ಶೀರ್ಷಿಕೆ : ವಿಜ್ಞಾನ ವಿದ್ಯಾರ್ಥಿಗಳಿಗೆ ಸೆ. 08 ರಿಂದ ವಿಭಾಗ ಹಾಗೂ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ
ಲಿಂಕ್ : ವಿಜ್ಞಾನ ವಿದ್ಯಾರ್ಥಿಗಳಿಗೆ ಸೆ. 08 ರಿಂದ ವಿಭಾಗ ಹಾಗೂ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ
ವಿಜ್ಞಾನ ವಿದ್ಯಾರ್ಥಿಗಳಿಗೆ ಸೆ. 08 ರಿಂದ ವಿಭಾಗ ಹಾಗೂ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ
ಕೊಪ್ಪಳ ಆ. 27 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವರ ವತಿಯಿಂದ ಪದವಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ವಿಭಾಗ ಹಾಗೂ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಸೆಪ್ಟೆಂಬರ್. 08 ರಿಂದ ಆಯೋಜಿಸಲಾಗಿದೆ.
ಪದವಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಸೃಜನಶೀಲತೆ, ಸ್ಪರ್ಧಾತ್ಮಕ ಹಾಗೂ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿಭಾಗ ಹಾಗೂ ರಾಜ್ಯಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯನ್ನು ರಾಜ್ಯದ 6 ವಿಭಾಗಗಳಲ್ಲಿ ಆಯೋಜಿಸಲಾಗುತ್ತಿದೆ. ರಾಜ್ಯದ ಯಾವುದೇ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಕಾಲೇಜಿನಲ್ಲಿ ಬಿ.ಎಸ್.ಸಿ ಅಧ್ಯಾಯನ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ವಿಜ್ಞಾನ ಪಸ್ತುಪ್ರದರ್ಶನ ಸ್ಪರ್ಧೆಯ ಕೇಂದ್ರ ವಿಷಯ "ಮನುಕುಲಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರ" ಆಗಿದ್ದು, ಶುದ್ಧ ಮತ್ತು ಹಸಿರು ಶಕ್ತಿ, ಆಹಾರ, ಆರೋಗ್ಯ ಮತ್ತು ನೈರ್ಮಲ್ಯ, ಬಾಹ್ಯಾಕಾಶ ಹುಡುಕಾಟ, ಪರಿಸರಸ್ನೇಹಿ ತಂತ್ರಜ್ಞಾನ ಮತ್ತು ಪ್ಲಾಸ್ಟಿಕ್ ಮಾಲಿನ್ಯ ಹಿಮ್ಮೆಟ್ಟಿಸುವುದು ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಆರೋಗ್ಯ ಎಂಬ ಐದು ಉಪ ವಿಷಯಗಳ ಮೇಲೆ ವಿದ್ಯಾರ್ಥಿಗಳು ಮಾದರಿ ತಯಾರಿಸಬಹುದಾಗಿದೆ.
ಧಾರವಾಡ ವಿಭಾಗದ ಸ್ಪರ್ಧೆಯನ್ನು ಸೆಪ್ಟೆಂಬರ್. 08 ರಂದು ಬೆಳಗಾವಿಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದಲ್ಲಿ, ಮಂಗಳೂರ ವಿಭಾಗದ ಸ್ಪರ್ಧೆಯನ್ನು ಸೆ. 12 ರಂದು ಪುತ್ತೂರಿನ ಸೆಂಟ್ ಫಿಲೋಮಿನಾ ವಿಜ್ಞಾನ ಮಹಾವಿದ್ಯಾಲಯದಲ್ಲಿ, ಕಲಬುರಗಿ ವಿಭಾಗದ ಸ್ಪರ್ಧೆಯನ್ನು ಸೆ. 15 ರಂದು ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಶಿವಮೊಗ್ಗ ವಿಭಾಗದ ಸ್ಪರ್ಧೆಯನ್ನು ಸೆ. 17 ರಂದು ಚಿಕ್ಕಮಂಗಳೂರಿನ ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ, ಮೈಸೂರು ವಿಭಾಗದ ಸ್ಪರ್ಧೆಯನ್ನು ಸೆ. 08 ರಂದು ಕೊಳ್ಳೇಗಾಲದ ನಿಸರ್ಗ ಕಾಲೇಜ್ ಆಫ್ ಮ್ಯಾನೇಜ್‍ಮೆಂಟ್‍ನಲ್ಲಿ ಹಾಗೂ ಬೆಂಗಳೂರು ವಿಭಾಗದ ಸ್ಪರ್ಧೆಯನ್ನು ಸೆ. 15 ರಂದು ಸ್ಕೂಲ್ ಆಫ್ ಸೈನ್ಸ್ ಜೈನ್ ಯೂನಿವರ್ಸಿಟಿಯಲ್ಲಿ ಆಯೋಜಿಸಲಾಗಿದೆ. ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರತಿ ಉಪ ವಿಷಯದಲ್ಲಿ ಮೊದಲು ಸ್ಥಾನ ಗಳಿಸಿದ ವಿದ್ಯಾರ್ಥಿಗಳು ಅಕ್ಟೋಬರ್ ಮೊದಲ ವಾರದಲ್ಲಿ ಕಲಬುರಗಿಯಲ್ಲಿ ಜರುಗುವ ರಾಜ್ಯಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಸೆ. 03 ರೊಳಗಾಗಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೇಂದ್ರ ಕಚೇರಿಗೆ ನಿಗದಿತ ಅರ್ಜಿ ಭರ್ತಿ ಮಾಡಿ ಇ-ಮೇಲ್ krvp.info@gmail.com ಅಥವಾ ವಾಟ್ಸಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳೊಂದಿಗೆ ಪ್ರಶಸ್ತಿ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪರಿಷತ್ತಿನ ಕಚೇರಿ ದೂ.ಸಂ. 080-26718939, ಮೊ.ಸಂ. 9449530245, 9008442557 ಕ್ಕೆ ಸಂಪರ್ಕಿಸಬಹು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ್ ಬಿ. ಕಡ್ಲೇವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ವಿಜ್ಞಾನ ವಿದ್ಯಾರ್ಥಿಗಳಿಗೆ ಸೆ. 08 ರಿಂದ ವಿಭಾಗ ಹಾಗೂ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ
ಎಲ್ಲಾ ಲೇಖನಗಳು ಆಗಿದೆ ವಿಜ್ಞಾನ ವಿದ್ಯಾರ್ಥಿಗಳಿಗೆ ಸೆ. 08 ರಿಂದ ವಿಭಾಗ ಹಾಗೂ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗೆ ಸೆ. 08 ರಿಂದ ವಿಭಾಗ ಹಾಗೂ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಲಿಂಕ್ ವಿಳಾಸ https://dekalungi.blogspot.com/2018/08/08.html
0 Response to "ವಿಜ್ಞಾನ ವಿದ್ಯಾರ್ಥಿಗಳಿಗೆ ಸೆ. 08 ರಿಂದ ವಿಭಾಗ ಹಾಗೂ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ"
ಕಾಮೆಂಟ್ ಪೋಸ್ಟ್ ಮಾಡಿ