ ಪೋಲಿಸ್ ಕಾಲೋನಿ ಫೀಡರ್: ರಾಜಾಪುರ, ನಾಯ್ಡು ಲೇಔಟ್, ಪಿ.ಡಬ್ಲ್ಯೂ.ಡಿ.ಕ್ವಾರ್ಟರ್ಸ್, ನೃಪತುಂಗಾ ಕಾಲೋನಿ, ಪ್ರಶಾಂತ ನಗರ ಬಿ, ಶಾಹಾಬಾದ ಶಕ್ತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ. ಹೌಸಿಂಗ್ ಬೋರ್ಡ್ ಕಾಲೋನಿ ಫೀಡರ್: ಎನ್.ಜಿ.ಓ. ಕಾಲೋನಿ ಪಿ.ಎನ್.ಟಿ. ಕಲೋನಿ ಸಿದ್ದೇಶ್ವರ ಕಲ್ಯಾಣ ಮಂಟಪ, ದತ್ತ ನಗರ, ಬಿದ್ದಾಪೂರ, ಬಾಗ್ಯವಂತಿ ನಗರ, ಗಾಬ್ರೇಲೇಔಟ್, ಮೋಹನ್‍ನಗರ, ಹೌಸಿಂಗ್ ಬೋರ್ಡ್ ಕಾಲೋನಿ (ಪಿ. ಆಂಡ್ ಟಿ) ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ಗೋದುತಾಯಿ ನಗರ: ಸಿ.ಐ.ಬಿ. ಕಾಲೋನಿ, ಶಕ್ತಿ ನಗರ, ಗೋದುತಾಯಿ ನಗರ, ಭಾಗ್ಯವಂತಿ ನಗರ, ಜಿ.ಡಿ.ಎ. ಲೇಔಟ್, ಘಾಟಗೆ ಲೇಔಟ್, ಧರಿಯಾಪೂರ, ರೆಹಮತ್ ನಗರ, ಪಿ.ಡಬ್ಲೂ.ಡಿ ಕ್ವಾರ್ಟರ್ಸ್, ಎನ್.ಜಿ.ಓ. ಕಾಲೋನಿ (ರೈಲ್ವೆ ಟ್ರ್ಯಾಕ್), ದತ್ತ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ಮಹಾವೀರ ನಗರ ಫೀಡರ್: ಮಹಾವೀರ ನಗರ, ಶಾಸ್ತ್ರೀನಗರ, ಹನುಮಾನ ನಗರ, ಪಂಚಶೀಲ ನಗರ, ವೆಂಕಟೇಶ ನಗರ. ಕೆ.ಇ.ಬಿ.ಸ್ಟೋರ್, ಕೆ.ಇ.ಬಿ.ಕ್ವಾರ್ಟರ್ಸ್, ಪಿ.ಡಬ್ಲ್ಯೂಡಿ ಕಚೇರಿ, ಅಮಲ್‍ವಾಡಿ ಸ್ಟೇಶನ್ ಬಜಾರ್ ಅಪ್ಪÀರ ಲೆನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ. ರಾಘವೇಂದ್ರ ಕಾಲೋನಿ ಫೀಡರ್: ಪಿ.ಎಲ್.ಡಿ. ಬ್ಯಾಂಕ್, ಗೂಲ್ಲರಗಲ್ಲಿ, ಜಗತ್, ಜಗತ್ ಅಪ್ಪರ್ ಮತ್ತು ಲೋವರ್ ಲೆನ್ ಸಿ.ಎಂ.ಸಿ. ಆಯುಕ್ತರವರ ಗೃಹ, ತಿರಂದಾಜ್ ಟಾಕೀಸ್ ಎದುರುಗಡೆ, ಮೈಲಾರಲಿಂಗ ದೇವಸ್ಥಾನ ಆದಿತ್ಯಾ ಹೋಟೆಲ್, ಎಸ್.ಪಿ. ಕಚೇರಿ ಪ್ರದೇಶ, ಏಷಿಯನ್ ಮಾಲ್, ಆಮಂತ್ರಣ ಹೊಟೇಲ್, ಕಕ್ಕೇರಿ ಕಾಂಪ್ಲೆಕ್ಸ್ , ಪಶುವೈದ್ಯಕೀಯ ಆಸ್ಪತ್ರೆ ಟ್ರೈನಿಂಗ್ ಸೆಂಟರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ವಿಠ್ಠಲನಗರ ಫೀಡರ್: ಡಿ.ಡಿ.ಪಿ.ಐ. ಕಚೇರಿ,ವಿಜಯ-ವಿದ್ಯಾಲಯ ಕಂಪೌಂಡ್, ಐ-ವಾನ್-ಶಾಹಿ ಅಥಿತಿಗೃಹ, ಗುಲ್ಲಾಬೌಡಿ, ಲಾಹೋಟಿ ಪೆಟ್ರೋಲ್‍ಪಂಪ್, ಕೆ.ಬಿ.ಎನ್.ಆಸ್ಪತ್ರೆ, ಖೂಬಾ ಪ್ಲಾಟ್, ವಿಠ್ಠಲನಗರ, ಆನಂದ ನಗರ, ವಿವೇಕಾನಂದ ನಗರ, ರಾಮನಗರ, ಇಂದಿರಾನಗರ, ವಿದ್ಯಾನಗರ, ಬಲಘಟ ಕಂಪೌಂಡ್, ಮೇಹತಾ ಕಂಪೌಂಡ್, ಮಿನಿ ವಿಧಾನಸೌಧ, ಜಿಲ್ಲಾ ನ್ಯಾಯಲಯ ಮತ್ತು ಜೆಸ್ಕಾಂ ಕಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ಐವಾನ್-ಶಾಹಿ: ಹಳೆಯ ಗೇಸ್ಟ್ ಹೌಸ್, ನೀಚೆಗಲ್ಲಿ, ಕಮರ್ಶಿಯಲ್ ಟ್ಯಾಕ್ಸ್ ಕಚೇರಿ, ವಿಜಯ ವಿದ್ಯಾಲಯ, ಲಾಹೋಟಿ ಪೆಟ್ರೋಲ್ ಪಂಪ್, ಹೆಚ್.ಕೆ.ಇ.ಕಚೇರಿ, ಏಶಿಯನ್ ಪ್ಲಾಜಾ, ಪರಿವಾರ ಹೊಟೇಲ್, ತಿಮ್ಮಾಪುರಿ ಚೌಕ್, ವಿಜು ವುಮೆನ್ಸ್ ಕಾಲೇಜ್, ಪಿಡಿಎ ಇಂಜಿನಿಯರಿಂಗ್ ಕಾಲೇಜ್ ರಸ್ತೆ, ಬಿಎಸ್‍ಎನ್‍ಎಲ್ ಎಕ್ಸಚೇಂಜ್, ಪಿಡಬ್ಲ್ಯೂಡಿ ಕ್ವಾರ್ಟಸ್, ಮಿನಿವಿಧಾನಸೌಧ ಎದುರು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ. ಎ.ಐ.ಆರ್ ಫೀಡರ್: ಎ.ಐ.ಆರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ನಂದಿಕೂರ ಫೀಡರ್: ನಂದಿಕೂರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ಸಿನಿಮಾ ಫೀಡರ್; ಸುಪರ ಮಾರ್ಕೇಟ್, ಶಹಾ ಬಜಾರ್ ಜಿ.ಡಿ.ಎ. ಕಟಗರಪುರ, ಪ್ರಕಾಶ ಟಾಕೀಸ್, ಲೋಹಾರಗಲ್ಲಿ, ಐಯ್ಯರವಾಡಿ, ಸಿಟಿ ಬಸ್ ನಿಲ್ದಾಣ, ಬಂಬೂ ಬಜಾರ್, ಮಹಾಲಕ್ಷ್ಮೀ ಲೇಔಟ್, ಕಿರಾಣ ಬಜಾರ್, ಮಾರವಾಡಿ ಗಲ್ಲಿ, ಚೌಕ್ ಪೊಲೀಸ್ ಸ್ಟೇಷನ್, ಫೋರ್ಟ ರಸ್ತೆ, ಬಾಂಡಾ ಬಜಾರ್, ಸರಸ್ವತಿ ಗೋದಾಮು, ಪುಟಾಣಿ ಗಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ಗಾಜಿಪೂರ ಫೀಡರ್: ಜಿ.ಡಿ.ಎ. ಗೋಕುಲ ನಗರ ಜಿಲ್ಲಾಧಿಕಾರಿಗಳ ಕಚೇರಿ, ಮಾಲಿಪಾಟೀಲ್ ಟಿ.ಸಿ, ಬಸವಣ್ಣಾ ಟೆಂಪಲ್, ಮಿಲ್‍ನ ಚೌಕ್, ಶಂಕರಲಿಂಗ್ ಟೆಂಪಲ, ಮಟನ ಮಾರ್ಕೇಟ, ಕಾವೇರಿ ನಗರ, ತಹಸೀಲ್ದಾರ ಕಚೇರಿ, ಚನ್ನಮಲ್ಲೇಶ್ವರ ನಗರ, ಮಜಗಿ ಲೇಔಟ್, ಸುಪರ ಮಾರ್ಕೇಟ್ ರೇಮ್ಯಾಂಡ್ ಟಿ.ಸಿ. ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಂದ
******************************************************
ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
*****************************************************************
ಕಲಬುರಗಿ,ಜು.24.(ಕ.ವಾ.)-ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ನಸೀರ ಅಹಮದ್, ಆಯೋಗದ ಸದಸ್ಯರು ಹಾಗೂ ಕಾರ್ಯದರ್ಶಿಗಳು ಇದೇ ಜುಲೈ 28ರಂದು ಕಲಬುರಗಿಗೆ ಭೇಟಿ ನೀಡಿ ಅಂದು ಬೆಳಿಗ್ಗೆ 10 ರಿಂದ ಸಂಜೆ 5.15 ಗಂಟೆಯವರೆಗೆ ಕೆಳಕಂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಬೂಬ್ ಪಾಷಾ ಕಾರಟಗಿ ಅವರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಹತ್ತಿರದ ಕೃಷಿ ಇಲಾಖೆಯ ಆವರನದಲ್ಲಿನ ಹಳೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಸ್ವಯಂ ಸೇವಾ ಸಂಸ್ಥೆಗಳ ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸುವರು.
ಅಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಹಾಗೂ ಅಲ್ಪಸಂಖ್ಯಾತರರಿಗೆ ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುವರು.
ಈ ಸಭೆಗೆ ಎಲ್ಲ ಅಲ್ಪಸಂಖ್ಯಾತರ ಸಮುದಾಯದ ಸ್ವಯಂ ಸೇವಾ ಸಂಸ್ಥೆಗಳು ಹಾಜರಾಗಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಅದೇ ರೀತಿ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಕುರಿತ ಸಭೆಗೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸರಿಯಾಗಿ ಸಮಯಕ್ಕೆ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ಹೀಗಾಗಿ ಲೇಖನಗಳು News and photo Date: 25-7-2018

ಎಲ್ಲಾ ಲೇಖನಗಳು ಆಗಿದೆ News and photo Date: 25-7-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 25-7-2018 ಲಿಂಕ್ ವಿಳಾಸ https://dekalungi.blogspot.com/2018/07/news-and-photo-date-25-7-2018.html

Subscribe to receive free email updates:

0 Response to "News and photo Date: 25-7-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ