ಶೀರ್ಷಿಕೆ : ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ತರಬೇತಿ ಭತ್ಯೆ : ಅರ್ಜಿ ಆಹ್ವಾನ
ಲಿಂಕ್ : ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ತರಬೇತಿ ಭತ್ಯೆ : ಅರ್ಜಿ ಆಹ್ವಾನ
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ತರಬೇತಿ ಭತ್ಯೆ : ಅರ್ಜಿ ಆಹ್ವಾನ
ಕೊಪ್ಪಳ ಆ. 02 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಜಿ.ಎನ್.ಎಂ & ಬಿ.ಎಸ್.ಸಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕೋರ್ಸಗಳಲ್ಲಿ ವಿದ್ಯಾಬ್ಯಾಸ ಪಡೆಯುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರೂ. 35,000/- ಗಳ ತರಬೇತಿ ಭತ್ಯೆಯನ್ನು ಮಂಜೂರು ಮಾಡಲು ಅರ್ಜಿ ಆಹ್ವನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್ಖರು, ಹಾಗೂ ಪಾರ್ಸಿ ಸಮುದಾಯದಕ್ಕೆ ಸೇರಿರಬೇಕು. ಕುಟುಂಬದ ವಾರ್ಷಿಕ ಆದಾಯ ಮಿತಿ ಎಲ್ಲಾ ಮೂಲಗಳಿಂದ ವರ್ಷಕ್ಕೆ ರೂ. 2.50 ಲಕ್ಷಗಳಿಗಿಂತ ಮೀರಿರಬಾರದು. ಇಂಡಿಯನ್ ಸರ್ಸಿಂಗ್ ಕೌನ್ಸಿಲ್ (ಐ.ಎನ್.ಸಿ) ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಹಾಗೂ ಪ್ಯಾರಾ ಮೆಡಿಕಲ್ ಬೋರ್ಡ್‍ನಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಬ್ಯಾಸ ಮಾಡುತ್ತಿರಬೇಕು. ವಿದ್ಯಾರ್ಥಿಗಳು ಪ್ರವೇಶ ಪಡೆದ ನಂತರದ ವರ್ಷಗಳಲ್ಲಿ 40% ಅಂಕಗಳನ್ನು ಪಡೆದಿರಬೇಕು. ಸುಳ್ಳು ಮಾಹಿತಿ/ ಜಾತಿ ಪ್ರಮಾಣ ಪತ್ರ, ಪ್ರವೇಶ/ ತರಬೇತಿ ಭತ್ಯೆ ಪಡೆದಿದ್ದಲ್ಲಿ, ಅಂತಹ ಅಭ್ಯರ್ಥಿಯ ನೀಡಲಾದ ಮೊತ್ತವನ್ನು ವಸೂಲಿ ಮಾಡಿ, ಸರ್ಕಾರಕ್ಕೆ ಹಿಂತಿರುಗಿಸಲಾಗುವುದು. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ಮೂಲಕ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳಿಗೆ ಸಲ್ಲಿಸಬೇಕು. ಅಭ್ಯರ್ಥಿಯು ತರಬೇತಿಯನ್ನು ಮಧ್ಯದಲ್ಲಿ ಬಿಡುವುದಿಲ್ಲ ಎಂದು ಮುಚ್ಚಳ್ಳಿಕೆಯನ್ನು ನೀಡಬೇಕು. ತರಬೇತಿಯನ್ನು ಮಧ್ಯ ಬಿಡಲು ಇಚ್ಛಿಸಿದಲ್ಲಿ, ಖರ್ಚಾಗಿರುವ ಅನುದಾನದ ಮೊತ್ತವನ್ನು ಸರ್ಕಾರಕ್ಕೆ ಹಿಂದಿರುಗಿಸಬೇಕು. ತರಬೇತಿ ಪಡೆದಿರುವ ಅಭ್ಯರ್ಥಿಗಳು ಆರ್ಥಿಕ ಸೌಲಭ್ಯಗಳನ್ನು ಪಡೆಯಬಹುದು. ಅರ್ಜಿ ಸಲ್ಲಿಸಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ತಾಲೂಕಿನ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯ (ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ) ಯಲಬುರ್ಗಾ, ಕುಷ್ಟಗಿ, ಗಂಗಾವತಿಯಲ್ಲಿ ಅರ್ಜಿಗಳನ್ನು ಪಡೆದು, ಆಗಸ್ಟ್. 31 ರೊಳಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಆಡಳಿತ ಭವನ ಕೊಪ್ಪಳ, ಇಲ್ಲಿಗೆ ಸಂಪರ್ಕಿಸಬಹುದು ಎಂದು ಇಲಾಖಾ ಅಧಿಕಾರಿ ಮಹಿಮೂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ತರಬೇತಿ ಭತ್ಯೆ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ತರಬೇತಿ ಭತ್ಯೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ತರಬೇತಿ ಭತ್ಯೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/08/blog-post_0.html
0 Response to "ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ತರಬೇತಿ ಭತ್ಯೆ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ