News and Photo Date: 7-7-2018

News and Photo Date: 7-7-2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and Photo Date: 7-7-2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and Photo Date: 7-7-2018
ಲಿಂಕ್ : News and Photo Date: 7-7-2018

ಓದಿ


News and Photo Date: 7-7-2018

ಜುಲೈ 23ರಂದು ಜಿ.ಪಂ. ಸಾಮಾನ್ಯ ಸಭೆ
*************************************
ಕಲಬುರಗಿ,ಜು.07.(ಕ.ವಾ.)-ಜಿಲ್ಲಾ ಪಂಚಾಯಿತಿಯ 12ನೇ ಸಾಮಾನ್ಯ ಸಭೆಯನ್ನು ಇದೇ ಜುಲೈ 23ರಂದು ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಹೇಳಿದರು.
ಅವರು ಶನಿವಾರ ಜಿಲ್ಲಾ ಪಂಚಾಯಿತಿ ನೂತನ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕೆಲಸದ ನಿಮಿತ್ತ ವಿದೇಶ ಪ್ರವಾಸ ಕೈಗೊಂಡಿರುವುದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯು ಕಲಬುರಗಿ ಜಿಲ್ಲಾಧಿಕಾರಿಗಳಾದ ಆರ್. ವೆಂಕಟೇಶಕುಮಾರ ಅವರನ್ನು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ನಡೆಸಲು ತಿಳಿಸಿದೆ. ಜಿಲ್ಲಾಧಿಕಾರಿಗಳು ನಾಲ್ಕು ಹುದ್ದೆಗಳ ಪ್ರಭಾರದಲ್ಲಿರುವುದರಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿಗಳಿಗೆ ಸಭೆ ನಡೆಸಲು ತಿಳಿಸಿದ್ದಾರೆ ಎಂದು ಹೇಳಿದರು.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರತಿಷ್ಠಿತ ಇಂಡಿಯಾ ಬಸ್ ಅವಾರ್ಡ್‍ಗಾಗಿ ಅಂತಿಮ ಸುತ್ತಿಗಾಗಿ ಆಯ್ಕೆಯಾಗಿರುವುದರಿಂದ ಸರ್ಕಾರಿ ಆದೇಶದನ್ವಯ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ವಿದೇಶ ಪ್ರಯಾಣ ಕೈಗೊಂಡಿದ್ದಾರೆ.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್, ಜಿಲ್ಲಾ ಪಂಚಾಯಿತಿ ಸದಸ್ಯರು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಪ್ರವಾಸ
********************************************
ಕಲಬುರಗಿ,ಜು.07.(ಕ.ವಾ.)-ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ ಅವರು ಯಶವಂತಪುರ-ಸೋಲಾಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜುಲೈ 8ರಂದು ಬೆಳಿಗ್ಗೆ 6.25 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಸಚಿವರು ಅಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಆಳಂದ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ ಸರ್ಕಲ್ ಹತ್ತಿರದ ಅಮರ ಪಂಕ್ಷನ್ ಹಾಲ್‍ನಲ್ಲಿ ಬಹುಜನ ಸಮಾಜ ಪಕ್ಷದ ಕಲಬುರಗಿ ವಲಯದ ಸಭೆಯಲ್ಲಿ ಪಾಲ್ಗೊಳ್ಳುವರು. ನಂತರ ಸಚಿವರ ರಾತ್ರಿ 9 ಗಂಟೆಗೆ ಸೋಲಾಪುರ-ಯಶವಂತಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಮುಜರಾಯಿ ಸಚಿವರ ಪ್ರವಾಸ
*****************************
ಕಲಬುರಗಿ,ಜು.07.(ಕ.ವಾ.)-ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವರಾದ ರಾಜಶೇಖರ ಬಿ. ಪಾಟೀಲ ಅವರು ಹುಮನಾಬಾದಿಂದ ರಸ್ತೆ ಮೂಲಕ ಜುಲೈ 8ರಂದು ಕಲಬುರಗಿಗೆ ಆಗಮಿಸುವರು. ನಂತರ ಅಂದು ಬೆಳಿಗ್ಗೆ 11.45 ಗಂಟೆಗೆ ಕಲಬುರಗಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 1 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹುಮನಾಬಾದ್‍ಗೆ ಪ್ರಯಾಣಿಸುವರು.
ಜುಲೈ 12ರಂದು
**************
ಜಿಲ್ಲಾ ಅಭಿವೃದ್ಧಿ ಸಮನ್ವಯ-ಮೇಲ್ವಿಚಾರಣಾ ಸಮಿತಿ ಸಭೆ
**************************************************
ಕಲಬುರಗಿ,ಜು.07.(ಕ.ವಾ.)-ಕಲಬುರಗಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣೆ ಸಮಿತಿ (ದಿಶಾ) ಸಭೆಯು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ 2018ರ ಜುಲೈ 12ರಂದು ಮಧ್ಯಾಹ್ನ 12 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಭೆಯಲ್ಲಿ ರೈಲ್ವೆ ಇಲಾಖೆ, ಏರ್‍ಪೋರ್ಟ್, ನ್ಯಾಷನಲ್ ಹೈವೇ (ರಾಷ್ಟ್ರೀಯ ಹೆದ್ದಾರಿ), ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ದೀನದಯಾಳ ಅಂತ್ಯೋದಯ ಯೋಜನೆ, ದೀನದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಪ್ರಧಾನಮಂತ್ರಿ ಗ್ರಾಮ ಸಡಕ ಯೋಜನೆ, ರಾಷ್ಟ್ರೀಯ ಸಾಮಾಜಿಕ ಭದ್ರತೆ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ ಪಟ್ಟಣ ಪ್ರದೇಶ ಮತ್ತು ಗ್ರಾಮೀಣ, ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆ, ಸ್ವಚ್ಛ ಭಾರತ ಮೀಷನ್ ನಗರ ಮತ್ತು ಗ್ರಾಮೀಣ, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ, ಪ್ರಧಾನ ಮಂತ್ರಿ ಫಸಲ ವಿಮೆ ಯೋಜನೆ, ಸರ್ವಶಿಕ್ಷಣ ಅಭಿಯಾನ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಧ್ಯಾಹ್ನದ ಬಿಸಿಯೂಟ, ಪ್ರಧಾನಮಂತ್ರಿ ಉಜ್ವಲ್ ಯೋಜನೆ, ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆ, ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಸೇರಿದಂತೆ ಮತ್ತಿತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುವರು.
ಈ ಸಭೆಗೆ ಆಯಾ ಇಲಾಖೆಗಳ ಅಧಿಕಾರಿಗಳು ಸಂಬಂಧಿಸಿದ ಕೇಂದ್ರ ಪುರಸ್ಕøತ ಎಲ್ಲ ಯೋಜನೆಗಳ ಪ್ರಗತಿ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೌಲ್ಯಮಾಪನ ಕೇಂದ್ರಗಳ ಸುತ್ತಲು ನಿಷೇಧಿತ ಪ್ರದೇಶ ಘೋಷಣೆ
*********************************************************
ಕಲಬುರಗಿ,ಜು.07.(ಕ.ವಾ.)-2018ರ ಜೂನ್ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಇದೇ ಜುಲೈ 8ರಿಂದ 14ರವರೆಗೆ ಕಲಬುರಗಿ ನಗರದ 6 ಮೌಲ್ಯಮಾಪನ ಕೇಂದ್ರಗಳಲ್ಲಿ ಒಂದು ವಾರಗಳ ಕಾಲ ನಡೆಯಲಿದೆ. ಈ ಮೌಲ್ಯಮಾಪನ ಕೇಂದ್ರಗಳ 200 ಮೀಟರ ಪ್ರದೇಶವನ್ನು ನಿಷೇಧಿತ ಪ್ರವೇಶವೆಂದು ಘೋಷಣೆ ಮಾಡಲಾಗಿದೆ ಎಂದು ಕಲಬುರಗಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪ್ರಥಮ ಬಾರಿಯಾಗಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಮೌಲ್ಯಮಾಪನ ಕೇಂದ್ರಗಳಿಂದಲೇ ಆನ್‍ಲೈನ್ ಎಂಟ್ರಿ ಮೂಲಕ ನೇರವಾಗಿ ಪರೀಕ್ಷಾ ಮಂಡಳಿಗೆ ರವಾನೆಯಾಗಲಿದೆ.
ಮೌಲ್ಯಮಾಪನದ ವಿಷಯ ಮತ್ತು ಕೇಂದ್ರಗಳ ವಿವರ ಇಂತಿದೆ. ಕನ್ನಡ ವಿಷಯ (01 ಕೆ)-ನೂತನ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬ್ರಹ್ಮಪುರ ಕಲಬುರಗಿ. ಇಂಗ್ಲೀಷ ವಿಷಯ (31 ಇ)-ಪ್ರಜ್ಞಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ದರ್ಗಾ ರಸ್ತೆ ಕಲಬುರಗಿ, ಹಿಂದಿ ವಿಷಯ (61 ಎಚ್)-ಶಕೈನ್ಹ ಬ್ಯಾಪಿಸ್ಟ್ ಆಂಗ್ಲ ಮಾಧ್ಯಮ ಶಾಲೆ ನವಜೀವನ ನಗರ, ಪಿ ಆಂಡ್ ಟಿ ಕಾಲೋನಿ ಹಳೆ ಜೇವರ್ಗಿ ರಸ್ತೆ ಕಲಬುರಗಿ. ಗಣಿತ ವಿಷಯ (81 ಕೆ ಆಂಡ್ ಇ)-ಸೇಂಟ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಆನಂದ ಹೊಟೇಲ್ ಹತ್ತಿರ ಕಲಬುರಗಿ. ವಿಜ್ಞಾನ ವಿಷಯ (83 ಕೆ ಆಂಡ್ ಇ)-ಎಸ್.ಆರ್.ಎನ್. ಮೆಹ್ತಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಜಿಲ್ಲಾ ಕೋರ್ಟ ಹತ್ತಿರ ಕಲಬುರಗಿ ಹಾಗೂ ಸಮಾಜ ವಿಜ್ಞಾನ ವಿಷಯ (85 ಕೆ ಆಂಡ್ ಇ)-ಶ್ರೀ ಗುರು ಸಂಗಮೇಶ್ವರ ಕಾನ್ವೆಂಟ್ (ಎಸ್‍ಜಿಎಸ್ ಕಾನ್ವೆಂಟ್) ಟಿ.ವಿ. ಸೆಂಟರ್ ಹಿಂದುಗಡೆ ರಾಮನಗರ, ಹುಮನಾಬಾದ ರಿಂಗ್ ರಸ್ತೆ ಕಲಬುರಗಿ.
ಸೇಡಂ ಪಟ್ಟಣದಲ್ಲಿ ಜುಲೈ 12 ರಂದು ಮ್ಯಾನ್ಯುವೆಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆ
******************************************************************
ಕಲಬುರಗಿ,ಜು.07.(ಕ.ವಾ.)-ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಸಫಾಯಿ ಕರ್ಮಚಾರಿಗಳ ಸಮೀಕ್ಷಾ (ಮ್ಯಾನ್ಯುವೆಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆ) ನಡೆಸಲಾಗುತ್ತಿದೆ. ಇದರ ಹಿನ್ನೆಲೆಯಲ್ಲಿ ಸೇಡಂ ಪಟ್ಟಣದಲ್ಲಿ ಇದೇ ಜುಲೈ 12ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸೇಡಂ ಪುರಸಭೆ ಕಾರ್ಯಾಲಯದಲ್ಲಿ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆ ನಡೆಯಲಿದೆ ಎಂದು ಸೇಡಂ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಒಣ ಮಲದ ಗುಂಡಿಗಳ ಸ್ವಚ್ಛತೆ, ತೆರೆದ ಮತ್ತು ಸ್ವಚ್ಚತೆ ಇಲ್ಲದ ಮಲದ ಗುಂಡಿಗಳ ತ್ಯಾಜ್ಯವನ್ನು ಮನುಷ್ಯರು ಸ್ವಚ್ಛಗೊಳಿಸುವುದು, ಶೌಚಾಲಯಕ್ಕೆ ಹೊಂದಿಕೊಂಡಿರುವ ಒಂಟಿ ಗುಂಡಿಗಳನ್ನು ಸ್ವಚ್ಛಗೊಳಿಸುವ ವೃತ್ತಿಯಲ್ಲಿ 2013ಕ್ಕಿಂತ ಮೊದಲು ಹಾಗೂ ತದನಂತರ ಈ ವೃತ್ತಿಯಲ್ಲಿ ತೊಡಗಿರುವವರು ದಾಖಲೆಗಳಾದ ಒಂದು ಪಾಸ್‍ಪೋರ್ಟ ಸೈಜ್ ಭಾವಚಿತ್ರ, ಬ್ಯಾಂಕ್ ಪಾಸ್‍ಬುಕ್ ಪುಸ್ತಕದ ಜಿರಾಕ್ಸ್ (ಮೂಲ ಪ್ರತಿ), ಆಧಾರ ಕಾರ್ಡ ಜಿರಾಕ್ಸ್ (ಮೂಲ ಪ್ರತಿ), ಚುನಾವಣಾ ಗುರುತಿನ ಚೀಟಿ ಅಥವಾ ಬಿಪಿಎಲ್ ರೇಶನ್ ಕಾರ್ಡ ಮೂಲ ಪ್ರತಿ, ಮ್ಯಾನ್ಯುವಲ್ ಸ್ಕ್ಯಾವೆಂಜರ್‍ಗಳೆಂದು ಗುರುತಿಸಲು ಯಾವುದಾದರೊಂದು ದಾಖಲೆ ಹಾಗೂ ಪ್ರಮಾಣಪತ್ರ ಇದ್ದಲ್ಲಿ ತರಬೇಕು. ಸಮೀಕ್ಷೆಯಲ್ಲಿ ಭಾಗವಹಿಸಿ ಸಂಬಂಧಪಟ್ಟವರಿಗೆ ದಾಖಲಾತಿಗಳನ್ನು ಸಂಬಂಧಪಟ್ಟವರಿಗೆ ಸಲ್ಲಿಸಬೇಕು.
ದಾಖಲಾತಿಗಳನ್ನು ಸಲ್ಲಿಸಿದ ಸಫಾಯಿ ಕರ್ಮಚಾರಿಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿ ಈ ವೃತ್ತಿಯಿಂದ ಮುಕ್ತಗೊಳಿಸಿ ಸ್ವಾವಲಂಬಿಗಳಾಗಿ ಬದುಕನ್ನು ಸಾಗಿಸಲು ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈ ವೃತ್ತಿಯಲ್ಲಿ ತೊಡಗಿರುವವ ಸಾರ್ವಜನಿಕರು ತಮ್ಮ ಹೆಸರನ್ನು ತಪ್ಪದೇ ನೋಂದಾಯಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸೇಡಂ ಪುರಸಭೆಯ ಪರಿಸರ ಇಂಜಿನಿಯರ್ ಪ್ರಿಯಾಂಕಾ ವಿಭೂತಿ ಇವರನ್ನು ಮೊಬೈಲ್ ಸಂಖ್ಯೆ 9728935076ನ್ನು ಸಂಪರ್ಕಿಸಲು ಕೋರಲಾಗಿದೆ.
ಕರ್ತವ್ಯಕ್ಕೆ ಹಾಜರಾಗಲು ಸೂಚನೆ
******************************
ಕಲಬುರಗಿ,ಜು.07.(ಕ.ವಾ.)-ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ದುತ್ತರಗಾ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ವೆಂಕಟರಾವ ತಂದೆ ನರಸಪ್ಪ ಅವರು 2017ರ ನವೆಂಬರ್ 13ರಿಂದ ಇಲ್ಲಿಯವರೆಗೆ ಶಾಲಾ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ ಎಂದು ಚಿಂಚೋಳಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಸದರಿ ಸಿಬ್ಬಂದಿಗೆ ಶಾಲಾ ಕರ್ತವ್ಯಕ್ಕೆ ಹಾಜರಾಗುವಂತೆ ಚಿಂಚೋಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಮೂರು ನೋಟೀಸು ಜಾರಿ ಮಾಡಿದರೂ ಸಹ ಈ ಶಿಕ್ಷಕರು ಯಾವುದೇ ಪ್ರತಿಕ್ರಿಯೆ ನೀಡಿರುವುದಿಲ್ಲ ಮತ್ತು ಮೂರು ನೋಟೀಸುಗಳನ್ನು ಸ್ವೀಕರಿಸಿರುವುದಿಲ್ಲ. ಈ ನೋಟೀಸುಗಳು ಮರಳಿ ಚಿಂಚೋಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಬಂದಿರುತ್ತದೆ. ಶಾಲಾ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲಾ ಕರ್ತವ್ಯಕ್ಕೆ ಹಾಜರಾಗುವಂತೆ ಚಿಂಚೋಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
********************************
ಕಲಬುರಗಿ,ಜು.07.(ಕ.ವಾ.)-ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗಾಗಿ ತಲಾ 35,000 ರೂ.ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಎ4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ ಅರ್ಜಿಗಳನ್ನು ಸಲ್ಲಿಸಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸೃಜನಶೀಲ, ಸೃಜನೇತರ ಸಾಹಿತ್ಯವಾಗಿರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002 - ಈ ವಿಳಾಸಕ್ಕೆ 2018ರ ಜುಲೈ 21 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು ಇವರನ್ನು ದೂರವಾಣಿ ಸಂಖ್ಯೆ: 080-22484516 / 22017704ಗಳನ್ನು ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
47ನೇ ವಾರ್ಷಿಕ ಕಲಾಪ್ರದರ್ಶನಕ್ಕೆ ಅರ್ಜಿ ಆಹ್ವಾನ
*******************************************
ಕಲಬುರಗಿ,ಜು.07.(ಕ.ವಾ.)-ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ 2018-19ನೇ ಸಾಲಿನ 47ನೇ ವಾರ್ಷಿಕ ಕಲಾ ಪ್ರದರ್ಶನ ಬಹುಮಾನಕ್ಕಾಗಿ ಚಿತ್ರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ರಿಜಿಸ್ಟ್ರಾರ್ ಇಂದ್ರಮ್ಮ ಹೆಚ್.ವಿ ಅವರು ತಿಳಿಸಿದ್ದಾರೆ.
ಕರ್ನಾಟಕದ ನಿವಾಸಿಯಾಗಿರುವ ಅಥವಾ ಕಳೆದ ಐದು ವರ್ಷಗಳಿಂದ ಕರ್ನಾಟಕದಲ್ಲಿ ನೆಲೆಸಿರುವ ಕಲಾವಿದರು ಈ ಕಲಾ ಪ್ರದರ್ಶನದಲ್ಲಿ ಭಾಗವಹಿಸಬಹುದಾಗಿದೆ. 47ನೇ ವಾರ್ಷಿಕ ಕಲಾ ಪ್ರದರ್ಶನ ಬಹುಮಾನಕ್ಕೆ ತೀರ್ಪುಗಾರರಿಂದ ಆಯ್ಕೆ ಮಾಡಿದ ಒಟ್ಟು 10 ಕಲಾಕೃತಿಗಳಿಗೆ ತಲಾ 25000ರೂ.ರಂತೆ ನಗದು, ಪ್ರಶಸ್ತಿ ಪತ್ರ ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು. ಬಹುಮಾನ/ಪ್ರದರ್ಶನಕ್ಕೆ ಕಳುಹಿಸುವ ಕಲಾಕೃತಿಗಳು ಗರಿಷ್ಠ 3ಘಿ3 ಅಡಿ ಅಳತೆಯನ್ನು ಮೀರದಂತೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಯನ್ನು 47ನೇ ವಾರ್ಷಿಕ ಕಲಾಪ್ರದರ್ಶನ-2018ರ ವಿವರಣ ಪತ್ರದಲ್ಲಿ ನಮೂದಿಸಲಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿ ಹಾಗೂ ಅರ್ಜಿಯನ್ನು ಅಕಾಡೆಮಿಯ ತಿತಿತಿ.ಟಚಿಟiಣಞಚಿಟಚಿಞಚಿಡಿಟಿಚಿಣಚಿಞಚಿ.oಡಿg ವೆಬ್‍ಸೈಟ್‍ದಿಂದ ಪಡೆಯಬಹುದಾಗಿದೆ. ಅನುಸೂಚಿಯನ್ನು ಸರಿಯಾಗಿ ಭರ್ತಿ ಮಾಡಿ ಮೂಲ ಮೂಲ ಕಲಾಕೃತಿ ಛಾಯಾಚಿತ್ರಗಳೊಂದಿಗೆ ಕರ್ನಾಟಕ ಲಲಿತ ಅಕಾಡೆಮಿಗೆ ಅರ್ಜಿಯನ್ನು ಜುಲೈ 28ರೊಳಗಾಗಿ ಸಲ್ಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 20 ಬಹಿರಂಗ ಹರಾಜು ಮೂಲಕ ಕಾಗದ ಪತ್ರಗಳ ವಿವೇವಾರಿ
***********************************************************
ಕಲಬುರಗಿ,ಜು.07.(ಕ.ವಾ.)-ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಲಭ್ಯವಿರುವ ಕಡತಗಳ ಹಾಗೂ ರಜಿಸ್ಟರ್‍ಗಳ ಹರಿದ ಕಾಗದ ಪತ್ರಗಳನ್ನು (ಕೆ.ಸಿ.ಎಸ್.ಆರ್. ನಿಯಮಗಳನ್ವಯ ವಿನಾಶಗೊಳಿಸಿದ ಕಡತಗಳು) 2018ರ ಆಗಸ್ಟ್ 20ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತಿದೆ. ಆಸಕ್ತಿಯುಳ್ಳ ಖರೀದಿದಾರರು ಹರಾಜು ಪ್ರಕ್ರಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ತಿಳಿಸಿದ್ದಾರೆ.
ಹರಾಜಿನಲ್ಲಿ ಭಾಗವಹಿಸುವವರು ಹರಾಜು ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ 1000 ರೂ.ಗಳ ಠೇವಣಿ ಮೊತ್ತದೊಂದಿಗೆ ಸೂಕ್ತ ಗುರುತಿನ (ಭಾವಚಿತ್ರ ಸಹಿತ) ಚೀಟಿಯನ್ನು ಮೇಲ್ಕಂಡ ಕಾರ್ಯಾಲಯದಲ್ಲಿ ನೀಡಬೇಕು. ಹರಾಜಿನ ಬಿಡ್ಡನ್ನು ಒಪ್ಪುವ, ಹೆಚ್ಚು ಮಾಡುವ, ಮರು ಹರಾಜು ಮಾಡುವ ಅಥವಾ ತಿರಸ್ಕರಿಸುವ ಮತ್ತು ಯಾವುದೇ ತಕರಾರುಗಳನ್ನು ಒಪ್ಪುವ ಅಥವಾ ತಿರಸ್ಕರಿಸುವ ಅಧಿಕಾರಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಇರುತ್ತದೆ. ಷರತ್ತು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
********************************
ಕಲಬುರಗಿ,ಜು.07.(ಕ.ವಾ.)-ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿಯ ಸಾಹಿತಿಗಳ ಕೃತಿ ಪ್ರಕಟಣೆಗಾಗಿ ತಲಾ 35,000 ರೂ.ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಎ4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸೃಜನಶೀಲ, ಸೃಜನೇತರ ಸಾಹಿತ್ಯವಾಗಿರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ
ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ,ಜೆ.ಸಿ. ರಸ್ತೆ ಬೆಂಗಳೂರು-560002 ವಿಳಾಸಕ್ಕೆ ಜುಲೈ 31ರೊಳಗಾಗಿ ಸಲ್ಲಿಸಬೇಕು. ಹೆಚಿನ ಮಾಹಿತಿಗಾಗಿ ಪ್ರಾಧಿಕಾರದ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ವೆಬ್‍ಸೈಟ್‍ನ್ನು ಹಾಗೂ ಪ್ರಾಧಿಕಾರದ ದೂರವಾಣಿ ಸಂಖ್ಯೆ 080-22484516, 22017704ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
************************************************
ಕಲಬುರಗಿ,ಜು.07.(ಕ.ವಾ.)-ಕಲಬುರಗಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ ಜುಲೈ 14ರೊಳಗಾಗಿ ಸಲ್ಲಿಸಬೇಕು. ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರು ಸ್ವೀಕರಿಸಿದ ಅರ್ಜಿಗಳನ್ನು ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ಜುಲೈ 16ರೊಳಗಾಗಿ ಸಲ್ಲಿಸಬೇಕು. ಅತಿಥಿ ಉಪನ್ಯಾಸಕರ ನೇಮಕಾತಿಯು ಸರ್ಕಾರದ ಆದೇಶದ ಷರತ್ತುಗಳಿಗೊಳಪಟ್ಟಿರುತ್ತದೆ. ತಾಲೂಕುವಾರು, ವಿಷಯವಾರು ಉಪನ್ಯಾಸಕರ ಹುದ್ದೆಗಳ ವಿವರ ಹಾಗೂ ಮತ್ತಿತರ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಪದವಿಪೂರ್ವ ಶಿಕ್ಷಣ ಇಲಾಖೆ, ಮಿನಿ ವಿಧಾನ ಸೌಧ ಆವರಣ ಕಲಬುರಗಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-233830ನ್ನು ಸಂಪರ್ಕಿಸಲು ಕೋರಲಾಗಿದೆ.
2018ರ ಜುಲೈ 2ರ ಸರ್ಕಾರದ ಆದೇಶದನ್ವಯ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರುಗಳು ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗುವವರೆಗೆ ಅಥವಾ ಮಾರ್ಚ-2019ರ ವರೆಗೆ ಇದರಲ್ಲಿ ಯಾವುದೂ ಮೊದಲೋ ಅಲ್ಲಿಯವರೆಗೆ ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲು ಅನುಮತಿ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಬಾಲಕಿಯ ಪಾಲಕರ ಪತ್ತೆಗೆ ಮನವಿ
********************************



ಕಲಬುರಗಿ,ಜು.07.(ಕ.ವಾ.)-ಕಲಬುರಗಿಯ ರೈಲ್ವೆ ನಿಲ್ದಾಣದಲ್ಲಿ 2018ರ ಜೂನ್ 28ರಂದು ಚೈಲ್ಡ್‍ಲೈನ್ ಮೂಲಕ ಪತ್ತೆಯಾದ ಸುಮಾರು 17ವರ್ಷದ ಬುದ್ಧಿಮಾಂದ್ಯ ಬಾಲಕಿಯನ್ನು ಕಲಬುರಗಿ ನಗರದ ಆಳಂದ ರಸ್ತೆಯಲ್ಲಿರುವ ಸರ್ಕಾರಿ ಬುದ್ಧಿಮಾಂದ್ಯ ಬಾಲಕಿಯರ ಬಾಲಮಂದಿರದಲ್ಲಿ ದಾಖಲಿಸಲಾಗಿದೆ ಎಂದು ಸರ್ಕಾರಿ ಬುದ್ಧಿಮಾಂದ್ಯ ಬಾಲಕಿಯರ ಬಾಲಮಂದಿರದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಈ ಬಾಲಕಿಯ ಹೆಸರು ಮಾಂತಮ್ಮ ಇರುತ್ತದೆ. ಕಪು ಬಣ್ಣ ಹೊಂದಿರುವ ಈ ಬಾಲಕಿ ಸಾಧಾರಣ ಬುದ್ಧಿಮಾಂದ್ಯಳಾಗಿದ್ದಾಳೆ ಮತ್ತು ಕನ್ನಡ ಭಾಷೆ ಮಾತನಾಳುತ್ತಾಳೆ. ಈ ಬಾಲಕಿಯ ಪಾಲಕರು ಮತ್ತು ಪೋಷಕರು ಪ್ರಕಟಣೆಯಾದ 60 ದಿನದೊಳಗೆ ರೇಷನ್ ಕಾರ್ಡ್, ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಮುಂತಾದ ಅಗತ್ಯ ದಾಖಲೆಗಳೊಂದಿಗೆ ಅಧೀಕ್ಷಕರು, ಸರ್ಕಾರಿ ಬುದ್ಧಿಮಾಂದ್ಯ ಬಾಲಕಿಯರ ಬಾಲಮಂದಿರ ಕೇರ್ ಆಫ್ ರಾಜ್ಯ ಮಹಿಳಾ ನಿಲಯ, ಆಳಂದ ರಸ್ತೆ ಕಲಬುರಗಿ ಕಚೇರಿಗೆ ಭೇಟಿ  ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಬುದ್ಧಿಮಾಂದ್ಯ ಬಾಲಕಿಯರ ಬಾಲಮಂದಿರದ  ಅಧೀಕ್ಷಕರ ಕಚೇರಿ ದೂರವಾಣಿ ಸಂ.08472-230053ನ್ನು ಸಂಪರ್ಕಿಸಲು ಕೋರಿದೆÉ. 



ಹೀಗಾಗಿ ಲೇಖನಗಳು News and Photo Date: 7-7-2018

ಎಲ್ಲಾ ಲೇಖನಗಳು ಆಗಿದೆ News and Photo Date: 7-7-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and Photo Date: 7-7-2018 ಲಿಂಕ್ ವಿಳಾಸ https://dekalungi.blogspot.com/2018/07/news-and-photo-date-7-7-2018.html

Subscribe to receive free email updates:

0 Response to "News and Photo Date: 7-7-2018"

ಕಾಮೆಂಟ್‌‌ ಪೋಸ್ಟ್‌ ಮಾಡಿ