ಶೀರ್ಷಿಕೆ : ಆ. 15 ರಂದು ತುಂಗಭದ್ರಾ ಜಲಾಶಯಕ್ಕೆ ಬಾಗೀನ ಸಮರ್ಪಣೆ ಕಾರ್ಯಕ್ರಮ
ಲಿಂಕ್ : ಆ. 15 ರಂದು ತುಂಗಭದ್ರಾ ಜಲಾಶಯಕ್ಕೆ ಬಾಗೀನ ಸಮರ್ಪಣೆ ಕಾರ್ಯಕ್ರಮ
ಆ. 15 ರಂದು ತುಂಗಭದ್ರಾ ಜಲಾಶಯಕ್ಕೆ ಬಾಗೀನ ಸಮರ್ಪಣೆ ಕಾರ್ಯಕ್ರಮ
ಕೊಪ್ಪಳ ಆ. 14 (ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯವು ಭರ್ತಿಯಾಗಿರುವ ಶುಭ ಸಂದರ್ಭದಲ್ಲಿ ಜಲಸಂಪನ್ಮೂಲ ಇಲಾಖೆ ವತಿಯಿಂದ ಬಾಗೀನ ಸಮರ್ಪಣೆ ಕಾರ್ಯಕ್ರಮವನ್ನು ಆ. 15 ರಂದು ಸಾಯಂಕಾಲ 5-30 ಗಂಟೆಗೆ ತುಂಗಭದ್ರಾ ಆಣೆಕಟ್ಟಿನಲ್ಲಿ ಆಯೋಜಿಸಲಾಗಿದೆ.
ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ ಶಿವಕುಮಾರ್ ಅವರು ತುಂಗಭದ್ರಾ ಜಲಾಶಕ್ಕೆ ಬಾಗೀನ ಸಮರ್ಪಣೆ ಮಾಡುವರು. ಪಶು ಸಂಗೋಪನೆ ಮತ್ತು ಮೀನುಗಾರಿಕೆ ಹಾಗೂ ರಾಯಚೂರು ಜಿಲ್ಲಾ ಉಸ್ತವಾರಿ ಸಚಿವರಾದ ವೆಂಕಟರಾವ ನಾಡಗೌಡ, ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ಈ ಸಂದರ್ಭದಲ್ಲಿ ಪಾಲ್ಗೊಳ್ಳುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಸಂಗಣ್ಣ ಕರಡಿ ಹಾಗೂ ಬಿ.ವಿ. ನಾಯಕ, ಶಾಸಕರುಗಳಾದ ಆನಂದಸಿಂಗ್, ಬಿ. ಸೋಮಶೇಖರರೆಡ್ಡಿ, ಬಿ. ನಾಗೇಂದ್ರ, ಜೆ.ಎನ್. ಗಣೇಶ, ಎಂ.ಎಸ್. ಸೋಮಲಿಂಗಪ್ಪ, ಇ. ತುಕಾರಾಂ, ಎನ್.ವೈ ಗೋಪಾಲಕೃಷ್ಣ, ಭೀಮಾನಾಯ್ಕ, ಪಿ.ಟಿ ಪರಮೇಶ್ವರ ನಾಯ್ಕ, ಕೆ. ರಾಘವೇಂದ್ರ ಹಿಟ್ನಾಳ್, ಬಸವರಾಜ ದಢೇಸೂಗೂರು, ಪರಣ್ಣ ಮುನವಳ್ಳಿ, ಅಮರೇಗೌಡ ಬಯ್ಯಾಪುರ, ಹಾಲಪ್ಪ ಆಚಾರ, ಪ್ರತಾಪಗೌಡ ಪಾಟೀಲ, ರಾಜಾ ವೆಂಕಟಪ್ಪ ನಾಯಕ, ಬಸವನಗೌಡ ದದೇಗಲ್, ಡಾ. ಶಿವರಾಜ್ ಪಾಟೀಲ್, ಶಿವನಗೌಡ ನಾಯಕ, ವಿಧಾನಪರಿಷತ್ ಸದಸ್ಯರುಗಳಾದ ಕೆ.ಸಿ. ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಎನ್.ಎಸ್. ಬೋಸರಾಜ, ಬಸವರಾಜ ಪಾಟೀಲ ಇಟಗಿ, ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಆ. 15 ರಂದು ತುಂಗಭದ್ರಾ ಜಲಾಶಯಕ್ಕೆ ಬಾಗೀನ ಸಮರ್ಪಣೆ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಆ. 15 ರಂದು ತುಂಗಭದ್ರಾ ಜಲಾಶಯಕ್ಕೆ ಬಾಗೀನ ಸಮರ್ಪಣೆ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಆ. 15 ರಂದು ತುಂಗಭದ್ರಾ ಜಲಾಶಯಕ್ಕೆ ಬಾಗೀನ ಸಮರ್ಪಣೆ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2018/08/15_14.html
0 Response to "ಆ. 15 ರಂದು ತುಂಗಭದ್ರಾ ಜಲಾಶಯಕ್ಕೆ ಬಾಗೀನ ಸಮರ್ಪಣೆ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ