ಶೀರ್ಷಿಕೆ : ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : 197 ಮತಗಟ್ಟೆಗಳು, 1,77,798 ಮತದಾರರು
ಲಿಂಕ್ : ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : 197 ಮತಗಟ್ಟೆಗಳು, 1,77,798 ಮತದಾರರು
ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : 197 ಮತಗಟ್ಟೆಗಳು, 1,77,798 ಮತದಾರರು
ಕೊಪ್ಪಳ ಆ. 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕೊಪ್ಪಳ ಮತ್ತು ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಹಾಗೂ ಯಲಬುರ್ಗಾ ಪಟ್ಟಣ ಪಂಚಾಯತಿ ಸೇರಿದಂತೆ ಒಟ್ಟು 04 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಗಾಗಿ 197 ಮತಗಟ್ಟೆಗಳನ್ನು ಸ್ಥಾಪಿಸಿದ್ದು, 177798 ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
ವೇಳಾಪಟ್ಟಿ :
******* ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿ ಅನ್ವಯ, ಜಿಲ್ಲಾಧಿಕಾರಿಗಳು ಆ. 10 ರಂದು ಅಧಿಸೂಚನೆ ಹೊರಡಿಸುವರು. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆ. 10 ರಿಂದಲೇ ಆರಂಭವಾಗಲಿದ್ದು, ಆ. 17 ರವರೆಗೆ ನಾಮಪತ್ರಗಳನ್ನು ಸ್ವೀಕರಿಸಬೇಕು. ಆ. 18 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಆ. 20 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಆ. 29 ರಂದು ಮತದಾನ ನಡೆಯಲಿದ್ದು, ಸೆ. 01 ರ ಒಳಗಾಗಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ವಾರ್ಡ್ ಸಂಖ್ಯೆ ಹಾಗೂ ಮತಗಟ್ಟೆಗಳು :
********** ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 104 ವಾರ್ಡ್‍ಗಳಲ್ಲಿ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಒಟ್ಟು 197 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 31 ವಾರ್ಡ್‍ಗಳಿದ್ದು, ಇಲ್ಲಿ 61 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ 35 ವಾರ್ಡ್‍ಗಳಿದ್ದು, 93 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಕುಷ್ಟಗಿ ಪುರಸಭೆಯಲ್ಲಿ 23 ವಾರ್ಡ್‍ಗಳಿದ್ದು, 28 ಮತಗಟ್ಟೆಗಳಿವೆ. ಯಲಬುರ್ಗಾ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 15 ವಾರ್ಡ್‍ಗಳಿದ್ದು, 15 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಮತದಾರರ ವಿವರ :
********* ಕೊಪ್ಪಳ ಜಿಲ್ಲೆಯಲ್ಲಿ ಸದ್ಯ ನಡೆಯಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪುರುಷ- 88128, ಮಹಿಳೆ- 89658 ಹಾಗೂ ಇತರೆ 12 ಸೇರಿದಂತೆ ಒಟ್ಟು 177798 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಪುರುಷ- 30534, ಮಹಿಳೆ-30935 ಹಾಗೂ ಇತರೆ-06 ಸೇರಿದಂತೆ ಒಟ್ಟು 61475 ಮತದಾರರಿದ್ದಾರೆ. ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ಪುರುಷ- 41548, ಮಹಿಳೆ-42248 ಹಾಗೂ ಇತರೆ-01 ಸೇರಿದಂತೆ ಒಟ್ಟು 83797 ಮತದಾರರಿದ್ದಾರೆ. ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಪುರುಷ- 10635, ಮಹಿಳೆ-10759 ಹಾಗೂ ಇತರೆ-04 ಸೇರಿದಂತೆ ಒಟ್ಟು 21398 ಮತದಾರರಿದ್ದಾರೆ. ಯಲಬುರ್ಗಾ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಪುರುಷ- 5411, ಮಹಿಳೆ-5716 ಹಾಗೂ ಇತರೆ-01 ಸೇರಿದಂತೆ ಒಟ್ಟು 11128 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಅಧಿಕಾರಿಗಳ ನೇಮಕ :
******* ಕೊಪ್ಪಳ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಸುಗಮವಾಗಿ ಜರುಗಿಸಲು ಅನುಕೂಲವಾಗುವಂತೆ 13-ಚುನಾವಣಾಧಿಕಾರಿಗಳು, 13-ಸಹಾಯಕ ಚುನಾವಣಾಧಿಕಾರಿಗಳು ಜೊತೆಗೆ ಚುನಾವಣೆ ಪ್ರಕ್ರಿಯೆ ಬಗ್ಗೆ ನಿಗಾ ವಹಿಸಲು 21-ಸೆಕ್ಟರ್ ಅಧಿಕಾರಿಗಳನ್ನು ಹಾಗೂ ನೀತಿ ಸಂಹಿತೆ ಪಾಲನೆ ಬಗ್ಗೆ ನಿಗಾ ವಹಿಸಲು 13 ವಿಶೇಷ ತಂಡಗಳನ್ನು ನೇಮಿಸಲಾಗಿದೆ. ಕೊಪ್ಪಳ ನಗರಸಭೆ ವ್ಯಾಪ್ತಿಗೆ 04 ಚುನಾವಣಾಧಿಕಾರಿ, 04- ಸಹಾಯಕ ಚುನಾವಣಾಧಿಕಾರಿ, 08 ಸೆಕ್ಟರ್ ಅಧಿಕಾರಿಗಳನ್ನು ಹಾಗೂ 04 ಎಂ.ಸಿ.ಸಿ. ತಂಡಗಳನ್ನು ನಿಯೋಜಿಸಲಾಗಿದೆ. ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ 05-ಚುನಾವಣಾಧಿಕಾರಿ, 05- ಸಹಾಯಕ ಚುನಾವಣಾಧಿಕಾರಿ, 09- ಸೆಕ್ಟರ್ ಅಧಿಕಾರಿಗಳು ಹಾಗೂ 05- ಎಂ.ಸಿ.ಸಿ. ತಂಡಗಳು. ಕುಷ್ಟಗಿ ಪುರಸಭೆ ವ್ಯಾಪ್ತಿಗೆ 02- ಚುನಾವಣಾಧಿಕಾರಿ, 02- ಸಹಾಯಕ ಚುನಾವಣಾಧಿಕಾರಿ, 02- ಸೆಕ್ಟರ್ ಅಧಿಕಾರಿ ಹಾಗೂ 02- ಎಂ.ಸಿ.ಸಿ. ತಂಡಗಳು. ಯಲಬುರ್ಗಾ ಪಟ್ಟಣ ಪಂಚಾಯತಿ ವ್ಯಾಪ್ತಿಗೆ 02 ಚುನಾವಣಾಧಿಕಾರಿ, 02- ಸಹಾಯಕ ಚುನಾವಣಾಧಿಕಾರಿ ಹಾಗೂ 02- ಸೆಕ್ಟರ್ ಅಧಿಕಾರಿಗಳು ಹಾಗೂ 02- ಎಂ.ಸಿ.ಸಿ. ತಂಡಗಳನ್ನು ನೇಮಿಸಲಾಗಿದೆ.
ಈ ಬಾರಿ ಇವಿಯಂ ಯಂತ್ರ ಬಳಕೆ :
********* ನಗರ, ಸ್ಥಳೀಯ ಸಂಸ್ಥೆ ಚುನಾವಣೆಗೆ ಈ ಬಾರಿ ವಿದ್ಯುನ್ಮಾನ ಮತ ಯಂತ್ರಗಳನ್ನು ಮಾತ್ರ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಕಳೆದ ಮೇ ತಿಂಗಳಿನಲ್ಲಿ ಜರುಗಿದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಳಸಲಾದ ವಿವಿ ಪ್ಯಾಟ್ ಯಂತ್ರವನ್ನು ಸ್ಥಳೀಯ ಸಂಸ್ಥೆ ಚುನಾವಣೆಗೆ ಬಳಸಲಾಗುತ್ತಿಲ್ಲ. ಆದರೆ ವಿದ್ಯುನ್ಮಾನ ಮತಯಂತ್ರದಲ್ಲಿ ಈ ಬಾರಿ ‘ನೋಟಾ’ ಬಟನ್ ಬಳಸಲಾಗುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿ ಜರುಗುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ತಲಾ 237 ಬ್ಯಾಲೆಟ್ ಯುನಿಟ್ ಹಾಗೂ ಕಂಟ್ರೋಲ್ ಯುನಿಟ್ ಉಪಯೋಗಿಸಲಾಗುತ್ತದೆ. ಕೊಪ್ಪಳ- 74 ಬ್ಯಾಲೆಟ್ ಯುನಿಟ್ ಹಾಗೂ ಕಂಟ್ರೋಲ್ ಯುನಿಟ್. ಗಂಗಾವತಿ- 111, ಕುಷ್ಟಗಿ- 34 ಹಾಗೂ ಯಲಬುರ್ಗಾ ಪಟ್ಟಣ ಪಂಚಾಯತಿ ವ್ಯಾಪ್ತಿಗೆ 18 ಬ್ಯಾಲೆಟ್ ಯುನಿಟ್ ಹಾಗೂ 18- ಕಂಟ್ರೋಲ್ ಯುನಿಟ್ ಬಳಸಲಾಗುತ್ತದೆ.
ಕೊಪ್ಪಳ ಜಿಲ್ಲೆಯಲ್ಲಿ ನಗರ, ಸ್ಥಳೀಯ ಸಂಸ್ಥೆ ಚುನಾವಣೆ ನಿಮಿತ್ಯ ಈಗಾಗಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಚುನಾವಣೆ ಕಾರ್ಯಕ್ಕೆ ನೇಮಕಗೊಂಡಿರುವ ಅಧಿಕಾರಿಗಳು, ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಕುರಿತಂತೆ ಸೂಕ್ತ ನಿಗಾ ವಹಿಸುವರು. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಎಲ್ಲ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳು ಸುಗಮ ಚುನಾವಣೆಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : 197 ಮತಗಟ್ಟೆಗಳು, 1,77,798 ಮತದಾರರು
ಎಲ್ಲಾ ಲೇಖನಗಳು ಆಗಿದೆ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : 197 ಮತಗಟ್ಟೆಗಳು, 1,77,798 ಮತದಾರರು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : 197 ಮತಗಟ್ಟೆಗಳು, 1,77,798 ಮತದಾರರು ಲಿಂಕ್ ವಿಳಾಸ https://dekalungi.blogspot.com/2018/08/197-177798.html
0 Response to "ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : 197 ಮತಗಟ್ಟೆಗಳು, 1,77,798 ಮತದಾರರು"
ಕಾಮೆಂಟ್ ಪೋಸ್ಟ್ ಮಾಡಿ