ಶೀರ್ಷಿಕೆ : News Date: 24-7-2018
ಲಿಂಕ್ : News Date: 24-7-2018
News Date: 24-7-2018
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ
*********************************************************
ಕಲಬುರಗಿ,ಜು.24.(ಕ.ವಾ.)-ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ ಅಹಮದ್, ಆಯೋಗದ ಸದಸ್ಯರು ಹಾಗೂ ಕಾರ್ಯದರ್ಶಿಗಳು ಬೀದರಿನಿಂದ ಜುಲೈ 27ರಂದು ರಾತ್ರಿ 7.30 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜುಲೈ 28ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಹಾಗೂ ಅಲ್ಪಸಂಖ್ಯಾತರ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುವರು. ಸಂಜೆ 5.15 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು. ರಾತ್ರಿ 9.05 ಗಂಟೆಗೆ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ
***********************************************
ಕಲಬುರಗಿ,ಜು.24.(ಕ.ವಾ.)-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2018-19ನೇ ಸಾಲಿನಲ್ಲಿ ಗ್ರಾಮ ಸಂಪರ್ಕ ಕಾರ್ಯಕ್ರಮದಡಿ ಜಾನಪದ ಸಂಗೀತ ಕಾರ್ಯಕ್ರಮ ನೀಡಲು ಜಿಲ್ಲೆಯ ನೋಂದಾಯಿತ ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ತಿಳಿಸಿದ್ದಾರೆ.
ಕಲಾ ತಂಡಗಳು ಕಲಬುರಗಿ ಮಿನಿ ವಿಧಾನಸೌಧದ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಇದೇ ಜುಲೈ 28ರೊಳಗಾಗಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜುಲೈ 31 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.
ಜಾನಪದ ಕಲಾ ತಂಡದಲ್ಲಿ ಕಡ್ಡಾಯವಾಗಿ 3 ಜನ ಕಲಾವಿದರಿದ್ದು, ಈ ಪೈಕಿ ಒಬ್ಬರು ಮಹಿಳಾ ಕಲಾವಿದರು ಇರುವುದು ಕಡ್ಡಾಯ. ತಂಡದ ಕಲಾವಿದರ ಪೈಕಿ ಒಬ್ಬರು ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಠ ವರ್ಗಕ್ಕೆ ಸೇರಿದ ಕಲಾವಿದರಾಗಿರಬೇಕು. ಈ ಕುರಿತು ಹೆಚ್ಚಿನ ವಿವರಕ್ಕಾಗಿ ದೂ.ಸಂ.08472-223133 ಸಂಪರ್ಕಿಸಲು ಕೋರಿದೆ.

ಜುಲೈ 27ರಂದು ಶ್ರೀ ಶಿವಶರಣ ಹಡಪದ ಅಪ್ಪಣ್ಣರವರ ಜಯಂತಿ ಆಚರಣೆ
****************************************************************
ಕಲಬುರಗಿ,ಜು.24.(ಕ.ವಾ.)-ಕಲಬುರಗಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಹಯೋಗದಲ್ಲಿ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾದ ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಸಮಾರಂಭವನ್ನು ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಇದೇ ಜುಲೈ 27ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಉದ್ಘಾಟಿಸುವರು.
ಈ ಸಮಾರಂಭದಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭಾ ಶಾಸಕರುಗಳಾದ ಡಾ|| ಉಮೇಶ ಜಾಧವ, ಡಾ|| ಅಜಯಸಿಂಗ್, ಬಸವರಾಜ ಬಿ. ಮತ್ತಿಮೂಡ, ಸುಭಾಷ ಗುತ್ತೇದಾರ್, ರಾಜಕುಮಾರ ಪಾಟೀಲ ತೇಲ್ಕೂರ, ಎಮ್.ವಾಯ್. ಪಾಟೀಲ, ಖನೀಜ್ ಫಾತೀಮಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಚಂದ್ರಶೇಖರ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣುಕುಮಾರ ಮೋದಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಭೋದ ಯಾದವ, ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಎಸ್. ಮುರುಗನ್, ಹಡಪದ ಸಮಾಜದ ಜಿಲ್ಲಾ ಅಧ್ಯಕ್ಷ ಈರಣ್ಣಾ ಸಿ. ಹಡಪದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಬೀದರಿನ ಬಸವಗಿರಿಯ ಬಸವ ಸೇವಾ ಪ್ರತಿಷ್ಠಾನದ ಪೂಜ್ಯ ಶ್ರೀ ಅಕ್ಕ ಅನ್ನಪೂರ್ಣ ತಾಯಿಯವರು ವಿಶೇಷ ಉಪನ್ಯಾಸ ನೀಡುವರು.
ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ನಗರೇಶ್ವರ ಶಾಲೆಯಿಂದ ಆರಂಭಗೊಂಡು ಚೌಕ್ ಪೊಲೀಸ್ ಸ್ಟೇಶನ್, ಸುಪರ ಮಾರ್ಕೆಟ್, ಜಗತ್ತ ವೃತ್ತದಿಂದ ಡಾ. ಎಸ್.ಎಂ.ಪಂಡಿತ ರಂಗಮಂದಿರದವರೆಗೆ ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರ ಮತ್ತು ವಿವಿಧ ಕಲಾ ಜಾನಪದ ಕಲಾ ತಂಡದ ಭವ್ಯ ಮೆರವಣಿಗೆ ಜರುಗುವುದು.

ಜುಲೈ 30ರಂದು ಅಭ್ಯರ್ಥಿಗಳಿಗೆ ಸಂದರ್ಶನ
***************************************
ಕಲಬುರಗಿ,ಜು.24.(ಕ.ವಾ.)-ಪ್ರಸಕ್ತ 2018-19ನೇ ಸಾಲಿಗೆ ಪ್ರಧಾನಮಂತ್ರಿಯವರ ಉದ್ಯೋಗ ಸೃಜನೆ ಯೋಜನೆಯಡಿ 2018ರ ಜನವರಿ 1 ರಿಂದ ಜೂನ್ 30ರವರೆಗೆ ಆನ್‍ಲೈನ್ ಮೂಲಕ ಸಲ್ಲಿಸಿರುವ ಕೆಳಕಂಡ ತಾಲೂಕುಗಳ ಅಭ್ಯರ್ಥಿಗಳ ಅರ್ಜಿಗಳ ಪರಿಶೀಲನೆ ಮತ್ತು ಸಂದರ್ಶನವನ್ನು ಇದೇ ಜುಲೈ 30ರಂದು ಕಲಬುರಗಿ ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ತಾಲೂಕಿನÀ ಅಭ್ಯರ್ಥಿಗಳಿಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5.30 ಗಂಟೆಯವರೆಗೆ ಆಳಂದ, ಅಫಜಲಪುರ, ಚಿಂಚೋಳಿ, ಚಿತ್ತಾಪುರ, ಜೇವರ್ಗಿ ಮತ್ತು ಸೇಡಂ ತಾಲೂಕುಗಳ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುವುದು. ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ಅರ್ಜಿಯಲ್ಲಿ ನಮೂದಿಸಿರುವ ಎಲ್ಲ ದಾಖಲಾತಿಗಳನ್ನು ದ್ವಿಪ್ರತಿಯಲ್ಲಿ ಮತ್ತು ಮೂಲ ದಾಖಲಾತಿಗಳೊಂದಿಗೆ ಪರಿಶೀಲನೆಗಾಗಿ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೀಗಾಗಿ ಲೇಖನಗಳು News Date: 24-7-2018
ಎಲ್ಲಾ ಲೇಖನಗಳು ಆಗಿದೆ News Date: 24-7-2018 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News Date: 24-7-2018 ಲಿಂಕ್ ವಿಳಾಸ https://dekalungi.blogspot.com/2018/07/news-date-24-7-2018.html
0 Response to "News Date: 24-7-2018"
ಕಾಮೆಂಟ್ ಪೋಸ್ಟ್ ಮಾಡಿ