ಶೀರ್ಷಿಕೆ : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : ದೂರು ನಿರ್ವಹಣೆಗೆ ದೂರವಾಣಿ ಸಂಖ್ಯೆ ನಿಗದಿ
ಲಿಂಕ್ : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : ದೂರು ನಿರ್ವಹಣೆಗೆ ದೂರವಾಣಿ ಸಂಖ್ಯೆ ನಿಗದಿ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : ದೂರು ನಿರ್ವಹಣೆಗೆ ದೂರವಾಣಿ ಸಂಖ್ಯೆ ನಿಗದಿ
ಕೊಪ್ಪಳ ಆ. 18 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ಅಂಗವಾಗಿ ದೂರು ನಿರ್ವಹಣೆ ದೂರವಾಣಿ ಸಂಖ್ಯೆಯನ್ನು ನಿಗದಿಪಡಿಸಲಾಗಿದ್ದು, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ, ಈ ದೂರವಾಣಿ ಸಂಖ್ಯೆಗಳ ಮೂಲಕ ದೂರುಗಳನ್ನು ಸಲ್ಲಿಸಬಹುದು ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆ ಸೆಪ್ಟೆಂಬರ್. 03 ರವರೆಗೆ ಜಾರಿಯಲ್ಲಿರುತ್ತದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಯಾವುದೇ ರೀತಿಯ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾವಹಿಸಲು ಹಾಗೂ ಅಂತಹ ಯಾವುದಾದರೂ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಾಲೂಕಾ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಚುನಾವಣಾ ನೀತಿ ಸಂಹಿತೆ ತಂಡಗಳನ್ನು ಈಗಾಗಲೆ ರಚಿಸಲಾಗಿದೆ. ಆದ್ದರಿಂದ ಕೊಪ್ಪಳ ನಗರಸಭೆ, ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ, ಯಲಬುರ್ಗಾ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಯಾವುದಾದರೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ನಿಗದಿಪಡಿಸಲಾದ ಸಂಖ್ಯೆಗಳ ಮೂಲಕ ದೂರುಗಳನ್ನು ಸಲ್ಲಿಸಬಹುದಾಗಿದೆ.
ದೂರುಗಳನ್ನು ನೀಡುವ ಸಲುವಾಗಿ ದೂ.ಸಂ. 08539-220854 ನ್ನು ಹಾಗೂ ದೂರುಗಳನ್ನು ಸಲ್ಲಿಸಲು 24*7 ವಾಟ್ಸಪ್ ಸಂಖ್ಯೆ 9380099282 ನ್ನು ನಿಗದಿಪಡಿಸಲಾಗಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಈ ಸಂಖ್ಯೆಗಳ ಮೂಲಕ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : ದೂರು ನಿರ್ವಹಣೆಗೆ ದೂರವಾಣಿ ಸಂಖ್ಯೆ ನಿಗದಿ
ಎಲ್ಲಾ ಲೇಖನಗಳು ಆಗಿದೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : ದೂರು ನಿರ್ವಹಣೆಗೆ ದೂರವಾಣಿ ಸಂಖ್ಯೆ ನಿಗದಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : ದೂರು ನಿರ್ವಹಣೆಗೆ ದೂರವಾಣಿ ಸಂಖ್ಯೆ ನಿಗದಿ ಲಿಂಕ್ ವಿಳಾಸ https://dekalungi.blogspot.com/2018/08/blog-post_18.html
0 Response to "ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : ದೂರು ನಿರ್ವಹಣೆಗೆ ದೂರವಾಣಿ ಸಂಖ್ಯೆ ನಿಗದಿ"
ಕಾಮೆಂಟ್ ಪೋಸ್ಟ್ ಮಾಡಿ