NEWS AND PHOTO DATE: 9--7--2018

NEWS AND PHOTO DATE: 9--7--2018 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE: 9--7--2018, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE: 9--7--2018
ಲಿಂಕ್ : NEWS AND PHOTO DATE: 9--7--2018

ಓದಿ


NEWS AND PHOTO DATE: 9--7--2018

ಈ.ಕ.ರ.ಸಾ.ಸಂಸ್ಥೆಗೆ ರಾಷ್ಟ್ರಮಟ್ಟದ ಇಂಡಿಯಾ ಬಸ್ ಸೇಷ್ಟಿ ಅವಾರ್ಡ್ ಪ್ರದಾನ
**********************************************************************
ಕಲಬುರಗಿ,ಜು.09.(ಕ.ವಾ.)-ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರ ಸುರಕ್ಷತೆಗಾಗಿ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದಕ್ಕೆ ಪ್ರತಿಷ್ಠಿತ “ರಾಷ್ಟ್ರ ಮಟ್ಟದ ಇಂಡಿಯಾ ಬಸ್ ಸೇಫ್ಟಿ ಅವಾರ್ಡ್-2018” ತನ್ನ ಪಾಲಾಗಿಸಿಕೊಂಡಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಮಲೇಶಿಯಾದ ಕೌಲಾಲಂಪುರದಲ್ಲಿ ಜುಲೈ 7ರಂದು ಜರುಗಿದ ರಾಷ್ಟ್ರಮಟ್ಟದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಮಲೇಶಿಯಾ ಪ್ರವಾಸೋದ್ಯಮ ಒಕ್ಕೂಟದ ಅಧ್ಯಕ್ಷ ಉಜಾದಿ ಉದಾನೀಸ್ ಅವರು ಪ್ರದಾನ ಮಾಡಿದ್ದಾರೆ. ರಾಷ್ಟ್ರದ ಎಲ್ಲ ಜಿಲ್ಲೆಗಳ ಸಾರಿಗೆ ಸಂಸ್ಥೆಗಳು ಇಂಡಿಯಾ ಬಸ್ ಸೇಫ್ಟಿ ಅವಾರ್ಡ್‍ಗಾಗಿ ಪೈಪೋಟಿಯಲ್ಲಿದ್ದವು. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರ ಸುರಕ್ಷತೆಗಾಗಿ ಪ್ರಥಮಾದ್ಯತೆ ನೀಡಿದ್ದಕ್ಕಾಗಿ 2017-18ನೇ ಸಾಲಿನಲ್ಲಿ ಅಪಘಾತಗಳ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ಇದನ್ನು ಪರಿಗಣಿಸಿ ರಾಷ್ಟ್ರಮಟ್ಟದ ಪ್ರಶಸ್ತಿ ನೀಡಲಾಗಿದೆ. ಈ ಸಮಾರಂಭದಲ್ಲಿ ಮಲೇಶಿಯಾ ಪ್ರವಾಸೋದ್ಯಮ ಇಲಾಖೆಯ ಪ್ರಧಾನ ನಿರ್ದೇಶಕ ಡಾಟುಕು ಸೆರಿ ಮಿರ್ಜಾ ಮೊಹಮ್ಮದ್ ತಯಾಬ್ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.
ರಾಷ್ಟ್ರದಲ್ಲಿರುವ ಎಲ್ಲ ಸಾರಿಗೆ ಸಂಸ್ಥೆಗಳೊಂದಿಗೆ ಬಸ್ ಅಲಾಯಿನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅವರೊಂದಿಗೆ ಅರ್ನಸ್ಟ್ ಆಂಡ್ ಯಂಗ್ ಎಲ್‍ಎಲ್‍ಪಿ ಮತ್ತು ಅಭಿ ಬಸ್ ಡಾಟ್ ಕಾಂ ನವರು ಹಲವಾರು ಬಾರಿ ಟೆಲಿಕಾನ್ಫ್‍ರೆನ್ಸ್‍ನಲ್ಲಿ ಸಂಸ್ಥೆಗಳ ಮಾಹಿತಿ ಪಡೆದು ಅತ್ಯುತ್ತಮ ಬಸ್ ಸೇಪ್ಟಿ ಅವಾರ್ಡಗಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿತ್ತು. ಕೌಲಾಲಂಪುರದಲ್ಲಿ ಜುಲೈ 7ರಂದು ನಡೆದ ಅಂತಿಮ ಸುತ್ತಿನ ಆಯ್ಕೆ ಸಮಾರಂಭದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ರಾಷ್ಟ್ರಮಟ್ಟದಲ್ಲಿಯೇ ಪ್ರಥಮ ದರ್ಜೆಯಲ್ಲಿ ಆಯ್ಕೆಯಾಗಿರುವುದು ಹೆಮ್ಮೆ ತರುವ ವಿಷಯವಾಗಿದೆ.
ರಾಷ್ಟ್ರಮಟ್ಟದ ಸಮಾರಂಭಕ್ಕೆ ಹಾಜರಾಗುವಂತೆ ಪ್ರೋತ್ಸಾಹ ಮತ್ತು ಸಹಕಾರ ನೀಡಿದ ಸಾರಿಗೆ ಸಚಿವರು, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಧನ್ಯವಾದಗಳನ್ನು ಸಲ್ಲಿಸಿರುವ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಪ್ರಶಸ್ತಿ ಬರಲು ಮಾರ್ಗದರ್ಶನ ನೀಡಿದ ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಮಸ್ತ ಸಿಬ್ಬಂದಿ ಮತ್ತು ಅಧಿಕಾರಿ ವರ್ಗದವರ ಕಠಿಣ ಪರಿಶ್ರಮ, ಕರ್ತವ್ಯ ನಿಷ್ಠೆ ಬಹುಮುಖ್ಯವಾಗಿದ್ದು ಎಂದು ತಿಳಿಸಿ ಮುಂಬರುವ ದಿನಗಳಲ್ಲಿ ಪ್ರಯಾಣಿಕರಿಗೆ ಇನ್ನು ಉತ್ತಮ ಹಾಗೂ ಸುರಕ್ಷಿತ ಸಾರಿಗೆ ಸೇವೆ ಒದಗಿಸಲು ಪ್ರಯಾಣಿಕರ ವಿಶ್ವಾಸಕ್ಕೆ ಪಾತ್ರರಾಗುವಂತೆ ಎಲ್ಲರೂ ಪ್ರಯತ್ನಿಸಬೇಕೆಂದು ತಿಳಿಸಿದ್ದಾರೆ.
ಅಂಧ ಬಾಲಕರ ಸರ್ಕಾರಿ ಪ್ರೌಢಶಾಲೆ: ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
**************************************************************************
ಕಲಬುರಗಿ,ಜು.09.(ಕ.ವಾ.)-ಕಲಬುರಗಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಎದುರಿಗೆ ಇರುವ ಅಂಧ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ 2018-19ನೇ ಸಾಲಿನಲ್ಲಿ ಖಾಲಿಯಿರುವ ವಿವಿಧ ವಿಷಯಗಳ 4 ಶಿಕ್ಷಕರ ಹುದ್ದೆಗಳನ್ನು (ಅಂಶಕಾಲಿಕ ವೇತನದಡಿಯಲ್ಲಿ ಕರ್ತವ್ಯ ನಿರ್ವಹಿಸಲು) ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಂಧ ಬಾಲಕರ ಸರ್ಕಾರಿ ಪ್ರೌಢಶಾಲೆಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರ-1 ಹುದ್ದೆಗೆ ಪಿ.ಯು.ಸಿ.,ಡಿ.ಇಡಿ. ಪಾಸಾಗಿರಬೇಕು. ಪ್ರೌಢಶಾಲೆಯಲ್ಲಿ ಕಲಾ-1 ಹಾಗೂ ಹಿಂದಿ-1 ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ಬಿ.ಎ. ಬಿ.ಎಡ್. ಪಾಸಾಗಿರಬೇಕು. ಚಲನವಲನ-1 ಶಿಕ್ಷಕರ ಹುದ್ದೆಗೆ ಚಲನವಲನ ತರಬೇತಿ ಪಡೆದಿರಬೇಕು. ವಿಶೇಷ ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ. ವಿಶೇಷ ತರಬೇತಿ ಹೊಂದಿದ ಅಭ್ಯರ್ಥಿಗಳು ಸಿಗದೇ ಹೋದಲ್ಲಿ ಸಾಮಾನ್ಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಭರ್ತಿ ಮಾಡಿದ ಅರ್ಜಿಗಳನ್ನು 2018ರ ಜುಲೈ 14ರ ಸಂಜೆ 5.30 ಗಂಟೆಯೊಳಗಾಗಿ ಅಧೀಕ್ಷಕರು, ಅಂಧ ಬಾಲಕರ ಸರ್ಕಾರಿ ಪ್ರೌಢಶಾಲೆ, ಚಂದ್ರಶೇಖರ ಪಾಟೀಲ ಕ್ರೀಡಾಂಗಣ ಎದುರುಗಡೆ, ಐವಾನ್ ಶಾಹಿ ಕಲಬುರಗಿ-585102 ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9686363287, 8549852750ಗಳನ್ನು ಸಂಪರ್ಕಿಸಲು ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನ
*************************************
ಕಲಬುರಗಿ,ಜು.09.(ಕ.ವಾ.)-ಕರ್ನಾಟಕ ಶಿಲ್ಪಕಲಾ ಅಕಾಡೆಮಿಯು 2016, 2017 ಮತ್ತು 2018ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಶಿಲ್ಪಕಲೆಗೆ ಸಂಬಂಧಿಸಿದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ರಿಜಿಸ್ಟ್ರಾರ್ ಇಂದ್ರಮ್ಮ ಹೆಚ್.ವಿ. ಅವರು ತಿಳಿಸಿದ್ದಾರೆ.
ಪುಸ್ತಕ ವಿಮರ್ಶಕರು ಆಯ್ಕೆ ಮಾಡುವ ಒಂದು ಪುಸ್ತಕಕ್ಕೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. 2016ನೇ ಸಾಲಿನ ಪುಸ್ತಕ ಬಹುಮಾನಕ್ಕೆ 2015ರ ಜನವರಿ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಮುದ್ರಣವಾಗಿರಬೇಕು. 2017ನೇ ಸಾಲಿನ ಪುಸ್ತಕ ಬಹುಮಾನಕ್ಕೆ 2016ರ ಜನವರಿ 1 ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಮುದ್ರಣಗೊಂಡಿರಬೇಕು. 2018ನೇ ಸಲಿನ ಪುಸ್ತಕ ಬಹುಮಾನಕ್ಕೆ 2017ರ ಜನವರಿ 1 ರಿಂದ ಡಿಸಂಬರ್ 31ರ ಅವಧಿಯಲ್ಲಿ ಮುದ್ರಣಗೊಂಡಿರಬೇಕು. ಪುಸ್ತಕದ ತಾಂತ್ರಿಕ ಪುಟದಲ್ಲಿ ಪ್ರಥಮ ಮುದ್ರಣ ಎಂದು ಮದ್ರಿತವಾಗಿರಬೇಕು.
ಪುಸ್ತಕ ಬಹುಮಾನದ ಮೊತ್ತ 25,000ರೂ. ಇರುತ್ತದೆ. ಪುಸ್ತಕ ಬಹುಮಾನಕ್ಕೆ ಕಳುಹಿಸುವ ಪುಸ್ತಕವು ಪುನರ್ ಮುದ್ರಣವಾಗಿರಬಾರದು. ಮೊದಲು ಆವೃತ್ತಿಯಲ್ಲಿ ಪ್ರಕಟಗೊಂಡಿರಬೇಕು ಮತ್ತು ಯಾವುದೇ ತರಗತಿಗಳಿಗೆ ಪಠ್ಯಪುಸ್ತಕವಾಗಿರಬಾರದು. ಪುಸ್ತಕವು ಲೇಖಕರ ಸ್ವಂತ ರಚನೆಯಾಗಿರಬೇಕು. ಸಂಪಾದಿತ ಕೃತಿಯಾಗಿರಬಾರದು. ಪಿ.ಹೆಚ್.ಡಿ., ಡಿ.ಲಿಟ್ ಅಥವಾ ಅಧ್ಯಾಯನಕ್ಕಾಗಿ ಮಾಡಿದಂತಹ ಪುಸ್ತಕಗಳನ್ನು ಪರಿಗಣಿಸಲಾಗುವುದಿಲ್ಲ. ಕೃತಿ, ಪುಸ್ತಕವು ಕನಿಷ್ಠ 100 ಪುಟಗಳಿಗೂ ಹೆಚ್ಚಿನ ಪುಟಗಳನ್ನು ಹೊಂದಿರತಕ್ಕದ್ದು. ಪುಸ್ತಕ ಬಹುಮಾನದ ಅರ್ಜಿಗಳನ್ನು 2018ರ ಆಗಸ್ಟ್ 31ರೊಳಗಾಗಿ ಪುಸ್ತಕದ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಕನ್ನಡ ಭವನ, 1ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-580002 ಇವರಿಗೆ ನೋಂದಾಯಿತ ಅಂಚೆ/ ಕೋರಿಯರ್ ಮೂಲಕ ಅಥವಾ ಖುದ್ದಾಗಿ 2018ರ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು. ಬಹುಮಾನಕ್ಕಾಗಿ ಕಳುಹಿಸುವ ಪುಸ್ತಕದ ಮೇಲೆ ಯಾವ ಶಿಲ್ಪಕಲಾ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಪುಸ್ತಕದ ಶೀರ್ಷಿಕೆ ಪುಟದಲ್ಲಿ ಸ್ಪಷ್ಟವಾಗಿ ಬರೆಯಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







ಹೀಗಾಗಿ ಲೇಖನಗಳು NEWS AND PHOTO DATE: 9--7--2018

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 9--7--2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 9--7--2018 ಲಿಂಕ್ ವಿಳಾಸ https://dekalungi.blogspot.com/2018/07/news-and-photo-date-9-7-2018.html

Subscribe to receive free email updates:

0 Response to "NEWS AND PHOTO DATE: 9--7--2018"

ಕಾಮೆಂಟ್‌‌ ಪೋಸ್ಟ್‌ ಮಾಡಿ