ಶೀರ್ಷಿಕೆ : ಚುನಾವಣೆ : ಆ. 31 ರಂದು ಸಾರ್ವತ್ರಿಕ ರಜೆ ಘೋಷಣೆ
ಲಿಂಕ್ : ಚುನಾವಣೆ : ಆ. 31 ರಂದು ಸಾರ್ವತ್ರಿಕ ರಜೆ ಘೋಷಣೆ
ಚುನಾವಣೆ : ಆ. 31 ರಂದು ಸಾರ್ವತ್ರಿಕ ರಜೆ ಘೋಷಣೆ
ಕೊಪ್ಪಳ ಆ. 29 (ಕರ್ನಾಟಕ ವಾರ್ತೆ): ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ನಿಮಿತ್ಯ ಕೊಪ್ಪಳ ಜಿಲ್ಲೆಯ ನಾಲ್ಕು ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯಲಿದ್ದು, ಚುನಾವಣಾ ಆಯೋಗದ ಸೂಚನೆಯಂತೆ, ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಆ. 31 ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗವು ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಕೊಪ್ಪಳ ಜಿಲ್ಲೆಯ ನಾಲ್ಕು ಸ್ಥಳೀಯ ಸಂಸ್ಥೆಗಳಾದ ಕೊಪ್ಪಳ ಹಾಗೂ ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಮತ್ತು ಯಲಬುರ್ಗಾ ಪಟ್ಟಣ ಪಂಚಾಯತ್‍ಗೆ ಆ. 31 ರಂದು ಚುನಾವಣೆ ನಡೆಯಲಿದೆ. ಮತದಾನ ದಿನದಂದು ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಾತ್ರ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳಿಗೆ ಆ. 31 ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದ್ದು, ನೆಗೋಷಿಯೇಬಲ್ ಇನ್ಸಟ್ರುಮೆಂಟ್ ಆಕ್ಟ್ 1881ರ ಪ್ರಕಾರವು ಕೂಡಾ ಸಾರ್ವಜನಿಕ ರಜೆಯನ್ನು ಘೋಷಿಸಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಚುನಾವಣೆ : ಆ. 31 ರಂದು ಸಾರ್ವತ್ರಿಕ ರಜೆ ಘೋಷಣೆ
ಎಲ್ಲಾ ಲೇಖನಗಳು ಆಗಿದೆ ಚುನಾವಣೆ : ಆ. 31 ರಂದು ಸಾರ್ವತ್ರಿಕ ರಜೆ ಘೋಷಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಚುನಾವಣೆ : ಆ. 31 ರಂದು ಸಾರ್ವತ್ರಿಕ ರಜೆ ಘೋಷಣೆ ಲಿಂಕ್ ವಿಳಾಸ https://dekalungi.blogspot.com/2018/08/31_29.html
0 Response to "ಚುನಾವಣೆ : ಆ. 31 ರಂದು ಸಾರ್ವತ್ರಿಕ ರಜೆ ಘೋಷಣೆ"
ಕಾಮೆಂಟ್ ಪೋಸ್ಟ್ ಮಾಡಿ