ಶೀರ್ಷಿಕೆ : ಆ. 15 ರಂದು ಕೊಪ್ಪಳದಲ್ಲಿ 72ನೇ ಸ್ವಾತಂತ್ಯ್ರೋತ್ಸವ ದಿನಾಚರಣೆ
ಲಿಂಕ್ : ಆ. 15 ರಂದು ಕೊಪ್ಪಳದಲ್ಲಿ 72ನೇ ಸ್ವಾತಂತ್ಯ್ರೋತ್ಸವ ದಿನಾಚರಣೆ
ಆ. 15 ರಂದು ಕೊಪ್ಪಳದಲ್ಲಿ 72ನೇ ಸ್ವಾತಂತ್ಯ್ರೋತ್ಸವ ದಿನಾಚರಣೆ
ಕೊಪ್ಪಳ ಆ. 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ ವತಿಯಿಂದ 72ನೇ ಸ್ವಾತಂತ್ರೋತ್ಸವದ ದಿನಾಚರಣೆ ಕಾರ್ಯಕ್ರಮವನ್ನು ಆ. 15 ರಂದು ಬೆಳಿಗ್ಗೆ 09 ಗಂಟೆಗೆ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ಧ್ವಜಾರೋಹಣ ನೆರೆವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ್, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಆಚಾರ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಳ್ಳುವರು.
72ನೇ ಸ್ವಾತಂತ್ರೋತ್ಸವದ ದಿನಾಚರಣೆ ಅಂಗವಾಗಿ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ. ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ನಡೆಯಲಿದೆ. ಅಂದು ಸಂಜೆ 06-00 ಗಂಟೆಯಿಂದ ನಗರದ ಸಾಹಿತ್ಯ ಭವನದಲ್ಲಿ ದೇಶ ಭಕ್ತಿ ಗೀತೆ, ದೇಶ ಭಕ್ತಿ ನೃತ್ಯಗಳು, ಭರತನಾಟ್ಯ, ಜನಪದ ನೃತ್ಯ ಹಾಗೂ ಸಮೂಹ ಇತ್ಯಾದಿ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಆ. 15 ರಂದು ಕೊಪ್ಪಳದಲ್ಲಿ 72ನೇ ಸ್ವಾತಂತ್ಯ್ರೋತ್ಸವ ದಿನಾಚರಣೆ
ಎಲ್ಲಾ ಲೇಖನಗಳು ಆಗಿದೆ ಆ. 15 ರಂದು ಕೊಪ್ಪಳದಲ್ಲಿ 72ನೇ ಸ್ವಾತಂತ್ಯ್ರೋತ್ಸವ ದಿನಾಚರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಆ. 15 ರಂದು ಕೊಪ್ಪಳದಲ್ಲಿ 72ನೇ ಸ್ವಾತಂತ್ಯ್ರೋತ್ಸವ ದಿನಾಚರಣೆ ಲಿಂಕ್ ವಿಳಾಸ https://dekalungi.blogspot.com/2018/08/15-72.html
0 Response to "ಆ. 15 ರಂದು ಕೊಪ್ಪಳದಲ್ಲಿ 72ನೇ ಸ್ವಾತಂತ್ಯ್ರೋತ್ಸವ ದಿನಾಚರಣೆ"
ಕಾಮೆಂಟ್ ಪೋಸ್ಟ್ ಮಾಡಿ